Site icon Vistara News

Shivamogga News: ಜಗನ್ಮಾತೆ ಪದ್ಮಾವತಿ ದೇವಿಯ ವೈಭವದ ಮಹಾರಥೋತ್ಸವ

shri Padmavati devi Maharathotsava at Hombuja Atishaya Mahakshetra

ರಿಪ್ಪನ್‌ಪೇಟೆ: ಜೈನರ ದಕ್ಷಿಣ ಕಾಶಿಯೆಂದೇ ಖ್ಯಾತಿ ಪಡೆದಿರುವ ಹೊಂಬುಜ ಅತಿಶಯ ಮಹಾಕ್ಷೇತ್ರದಲ್ಲಿ (Hombuja Atishaya Mahakshetra) ಜಗನ್ಮಾತೆ ಶ್ರೀ ಪದ್ಮಾವತಿ ದೇವಿಯ ವೈಭವದ ಮಹಾರಥೋತ್ಸವವು ಸೋಮವಾರ ವಿಜೃಂಭಣೆಯಿಂದ (Shivamogga News) ಜರುಗಿತು.

ಹೊಂಬುಜ ಜೈನಮಠದ ಜಗದ್ಗುರು ಡಾ. ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿಯ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿ, ಮಹಾರಥೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಸಹಸ್ರಾರು ಭಕ್ತಾಧಿಗಳ ಜಯಘೋಷಗಳ ನಡುವೆ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಇನ್ನೂ 4 ದಿನ ಬಿಸಿಲು, ಏ.6ರಿಂದ ಮಳೆ ಎಚ್ಚರಿಕೆ, ಬೆಂಗಳೂರಿನಲ್ಲಿ ಯಾವಾಗ?

ಭಕ್ತರು ರಥಕ್ಕೆ ಬಾಳೆ ಹಣ್ಣು, ಹೂವು ಎಸೆದು ಭಕ್ತಿ ಸಮರ್ಪಿಸಿದರು. ವಿವಿಧ ಸಂಘ-ಸಂಸ್ಥೆಗಳಿಂದ ಅಲ್ಲಲ್ಲಿ ಭಕ್ತರಿಗಾಗಿ ಮಜ್ಜಿಗೆ, ಪಾನಕ, ನೀರಿನ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಮುನಿಶ್ರೀ ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ ಅಮರಕೀರ್ತಿ ಮಹಾರಾಜರು, ಕುಂಬದಹಳ್ಳಿ ಜೈನ ಮಠದ ಶ್ರೀ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ಸೋಂದಾ ಶ್ರೀ ಜೈನ ಮಠದ ಶ್ರೀ ಅಕಲಂಕಕೇಸರಿ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Summer Tips: ಬೇಸಿಗೆಯಲ್ಲಿ ಪದೇಪದೆ ಫ್ರಿಜ್‌ ನೀರು ಕುಡಿದರೆ ಏನಾಗುತ್ತದೆ?

ದೇಶದ ವಿವಿಧಡೆಯಿಂದ ಹಾಗೂ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತಾಧಿಗಳು ಜಗನ್ಮಾತೆ ಶ್ರೀ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

Exit mobile version