ಸೊರಬ: ನಿಸರ್ಗದತ್ತವಾದ ಪರಿಸರ (World Environment Day) ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್. ವಾಸುದೇವ್ ಹೇಳಿದರು.
ತಾಲೂಕಿನ ಚಂದ್ರಗುತ್ತಿ ಸಮೀಪದ ಕಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇದನ್ನೂ ಓದಿ: Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ
ಗಿಡಗಳನ್ನು ನೆಡುವುದರ ಜತೆಯಲ್ಲಿ ಗಿಡಗಳನ್ನು ಪೋಷಣೆ ಮಾಡುವುದು ಸಹ ಮುಖ್ಯ. ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೈಸರ್ಗಿಕ ಪರಿಸರದ ವಾತಾವರಣವಿದ್ದಲ್ಲಿ ಮತ್ತು ಮನುಷ್ಯ ಆರೋಗ್ಯಕರವಾಗಿರಬೇಕಾದರೆ ಪರಿಸರ ಉತ್ತಮವಾಗಿರಬೇಕು. ಮಕ್ಕಳಿಗೆ ಬಾಲ್ಯದಲ್ಲಿಯೇ ಪರಿಸರದ ಬಗ್ಗೆ ಕಾಳಜಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಸಸಿಗಳನ್ನು ನೆಟ್ಟರೆ ಸಾಲದು ಪೋಷಣೆ ಅಗತ್ಯ ಈ ನಿಟ್ಟಿನಲ್ಲಿ ಕಳೆದ ವರ್ಷ ನೆಟ್ಟ ಗಿಡಗಳನ್ನು ಸಂರಕ್ಷಣೆ ಮಾಡುವಲ್ಲಿ ಶಾಲಾ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯವಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಶಾಲಾ ಶಿಕ್ಷಕ ವರ್ಗದವರು ಹಾಗೂ ವಿದ್ಯಾರ್ಥಿಗಳಿಂದ ಹಲವು ಜಾತಿಯ ಗಿಡಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು.
ಇದನ್ನೂ ಓದಿ: Food Tips Kannada: ಇನ್‌ಸ್ಟಂಟ್ ನೂಡಲ್ಸ್ ತಿಂದರೆ ಆರೋಗ್ಯಕ್ಕೆ ತೊಂದರೆ ಇದೆಯೆ?
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಗಣೇಶ್ ಪ್ರಸಾದ, ನಾಮದೇವ ನಾಯ್ಕ್, ಅಕ್ಷಯ್, ಶ್ರೀಕೃಷ್ಣ, ಆಶಾ, ಶಶಿಕಾಂತ್, ಕಾವ್ಯ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.