Student Death : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಸೂಸೈಡ್‌ - Vistara News

ಶಿವಮೊಗ್ಗ

Student Death : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಸೂಸೈಡ್‌

Student Death: ಮನೆ ಹಿಂಭಾಗದ ಕಂಬಕ್ಕೆ ನೇಣು ಬಿಗಿದುಕೊಂಡು ಎಸ್‌ಎಸ್‌ಎಲ್‌ಸಿ (Sslc Student) ವಿದ್ಯಾರ್ಥಿ ಆತ್ಮಹತ್ಯೆಗೆ (Self Harming) ಶರಣಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

VISTARANEWS.COM


on

Student death
ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಪೊಲೀಸರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಿವಮೊಗ್ಗದ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪರಶುರಾಮ್ (17) ನೇಣಿಗೆ ಶರಣಾದ ವಿದ್ಯಾರ್ಥಿ.

ಪರಶುರಾಮ್‌ ಆನಂದಪುರದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಎಸ್ಎಸ್ಎಲ್‌ಸಿ ಓದುತ್ತಿದ್ದ. ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ಪರಶುರಾಮ್‌ ಮನೆಯ ಹಿಂಭಾಗದಲ್ಲಿ ನೇಣಿಗೆ ಶರಣಾದ್ದಾನೆ.

ಪರೀಕ್ಷೆ ಭಯಕ್ಕೆ ಮೃತಪಟ್ಟನಾ ಅಥವಾ ಬೇರೆಯಾವುದಾದರೂ ವಿಚಾರಕ್ಕೆ ಮಾನಸಿಕವಾಗಿ ಖಿನ್ನತೆ ಅನುಭವಿಸುತ್ತಿದ್ದನ್ನಾ ಎಂಬುದು ತಿಳಿದು ಬಂದಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಸ್ಥಳಕ್ಕೆ ಆನಂದಪುರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಗನ ಮೃತದೇಹವನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Road Accident : ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಲಾರಿ ಛಿದ್ರ ಛಿದ್ರ; ಉಸಿರು ಚೆಲ್ಲಿದ ಚಾಲಕ

Indian Student: ಲಂಡನ್‌ನಲ್ಲಿ ಯಮಸ್ವರೂಪಿ ಟ್ರಕ್‌ ಹರಿದು ಭಾರತದ ವಿದ್ಯಾರ್ಥಿನಿ ಸಾವು

ಲಂಡನ್‌: ಬ್ರಿಟನ್‌ ರಾಜಧಾನಿ ಲಂಡನ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಭಾರತದ ವಿದ್ಯಾರ್ಥಿನಿ (Indian Student) ಮೃತಪಟ್ಟಿದ್ದಾರೆ. ಸೈಕಲ್‌ ತುಳಿಯುತ್ತ ಮನೆಗೆ ಹಿಂತಿರುಗುತ್ತಿದ್ದ ವೇಳೆ ಟ್ರಕ್‌ ಹರಿದು 33 ವರ್ಷದ ಚೆಯಿಸ್ತಾ ಕೊಚ್ಚಾರ್‌ (Cheistha Kocchar) ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಾರ್ಚ್‌ 19ರಂದು ಅಪಘಾತ ಸಂಭವಿಸಿದೆ. ಚೆಯಿಸ್ತಾ ಕೊಚ್ಚಾರ್‌ ಅವರು ಲಂಡನ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನಲ್ಲಿ (London School of Economics) ಪಿಎಚ್‌.ಡಿ ಅಧ್ಯಯನ ಮಾಡುತ್ತಿದ್ದರು.

ಚೆಯಿಸ್ತಾ ಕೊಚ್ಚಾರ್‌ ಅವರು ನಿವೃತ್ತ ಲೆಫ್ಟಿನೆಂಟ್‌ ಜನರಲ್‌, ಸೆಲ್ಲುಲರ್‌ ಆಪರೇಟರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ (COAI) ನಿರ್ದೇಶಕ ಡಾ.ಎಸ್‌.ಪಿ. ಕೊಚ್ಚಾರ್‌ ಅವರ ಪುತ್ರಿಯಾಗಿದ್ದಾರೆ. ಚೆಯಿಸ್ತಾ ಕೊಚ್ಚಾರ್‌ ಅವರು ಲಂಡನ್‌ಗೆ ತೆರಳುವ ಮೊದಲು ನೀತಿ ಆಯೋಗದಲ್ಲೂ ಕೆಲಸ ಮಾಡಿದ್ದರು. ಇವರು ಕಳೆದ ವರ್ಷವಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಯಾವುದೇ ಉಪಯೋಗವಾಗಲಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪುತ್ರಿಯ ನಿಧನದ ಹಿನ್ನೆಲೆಯಲ್ಲಿ ಡಾ.ಎಸ್‌.ಪಿ.ಕೊಚ್ಚಾರ್‌ ಅವರು ಭಾವನಾತ್ಮಕವಾಗಿ ಪೋಸ್ಟ್‌ ಮಾಡಿದ್ದಾರೆ. “ನನ್ನ ಪುತ್ರಿಯು ಲಂಡನ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನಿಂದ ಮನೆಗೆ ಹೊರಟಿದ್ದಳು. ಆಗ ಆಕೆಯ ಮೇಲೆ ಟ್ರಕ್‌ ಹರಿದಿದೆ. ನಮ್ಮೆಲ್ಲರನ್ನು ಚೆಯಿಸ್ತಾ ಕೊಚ್ಚಾರ್‌ ಅಗಲಿದ್ದಾಳೆ. ಅವಳ ನೆನಪುಗಳು ಮಾತ್ರ ನನ್ನಲ್ಲಿ ಉಳಿದಿವೆ” ಎಂದು ಭಾವುಕರಾಗಿದ್ದಾರೆ. ಮಗಳ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Jaahnavi Kandula: ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿನಿಗೆ ಕಾರು ಗುದ್ದಿಸಿ ನಕ್ಕ ಪೊಲೀಸ್;‌ ಸಾವಿಗೆ ಭಾರತ ಖಂಡನೆ

ಚೆಯಿಸ್ತಾ ಕೊಚ್ಚಾರ್‌ ನಿಧನಕ್ಕೆ ನೀತಿ ಆಯೋಗದ ಮಾಜಿ ಸಿಇಒ ಅಮಿತಾಭ್‌ ಕಾಂತ್‌ ಅವರೂ ಸಂತಾಪ ಸೂಚಿಸಿದ್ದಾರೆ. “ಚೆಯಿಸ್ತಾ ಕೊಚ್ಚಾರ್‌ ಅವರು ನೀತಿ ಆಯೋಗದಲ್ಲಿ ನನ್ನೊಂದಿಗೆ ಕಾರ್ಯನಿರ್ವಹಿಸಿದ್ದರು. ಅವರ ಕಾರ್ಯಶೈಲಿಯು ಅದ್ಭುತವಾಗಿತ್ತು. ಆದರೆ, ಲಂಡನ್‌ನಲ್ಲಿ ಅವರು ಅಪಘಾತದಿಂದ ಮೃತಪಟ್ಟಿದ್ದಾರೆ ಎಂಬ ಸುದ್ದಿ ತಿಳಿದು ಅತೀವ ದುಃಖವಾಯಿತು. ದೇವರು ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೆ, ಅವರೊಂದಿಗೆ ಇರುವ ಫೋಟೊಗಳನ್ನು ಕೂಡ ಶೇರ್‌ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Karnataka Rain : ರಾಜಧಾನಿ ಬೆಂಗಳೂರಿನಲ್ಲಿ (Bengaluru Rains) ಭಾನುವಾರ ಸುರಿದ ಎರಡು ಗಂಟೆಯ ಮಳೆಗೆ ಹಳೆಯ ದಾಖಲೆಗಳನ್ನು ಮುರಿದು ಮುನ್ನುಗ್ಗಿದೆ. 133 ವರ್ಷದ ದಾಖಲೆಯನ್ನು ಬೆಂಗಳೂರು ಮಳೆ ರೆಕಾರ್ಡ್ ಬ್ರೇಕ್ ಮಾಡಿದೆ. ಜತೆಗೆ ಸೋಮವಾರವು ಹಲವೆಡೆ ಮಳೆಯು ಅಬ್ಬರಿಸಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru Rain) ಜೂನ್‌ ಮೊದಲ ವಾರವೇ ಮಳೆಯಲ್ಲಿ ರೆಕಾರ್ಡ್‌ ಬ್ರೇಕ್‌ ಮಾಡಿದೆ. ಜೂ.2ರ ಭಾನುವಾರ ಬೆಂಗಳೂರಿನಲ್ಲಿ 111.2 mm ಮಳೆಯಾಗಿದೆ. ಈ ಮೂಲಕ 133 ವರ್ಷಗಳ ದಾಖಲೆಯನ್ನು ಮುರಿದಿದೆ. ಬೆಂಗಳೂರಿನಲ್ಲಿ 1891ರ ಜೂನ್ 16ರಂದು 101.6 mm ಮಳೆ ಆಗಿತ್ತು. ಆದರೆ ನಿನ್ನೆ ಭಾನುವಾರ ಸುರಿದ ಜೂನ್ ತಿಂಗಳ ಮಳೆ 133 ವರ್ಷಗಳ ದಾಖಲೆ (Karnataka Rain) ಮುರಿದಿದೆ ಎಂದು ವಿಸ್ತಾರ ನ್ಯೂಸ್‌ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಾಖಲೆಯ ಮಳೆ ಅಬ್ಬರದ ಡಿಟೈಲ್ಸ್‌

ವರ್ಷ- ಮಳೆ ಪ್ರಮಾಣ
1891ರ ಜೂನ್ 16ರಂದು 101.6 mm
2013ರ ಜೂನ್‌ 1ರಂದು 100mm
2009ರ ಜೂನ್ 11ರಂದು 89.6 mm
2024ರ ಜೂನ್‌ 2ರಂದು 111.2 mm

ಇದನ್ನೂ ಓದಿ: Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

ಚಿಕ್ಕಮಗಳೂರಲ್ಲಿ ಮಳೆಗೆ 50 ಎಕರೆ ಅಡಿಕೆ ತೋಟ ಜಲಾವೃತ

ಚಿಕ್ಕಮಗಳೂರು ಬಯಲುಸೀಮೆ ಭಾಗದಲ್ಲಿ ಸೋಮವಾರ (ಜೂ. 3) ಭಾರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ 50 ಎಕರೆ ಅಡಿಕೆ ತೋಟ ಜಲಾವೃತಗೊಂಡಿದೆ. ಚಿಕ್ಕಮಗಳೂರು ತಾಲೂಕಿನ ಕ್ಯಾತನಬೀಡು, ಸಾದರಹಳ್ಳಿ ಗ್ರಾಮಗಳಲ್ಲಿ ಘಟನೆ ನಡೆದಿದೆ. ಗ್ರಾಮದ ಬಸವರಾಜು, ಲೋಕೇಶ್ ಸೇರಿದಂತೆ ಹಲವು ರೈತರ ತೋಟ ನೀರುಪಾಲಾಗಿದೆ. ಇನ್ನೂ ಚಿಕ್ಕಮಗಳೂರು, ಮುಡಿಗೆರೆ, ಕೊಪ್ಪ, ಶೃಂಗೇರಿ, ಎನ್‌ಆರ್ ಪುರದಲ್ಲಿ ನಿರಂತರ ಮಳೆಯಿಂದಾಗಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಕೊಟ್ಟಿಗೆಹಾರ, ಚಾರ್ಮಾಡಿ, ಕಿಗ್ಗಾ, ಬಸರಿ ಕಟ್ಟೆ ಭಾಗದಲ್ಲೂ ವ್ಯಾಪಕ ಮಳೆಯಾಗುತ್ತಿದೆ.

ದಾವಣಗೆರೆಯಲ್ಲಿ ಕೊಚ್ಚಿ ಹೋದ ಮಂಡಲೂರು ಸೇತುವೆ

ಭಾನುವಾರ ರಾತ್ರಿ ಸುರಿದ ಮಳೆಯಿಂದ ಮಂಡಲೂರು ಸೇತುವೆ ಕೊಚ್ಚಿ ಹೋಗಿದೆ. ದಾವಣಗೆರೆಯ ಮಂಡಲೂರಿನಿಂದ ಕಾಟಿಹಳ್ಳಿ ತಾಂಡಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯು ಕೊಚ್ಚಿ ಹೋದ ಕಾರಣದಿಂದ ಸಂಚಾರಕ್ಕೆ ಅಡಚಣೆ ಆಗಿತ್ತು. ಮಂಡಲೂರು ಗ್ರಾಮಕ್ಕೆ ಬರಲು ಹೋಗಲು ಆಗದೆ ಕಾಟಿಹಳ್ಳಿ ತಾಂಡದ ಜನರಿಗೆ ತೊಂದರೆ ಅನುಭವಿಸಿದರು. ಸೇತುವೆ ತುರ್ತು ಕಾಮಗಾರಿ ಆರಂಭಿಸುವಂತೆ ಗ್ರಾಮಸ್ಥರು ಆಗ್ರಹಿಸಿದರು.

ಕೊಡಗಿಗೂ ಎಂಟ್ರಿ ಕೊಟ್ಟ ಮುಂಗಾರು ಮಳೆ

ಸೋಮವಾರ ಕೊಡಗು ಜಿಲ್ಲೆಯ ಹಲವೆಡೆ ತುಂತುರು ಮಳೆ ಆರಂಭವಾಗಿದೆ. ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಬಿಸಿಲ ವಾತವರಣವಿತ್ತು. ಸೋಮವಾರ ಮಧ್ಯಾಹ್ನದ ನಂತರ ಮಡಿಕೇರಿ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆಯಾಗಿದ್ದು, ಮನ್ಸೂನ್ ಮಾದರಿಯ ವಾತಾವರಣ ಕಂಡು ಬಂತು. ಮಳೆಯಿಂದಾಗಿ ಕೊಡಗಿನ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿದೆ. ಇತ್ತ ದಿಢೀರ್‌ ಮಳೆಗೆ ಸಾರ್ವಜನಿಕರು ಹಾಗೂ ದ್ವಿಚಕ್ರ ವಾಹನ ಸವಾರರು ಪರದಾಡಿದರು.

ಚಿತ್ರದುರ್ಗದಲ್ಲಿ ಮಳೆಗೆ ಬೆಳೆ ನಾಶ

ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಆರ್ಭಟಕ್ಕೆ ಮೊಳಕಾಲ್ಮುರು ತಾಲೂಕಿನಲ್ಲಿ ಅವ್ಯವಸ್ಥೆ ಆಗಿದೆ. ಪಕ್ಕುರ್ತಿ ಗ್ರಾಮದಲ್ಲಿ ಮಳೆಯಿಂದಾಗಿ ಶೇಂಗಾ, ಹತ್ತಿ, ಕಲ್ಲಂಗಡಿ, ಕನಕಾಂಬರ ಬೆಳೆ ನಾಶವಾಗಿದೆ. ಮಳೆ ರಭಸಕ್ಕೆ ನಾಲ್ಕು ಬೋರ್ವೆಲ್,ವಿದ್ಯುತ್ ಪರಿಕರ,ಪೈಪ್ ಲೈನ್ ಕೊಚ್ಚಿ ಹೋಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Shivamogga Lok Sabha Constituency: ತ್ರಿಕೋನ ಕದನದ ಶಿವಮೊಗ್ಗದಲ್ಲಿ ಯಾರಿಗೆ ವಿಜಯದ ಮಾಲೆ?

Shivamogga Lok Sabha Constituency: ಗೀತಾ ಶಿವರಾಜ್‌ ಕುಮಾರ್‌ ಜತೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.‌ ಈಶ್ವರಪ್ಪ ಅವರು ಸ್ಪರ್ಧಿಸಿರುವುದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಚುನಾವಣೆ ಫಲಿತಾಂಶವು ಇನ್ನಿಲ್ಲದಷ್ಟು ಕುತೂಹಲ ಕೆರಳಿಸಿದೆ. ಇನ್ನು ಬಿ.ವೈ.ರಾಘವೇಂದ್ರ ಅವರಿಗೆ ತಂದೆ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಲವಿದೆ.

VISTARANEWS.COM


on

Shivamogga Lok Sabha Constituency
Koo

ಶಿವಮೊಗ್ಗ: ಕರ್ನಾಟಕದಲ್ಲಿಯೇ ಅತಿ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರವೂ (Shivamogga Lok Sabha Constituency) ಒಂದಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ, ಮತ್ತೊಬ್ಬ ಮಾಜಿ ಸಿಎಂ ಎಸ್‌.ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ (Geetha Shivarajkumar) ಅವರು ಕಣಕ್ಕಿಳಿದಿದ್ದಾರೆ. ಇನ್ನು, ಬಂಡಾಯದ ಬಾವುಟ ಬೀಸಿರುವ ಕೆ.ಎಸ್.ಈಶ್ವರಪ್ಪ (KS Eshwarappa) ಅವರು ಪಕ್ಷೇತರರಾಗಿ ಸ್ಪರ್ಧಿಸಿದ್ದು, ತ್ರಿಕೋನ ಕದನ ಏರ್ಪಟ್ಟಿದೆ. ಹಾಗಾಗಿ, ಇದು ಎಲ್ಲರಿಗೂ ಪ್ರತಿಷ್ಠೆಯ ಕಣವಾಗಿದೆ.

ರಾಘವೇಂದ್ರ ಬಲವೇನು?

ಹಾಗೆ ನೋಡಿದರೆ, ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಅವರಿಗೆ ಹಲವು ರೀತಿಯ ಅನುಕೂಲಕರ ವಾತಾವರಣವಿದೆ. ಕ್ಷೇತ್ರವು ಬಿಜೆಪಿ ಭದ್ರಕೋಟೆಯಾಗಿದೆ. ಬಿ.ಎಸ್‌.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ. ರಾಘವೇಂದ್ರ ಅವರ ಸಹೋದರ ಬಿ.ವೈ.ವಿಜಯೇಂದ್ರ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ. ಅದರಲ್ಲೂ, ಸಂಸದರಾಗಿ ಬಿ.ವೈ.ರಾಘವೇಂದ್ರ ಅವರು ರೈಲು ಸಂಪರ್ಕ ಸೇರಿ ಹಲವು ರೀತಿಯ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ನರೇಂದ್ರ ಮೋದಿ ಅವರ ಅಲೆಯೂ ಇಲ್ಲಿ ಕೆಲಸ ಮಾಡುವ ಸಾಧ್ಯತೆ ಇದೆ. ಹಾಗಾಗಿ, ರಾಘವೇಂದ್ರ ಅವರು ಗೆಲುವಿನ ವಿಶ್ವಾಸದಲ್ಲಿದ್ದಾರೆ.

BY Raghavendra

ಗೀತಾ ರಣತಂತ್ರ ಹೀಗಿತ್ತು

ಮತ್ತೊಂದೆಡೆ, ಎಸ್.‌ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್‌ ಕುಮಾರ್‌ ಅವರು ಎರಡನೇ ಬಾರಿ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ಈ ಬಾರಿ ರಣತಂತ್ರ ರೂಪಿಸಿದ್ದಾರೆ. ಶಿವರಾಜ್‌ ಕುಮಾರ್‌ ಅವರ ವರ್ಚಸ್ಸು, ಎಸ್‌. ಬಂಗಾರಪ್ಪ ಅವರ ಹೆಸರು, ಸಹೋದರ, ಸಚಿವ ಮಧು ಬಂಗಾರಪ್ಪ ನೆರವಿನ ಬಲದೊಂದಿಗೆ ಅವರು ಅಬ್ಬರದ ಪ್ರಚಾರ ಕೈಗೊಂಡಿರುವ ಕಾರಣ ಬಿ.ವೈ.ರಾಘವೇಂದ್ರ ಅವರಿಗೆ ಗೆಲುವು ಸುಲಭವಲ್ಲ ಎಂದು ಹೇಳಲಾಗುತ್ತಿದೆ.

Congress candidate Geetha Shivarajkumar's roadshow in Shivamogga

ಇವರಿಬ್ಬರ ಮಧ್ಯೆ, ಕೆ.ಎಸ್.ಈಶ್ವರಪ್ಪ ಅವರು ಪುತ್ರ ಕಾಂತೇಶ್‌ಗೆ ಟಿಕೆಟ್‌ ನೀಡಲಿಲ್ಲ ಎಂದು ಬಿಜೆಪಿ ವಿರುದ್ಧ ಬಂಡಾಯವೆದ್ದು, ಪಕ್ಷೇತರರಾಗಿ ಚುನಾವಣೆ ಕಣಕ್ಕಿಳಿದಿದ್ದಾರೆ. ಕಟ್ಟಾ ಆರೆಸ್ಸೆಸ್ಸಿಗರಾಗಿರುವ ಕೆ.ಎಸ್.ಈಶ್ವರಪ್ಪ ಅವರು ಹಿಂದುತ್ವದ ನೆಲೆಗಟ್ಟಿನಲ್ಲಿ ಮತಯಾಚನೆ ಮಾಡಿದ್ದಾರೆ. ಹಾಗಾಗಿ, ಇವರು ಮತಗಳನ್ನು ಒಡೆದಿದ್ದರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ. ಇಷ್ಟೆಲ್ಲ ಕಾರಣಗಳಿಂದಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರವು ಎಲ್ಲರಿಗೂ ಪ್ರತಿಷ್ಠೆಯ ಕಣವಾಗಿದೆ.

KS Eshwarappa

2019, 2014ರ ಫಲಿತಾಂಶ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರು 2.23 ಲಕ್ಷ ಮತಗಳ ಅಂತರದಲ್ಲಿ ಜೆಡಿಎಸ್‌ನ ಮಧು ಬಂಗಾರಪ್ಪ ಅವರ ವಿರುದ್ಧ ಗೆಲುವು ಸಾಧಿಸಿದ್ದರು. 2014ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಯಿಂದ ಸ್ಪರ್ಧಿಸಿ ಸುಮಾರು 3 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಆಗ ಎಸ್.‌ ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ಕೂಡ ಸ್ಪರ್ಧಿಸಿ, ಮೂರನೇ ಸ್ಥಾನ ಪಡೆದಿದ್ದರು. ಈಗ ಮತ್ತೆ ಗೀತಾ ಶಿವರಾಜ್‌ ಕುಮಾರ್‌ ಅವರು ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: Bidar Lok Sabha Constituency: ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಹಳೇ ಬೇರು Vs ಹೊಸ ಚಿಗುರು; ಖೂಬಾ, ಖಂಡ್ರೆ ಕದನದಲ್ಲಿ ಜಯ ಯಾರಿಗೆ?

Continue Reading

ಶಿವಮೊಗ್ಗ

Road Accident : ಎದುರಿಗೆ ಬಂದ ಬೈಕ್‌ ತಪ್ಪಿಸಲು ಹೋಗಿ ಮಹಿಳೆಗೆ ಗುದ್ದಿದ ಕಾರು; ಎಗರಿ ಬಿದ್ದವಳು ಸ್ಥಳದಲ್ಲೇ ಸಾವು

Road Accident : ಎದುರಿಗೆ ಬರುತ್ತಿದ್ದ ಬೈಕ್‌ ಅನ್ನು ತಪ್ಪಿಸಲು ಹೋಗಿ ರಸ್ತೆ ಬದಿಯಲ್ಲಿ ನಡೆದುಹೋಗುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮಹಿಳೆ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

VISTARANEWS.COM


on

By

Road Accident
Koo

ಶಿವಮೊಗ್ಗ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿ ಮಹಿಳೆಗೆ ಕಾರೊಂದು ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ರಭಸಕ್ಕೆ ಹನಸವಾಡಿ ಗ್ರಾಮದ ಮಂಜಮ್ಮ (45) ಎಂಬುವವರು ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಹನಸವಾಡಿ ಗ್ರಾಮದಲ್ಲಿ ಈ ಅಪಘಾತ ನಡೆದಿದೆ.

ಮಹಿಳೆಗೆ ಗುದ್ದಿದ ಕಾರು ನೇರವಾಗಿ ಹೋಟೆಲ್‌ಗೆ ನುಗ್ಗಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದಾಗ ಎದುರಿಗೆ ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇನ್ನೂ ನಜ್ಜುಗಜ್ಜಾಗಿದ್ದ ಕಾರನ್ನು ತೆರವು ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case : ಶಿವಮೊಗ್ಗದಲ್ಲಿ ವೃದ್ಧೆ ಬರ್ಬರ ಕೊಲೆ; ಅನ್ಯಕೋಮಿನ ಹುಡುಗನಿಂದ ಮಾರಣಾಂತಿಕ ಹಲ್ಲೆ

ಚೇಸ್‌ ಮಾಡಿ ಕಾರಿಗೆ ಕಲ್ಲು ಹೊಡೆದ ಅಪರಿಚಿತ

ರಾಜಧಾನಿ ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳು ನಿಲ್ಲುತ್ತಲೇ ಇಲ್ಲ. ಮಹದೇವಪುರದ ವಿಬ್ ಗಯಾರ್ ಶಾಲೆ ಬಳಿ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಅಪರಿಚಿತನೊಬ್ಬ ಕಾರಿಗೆ ಕಲ್ಲು ಹೊಡೆದಿದ್ದಾನೆ. ದೀಪಕ್ ಜೈನ್ ಎಂಬುವವರ ಕಾರನ್ನು ಹಿಂಬಾಲಿಸಿ ನಂತರ ಅಡ್ಡ ಹಾಕಿ ಕಲ್ಲಿನಿಂದ ಮಿರರ್ ಜಖಂ ಮಾಡಿದ್ದಾನೆ. ಅಪರಿಚಿತನ ಕೃತ್ಯವು ಡ್ಯಾಶ್‌ಬೋರ್ಡ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಪೊಲೀಸರಿಗೆ ಟ್ಯಾಗ್ ಮಾಡಿ ದೀಪಕ್ ಜೈನ್ ದೂರು ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Murder Case : ಶಿವಮೊಗ್ಗದಲ್ಲಿ ವೃದ್ಧೆ ಬರ್ಬರ ಕೊಲೆ; ಅನ್ಯಕೋಮಿನ ಹುಡುಗನಿಂದ ಮಾರಣಾಂತಿಕ ಹಲ್ಲೆ

Murder Case : ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬ ವೃದ್ಧೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದರೆ, ಮತ್ತೊಂದು ಕಡೆ ಅನ್ಯಕೋಮಿನ ಅಪ್ರಾಪ್ತನೊಬ್ಬ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.

VISTARANEWS.COM


on

By

Murder Case in shivamogga
Koo

ಶಿವಮೊಗ್ಗ : ವ್ಯಕ್ತಿಯೊಬ್ಬ ವೃದ್ಧೆಯನ್ನು ಬರ್ಬರವಾಗಿ ಕೊಲೆ (Murder Case) ಮಾಡಿದ್ದಾನೆ. ಶಿವಮೊಗ್ಗದ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಫಜಲುನ್ನಿಸ್ಸಾ (70) ಕೊಲೆಯಾದವರು.

ಮಂಜುನಾಥ್ ಕೊಲೆ ಆರೋಪಿಯಾಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭದ್ರಾವತಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು , ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಇನ್ನೂ ಕೊಲೆ ವಿಷಯ ತಿಳಿಯುತ್ತಿದ್ದಂತೆ ಮನೆ ಮುಂದೆ ನೂರಾರು ಮಂದಿ ಜಮಾಯಿಸಿದ್ದರು.

Murder Case Elderly woman murdered in Shivamogga and Fatally assaulted by a boy from another community
ಮಲ್ಲೇಶ್‌ ಹಲ್ಲೆಗೊಳಗಾದವರು

ಮಚ್ಚು ಬೀಸಿ ಹಲ್ಲೆ ಮಾಡಿದ ಅಪ್ರಾಪ್ತ!

ಶಿವಮೊಗ್ಗದ ಟಿಪ್ಪುನಗರದ ಸಮೀಪ ಅನ್ಯಕೋಮಿನ ಬಾಲಕನೊಬ್ಬ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದಾನೆ. ಗಾಡಿಕೊಪ್ಪದ ನಿವಾಸಿ ಮಲ್ಲೇಶ್ (40) ಹಲ್ಲೆಗೊಳಗಾದವರು. ಮಲ್ಲೇಶ್‌ ಅವರು ಮಟನ್ ಖರೀದಿ ಮಾಡುವಾಗ ಅಪ್ರಾಪ್ತ ಮುಖಕ್ಕೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಗಂಭೀರ ಗಾಯಗೊಂಡಿರುವ ಮಲ್ಲೇಶ್‌ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನೆ ಮಾಡಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Food Poisoning : ಮೈಸೂರಲ್ಲಿ ಗೃಹ ಪ್ರವೇಶದ ಊಟ ತಿಂದ ವೃದ್ಧೆ ಸಾವು; 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಚಾಮರಾಜನಗರದಲ್ಲಿ ಅತ್ತಿಗೆ ಮೇಲಿನ ಮೋಹಕ್ಕೆ ಅಣ್ಣನನ್ನೇ ಕೊಂದ ಕಾಮುಕ ತಮ್ಮ

ಚಾಮರಾಜನಗರ: ಪಾಪಿ ತಮ್ಮನೊಬ್ಬ ಒಡಹುಟ್ಟಿದ ಅಣ್ಣನನ್ನೇ ಚಾಕುವಿನಿಂದ ಇರಿದು (Murder Case) ಕೊಂದಿದ್ದಾನೆ. ಚಾಮರಾಜನಗರದ (chamarajanagara News) ಗುಂಡ್ಲುಪೇಟೆ ತಾಲೂಕಿನ‌ ಚೌಡಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಚೌಡಹಳ್ಳಿ ಗ್ರಾಮದ ಪ್ರಸಾದ್ (45) ಕೊಲೆಯಾದ ದುರ್ದೈವಿ. ಪ್ರಸಾದ್‌ ಸಹೋದರ ಕುಮಾರ್ (39) ಎಂಬಾತನಿಂದ ಈ ಕೃತ್ಯ ನಡೆದಿದೆ.

ಆರೋಪಿ ಕುಮಾರ್‌ನ ಕಾಮುಕತ್ವ ಎಷ್ಟರ ಮಟ್ಟಿಗೆ ಇತ್ತೆಂದರೆ, ಅತ್ತಿಗೆಗೆ ತನ್ನ ಜತೆ ಅನೈತಿಕ ಸಂಬಂಧ ಹೊಂದುವಂತೆ ಕಾಮುಕ ಮೈದುನ ನಿತ್ಯ ಪೀಡಿಸುತ್ತಿದ್ದನಂತೆ. ಇದೇ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಶನಿವಾರ ರಾತ್ರಿ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ನಿನ್ನ ಹೆಂಡತಿ ಬೇರೆಯವರ ಜತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದಿದ್ದಾನೆ.

ಇದರಿಂದ ಸಿಟ್ಟಾದ ಪ್ರಸಾದ್‌ ತಮ್ಮ ಕುಮಾರ್‌ಗೆ ಹೊಡೆಯಲು ಹೋಗಿದ್ದಾರೆ. ಒಬ್ಬರಿಗೊಬ್ಬರು ಕೈ ಕೈ ಮಿಲಾಯಿಸಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿ ಕುಮಾರ್‌ ಸಿಟ್ಟಿನಲ್ಲಿ ಅಣ್ಣ ಪ್ರಸಾದ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಗುಂಡ್ಲುಪೇಟೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆರೋಪಿ ಕುಮಾರ್‌ನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Hornbill bird sighting in Gangavathi
ಕರ್ನಾಟಕ1 min ago

Hornbill Bird: ಗಂಗಾವತಿಯಲ್ಲಿ ‘ಹಾರ್ನ್‌ಬಿಲ್’ ಪಕ್ಷಿ ಪ್ರತ್ಯಕ್ಷ

Samsung Big TV Days Sale Exciting offer on big TVs
ದೇಶ4 mins ago

Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

Davangere Lok Sabha Constituency
ದಾವಣಗೆರೆ7 mins ago

Davangere Lok Sabha Constituency: ದಾವಣಗೆರೆಯಲ್ಲಿ ನಾರಿಶಕ್ತಿ ಕದನ, ಯಾರು ಗೆದ್ದರೂ ಇತಿಹಾಸ

Rahul Dravid
ಕ್ರಿಕೆಟ್8 mins ago

Rahul Dravid: ರೋಹಿತ್​, ಕೊಹ್ಲಿ, ಪಂತ್​ ಸೇರಿ ಎಲ್ಲ ಆಟಗಾರರಿಗೆ ಖಡಕ್​ ಎಚ್ಚರಿಕೆ ನೀಡಿದ ಕೋಚ್​ ದ್ರಾವಿಡ್​

Kannada New Movie Mandela nari shrinivas
ಸ್ಯಾಂಡಲ್ ವುಡ್8 mins ago

Kannada New Movie: `ಮಂಡೇಲಾ’ ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ!

Election Result 2024
ಪ್ರಮುಖ ಸುದ್ದಿ14 mins ago

Election Result 2024: ಇಂಡಿ ಒಕ್ಕೂಟ ಸಭೆ ಸೇರಿದ್ದ ಸ್ಥಳದಲ್ಲೇ ವಾಸ್ತುದೋಷ, ಅಂದು ಅಮವಾಸ್ಯೆ ಬೇರೆ; ಹಾಗಾಗಿ…

Fact Check
Fact Check26 mins ago

Fact Check: ಸೋಲುವ ಭೀತಿಯಲ್ಲಿ ಬ್ಯಾಂಕಾಕ್‌ಗೆ ಹಾರಲು ಸಿದ್ಧರಾದ್ರಾ ರಾಹುಲ್‌ ಗಾಂಧಿ? ವೈರಲ್‌ ಆಗಿರುವ ಬೋರ್ಡಿಂಗ್‌ ಪಾಸ್‌ನ ಅಸಲಿಯತ್ತೇನು?

Benefits Of Walk After Meal
ಆರೋಗ್ಯ30 mins ago

Benefits Of Walk After Meal: ಊಟದ ಬಳಿಕ ಲಘುವಾದ ವಾಕಿಂಗ್‌ ಮಾಡಿ, ಆರೋಗ್ಯದಲ್ಲಿನ ಬದಲಾವಣೆ ನೋಡಿ!

Dead Body Found Bodies found floating in Cauvery river
ಕ್ರೈಂ35 mins ago

Dead Body Found : ಕಾವೇರಿ ನದಿಯಲ್ಲಿ ತೇಲಿ ಬಂದ ಶವಗಳು; ನೋಡಲು ಮುಗಿಬಿದ್ದ ಜನರು

Ram Charan Instagram story of daughter Klin Kaara receiving bujji
ಟಾಲಿವುಡ್35 mins ago

Ram Charan: ರಾಮ್‌ಚರಣ್‌ ಮಗಳಿಗೆ ಸಿಕ್ತು ಪ್ರಭಾಸ್‌ರಿಂದ ಪುಟಾಣಿ ಬುಜ್ಜಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌