Site icon Vistara News

Shivamogga News: ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಸೇವೆ ಶ್ಲಾಘನೀಯ: ಟಿ. ಬಾಲಚಂದ್ರ

Shivamogga News The service of civil workers in cleanliness is commendable says T Balchandra

ಸೊರಬ: ನಿತ್ಯ ಪೌರ ಕಾರ್ಮಿಕರು (Civil Workers) ತಮ್ಮ ಜೀವದ ಹಂಗು ತೊರೆದು ಪಟ್ಟಣದ ಸ್ವಚ್ಛತೆಗೆ (Cleanliness) ಹಗಲಿರುಳು ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಟಿ. ಬಾಲಚಂದ್ರ ಹೇಳಿದರು.

ಪಟ್ಟಣದ ಎಸ್. ಬಂಗಾರಪ್ಪ ಕ್ರೀಡಾಂಗಣದಲ್ಲಿ ಬುಧವಾರ ಪುರಸಭೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ನಿಮಿತ್ತ ಪೌರ ಕಾರ್ಮಿಕರು, ನೀರು ಸರಬರಾಜು ಸಹಾಯಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹಮ್ಮಿಕೊಂಡ ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪಟ್ಟಣವು ಸುಂದರವಾಗಿರಲು ಹಾಗೂ ಜನತೆಯ ಆರೋಗ್ಯವನ್ನು ಕಾಪಾಡುವ ಮೊದಲ ವೈದ್ಯರೆಂದರೆ ಅದು ಪೌರಕಾರ್ಮಿಕರಾಗಿದ್ದಾರೆ. ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಜತೆಗೆ ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಕ್ರೀಡಾಕೂಟಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸರ್ಕಾರ ಆಯೋಜಿಸುತ್ತಿದೆ.
ಪೌರ ಕಾರ್ಮಿಕರಿಗೆ ನೈತಿಕ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಪೌರ ಕಾರ್ಮಿಕರ ದಿನಾಚರಣೆಯನ್ನು ನಡೆಸಲಾಗುವುದು. ಅಂದು ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದರು.

ಇದನ್ನೂ ಓದಿ: World Cup 2023 : ವಿಶ್ವ ಕಪ್​ಗೆ ಭಾರತ ತಂಡದ ಜೆರ್ಸಿ ಅನಾವರಣ; ಏನೇನು ಬದಲಾವಣೆಗಳಿವೆ​​?

ಪುರಸಭೆ ನಿಕಟಪೂರ್ವ ಅಧ್ಯಕ್ಷ ಹಾಗೂ ಸದಸ್ಯ ಈರೇಶ್ ಮೇಸ್ತ್ರೀ ಮಾತನಾಡಿ, ದೇಶದ ಗಡಿಯನ್ನು ಸೈನಿಕರು, ನಾಡಿಗೆ ಅನ್ನ ನೀಡುವ ರೈತರು ಮತ್ತು ಜನತೆಯ ಆರೋಗ್ಯವನ್ನು ಕಾಪಾಡುವ ಪೌರ ಕಾರ್ಮಿಕರು ದೇಶದ ಪ್ರಮುಖ ಅಂಗಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ವಚ್ಛತೆಗಾಗಿ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡುವ ಕಾರ್ಮಿಕರಿಗೆ ಮಾನಸಿಕವಾಗಿ ಧೈರ್ಯ ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ. ಸಮಾಜವು ಸಹ ಅವರನ್ನು ಗೌರವಯುತವಾಗಿ ಕಾಣಬೇಕು ಎಂದು ತಿಳಿಸಿದರು.

ಪುರಸಭೆ ಸದಸ್ಯ ಎಂ.ಡಿ. ಉಮೇಶ್ ಮಾತನಾಡಿ, ಪೌರ ಕಾರ್ಮಿಕರಿಲ್ಲದ ನಗರಗಳನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರವು ಸಹ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ರಾಜ್ಯವು ಸ್ವಚ್ಛತೆಯಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿರಲು ಪೌರ ಕಾರ್ಮಿಕರೇ ಕಾರಣರಾಗಿದ್ದಾರೆ. ಅಂತಹ ಕಾರ್ಮಿಕರಿಗೆ ವರುಷದಲ್ಲಿ ಒಂದು ದಿನವನ್ನು ಮೀಸಲಿಟ್ಟು ಗೌರವ ನೀಡುವ ಕೆಲಸ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: Viral News: ಶಾಲೆ ತೊರೆದು 37 ವರ್ಷಗಳ ಬಳಿಕ ಪಿಯುಸಿ ಪರೀಕ್ಷೆ ಬರೆದ ಆಟೋ ಡ್ರೈವರ್‌!

ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯರಾದ ಶ್ರೀರಂಜನಿ ಪ್ರವೀಣ್ ಕುಮಾರ್ ದೊಡ್ಮನೆ, ಪ್ರೇಮಾ ಟೋಕಪ್ಪ, ಪರಿಸರ ಅಭಿಯಂತರ ಚಂದನ್, ಕಂದಾಯ ಅಧಿಕಾರಿ ಎಸ್. ಲಕ್ಷ್ಮೀನಾರಾಯಣ, ಕಂದಾಯ ನಿರೀಕ್ಷಕ ಜಿ. ವಿನಾಯಕ, ಆರೋಗ್ಯ ನಿರೀಕ್ಷಕ ರಣಜಿತ್ ಕುಮಾರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಲಿಂಗರಾಜ ಒಡೆಯರ್, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಎಸ್. ಮಂಜುನಾಥ್, ಪೌರ ಕಾರ್ಮಿಕರಾದ ಎಳುಕೋಟಿ, ಎಂ.ರಾಜು, ಡಿ. ಮಂಜಪ್ಪ, ಆರ್. ರಮೇಶ್, ರಾಧಮ್ಮ, ಮಂಜುಳಾ, ಪ್ರಶಾಂತ್, ಕಾರ್ತಿಕ, ಪಿ. ಮಾಲತೇಶ್, ಬಿ. ಉಮೇಶ್, ಸೇರಿದಂತೆ ಇತರರಿದ್ದರು.

Exit mobile version