Site icon Vistara News

Shivamogga News: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು: ಎಂಎಲ್‌ಸಿ ಎಸ್.ಎಲ್.ಭೋಜೇಗೌಡ

Students should also prioritize sports activities says MLC SL Bhoje Gowda at ripponpet

ರಿಪ್ಪನ್‌ಪೇಟೆ: ಕಲಿಕೆಗೆ ಎಷ್ಟು ಆದ್ಯತೆ ಕೊಡುತ್ತೇವೆಯೋ ಹಾಗೆ ಕ್ರೀಡೆ (Sports) ಮತ್ತು ಇತರ ಚಟುವಟಿಗಳಿಗೆ ಆದ್ಯತೆ ಕೊಡಬೇಕು. ಆಗ ಮಾತ್ರ ವಿದ್ಯಾರ್ಥಿಗಳು (Students) ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಹೇಳಿದರು.

ರಿಪ್ಪನ್‌ಪೇಟೆ ಸಮೀಪದ ಅಮೃತ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಹೊಸನಗರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ದೈಹಿಕವಾಗಿ, ಮಾನಸಿಕವಾಗಿ ಸದೃಢವಾದಾಗ ಮಾತ್ರ ಮಕ್ಕಳ ಸರ್ವಾಂಗೀಣ ಬೆಳವಣಿಗೆ ಆಗುತ್ತದೆ. ಸರ್ಕಾರ ಪ್ರತಿಭಾ ಕಾರಂಜಿ, ಕ್ರೀಡೆ ಹಾಗೂ ಇತರೆ ಚಟುವಟಿಕೆಗಳಿಗೆ ಆರ್ಥಿಕ ಭದ್ರತೆ ಒದಗಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ಇದನ್ನೂ ಓದಿ: Drought Situation : ರಾಜ್ಯದ 195 ತಾಲೂಕುಗಳು ಬರಪೀಡಿತ; ಕಂದಾಯ ಸಚಿವ ಕೃಷ್ಣಬೈರೇಗೌಡ ಘೋಷಣೆ, ಕೇಂದ್ರಕ್ಕೆ ವರದಿ

ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಅದನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು ಎಂದು ತಿಳಿಸಿದ ಅವರು, ಹಳ್ಳಿಗಾಡಿನಲ್ಲಿ ಮಕ್ಕಳಿಗೆ ಶಿಕ್ಷಕರ ಕೊರತೆ ಇದೆ, ಶಿಕ್ಷಣಕ್ಕೋಸ್ಕರ ಕಾಲೇಜು ತೆರೆದಿದ್ದರೂ ಸಹ ಸರಿಯಾದ ಉಪನ್ಯಾಸಕರುಗಳು ಸರ್ಕಾರಿ ಕಾಲೇಜುಗಳಲ್ಲಿ ದೊರೆಯುತ್ತಿಲ್ಲ ಸರ್ಕಾರ ಸರ್ಕಾರಿ ಕಾಲೇಜುಗಳನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ ಕೃಷ್ಣಪ್ಪ ಮಾತನಾಡಿದರು. ಪ್ರಾಂಶುಪಾಲ ಮಹಮ್ಮದ್ ನಜಹತ್ ಉಲ್ಲಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಇದನ್ನೂ ಓದಿ: UPI Payment: ತಪ್ಪು ಯುಪಿಐ ವಿಳಾಸಕ್ಕೆ ಹಣ ಪಾವತಿಸಿದಿರಾ? ಅದನ್ನು ಮರಳಿ ಪಡೆಯೋದು ಹೇಗೆ?

ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ ಚಂದ್ರಪ್ಪ ಗುಂಡುಪಲ್ಲಿ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್. ಯೋಗೀಶ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಗ್ರಾಪಂ ಅಧ್ಯಕ್ಷ ವಿಶ್ವನಾಥ್, ಮಾಜಿ ಅಧ್ಯಕ್ಷ ನಿರ್ಮಲ ರಾಜು, ಬಶೀರ್ ಅಹ್ಮದ್, ದಿನೇಶ್ ಬಂಡಿ, ನಿವೃತ್ತ ಜಿಲ್ಲಾ ಉಪ ನಿರ್ದೇಶಕ ನಾಗರಾಜ್ ಕಾಗಲ್ಕರ್, ಉಪನ್ಯಾಸಕರಾದ ಹಾಲಪ್ಪ ಸಂಕೂರ್, ಪ್ರಕಾಶ್, ಪ್ರಾನ್ಸಿಸ್ ಬೆಂಜಾಮಿನ್, ನಾಗೇಶ್ ಸೋಮಯಾ ಜಿ, ಸತೀಶ್, ಶಿವಪುರ ರಾಜು, ಸುನಿಲ್, ಹಾಗೂ ಇತರರು ಉಪಸ್ಥಿತರಿದ್ದರು.

Exit mobile version