ಸೊರಬ: ತಾಲೂಕಿನ ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯು ಸ್ಥಾಪನೆಯಾಗಿ 25 ವರ್ಷಗಳನ್ನು ಪೂರ್ಣಗೊಳಿಸಿದ ಅಂಗವಾಗಿ ಬೆಳ್ಳಿ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಸ್ವಾಮಿ ವಿವೇಕಾನಂದ ಬೋಧನಾ ಸಂಸ್ಥೆಯ ಅಧ್ಯಕ್ಷ ದಿವಾಕರ ಭಾವೆ ಹೇಳಿದರು.
ಪಟ್ಟಣದ ಶ್ರಿ ಸ್ವಾಮಿ ವಿವೇಕಾನಂದ ಬೋಧನಾ ಸಂಸ್ಥೆಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
1992-93 ರಲ್ಲಿ ಸೊರಬ ಪಟ್ಟಣದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಬೋಧನಾ ಸಂಸ್ಥೆಯನ್ನು ಸ್ಥಾಪಿಸಲಾಯಿತು, ಆರಂಭದಲ್ಲಿ ಹಿಂದೂ ಸೇವಾ ಪ್ರತಿಷ್ಠಾನದ ಸಹಯೋಗದೊಂದಿಗೆ ಸೇವಾ ನಿರತ ಮಾತಾಜಿಯವರ ಮೂಲಕ ಅರುಣ ವರ್ಗ ಮತ್ತು ಉದಯ ವರ್ಗ ವೆಂಬ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲಾಯಿತು ಎಂದರು.
ಇದನ್ನೂ ಓದಿ: Shivamogga News: ಸೋಲಾರ್ ಆಧಾರಿತ ಹುಲ್ಲು ಕಟಾವು ಯಂತ್ರ ಕಂಡುಹಿಡಿದ ಸರ್ಕಾರಿ ಶಾಲಾ ವಿದ್ಯಾರ್ಥಿ
ಸಂಸ್ಥೆಯು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸೇವೆಯನ್ನು ಸಲ್ಲಿಸುತ್ತಿದೆ. 20 ವಿದ್ಯಾರ್ಥಿಗಳಿಂದ ಆರಂಭವಾದ ಶಾಲೆಯಲ್ಲಿ ಇಂದು 723 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಸತತ 7 ವರ್ಷಗಳ ಕಾಲ ಶೇ 100 ರಷ್ಟು ಫಲಿತಾಂಶವನ್ನು ಎಸ್‌ಎಸ್‌ಎಲ್‌ಸಿಯಲ್ಲಿ ಪಡೆದು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದರು.
ಇದನ್ನೂ ಓದಿ: Ganga Kalyana Scheme : ಕೃಷಿ ಜಮೀನಿಗೆ ಉಚಿತ ಬೋರ್‌ವೆಲ್ ಬೇಕೇ? ಅರ್ಜಿ ಸಲ್ಲಿಕೆಗೆ 6 ದಿನವಷ್ಟೇ ಬಾಕಿ!
ಸ್ವಾಮಿ ವಿವೇಕಾನಂದ ಸಂಸ್ಥೆ 25 ವರ್ಷಗಳನ್ನು ಪೂರ್ಣಗೊಳಿಸಿದ ನೆನಪಿಗಾಗಿ ಬೆಳ್ಳಿ ಹಬ್ಬ ಇದೇ ತಿಂಗಳ 24 ಮತ್ತು 25 ರಂದು ಹಮ್ಮಿಕೊಳ್ಳಲಾಗಿದ್ದು ಅಂದು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಡಿಸೆಂಬರ್ 2 ಮತ್ತು 3 ರಂದು ವಿಜ್ಞಾನ-ಗಣಿತ ಮಾದರಿಗಳ ವಸ್ತು ಪ್ರದರ್ಶನ ಡಿಸೆಂಬರ್ ಮತ್ತು ಜನವರಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಖಜಾಂಚಿ ದತ್ತಾತ್ರೇಯ ಪುರಾಣಿಕ್, ಶಾಲೆಯ ಮುಖ್ಯ ಶಿಕ್ಷಕ ಸಂದೀಪ್ ಕುಮಾರ್ ರಾಯ್ಕರ್, ಮುಖ್ಯ ಶಿಕ್ಷಕಿ ಶಿಲ್ಪಾ ಸೇರಿದಂತೆ ಇತರರಿದ್ದರು.