Site icon Vistara News

Shivamogga News: ಸಮಾಜದ ಸತ್ಪ್ರಜೆಗಳನ್ನು ರೂಪಿಸುವ ಶಿಕ್ಷಕರಿಗೆ ಪೋಷಕರ ಸಹಕಾರ ಅಗತ್ಯ: ಡಾ. ಮಹಾಂತ ಸ್ವಾಮೀಜಿ

honor ceremony for state and district best teacher awardees in Soraba

ಸೊರಬ: ಬದಲಾದ ಶಿಕ್ಷಣ ವ್ಯವಸ್ಥೆಯಲ್ಲಿ (Education system) ವಿದ್ಯಾರ್ಥಿಗಳನ್ನು (Students) ಸಮಾಜದ ಸತ್ಪ್ರಜೆಗಳನ್ನು ರೂಪಿಸುವ ಶಿಕ್ಷಕರಿಗೆ (Teachers) ಪೋಷಕರ ಸಹಕಾರವೂ ಅಗತ್ಯವಿದೆ ಎಂದು ಜಡೆ ಸಂಸ್ಥಾನ ಹಾಗೂ ಸೊರಬ ಮುರುಘಾ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಹೇಳಿದರು.

ಪಟ್ಟಣದ ನಿಜಗುಣ ರೆಸಿಡೆನ್ಸಿಯಲ್ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಮತ್ತು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

12ನೇ ಶತಮಾನದ ಅವಧಿಯಲ್ಲಿಯೂ ಗುರುಕುಲ ಪದ್ಧತಿಯು ಜಾರಿಯಲ್ಲಿದ್ದು, ಶಿಷ್ಯಂದಿರು ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿತು, ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡುತ್ತಿದ್ದರು. ಪ್ರಸ್ತುತ ಉತ್ತಮ ಸಂಸ್ಕಾರ ಸಂಸ್ಕೃತಿಯನ್ನು ನೀಡಬೇಕಾದ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರ ಮೇಲಿದೆ ಎಂದರು.

ಇದನ್ನೂ ಓದಿ: US Open 2023: ಯುಎಸ್‌ ಓಪನ್‌ ಜಯದ ಬಳಿಕ ವಿಶೇಷ ಟಿ ಶರ್ಟ್‌ ಧರಿಸಿ ಮನ ಗೆದ್ದ ಜೋಕೊವಿಕ್‌

ಶಿಕ್ಷಕರು ಸಹ ಅಧ್ಯಯನ ಮೂಲಕ ಪ್ರಚಲಿತ ವಿದ್ಯಾಮಾನಗಳನ್ನು ಅರಿವು ಹೊಂದಲು ನಿರಂತರ ಅಧ್ಯಯನದ ಅವಶ್ಯಕತೆ ಇದೆ, ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಗುರುತಿಸಿ ಗೌರವಿಸುತ್ತಿರುವ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಕಾರ್ಯ ಶ್ಲಾಘೀನಿಯವಾಗಿದೆ ಎಂದವರು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ. ನಾ ಡಿಸೋಜ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನದ ಅವಧಿಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಶಿಕ್ಷಣಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು. ಕಾಲ ಬದಲಾಗಬಹುದು ಆದರೆ ನಾಡಿನ ಸಂಸ್ಕೃತಿಯಲ್ಲಿ ಗುರುಗಳಿಗೆ ಸದಾ ಗೌರವ ನೀಡಲಾಗುತ್ತಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಶಿಕ್ಷಕರಿಗೆ ಸರ್ಕಾರವೂ ಸಹ ಹಲವು ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ತಮ್ಮ ವೃತ್ತಿಗೆ ಚ್ಯುತಿ ಬಾರದ ಹಾಗೆ ಮಾದರಿ ಶಿಕ್ಷಕರಾಗಬೇಕು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಂ ಸತ್ಯನಾರಾಯಣ, ಸಿಪಿಐ ಎಲ್. ರಾಜಶೇಖರ್ ಮಾತನಾಡಿದರು. ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಎಸ್. ಶಂಕರ್‌ ಶೇಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಫೌಜಿಯಾ ಸರವತ, ವಿಜಯಾನಂದ ರಾವ್, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ರಮೇಶ್ ಹೆಗಡೆ, ಬಿ, ಹುಚ್ಚರಾಯಪ್ಪ, ಉಮ್ಮೆಸಲ್ಮಾ, ಕೃಷ್ಣವೇಣಿ, ಆರ್. ವೆಂಕಟೇಶ, ಕೆ. ಮಂಜಪ್ಪ ಹಾಗೂ ನಿವೃತ್ತ ಶಿಕ್ಷಕ ಶಿವಾನಂದ ಪಾಣಿ ಅವರನ್ನು ಸನ್ಮಾನಿಸಲಾಯಿತು.

ಆನವಟ್ಟಿ ಬಾಲಾಜಿ ನೃತ್ಯ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶಿಕ್ಷಕರಿಂದ ಕವನ ವಾಚನ ನಡೆಯಿತು.

ಇದನ್ನೂ ಓದಿ: Viral Video: ಸದ್ದು ಮಾಡಬೇಡಿ… ಹುಲಿಗಳು ನಿದ್ದೆ ಮಾಡುತ್ತಿವೆ!

ಉದ್ಯಮಿ ಚಂದ್ರಶೇಖರ್ ನಿಜಗುಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಕಾರ್ಯದರ್ಶಿ ಮಹೇಶ್ ಖಾರ್ವಿ ಇತರರಿದ್ದರು. ಪೂರ್ಣಿಮ ಪ್ರಾರ್ಥಿಸಿ, ದೀಪಾ ಸ್ವಾಗತಿಸಿ, ಮಂಜುನಾಥ ನಿರೂಪಿಸಿದರು.

Exit mobile version