Site icon Vistara News

Shivamogga News: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಶ್ಲಾಘನೀಯ: ಶ್ರೀ

Sri Kshetra Dharamsthala rural Development Project programme in soraba

ಸೊರಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಮಾಜದಲ್ಲಿ ಜಾತಿ ಮತ ಧರ್ಮವನ್ನು ಮೀರಿ ಎಲ್ಲರನ್ನೂ ಒಗ್ಗೂಡಿಸಿ ಆರ್ಥಿಕವಾಗಿ ಸದೃಢರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಶಾಂತಪುರ ಸಂಸ್ಥಾನ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಜಡೆ ವಲಯದ ಶಾಂತಪುರ ಮಠದಲ್ಲಿ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.

ಗ್ರಾಮೀಣ ಮಟ್ಟದ ಜನರ ಅಭಿವೃದ್ಧಿಗೆ ದಾರಿಯನ್ನು ಸೃಷ್ಟಿಸುವ ಮೂಲಕ ಹೆಗ್ಗಡೆ ದಂಪತಿಗಳು ಸಮಾಜದಲ್ಲಿ ಹಿಂದುಳಿದ ಜನರ ಬಾಳಿಗೆ ದಾರಿ ದೀಪವಾಗುತ್ತಿದ್ದಾರೆ ಎಂದರು.

ಇದನ್ನೂ ಓದಿ: Job Alert: ಭಾರತೀಯ ರೈಲ್ವೆಯಲ್ಲಿದೆ 5,696 ಸಹಾಯಕ ಲೋಕೋ ಪೈಲಟ್‌ ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

ಕಾರ್ಯಕ್ರಮದಲ್ಲಿ ಮುಖ್ಯ ಶಕುನವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಡಿ.ಜೆ. ಪಾಟೀಲ್ ಮಾತನಾಡಿ, ಧರ್ಮಸ್ಥಳ ಯೋಜನೆ ಜನರನ್ನು ಸಂಘಟಿಸಿ, ಆರ್ಥಿಕವಾಗಿ ಅಭಿವೃದ್ಧಿ ಮಾಡುವುದರ ಜತೆಗೆ ಜನರಲ್ಲಿ ವೈಯಕ್ತಿಕ ಸ್ವಚ್ಛತೆ, ಸುತ್ತಲಿನ ಪರಿಸರದ ಸ್ವಚ್ಛತೆ ಜತೆಗೆ ಉತ್ತಮ ಆರೋಗ್ಯದ ಅರಿವನ್ನು ಸಮಾಜದಲ್ಲಿ ಮೂಡಿಸುತ್ತಿದೆ. ಮದ್ಯಪಾನದಂತಹ ಮಾರಕ ಕಾಯಿಲೆಗಳ ನಿರ್ಮೂಲನೆಗೆ ತನ್ನದೇ ಆದ ಮಾರ್ಗದಲ್ಲಿ ಕಾರ್ಯಪ್ರವೃತ್ತರಾಗಿರುವುದು ಶ್ಲಾಘನೀಯ ಇಂತಹ ಕಾರ್ಯಕ್ರಮಗಳಿಗೆ ನಾವು ಕೈ ಜೋಡಿಸಬೇಕಿದೆ ಎಂದರು.

ತಾಲೂಕು ಯೋಜನಾಧಿಕಾರಿ ಸುಬ್ರಾಯ ನಾಯ್ಕ, ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಯೋಜನೆಯ ಜನಪರ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ: ಭಾರತದ 3 ಸ್ಟಾರ್​ ಆಟಗಾರರನ್ನು ವಿದೇಶಕ್ಕೆ ಕಳುಹಿಸಲು ನಿರ್ಧರಿಸಿದ ಬಿಸಿಸಿಐ; ಕಾರಣವೇನು?

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕುನವಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಶಾಂತಮ್ಮ, ಜಡೆ ಗ್ರಾ ಪಂ ಸದಸ್ಯೆ ಶೋಭಾ, ಮಂಜುನಾಥ, ತಲಗಡ್ಡೆ ಗ್ರಾ ಪಂ ಸದಸ್ಯೆ ಹೇಮಾವತಿ, ವಲಯ ಮೇಲ್ವಿಚಾರಕ ರಾಜಪ್ಪ ಸೇರಿದಂತೆ ಒಕ್ಕೂಟಗಳ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.

Exit mobile version