ಮೈಸೂರು: ಸುತ್ತೂರು ಮಠದ ಜಗದ್ಗುರು ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ 107ನೇ ಜಯಂತಿ ಅಂಗವಾಗಿ ಮೈಸೂರು ಶರಣ ಮಂಡಳಿ ಪ್ರತಿ ವರ್ಷ ನೀಡುವ ರಾಜೇಂದ್ರ ಶ್ರೀಗಳ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ಅಧ್ಯಕ್ಷ ಶಿವಾನಂದ ತಗಡೂರು ಭಾಜನರಾಗಿದ್ದಾರೆ.
ಶರಣ ಮಂಡಳಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ ಈ ವಿಷಯ ತಿಳಿಸಿದ್ದಾರೆ. ಸೆ.17ರಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಿವಾನಂದ ತಗಡೂರು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ | ಬಿಬಿಎಂಪಿ ಚುನಾವಣೆಗೆ ಹಾದಿ ಸುಗಮ: ವಾರ್ಡ್ ವಿಂಗಡಣೆ ಕುರಿತು ಹೈಕೋರ್ಟ್ ಮಹತ್ವದ ಆದೇಶ