Site icon Vistara News

Shivamogga Violence : ಶಿವಮೊಗ್ಗ ಗಲಭೆ; 24 ಎಫ್‌ಐಆರ್‌ ದಾಖಲು, 60 ಮಂದಿ ಅರೆಸ್ಟ್‌

Shivamogga flex removed

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡೆಯಲ್ಲಿ ಭಾನುವಾರ ಈದ್‌ ಮಿಲಾದ್‌ ಮೆರವಣಿಗೆ (Eid Milad Procession) ಸಂದರ್ಭದಲ್ಲಿ ನಡೆದ ಗಲಭೆ (Shivamogga Violence), ಕಲ್ಲು ತೂರಾಟಕ್ಕೆ ಸಂಬಂಧಿಸಿ ಪೊಲೀಸರು ಇದುವರೆಗೆ 24 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, 60 ಮಂದಿಯನ್ನು ಬಂಧಿಸಿದ್ದಾರೆ (60 Accuse arrested).

ಜಿಲ್ಲಾ ಎಸ್‌ಪಿ ಮಿಥುನ್‌ ಕುಮಾರ್‌ (SP Mithun Kumar) ಅವರು ಈ ವಿಷಯವನ್ನು ತಿಳಿಸಿದ್ದು, ಬಂಧಿತ ಆರೋಪಿಗಳಲ್ಲಿ ಕೆಲವರನ್ನು ಶಿವಮೊಗ್ಗ, ಇನ್ನು ಕೆಲವರನ್ನು ಚಿತ್ರದುರ್ಗ ಜೈಲಿಗೆ ಹಾಕಲಾಗುವುದು ಎಂದು ತಿಳಿಸಿದರು. ಗಲಭೆಯಲ್ಲಿ ಒಂದು ಕಾರು, ಒಂದು ತ್ರಿಚಕ್ರ ವಾಹನ, ಎರಡು ದ್ವಿಚಕ್ರ ವಾಹನಕ್ಕೆ ಹಾನಿಯಾಗದೆ. ಗಲಭೆಯಲ್ಲಿ 7 ಮನೆ ಗಾಜು ಪುಡಿಪುಡಿಯಾಗಿದೆ ಎಂದು ವಿವರ ನೀಡಿದರು.

ಸೋಮವಾರ ಬೆಳಗ್ಗೆಯಿಂದ ಇಲ್ಲಿಯವರೆಗೂ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ. 144 ಸೆಕ್ಷನ್ ಇರುವ ಕಾರಣ ಅಹಿತಕರ ಘಟನೆ ನಡೆಯುತ್ತಿಲ್ಲ ಎಂಧೂ ಶಿವಮೊಗ್ಗ ಎಸ್‌ಪಿ ವಿಥುನ್ ಕುಮಾರ್ ಜಿ.ಕೆ. ಹೇಳಿದರು.

ಹಮೀರ್ ಅಹಮದ್ ಸರ್ಕಲ್‌ನಲ್ಲಿದ್ದ ಟಿಪ್ಪು ಫ್ಲೆಕ್ಸ್ ತೆರವು

ಶಿವಮೊಗ್ಗ ನಗರ ಪಾಲಿಕೆ ಸಿಬ್ಬಂದಿ ಹಮೀರ್ ಅಹಮದ್ ಸರ್ಕಲ್‌ನಲ್ಲಿದ್ದ ವಿವಾದಿತ ಟಿಪ್ಪು ಫ್ಲೆಕ್ಸ್ ತೆರವು ಮಾಡಿದರು.

ಟಿಪ್ಪು ಫ್ಲೆಕ್ಸ್‌ನಿಂದಾಗಿಯೇ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾವಾಗಿತ್ತು. ಹೀಗಾಗಿ ಫ್ಲೆಕ್ಸ್ ತೆರವಿಗೆ ಮಾಜಿ ಸಚಿವ ಈಶ್ವರಪ್ಪ ಆಗ್ರಹಿಸಿದ್ದರು. ಇದೀಗ ಫ್ಲೆಕ್ಸ್ ತೆರವಿಗೆ ಮುಂದಾದ ನಗರಪಾಲಿಕೆ ಫ್ಲೆಕ್ಸ್, ಬಾವುಟ, ಕಮಾನು ಎಲ್ಲವನ್ನೂ ತೆರವು ಮಾಡಿದೆ. ಹಿಂದೂ-ಮುಸ್ಲಿಂ ಎರಡೂ ಸಮುದಾಯಕ್ಕೆ ಸೇರಿದ ಬಾವುಟ, ಫ್ಲೆಕ್ಸ್ ತೆರವು ಮಾಡಲಾಗುತ್ತಿದೆ.

ಇದನ್ನೂ ಓದಿ: Shivamogga Riots : ಶಿವಮೊಗ್ಗಕ್ಕೆ ಇದೇನು ಹೊಸತಾ?; ಗೃಹ ಸಚಿವ ಪರಮೇಶ್ವರ್‌ ಉಡಾಫೆ ಹೇಳಿಕೆ

ಶಿವಮೊಗ್ಗದಲ್ಲಿ ಆಗಿದ್ದೇನು?

ಭಾನುವಾರ ಬೆಳಗ್ಗೆ ಈದ್​ ಮಿಲಾದ್ ಮೆರವಣಿಗೆ ವೇಳೆ ರಾಗಿಗುಡ್ಡದಲ್ಲಿ ತಲ್ವಾರ್​ ಮಾದರಿ ಕಟೌಟ್ ವಿಚಾರಕ್ಕೆ ಗೊಂದಲ ಸೃಷ್ಟಿಯಾಗಿತ್ತು. ಕಟೌಟ್ ವಿಚಾರವಾಗಿ ಹಿಂದೂ-ಮುಸ್ಲಿಂ ಗದ್ದಲ ಎದ್ದಿತ್ತು. ರಾಗಿಗುಡ್ಡ ಮುಖ್ಯರಸ್ತೆಯಲ್ಲಿ ಕಟೌಟ್ ಹಾಕಲಾಗಿದ್ದು ಜನರು ಪ್ರತಿಭಟನೆ ಮಾಡಿದ್ದರು. ತಕ್ಷಣವೇ  ಎಸ್​ಪಿ  ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದರು. ನಿಷೇಧಾಜ್ಞೆ ಜಾರಿ ಮಾಡಿ ಪರಿಸ್ಥಿತಿ ನಿಯಂತ್ರಿಸಲಾಗಿತ್ತು. ಶಿವಮೊಗ್ಗದ ರಾಗಿಗುಡ್-ಶಾಂತಿನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿದೆ. ಟಿಪ್ಪುವಿನ ಕಟೌಟ್​ನ ಕೆಳಭಾಗದಲ್ಲಿ ಆಕ್ಷೇಪಾರ್ಹ ಸಂಗತಿ ಇದ್ದ ಹಿನ್ನಲೆಯಲ್ಲಿ ಪೊಲೀಸರು ಬಿಳಿ ಬಣ್ಣವನ್ನು ಬಳಿದಿದ್ದರು. ಇದರಿಂದ ರೊಚ್ಚಿಗೆದ್ದ ರಾಗಿಗುಡ್ಡದ ಶಾಂತಿನಗರ ನಿವಾಸಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕಿಡಿಗೇಡಿಗಳು ಮನೆ, ವಾಹನಗಳ ಮೇಲೆ  ಕಲ್ಲು ತೂರಾಟ ನಡೆಸಿದ್ದಾರೆ.

Exit mobile version