Site icon Vistara News

SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ಇಬ್ಬರ ದುರಂತ ಅಂತ್ಯ

SSLC Students Death

ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು (SSLC Exam) ಪರೀಕ್ಷಾ ಕೇಂದ್ರಕ್ಕೆ ಹೋಗುತ್ತಿದ್ದ ವಿದ್ಯಾರ್ಥಿನಿ (Student Death) ರಸ್ತೆ ಅಪಘಾತದಲ್ಲಿ (Road Accident) ಮೃತಪಟ್ಟಿದ್ದಾಳೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಮೃತ ದುರ್ದೈವಿ. ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಉಮ್ಮೆ ಕೂಲ್ಸುಂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲೆಂದು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದಳು. ರಸ್ತೆ ದಾಟುವ ವೇಳೆ ವಿದ್ಯಾರ್ಥಿನಿಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದ ಉಮ್ಮೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಟ್ಟಿದ್ದಾಳೆ.

ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿಸ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ:Road Accident : ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಲಾರಿ ಛಿದ್ರ ಛಿದ್ರ; ಉಸಿರು ಚೆಲ್ಲಿದ ಚಾಲಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಸೂಸೈಡ್‌

ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಿವಮೊಗ್ಗದ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪರಶುರಾಮ್ (17) ನೇಣಿಗೆ ಶರಣಾದ ವಿದ್ಯಾರ್ಥಿ.

ಪರಶುರಾಮ್‌ ಆನಂದಪುರದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಎಸ್ಎಸ್ಎಲ್‌ಸಿ ಓದುತ್ತಿದ್ದ. ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ಪರಶುರಾಮ್‌ ಮನೆಯ ಹಿಂಭಾಗದಲ್ಲಿ ನೇಣಿಗೆ ಶರಣಾದ್ದಾನೆ.

ಪರೀಕ್ಷೆ ಭಯಕ್ಕೆ ಮೃತಪಟ್ಟನಾ ಅಥವಾ ಬೇರೆಯಾವುದಾದರೂ ವಿಚಾರಕ್ಕೆ ಮಾನಸಿಕವಾಗಿ ಖಿನ್ನತೆ ಅನುಭವಿಸುತ್ತಿದ್ದನ್ನಾ ಎಂಬುದು ತಿಳಿದು ಬಂದಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಸ್ಥಳಕ್ಕೆ ಆನಂದಪುರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಗನ ಮೃತದೇಹವನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version