Site icon Vistara News

Shivaram Hebbar : ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ಇಂದು ಕಾಂಗ್ರೆಸ್ ಸೇರ್ಪಡೆ

Shivaram Hebbar

Shivaram Hebbar's son to join Congress today

ಕಾರವಾರ: ಬಿಜೆಪಿಯಿಂದ ಆಯ್ಕೆಯಾಗಿದ್ದರೂ ಆ ಪಕ್ಷದಿಂದ ಅಂತರ ಕಾಪಾಡಿಕೊಂಡು ಕಾಂಗ್ರೆಸ್​ ಜತೆ ನಿಕಟ ಸಂಪರ್ಕ ಹೊಂದಿರುವ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar)​ ಅವರು ತಮ್ಮ ನಿಲುವನ್ನು ಇನ್ನೂ ಸ್ಪಷ್ಟಪಡಿಸಿಲ್ಲ. ಆದರೆ, ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಅವರ ಪುತ್ರ ವಿವೇಕ್ ಹೆಬ್ಬಾರ್​ ಗುರುವಾರ (ಏಪ್ರಿಲ್​11ರಂದು) ಕಾಂಗ್ರೆಸ್​ ಪಕ್ಷಕ್ಕೆ (Congress Party) ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ. ಬನವಾಸಿಯಲ್ಲಿ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.

ಶಿರಸಿ ತಾಲೂಕಿನ ಬನವಾಸಿಯಲ್ಲಿ ಗುರುವಾರ ವಿವೇಕ್​ ಹೆಬ್ಬಾರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ಆಯೋಜನೆಗೊಂಸಿದೆ. ಸಚಿವ ಮಂಕಾಳು ವೈದ್ಯ ಸಮ್ಮುಖದಲ್ಲಿ ವಿವೇಕ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ. ಇದೇ ವೇಳೆ ಅವರು ನೂರಾರು ಬೆಂಬಲಿಗರನ್ನು ಕಾಂಗ್ರೆಸ್​ಗೆ ಸೇರ್ಪಡೆಗೊಳಿಸಲಿದ್ದಾರೆ. ಲೋಕ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅವರ ಕಾಂಗ್ರೆಸ್ ಸೇರ್ಪಡೆ ತಾಲೂಕಿನಲ್ಲಿ ಚರ್ಚೆಯ ವಿಷಯವಾಗಿದೆ.

ಗುರವಾರ ಬನವಾಸಿಯಲ್ಲಿ ನಡೆಯುವ ಕಾರ್ಯಕ್ರಮ ಮುಗಿಸಿ ಬೆಂಗಳೂರಿನಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಪುತ್ರನ ಸೇರ್ಪಡೆ ಮೂಲಕ ಹೆಬ್ಬಾರ್ ಅವರ ಪಕ್ಷಾಂತರ ಬಹುತೇಕ ನಿಶ್ಚಿತ ಎನ್ನಲಾಗುತ್ತಿದೆ.

ಚುನಾವಣಾ ಪ್ರಚಾರಕ್ಕೆ ಬರದ ಹೆಬ್ಬಾರ್​

ಕಳೆದ ಕೆಲವು ತಿಂಗಳಿಂದ ಬಿಜೆಪಿಯ ಸಖ್ಯವನ್ನು ತೊರೆದಿರುವ ಹೆಬ್ಬಾರ್ ಅವರು ಕಾಂಗ್ರೆಸ್ ಪಾಳಯದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅಧಿಕೃತವಾಗಿ ಕೈ ಪಕ್ಷವನ್ನು ಸೇರಿಲ್ಲವಾದರೂ ಅಲ್ಲಿನ ಗಣ್ಯರೊಂದಿಗೆ ಹೆಚ್ಚು ಒಡನಾಟ ಹೊಂದಿದ್ದಾರೆ. ಪೂರಕವಾಗಿ ಅವರು ಲೋಕ ಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾಗಿಯಾಗುತ್ತಿಲ್ಲ. ಬಿಜೆಪಿಯಿಂದ ಸಂಪೂರ್ಣವಾಗಿ ಅಂತರ ಕಾಯ್ದುಕೊಂಡಿರುವ ಅವರು ರಾಜಕೀಯ ಚಟುವಟಿಕೆಗಳಿಂದ ದೂರವಿದ್ದಾರೆ.

ಒಂದೇ ದಿನ ಹತ್ತು ಗ್ರಾಮಗಳಲ್ಲಿ ಚುನಾವಣಾ ಪ್ರಚಾರಕ್ಕೆ ಡಾ. ಸುಧಾಕರ್ ಸಜ್ಜು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದದ ಬಿಜೆಪಿ (ಎನ್​ಡಿಎ) ಅಭ್ಯರ್ಥಿ ಡಾ. ಕೆ ಸುಧಾಕರ್ (D. K Sudhakar) ಅವರು ಗುರವಾರ ಒಂದೇ ದಿನ 10 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಅವರು ಮುಂಬರುವ ಲೋಕಸಭಾ ಚುನಾವಣೆಗೆ (Lok Sabha Election) ಮಿಂಚಿನ ಪ್ರಚಾರ ಕೈಗೊಳ್ಳಲು ನಿರ್ಧರಿಸಿದ್ದಾರೆ. ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅವರು ಭರ್ಜರಿ ಪ್ರಚಾರ ಕಾರ್ಯ ಕೈಗೊಳ್ಳಲು ಮುಂದಾಗಿದ್ದಾರೆ.

ಬೆಳಗ್ಗೆ‌ 8:00 ಗಂಟೆಯಿಂದ ಆರಂಭಗೊಂಡ ಅವರ ಪ್ರಚಾರ ಕಾರ್ಯ ರಾತ್ರಿ 10 ಗಂಟೆಯ ತನಕ ಮುಂದುವರಿಯಲಿದೆ. ಹಳೇಹಳ್ಳಿ, ಶ್ಯಾಂಪುರ, ಗೌಡಗೆರೆ, ಪುರ, ಜರಬಂಡಹಳ್ಳಿ, ಮಿಣಕನಗುರ್ಕಿ, ಮಂಚೇನಹಳ್ಳಿ, ದೊಡ್ಡಪೈಲಗುರ್ಕಿ, ಮಂಡಿಕಲ್ ಮತ್ತು ಅಡ್ಡಗಲ್, ಕಮ್ಮಗುಟ್ಟಹಳ್ಳಿ, ಪರೇಸಂದ್ರ ಮತ್ತು ಅರೂರು ಗ್ರಾಮ ಪಂಚಾಯಿತಿಗಳಲ್ಲಿ ಸುಧಾಕರ್ ಅವರು ಪ್ರಚಾರ ಕಾರ್ಯ ನಡೆಸಲಿದ್ದಾರೆ.

Exit mobile version