Site icon Vistara News

Yuva Nidhi Scheme: ಯುವ ಜನತೆ ಖಾತೆಗೆ ಇಂದೇ ಯುವ ನಿಧಿ ಕಾಸು ವರ್ಗಾವಣೆ! ನೀವಿನ್ನೂ ನೋಂದಣಿ ಮಾಡಿಲ್ವಾ?

Yuva Nidhi Scheme Cash Transfer Today Shimoga gears up for event

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ (Congress Guarantee Scheme) ಘೋಷಣೆಯಾಗಿರುವ ʼಯುವ ನಿಧಿʼ (Yuva Nidhi Scheme) ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ ನಗರ ಸಜ್ಜಾಗಿದೆ. ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಶುಕ್ರವಾರ (ಜ. 12) ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ.

ಸುಮಾರು 85 ಸಾವಿರಕ್ಕೂ ಅಧಿಕ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಡಿಪ್ಲೊಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗ ಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DCM DK Shivakumar), ಸಚಿವರಾದ ಮಧು ಬಂಗಾರಪ್ಪ (Madhu Bangarappa), ಡಾ.ಶರಣ ಪ್ರಕಾಶ್ ಪಾಟೀಲ್ (Dr Sharanaprakash Patil), ಡಾ.ಎಂ.ಸಿ. ಸುಧಾಕರ್ (DR MC Sudhakar) ಚಾಲನೆ ಕೊಡಲಿದ್ದಾರೆ.

ಮೊದಲ ಕಂತಿನ ಹಣ ಬಿಡುಗಡೆ

ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಹಾಗೂ ಅಷ್ಟೇ ಸಂಖ್ಯೆಯ ಜನರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ಇರಲಿದೆ ಬಸ್‌ ವ್ಯವಸ್ಥೆ

ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತು ಖಾಸಗಿ ಒಡೆತನದ ಬಸ್ ಹಾಗೂ ಇತರೆ ವಾಹನಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿ ಬಸ್‌ ಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದಲ್ಲದೆ, ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ಮತ್ತು ಮೊಬೈಲ್ ನಂಬರ್ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಏನಿದು ಯುವನಿಧಿ ಯೋಜನೆ?

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಯುವನಿಧಿ ಯೋಜನೆಯೂ ಒಂದಾಗಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೊಳಿಸಿದೆ. ಇದೀಗ ಐದನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸಲಿದೆ. ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು ಭತ್ಯೆ ಸಿಗಲಿದೆ. ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ ನೀಡಿದರೆ, ಡಿಪ್ಲೊಮಾ ಪದವೀಧರರಿಗೆ 1500 ರೂಪಾಯಿ ನೀಡಲಾಗುತ್ತದೆ. ಪದವೀಧರರಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ನೀಡಲಾಗುತ್ತದೆ.

ಷರತ್ತುಗಳು ಏನು?

ಅರ್ಜಿ ಸಲ್ಲಿಸಲು ಯಾವ ದಾಖಲೆ ಬೇಕು?

ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಎಸ್‍ಎಸ್‍ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್ ದಾಖಲೆಗಳು ಬೇಕು.

ಎಲ್ಲಿ ಅರ್ಜಿ ಸಲ್ಲಿಸಬಹುದು?

ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್‌ಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಯಾರು ಅರ್ಹರಲ್ಲ?

ನಮ್ಮದು ನುಡಿದಂತೆ ನಡೆಯುವ ಸರ್ಕಾರ ನಮ್ಮದು. ವಿಧಾನಸಭಾ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ್ದೇವೆ. ದೇಶದ ಜನತೆ ಕರ್ನಾಟಕ ಮಾದರಿಯ ಆಡಳಿತವನ್ನು ಎದುರು ನೋಡುತ್ತಿದ್ದಾರೆ.
| ಡಾ. ಶರಣ್ ಪ್ರಕಾಶ್ ಪಾಟೀಲ್, ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ಧಿ ಹಾಗೂ ಜೀವನೋಪಾಯ ಸಚಿವ

Exit mobile version