ಸೊರಬ: ಪುಸ್ತಕಗಳು (Books) ಉತ್ತಮ ಬದುಕಿಗೆ ಮಾರ್ಗದರ್ಶನ ನೀಡಬಲ್ಲವುಗಳಾಗಿದ್ದು, ಮಕ್ಕಳು ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಂಡು ಸತ್ಪ್ರಜೆಗಳಾಗಬೇಕು ಎಂದು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್ (Shivamogga News) ಹೇಳಿದರು.
ತಾಲೂಕಿನ ಚಂದ್ರಗುತ್ತಿ ಸಮೀಪದ ಯಡಗೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಣದ ಜತೆ ಉತ್ತಮ ಸಂಸ್ಕಾರವೂ ದೊರೆಯುತ್ತಿದೆ. ಪುಸ್ತಕಗಳನ್ನು ಹೆಚ್ಚು ಓದುವುದರಿಂದ ಸಮಾಜದ ಬಗ್ಗೆ ಅರಿವು ಮೂಡುವ ಜತೆ ಜ್ಞಾನವು ವೃದ್ಧಿಯಾಗುತ್ತದೆ. ಸರ್ಕಾರವು ಸಹ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಮಕ್ಕಳ ಸಂತೆ ಸೇರಿದಂತೆ ಅನೇಕ ಕಾರ್ಯಗಳನ್ನು ಅನುಷ್ಠಾನಕ್ಕೆ ತಂದಿದೆ. ಅನೇಕ ಸಾಧಕರು ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣ ಪಡೆದಿರುವುದು ಹೆಮ್ಮೆಯ ವಿಷಯ. ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿದೆ ಎಂದರು.
ಇದನ್ನೂ ಓದಿ: Farmers Protest: ತರಕಾರಿ ಪೂರೈಕೆ ಸರಪಳಿ ಅಸ್ತವ್ಯಸ್ತ; ಬೆಲೆ ಏರಿಕೆ ಸಾಧ್ಯತೆ
ಗ್ರಾಪಂ ಸದಸ್ಯೆ ಸರೋಜಾ ಷಣ್ಮುಖಪ್ಪ ಮಾತನಾಡಿ, ಮಕ್ಕಳ ಮೇಲೆ ಒತ್ತಡ ಹೇರದೇ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೊತ್ಸಾಹಿಸುವ ಕೆಲಸವನ್ನು ಪೋ?ಕರು ಮಾಡಬೇಕು. ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಿ ಶಿಕ್ಷಣಕ್ಕೆ ಪೂರಕ ವಾತಾವರಣ ಮತ್ತು ಸಾಧನೆಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಮಕ್ಕಳು ಸಹ ಮೊಬೈಲ್ ಮತ್ತು ಟಿವಿ ವ್ಯಾಮೋಹಕ್ಕೆ ಒಳಗಾಗದೇ ಶಿಕ್ಷಣದ ಕಡೆ ಹೆಚ್ಚಿನ ಗಮನ ನೀಡಬೇಕು ಎಂದರು.
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವೈ.ಬಿ. ತಿಮ್ಮಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ: TPL 3 : ಫೆ.28ರಿಂದ ಕ್ರಿಕೆಟ್ ಪಂದ್ಯಾವಳಿ ಶುರು, ಟ್ರೋಫಿ ಹಾಗೂ ಜೆರ್ಸಿ ಬಿಡುಗಡೆ
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಧನಂಜಯ ಡಿ. ನಾಯ್ಕ್, ಸದಸ್ಯರಾದ ಸರೋಜ ಷಣ್ಮುಖಪ್ಪ, ಸೀತಾರಾಮಪ್ಪ, ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ರೇವಣಪ್ಪ, ಉಪಾಧ್ಯಕ್ಷ ದೇವೇಂದ್ರಪ್ಪ, ಮುಖ್ಯ ಶಿಕ್ಷಕ ತಿಮ್ಮೇಶ್ ಆಚಾರ್, ಮುಖಂಡರಾದ ಈಶ್ವರಪ್ಪ ಚನ್ನಪಟ್ಟಣ, ಪ್ರದೀಪ ಬಾಡದಬೈಲು, ರವಿ ಚನ್ನಪಟ್ಟಣ ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಾಲಾ ಶಿಕ್ಷಕ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.