Site icon Vistara News

Shivamogga News: ರೋಗಮುಕ್ತ ಜೀವನಕ್ಕೆ ಕ್ರೀಡೆ ಮುಖ್ಯ: ಶಂಕರ್ ಶೇಟ್

State Level Third Annual Vidyut Nagar Premier League Cricket Tournament inauguration at Soraba

ಸೊರಬ: ಶಾಲಾ ಮತ್ತು ಕಾಲೇಜು ಶಿಕ್ಷಣದ ಅವಧಿಯಲ್ಲಿ ವಿದ್ಯಾರ್ಥಿಗಳನ್ನು (Students) ಅಂಕಗಳಿಕೆಗೆ ಸೀಮಿತಗೊಳಿಸದೇ ಕ್ರೀಡಾಕೂಟಗಳಲ್ಲಿಯೂ (Sports) ತೊಡಗುವಂತೆ ಮಾಡುವ ಜವಾಬ್ದಾರಿ ಪೋಷಕರು ಮತ್ತು ಶಿಕ್ಷಕರ ಮೇಲಿದೆ ಎಂದು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್ ಹೇಳಿದರು.

ಪಟ್ಟಣದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಬಿ.ಸಿ.ಸಿ. ಕಾನುಕೊಪ್ಪ ವತಿಯಿಂದ ಹಮ್ಮಿಕೊಂಡ ರಾಜ್ಯ ಮಟ್ಟದ ಮೂರನೇ ವರ್ಷದ ವಿದ್ಯುತ್ ನಗರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇದನ್ನೂ ಓದಿ: Job Alert: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ

ಗ್ರಾಮೀಣ ಭಾಗದಲ್ಲಿ ಅನೇಕ‌ ಕ್ರೀಡಾಪಟುಗಳಿದ್ದಾರೆ. ಅವರನ್ನು‌ ಗುರುತಿಸಲು ಇದೊಂದು ಉತ್ತಮ ವೇದಿಕೆಯಾಗಿದೆ. ಸಮಾಜದಲ್ಲಿನ ತಿರುಳನ್ನು ಅರಿತುಕೊಳ್ಳಲು ನಮಗೆ ಶಿಕ್ಷಣ ಎಷ್ಟು ಮುಖ್ಯವಾಗಿದೆಯೋ ಅದರಂತೆ ರೋಗಮುಕ್ತ ಜೀವನ ಸಾಗಿಸಲು ಕ್ರೀಡೆ ಅಷ್ಟೆ ಮುಖ್ಯವಾಗಿದೆ ಎಂದರು.

ಉದ್ಯಮಿ ಮಲ್ಲಿಕಾರ್ಜುನ ಮಾತನಾಡಿ, ಯುವಕರು ಕ್ರಿಕೆಟ್‌ ಪಂದ್ಯಾವಳಿ ಆಯೋಜನೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ. ಆಟಗಾರರು‌ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಮನೋಭಾವವನ್ನು ವೃದ್ಧಿಸಿಕೊಳ್ಳಬೇಕು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಡಿ.17 ರವರೆಗೂ ಕ್ರೀಡಾಕೂಟಗಳು ನಡೆಯಲಿದ್ದು, ಕ್ರೀಡಾಭಿಮಾನಿಗಳ ಪ್ರೋತ್ಸಾಹ ಅಗತ್ಯವಿದೆ ಎಂದರು.

ಇದನ್ನೂ ಓದಿ: Netflix Viewer Data: ನೆಟ್‌ಫ್ಲಿಕ್ಸ್‌ನಲ್ಲಿ ಈ ವರ್ಷ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಶೋ ಯಾವುದು?

ಈ ಸಂದರ್ಭದಲ್ಲಿ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾಗರಾಜ ಗೌಡ ಚಿಕ್ಕಾವಲಿ, ಉದ್ಯಮಿಗಳಾದ ಅಜಿತ್, ಹರ್ಷಾ ರಾಮ್, ಪ್ರಾಂಶುಪಾಲ ಸುರೇಶಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ನೆಹರು ಕೊಡಕಣಿ, ಮಾಜಿ ಉಪಾಧ್ಯಕ್ಷ ಕೃಷ್ಣಮೂರ್ತಿ, ಗೃಹರಕ್ಷಕದಳದ ಘಟಕಾಧಿಕಾರಿ ಬಿ. ರೇವಣಪ್ಪ, ತಂಡದ ಪ್ರಮುಖರಾದ ಎಚ್.ಎಸ್. ಪವನ್, ಕೆ.‌ಮಹೇಶ್, ಎಸ್. ಸಂತೋಷ್. ಕೆ.ಇ.ಬಿ. ಮಹೇಶ್, ಎಂ.ಕೆ. ಪ್ರೀತಂ, ವಿನಾಯಕ, ಜಿ. ಸುಮಂತ, ಚಿನ್ನು ಸೇರಿದಂತೆ ಇತರರಿದ್ದರು.

Exit mobile version