Site icon Vistara News

Shivamogga News: ಶಿವಮೊಗ್ಗದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ: ಗೀತಾ ಶಿವರಾಜ್ ಕುಮಾರ್

Shivamogga Lok Sabha Constituency Congress candidate Geeta Shivarajkumar visit Sri Renukamba temple in Chandragutti

ಸೊರಬ: ತಾಲೂಕಿನ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ (Chandragutti Sri Renukamba Temple) ನಟ ಡಾ. ಶಿವರಾಜ್ ಕುಮಾರ್, ಸಚಿವ ಎಸ್ ಮಧು ಬಂಗಾರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಭೇಟಿ ನೀಡಿ, ಪೂಜೆ (Shivamogga News) ಸಲ್ಲಿಸಿದರು.

ನಂತರ ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ, ದೇಗುಲಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ: Bridge Collapse: ನೌಕೆ ಡಿಕ್ಕಿಯಾಗಿ ಮಕ್ಕಳಾಟಿಕೆಯಂತೆ ಕುಸಿದ 2.5 ಕಿ.ಮೀ. ಉದ್ದದ ಸೇತುವೆ!

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮಾತನಾಡಿ, ಚುನಾವಣಾ ಪೂರ್ವವಾಗಿ ಈಗಾಗಲೇ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡಿದ್ದೇವೆ. ಜನತೆಯಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆಯಲ್ಲಿ ಕೈ ಹಿಡಿಯುತ್ತವೆ ಎಂಬ ವಿಶ್ವಾಸವಿದೆ. ಒಮ್ಮೆ ನನಗೆ ಜಿಲ್ಲೆಯಲ್ಲಿ ಅವಕಾಶ ದೊರಕಿಸಿ ಕೊಟ್ಟಲ್ಲಿ ಕ್ಷೇತ್ರದ ಮನೆ ಮಗಳಾಗಿ ಮತ್ತು ಸಚಿವ ಮಧು ಬಂಗಾರಪ್ಪ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಜಿಲ್ಲಾ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದರು.

ನಟ ಶಿವರಾಜ್ ಕುಮಾರ್ ಮಾತನಾಡಿ, ಮಧು ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಪತ್ನಿ ಗೀತಾ ಅವರ ಪರವಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೇನೆ. ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷಕ್ಕೆ ವ್ಯಾಪಕವಾಗಿ ಜನಬೆಂಬಲ ವ್ಯಕ್ತವಾಗುತ್ತಿದೆ. ನಾನು ಸಹ ಜಿಲ್ಲೆಯ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ:Weight Loss Tips: ದಾಲ್ಚಿನ್ನಿ ಚಕ್ಕೆಯ ನೀರು ಸೇವಿಸಿ, ನಿರಾಯಾಸವಾಗಿ ತೂಕ ಇಳಿಸಿ!

ಈ ಸಂದರ್ಭದಲ್ಲಿ ಮುಖಂಡರಾದ ಎಚ್. ಗಣಪತಿ ಹುಲ್ತಿಕೊಪ್ಪ, ತಬಲಿ ಬಂಗಾರಪ್ಪ, ಎಂ.ಬಿ ರೇಣುಕಾ ಪ್ರಸಾದ್, ಎಂ.ಪಿ ರತ್ನಾಕರ್, ಎನ್.ಜಿ ನಾಗರಾಜ್, ಸುನಿಲ್ ಗೌಡ, ಮಾರ್ಯಪ್ಪ ಬೆನ್ನೂರು, ಷಣ್ಮುಖಪ್ಪ ಚನ್ನಪಟ್ಟಣ ಸೇರಿದಂತೆ ತಾಲೂಕಿನ ಅನೇಕ ಮುಖಂಡರು ಉಪಸ್ಥಿತರಿದ್ದರು.

Exit mobile version