Site icon Vistara News

Shivamogga News: ಕಾಂಗ್ರೆಸ್‌ ಸರ್ಕಾರದಿಂದ ಅಭಿವೃದ್ಧಿ ಶೂನ್ಯ: ಡಿ.ಎಸ್. ಅರುಣ್ ಆರೋಪ

Zero development by Congress government MLC D S Arun alleged

ಸೊರಬ: ರೈತರು, ಹಿಂದುಳಿದವರು, ಮಹಿಳೆಯರು, ದಲಿತರು ಮತ್ತು ಹಿಂದುಗಳ ವಿರೋಧಿ ಧೋರಣೆ ಅನುಸರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ (Congress Government) ಜನತೆ ಬೇಸತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ, ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ (Shivamogga News) ಆರೋಪಿಸಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಕಳೆದ 10 ತಿಂಗಳ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಶೂನ್ಯ ಸಂಪಾದನೆಯಲ್ಲಿದೆ. ಕನಿಷ್ಠ 1 ಕಿ.ಮೀ. ರಸ್ತೆಯನ್ನು ನಿರ್ಮಿಸಲು ಯೋಗ್ಯತೆ ಕಳೆದುಕೊಂಡಿದೆ. ಶಾಸಕರ ಅಭಿವೃದ್ಧಿ ಅನುದಾನದ ಹಣವನ್ನೂ ಸಹ ಬಿಡುಗಡೆ ಮಾಡಿಲ್ಲ ಎಂದರು.

ಇದನ್ನೂ ಓದಿ: Snacks for Kids: ಇಲ್ಲಿದೆ ಮಕ್ಕಳಿಗೆ ಬಗೆಬಗೆಯ ಪ್ರೊಟೀನ್‌ಯುಕ್ತ ಚೆನ್ನಾ ಸ್ನ್ಯಾಕ್ಸ್‌; ನೀವೇ ಮಾಡಿ ನೋಡಿ!

ಕೇಂದ್ರದಲ್ಲಿ ಕಳೆದ 65 ವರ್ಷ ಅಧಿಕಾರದಲ್ಲಿದ್ದ ಕಾಂಗ್ರೆಸ್ ಯುವಕರಿಗೆ ಉದ್ಯೋಗ ಸೃಷ್ಠಿಸಲು ಸಾಧ್ಯವಾಗಿಲ್ಲ. ರೈತರಿಗೆ ಯೋಜನೆಗಳನ್ನು ರೂಪಿಸಿಲ್ಲ. ಮಹಿಳೆಯರು ದೌರ್ಜನ್ಯಕ್ಕೊಳಗಾಗುತ್ತಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ದಬ್ಬಾಳಿಕೆ, ಹಲ್ಲೆ ನಡೆಯುತ್ತಲೇ ಇದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ಆಡಳಿತಾವಧಿಯಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ದೇಶ ಸದೃಢವಾಗಿದೆ. ಈ ಕಾರಣದಿಂದ ಭಾರತ ವಿಶ್ವಗುರು ಆಗುವ ಮಟ್ಟಕ್ಕೇರಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯಕ್ಕೆ ಅವರದೇ ಅನುದಾನ ಬಿಡುಗಡೆ ಮಾಡುವಲ್ಲಿ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು.

ಮಾ. 4ರಂದು ಪಟ್ಟಣದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಜಿಲ್ಲೆಯ ಮುಖಂಡರು ಭಾಗವಹಿಸಲಿದ್ದು, ಮಾಜಿ ಶಾಸಕ ಕುಮಾರ ಬಂಗಾರಪ್ಪ ಕೂಡಾ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಇದನ್ನೂ ಓದಿ: Social Media: ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ ತಡೆಗೆ ಪ್ರತ್ಯೇಕ ಉಸ್ತುವಾರಿ ಕೋಶ

ಸುದ್ದಿಗೋಷ್ಠಿಯಲ್ಲಿ ಮಂಡಲ ಅಧ್ಯಕ್ಷ ಪ್ರಕಾಶ ತಲಕಾಲುಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ಗಾಳಿಪುರ, ತಾಲೂಕು ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಎಂ.ಡಿ. ಉಮೇಶ, ಮುಖಂಡರಾದ ಎ.ಎಲ್. ಅರವಿಂದ, ಅಮಿತ್‌ಗೌಡ, ಮಲ್ಲಿಕಾರ್ಜುನ ಗುತ್ತೇರ್, ಮಧುರಾಯ ಜಿ. ಶೇಟ್, ನಿರಂಜನ ಕುಪ್ಪಗಡ್ಡೆ, ಡಿ. ಶಿವಯೋಗಿ, ಎಂ.ಕೆ. ಯೋಗೇಶ್ ಹಾಗೂ ಮತ್ತಿತರರು ಇದ್ದರು.

Exit mobile version