ಸೊರಬ: ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ (Chandragutti Shri Renukamba Devi temple) ಕಾರ ಹುಣ್ಣಿಮೆ ಪ್ರಯುಕ್ತ ಸಾವಿರಾರು ಭಕ್ತರು ಶುಕ್ರವಾರ ಆಗಮಿಸಿ ಶ್ರದ್ಧಾ ಭಕ್ತಿಯಿಂದ ವಿಶೇಷ ಪೂಜೆ (Shivamogga News) ಸಲ್ಲಿಸಿದರು.
ಇದನ್ನೂ ಓದಿ: Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ
ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ತುಂತುರು ಮಳೆಯ ನಡುವೆಯೂ ಆಗಮಿಸಿ, ಮಲೆನಾಡಿನ ಆರಾಧ್ಯ ದೇವಿ ಶ್ರೀ ರೇಣುಕಾದೇವಿಯ ದರ್ಶನ ಪಡೆದು ಉದೋ ಉದೋ ಎಂದು ಜೈಕಾರ ಹಾಕಿ, ಭಕ್ತಿ ಸಮರ್ಪಿಸಿದರು.
ಹಿರೇಕೆರೂರು ಬಸ್ ನಿಲ್ದಾಣದಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಹಾಗೇಯೇ ಖಾಸಗಿ ವಾಹನಗಳಲ್ಲಿಯೂ ಜನ ಚಂದ್ರಗುತ್ತಿಗೆ ಜಾತ್ರೆಯ ರೀತಿಯಲ್ಲಿ ಆಗಮಿಸಿದ್ದರು.
ಇದನ್ನೂ ಓದಿ: International Yoga Day 2024: ಎಲ್ಲೆಲ್ಲೂ ಯೋಗಾಯೋಗಕ್ಕೆ ಮಂಡಿಯೂರಿದ ಜನತೆ
ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು.