shobha karandlaje critisizes congress guarantee Congress Guarantee:‌ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗೆ ಜಾರ್ಜ್‌ ಸೊರೊಸ್‌ ಹಣ ಕೊಡುತ್ತಾರೆಯೇ ಎಂದು ಪ್ರಶ್ನಿಸಿದ ಶೋಭಾ ಕರಂದ್ಲಾಜೆ - Vistara News

ಕರ್ನಾಟಕ

Congress Guarantee:‌ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗೆ ಜಾರ್ಜ್‌ ಸೊರೊಸ್‌ ಹಣ ಕೊಡುತ್ತಾರೆಯೇ ಎಂದು ಪ್ರಶ್ನಿಸಿದ ಶೋಭಾ ಕರಂದ್ಲಾಜೆ

ಕಾಂಗ್ರೆಸ್‌ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು (Congress Guarantee) ಕರ್ನಾಟಕದ ಬಜೆಟ್‌ನಲ್ಲಿ ಅನುಷ್ಠಾನ ಮಾಡಲು ಸಾಧ್ಯವೇ ಇಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದರು.

VISTARANEWS.COM


on

Shobha Karandlaje criticizes congress guarantee
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‍ನವರು ಜನರನ್ನು ಮರುಳು ಮಾಡಲು, ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ (Congress Guarantee) ಹಂಚುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಆರೋಪಿಸಿದರು.

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಶೋಭಾ ಕರಂದ್ಲಾಜೆ, ಕರ್ನಾಟಕದಲ್ಲಿ ನೀವು 2013ರಿಂದ 2018ರವರೆಗೆ ಅಧಿಕಾರ ನಡೆಸಿದ್ದೀರಿ. ಆಗ ನೀವು ಒಂದು ಸಮುದಾಯದ ಓಲೈಕೆಗಾಗಿ ಮಾತ್ರ ಯೋಜನೆ ಕೊಟ್ಟಿದ್ದೀರಲ್ಲವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್‌ನ ಸುಳ್ಳು ಭರವಸೆ ನಂಬಲು ಕರ್ನಾಟಕದ ಜನರು ಮೂರ್ಖರಲ್ಲ. ಕರ್ನಾಟಕದ ಜನರು ವಿದ್ಯಾವಂತರು, ಪ್ರಜ್ಞಾವಂತರು, ಬುದ್ಧಿವಂತರು. ಅವರೆಲ್ಲರೂ ಮಾಧ್ಯಮ ನೋಡುತ್ತಾರೆ; ಸೋಷಿಯಲ್ ಮೀಡಿಯಾ ಗಮನಿಸುತ್ತಾರೆ; ಯಾವ ರಾಜ್ಯದಲ್ಲಿ ನೀವು ಮೋಸ ಮಾಡಿದ್ದೀರೆಂಬ ಅರಿವು ಅವರಿಗೆ ಇದೆ. 2001ರ ಗ್ಯಾರಂಟಿ ಕಾರ್ಡ್, 2013ರ ಗ್ಯಾರಂಟಿ ಕಾರ್ಡ್ ಏನಾಗಿದೆ ಎಂದು ಕಾಂಗ್ರೆಸ್‍ನ್ನು ಜನತೆ ಪ್ರಶ್ನಿಸಬೇಕು ಎಂದು ಮನವಿ ಮಾಡಿದರು.

ಮಹಿಳೆಯರಿಗೆ 2 ಸಾವಿರ ರೂ., 200 ಯೂನಿಟ್ ಉಚಿತ ವಿದ್ಯುತ್, ಯುವಕರಿಗೆ 3000 -1500 ರೂ. ಯಾವ ಹಣದಿಂದ ಕೊಡುತ್ತೀರಿ? ಯಾರಾದರೂ ಜಾರ್ಜ್ ಸೊರೊಸ್ ಅಂಥವರು ನಿಮಗೆ ಹಣ ಕೊಡ್ತಾರಾ? ಎಂದು ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ಸಿಗರನ್ನು ಪ್ರಶ್ನಿಸಿದರು. ಕರ್ನಾಟಕದ ಬಜೆಟ್‍ನಲ್ಲಿ ಇದನ್ನು ಕೊಡಲು ಸಾಧ್ಯವೇ ಇಲ್ಲ. ಈ ವರ್ಷ ನಮ್ಮ ಸರಕಾರ 3 ಲಕ್ಷ ಕೋಟಿ ರೂಪಾಯಿಯ ಬಜೆಟ್ ಮಂಡಿಸಿದೆ. ಸುಮಾರು 2.5 ಲಕ್ಷ ಕೋಟಿ ರೂಪಾಯಿ ಸಂಗ್ರಹ ಆಗುವ ಮಾಹಿತಿ ಇದೆ. ಅಥವಾ 3 ಲಕ್ಷ ಕೋಟಿಯೇ ಸಂಗ್ರಹ ಆಗಲಿ; ಈಗ ಕಾಂಗ್ರೆಸ್‍ನವರು ಕೊಟ್ಟ ಭರವಸೆಗಳನ್ನು ಈಡೇರಿಸಲು 70-75 ಸಾವಿರ ಕೋಟಿ ಬೇಕು. ಸನ್ಮಾನ್ಯ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಘೋಷಣೆಯಂತೆ ಸಂಧ್ಯಾ ಸುರಕ್ಷಾ ಯೋಜನೆಯಡಿ ಅಜ್ಜ, ಅಜ್ಜಿಗೆ ತಲಾ 1200 ಸೇರಿ 2400 ರೂ. ನಾವು ಕೊಡುತ್ತಿದ್ದೇವೆ. ನಿಮ್ಮದು ಭರವಸೆ ಮಾತ್ರ. ನಾವು ನಿಜವಾಗಲೂ ಕೊಡುತ್ತಿದ್ದೇವೆ ಎಂದು ತಿಳಿಸಿದರು.

ಕಾಂಗ್ರೆಸ್ಸಿಗರು ಇದೇರೀತಿ ರಾಜಸ್ಥಾನದಲ್ಲೂ ಗ್ಯಾರಂಟಿ ಕಾರ್ಡ್ ಹಂಚಿದ್ದರು. 2018ರ ಚುನಾವಣೆಗೆ ಮೊದಲು ನಿರುದ್ಯೋಗಿ ಯುವಕರಿಗೆ 3,500 ರೂಪಾಯಿ ಭತ್ಯೆ ಕೊಡುವುದಾಗಿ ಗ್ಯಾರಂಟಿ ಕಾರ್ಡ್ ಕೊಟ್ಟು ತಿಳಿಸಿದ್ದಿರಿ. ಆದರೆ, ಇವತ್ತಿನ ತನಕ ಅದನ್ನು ಈಡೇರಿಸಿಲ್ಲ. ಛತ್ತೀಸ್‍ಗಡದಲ್ಲೂ ಗ್ಯಾರಂಟಿ ಕಾರ್ಡ್ ಕೊಟ್ಟಿದ್ದೀರಿ. ನಿಮ್ಮ ಅಧಿಕಾರ ಇದ್ದರೂ ಅದನ್ನು ಈಡೇರಿಸಿಲ್ಲ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಈ ಕುರಿತು ಉತ್ತರಿಸಲಿ ಎಂದು ಆಗ್ರಹಿಸಿದರು.

ಯಡಿಯೂರಪ್ಪನವರು 2008ರಲ್ಲಿ ಮುಖ್ಯಮಂತ್ರಿ ಆದಾಗ ಭರವಸೆ, ಗ್ಯಾರಂಟಿ ಕಾರ್ಡ್ ಕೊಡಲಿಲ್ಲ. ಬಿಜಾಪುರದಲ್ಲಿ ಅಜ್ಜಿ ಒಬ್ಬರು ಕಾಲಿಗೆ ಬಿದ್ದು, ‘ನನಗೆ ಗಂಡ ಇದ್ದಾರೆ, ಮಕ್ಕಳಿದ್ದಾರೆ, ಊಟ ಮಾಡಲು ಹಣ ಇಲ್ಲ’ ಎಂದಾಗ ‘ತಾಯಿ ನಿನಗೂ ಏನಾದ್ರೂ ಮಾಡುತ್ತೇನೆ’ ಎಂದು ತಿಳಿಸಿ ವಾಪಸ್ ಬಂದರು. ನಂತರದ ಕ್ಯಾಬಿನೆಟ್ ಸಭೆಯಲ್ಲಿ ಸಂಧ್ಯಾ ಸುರಕ್ಷಾ ಜಾರಿಗೊಳಿಸಿ ಅಜ್ಜ- ಅಜ್ಜಿಗೆ ಒಂದು ಮನೆಗೆ 2400 ರೂ. ಸಿಗುವಂತೆ ಮಾಡಿದವರು ಯಡಿಯೂರಪ್ಪನವರು ಎಂದು ವಿವರಿಸಿದರು.

ರಾಮಕೃಷ್ಣ ಹೆಗಡೆಯವರ ಕಾಲದಿಂದ ವಿಧವಾ ವೇತನ 75 ರೂಪಾಯಿಯಿಂದ ಆರಂಭವಾಗಿತ್ತು. ನೀವು ಹಲವು ವರ್ಷಗಳ ಆಡಳಿತ ನಡೆಸಿದ ಬಳಿಕ ಅದು 200 ರೂಪಾಯಿಗೆ ಬಂದು ನಿಂತಿತ್ತು. ವಿಧವಾ ವೇತನ ಹೆಚ್ಚಿಸಿ 1 ಸಾವಿರ ನೀಡುತ್ತಿರುವುದು ನಮ್ಮ ಸರಕಾರ ಎಂದ ಅವರು, ಕಾಂಗ್ರೆಸ್‍ನವರು ಯಾವ ಹೆಣ್ಮಕ್ಕಳಿಗೆ 2 ಸಾವಿರ ಕೊಡುತ್ತಾರೆ? ಬಿಪಿಎಲ್ ಕಾರ್ಡ್ ಇದ್ದವರಿಗೆ ಮಾತ್ರ ಕೊಡುತ್ತಾರಾ? ಎಲ್ಲರಿಗೂ ಕೊಡುತ್ತಾರಾ? ಅಥವಾ ವಿಧವೆಯರಿಗೆ ಮಾತ್ರ ಕೊಡಲಿದ್ದಾರಾ ಎಂದು ಪ್ರಶ್ನಿಸಿದರು.

2000- 2001ರಲ್ಲಿ ನಿರುದ್ಯೋಗಿ ಯುವಕರಿಗೆ 5 ಸಾವಿರ ಕೊಡುವುದಾಗಿ ಕಾಂಗ್ರೆಸ್ ಭರವಸೆ ಕೊಡಲಾಗಿತ್ತು. ಅದಕ್ಕಾಗಿ ನಾವು ಹೋರಾಟವನ್ನೂ ಮಾಡಿದ್ದೆವು. ಆದರೆ, ಅದು ಈಡೇರಲಿಲ್ಲ. ಸುಳ್ಳು ಹೇಳುವುದಕ್ಕೂ, ಮೋಸ ಮಾಡುವುದಕ್ಕೂ ಒಂದು ಮಿತಿ ಇರಲಿ ಎಂದರು.

ಇದನ್ನೂ ಓದಿ: Congress Guarantee: ಯುವಕರಿಗೆ ಕಾಂಗ್ರೆಸ್‌ನ 4 ನೇ ಗ್ಯಾರಂಟಿ: ಪದವೀಧರರಿಗೆ ʼಯುವ ನಿಧಿʼ; ಮಾಸಿಕ 3 ಸಾವಿರ ರೂ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ; ಫೋಟೋಗ್ರಾಫರ್‌ ಸ್ಥಳದಲ್ಲೇ ಸಾವು

Road Accident: ಮದುವೆ ಸಮಾರಂಭಕ್ಕೆ ಫೋಟೋಗ್ರಫಿ ಮಾಡಲು ತೆರಳಿದ್ದ ಫೋಟೋಗ್ರಾಫರ್‌ರೊಬ್ಬರು ಮರಳಿ ಬರುವಾಗ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕಮ್ಮನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 150 ಎ ರ ಬಳಿ ಜರುಗಿದೆ.

VISTARANEWS.COM


on

Car collided with electric pole The photographer died on the spot
Koo

ಚಿತ್ರದುರ್ಗ: ಮದುವೆ ಸಮಾರಂಭಕ್ಕೆ ಫೋಟೋಗ್ರಫಿ (Photography) ಮಾಡಲು ತೆರಳಿದ್ದ ಫೋಟೋಗ್ರಾಫರ್‌ರೊಬ್ಬರು ಮರಳಿ ಬರುವಾಗ ನಡೆದ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕಮ್ಮನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 150 ಎ ರ ಬಳಿ (Road Accident) ನಡೆದಿದೆ.

ಇದನ್ನೂ ಓದಿ: Board Exams: ಬೋರ್ಡ್‌ ಎಕ್ಸಾಂ ವ್ಯಾಲ್ಯುವೇಶನ್‌; 3 ದಿನದ ಗಡುವು ಆದೇಶ ವಾಪಸ್‌

ಚಳ್ಳಕೆರೆ ನಗರದ ಚಿತ್ರಯ್ಯನಹಟ್ಟಿಯ ಫೋಟೋಗ್ರಾಫರ್ ಅಭಿಷೇಕ್ (30) ಮೃತಪಟ್ಟ ಯುವಕ. ಈತ ಮೊಳಕಾಲ್ಮೂರು ತಾಲೂಕಿನ ರಾಯದುರ್ಗದಲ್ಲಿ ನಡೆದ ವಿವಾಹ ಕಾರ್ಯಕ್ರಮವೊಂದಕ್ಕೆ ಫೋಟೋ ತೆಗೆಯಲು ಹೋಗಿ ಮರಳಿ ನಗರಕ್ಕೆ ಕಾರಿನಲ್ಲಿ ವಾಪಸ್ ಬರುವಾಗ ಗುರುವಾರ ತಡರಾತ್ರಿ 12 ಗಂಟೆ ಸುಮಾರಿಗೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ ಎಂದು ತಿಳಿದುಬಂದಿದೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Continue Reading

ಕರ್ನಾಟಕ

Lok Sabha Election 2024: ಜೆಡಿಎಸ್ ಪಟ್ಟಿ ಬಿಡುಗಡೆ; ಮಂಡ್ಯದಿಂದ ಎಚ್‌ಡಿಕೆ, ಕೋಲಾರ, ಹಾಸನಕ್ಕೆ ಯಾರು?

Lok Sabha Election 2024: ರಾಜ್ಯ ಜೆಡಿಎಸ್‌ನಿಂದ ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ನಿರೀಕ್ಷೆಯಂತೆ ಹಾಸನದಿಂದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದು, ಹಾಸನದಲ್ಲಿ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣಗೆ ಟಿಕೆಟ್‌ ನೀಡಲಾಗಿದೆ. ಇನ್ನು ಕೋಲಾರದಲ್ಲಿ ಮಲ್ಲೇಶ್‌ ಬಾಬುಗೆ ಟಿಕೆಟ್‌ ನೀಡಿರುವುದು ಕಂಡುಬಂದಿದೆ.

VISTARANEWS.COM


on

Lok Sabha Election 2024
Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನಿಂದ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು (JDS candidates list) ಅಂತಿಮಗೊಂಡಿದ್ದು, ಅಭ್ಯರ್ಥಿಗಳ ಅಧಿಕೃತ ಪಟ್ಟಿ ಶುಕ್ರವಾರ ಬಿಡುಗಡೆಯಾಗಿದೆ. ಮಂಡ್ಯದಿಂದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಕೋಲಾರ ಕ್ಷೇತ್ರದಿಂದ ಮಲ್ಲೇಶ್ ಬಾಬು ಹಾಗೂ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ.

ರಾಜ್ಯ ಜೆಡಿಎಸ್‌ನಿಂದ ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ನಡೆದ ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮ ಮಾಡಲಾಗಿದೆ. ಆದರೆ, ಕಾರಣಾಂತರಗಳಿಂದ ಪಟ್ಟಿ ಘೋಷಣೆ ಮುಂದೂಡಿಕೆಯಾಗಿತ್ತು. ಇದೀಗ ಮಾಜಿ ಸಿಎಂ ಎಚ್‌ಡಿಕೆ ಅವರು, ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕರ್ತರ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ನಿರೀಕ್ಷೆಯಂತೆ ಹಾಸನದಿಂದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದು, ಹಾಸನದಲ್ಲಿ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣಗೆ ಟಿಕೆಟ್‌ ನೀಡಲಾಗಿದೆ. ಇನ್ನು ಕೋಲಾರದಲ್ಲಿ ಮಲ್ಲೇಶ್‌ ಬಾಬುಗೆ ಟಿಕೆಟ್‌ ನೀಡಿರುವುದು ಕಂಡುಬಂದಿದೆ.

ಕೋಲಾರ ಕ್ಷೇತ್ರದಲ್ಲಿ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ, ಬಂಗಾರಪೇಟೆ ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿ ಮಲ್ಲೇಶ್ ಬಾಬು, ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಪ್ರಬಲ ಆಕಾಂಕ್ಷಿಗಳಾಗಿದ್ದರು. ಈ ಪೈಕಿ ಸಮೃದ್ಧಿ ಮಂಜುನಾಥ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ ಮಲ್ಲೇಶ್ ಬಾಬು ಅವರಿಗೆ ಪಕ್ಷ ಮಣೆ ಹಾಕಿದೆ.

ಇದನ್ನೂ ಓದಿ | Lok Sabha Election 2024: ಅನುಮಾನ ಬೇಡ, ಮೋದಿ ಮತ್ತೊಮ್ಮೆ ಪ್ರಧಾನಿಯಾಗ್ತಾರೆ: ಸಾಹಿತಿ ಎಸ್.ಎಲ್. ಭೈರಪ್ಪ

ಪಕ್ಷದ ಉಳಿವಿಗಾಗಿ ನನ್ನ ತೀರ್ಮಾನ: ಎಚ್‌.ಡಿ. ಕುಮಾರಸ್ವಾಮಿ

ಇತ್ತೀಚೆಗೆ ಜೆಡಿಎಸ್‌ ಕೋರ್‌ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಎಚ್.ಡಿ. ಕುಮಾರಸ್ವಾಮಿ, ನಾನು ಮಂಡ್ಯದಿಂದ ಅನಿವಾರ್ಯವಾಗಿ ಕಣಕ್ಕಿಳಿಯುವ ಬಗ್ಗೆ ಚನ್ನಪಟ್ಟಣ ಜನತೆಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಇದಕ್ಕೆ ಚನ್ನಪಟ್ಟಣ ಮುಖಂಡರು ಸಹಮತವನ್ನು ವ್ಯಕ್ತಪಡಿಸಿದ್ದಾರೆ. ನಾವು ಇವತ್ತು ನೆಲ‌ಕಚ್ಚಿದ್ದೇವೆ, ಮತ್ತೆ ಪುಟಿದೇಳಬೇಕು. ನಮ್ಮಲ್ಲಿ ಲೋಪದೋಷಗಳಿದ್ದು, ಅದನ್ನು ಸರಿಪಡಿಸಿಕೊಳ್ಳುತ್ತೇವೆ. ನನ್ನ ಪಕ್ಷದ ಭವಿಷ್ಯ, ಪಕ್ಷದ ಹೃದಯ ಭಾಗ ಮಂಡ್ಯದ ಜನರ ಅಪೇಕ್ಷೆಯಂತೆ ಪಕ್ಷವನ್ನು ಗಟ್ಟಿಗೊಳಿಸಲು ಮಂಡ್ಯದಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದೇನೆ ಎಂದು ಹೇಳಿದ್ದರು.

ಕರ್ನಾಟಕ ಲೋಕಸಭಾ ಕ್ಷೇತ್ರಗಳಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರಬೇಕು ಎಂಬ ಗುರಿಯನ್ನು ಹಾಕಿಕೊಂಡಿದ್ದೇವೆ. ಮಂಡ್ಯ ಜಿಲ್ಲೆಯ ಕಾರ್ಯಕರ್ತರ ತೀರ್ಮಾನಕ್ಕೆ ಗೌರವ ಕೊಡುವುದು ನಮ್ಮ ಕರ್ತವ್ಯವಾಗಿದೆ. ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಾಯ ಮಾಡಲಾಗಿತ್ತು. ಆದರೆ, ಅವರು ಸ್ಪರ್ಧೆಗೆ ನಿರಾಕರಿಸಿದ್ದಾರೆ. ನಾನು ಈಗಾಗಲೇ ನೋವು ತಿಂದಿದ್ದೇನೆ. ಹೀಗಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ನನಗೆ ಸಿ.ಎಸ್. ಪುಟ್ಟರಾಜು ಅಥವಾ ನಿಖಿಲ್‌ರನ್ನು ಕಣಕ್ಕಿಳಿಸಬೇಕು ಎಂಬ ಆಸೆ ಇತ್ತು. ಆದರೆ, ಅವರು ಅವರು ಸ್ಪರ್ಧೆ ಸಾಧ್ಯವಿಲ್ಲ ಎಂದು ಕಠಿಣ ನಿರ್ಣಯ ಮಾಡಿಕೊಂಡಿದ್ದಾರೆ. ಆ ಜಿಲ್ಲೆಯ ಜನರ ಋಣವನ್ನು ತೀರಿಸಬೇಕು. ಇಡೀ ನಾಡೇ ನನ್ನ ಕರ್ಮ ಭೂಮಿಯಾಗಿದೆ. ಹಾಗಂತ ರಾಮನಗರ ಬಿಟ್ಟು ನಾನು ಹೋಗುವುದಿಲ್ಲ. ಈ ಪಕ್ಷದ ಉಳಿವಿಗಾಗಿ ಒಂದು ತೀರ್ಮಾನವನ್ನು ಕೈಗೊಳ್ಳಬೇಕಾಗಿತ್ತು ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದರು.

Continue Reading

Lok Sabha Election 2024

Lok Sabha Election 2024: ಮಹಿಳೆಯರು ಅಡುಗೆ ಮಾಡಲು ಲಾಯಕ್ಕು ಎಂದ ಶಾಮನೂರು; ಆಕಾಶದಲ್ಲಿ ಹಾರಾಡೋಕೂ ಗೊತ್ತೆಂದ ಗಾಯತ್ರಿ

Lok Sabha Election 2024: ಲೋಕಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ನಾಯಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆ ಕೋಲಾಹಲವನ್ನೇ ಸೃಷ್ಟಿಸಿದೆ. ಮಹಿಳೆಯರ ವಿರುದ್ಧ ಅವರು ಲಘುವಾಗಿ ಮಾತನಾಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಗಾಯತ್ರಿ ಸಿದ್ದೇಶ್ವರ್‌ ಬಗ್ಗೆ ಮಾತನಾಡುವಾಗ, ಅವರು ಅಡುಗೆ ಮಾಡಲು ಲಾಯಕ್ಕು ಎಂದು ಹೇಳಿದ್ದರು. ಇದಕ್ಕೆ ಈಗ ಗಾಯತ್ರಿ ಸಹಿತ ಬಿಜೆಪಿ ನಾಯಕರು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಗಾಯತ್ರಿ ಸಿದ್ದೇಶ್ವರ್‌ ಸಹ ಶಾಮನೂರಿಗೆ ತಿರುಗೇಟು ನೀಡಿದ್ದು, ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲಿಯೂ ಇದ್ದಾರೆ. ನಮಗೆ ಅಡುಗೆ ಮಾಡುವುದೂ ಗೊತ್ತಿದೆ. ಆಕಾಶದಲ್ಲಿ ಹಾರಾಟ ನಡೆಸಲೂ ಗೊತ್ತಿದೆ ಎಂದು ಹೇಳಿದ್ದಾರೆ.

VISTARANEWS.COM


on

Lok Sabha Election 2024 Women are only for cook says Shamanur Shivashankarappa and Gayatri says women knows how to fly in the sky
Koo

ದಾವಣಗೆರೆ: ಲೋಕಸಭಾ ಚುನಾವಣೆ (Lok Sabha Election 2024) ಹೊಸ್ತಿಲಲ್ಲಿ ರಾಜಕೀಯ ಪಕ್ಷಗಳ ನಾಯಕರ ಮಾತುಗಳು ಎಲ್ಲೆ ಮೀರುತ್ತಿವೆ. ಮಾತನಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಲು ಶುರು ಮಾಡಿದ್ದಾರೆ. ಈಗ ಈ ಸಾಲಿಗೆ ಮಾಜಿ ಸಚಿವ, ಹಿರಿಯ ರಾಜಕಾರಣಿ, ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರೂ ಸೇರಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದ (Davangere Lok Sabha constituency) ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ (Gayatri Siddeshwar) ವಿರುದ್ಧ ಮಾತನಾಡುವಾಗ, “ಮಹಿಳೆಯರು ಅಡುಗೆ ಮಾಡಲು ಲಾಯಕ್ಕು” ಎಂಬಂತೆ ಹೇಳಿದ್ದಾರೆ. ಇದೀಗ ವ್ಯಾಪಕ ಆಕ್ರೋಶ ಹಾಗೂ ಟೀಕೆಗೆ ಗುರಿಯಾಗಿದೆ. ಇದಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್‌ (Malavika Avinash) ಸಹ ಕಿಡಿಕಾರಿದ್ದು, ನಿಮ್ಮ ಮನೆಯ ಸೊಸೆಯನ್ನೂ ಕಣಕ್ಕಿಳಿಸಿದ್ದನ್ನು ಮರೆತಿದ್ದೀರಾ? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸ್ವತಃ ಗಾಯತ್ರಿ ಸಿದ್ದೇಶ್ವರ್‌ ಮಾತನಾಡಿ, ಮಹಿಳೆಯರಿಗೆ ಅಡುಗೆ ಮಾಡೋಕೂ ಗೊತ್ತು, ಆಕಾಶದಲ್ಲಿ ಹಾರಾಡೋಕೂ ಗೊತ್ತು ಎಂದು ತಿರುಗೇಟು ನೀಡಿದ್ದಾರೆ.

ದಾವಣಗೆರೆ ಬಂಟರ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಕಾಂಗ್ರೆಸ್‌ ಜನಪ್ರತಿನಿಧಿಗಳು, ಮುಖಂಡರ ಸಭೆಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಗಾಯತ್ರಿ ಸಿದ್ದೇಶ್ವರ್‌ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾತನಾಡಲು ಬಾರದ ಗಾಯತ್ರಿ ಸಿದ್ದೇಶ್ವರ್‌ ಅವರು ಅಡುಗೆ ಮಾಡುವುದಕ್ಕೆ ಲಾಯಕ್ಕು. ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಶಕ್ತಿ ಅವರಿಗಿಲ್ಲ. ಹೀಗಾಗಿ ನಮ್ಮ ಕಾಂಗ್ರೆಸ್ಸಿಗರ ‘ಕೈ’ ಮೇಲಿದೆ ಎಂಬುದನ್ನು ನಾವು ತೋರಿಸಬೇಕು ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

ಈ ಹಿಂದೆ ಗೆದ್ದಾಗ ಮೋದಿಗೆ ಹೂ ಕೊಟ್ಟಿದ್ರಾ?

ಗಾಯತ್ರಿ ಸಿದ್ದೇಶ್ವರ್‌ ಅವರು ತಾವು ದಾವಣಗೆರೆಯಿಂದ ಗೆದ್ದು ನರೇಂದ್ರ ಮೋದಿ ಅವರಿಗೆ ಕಮಲದ ಹೂವನ್ನು ಅರ್ಪಿಸುತ್ತೇನೆ ಎಂದು ಹೇಳುತ್ತಾರೆ. ಹಾಗಾದರೆ, ಈ ಹಿಂದೆ ಗೆದ್ದಿದ್ದು ನೀವೇ (ಬಿಜೆಪಿಯವರೇ) ಅಲ್ಲವೇ? ಆಗ ಏನು ನೀವು ಕಮಲದ ಹೂವನು ಕೊಟ್ಟಿದ್ದಿರಾ? ಎಂದು ಶಾಮನೂರು ಶಿವಶಂಕರಪ್ಪ ಪ್ರಶ್ನೆ ಮಾಡಿದ್ದಾರೆ.

ವಿರೋಧ ಪಕ್ಷದವರು ಮೋದಿ.. ಮೋದಿ ಅಂತಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಏನು ಕೊಡುಗೆಯನ್ನು ಕೊಟ್ಟಿದ್ದಾರೆ? ನಮ್ಮ ರಾಜ್ಯಕ್ಕೆ ಬರಬೇಕಾದ ಹಣವನ್ನು ನೀಡದೆ ಅನ್ಯಾಯ ಮಾಡಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ಕಿಡಿಕಾರಿದ್ದಾರೆ.

ಗಾಯತ್ರಿ ಸಿದ್ದೇಶ್ವರ್‌ ಕೆಂಡಾಮಂಡಲ

ಶಾಮನೂರು ಶಿವಶಂಕರಪ್ಪ ಅವರ ಈ ಹೇಳಿಕೆಗೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇಂದು ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಮುನ್ನುಗ್ಗುತ್ತಿದ್ದಾರೆ. ಆಗಸದಲ್ಲಿ ಹಾರುವ ಹಂತವನ್ನು ತಲುಪಿದ್ದಾರೆ. ಎಲ್ಲ ಕ್ಷೇತ್ರದಲ್ಲಿ ಅವರ ಕೊಡುಗೆ ಇದೆ. ಈ ವಿಚಾರ ಅಜ್ಜನಿಗೆ ಗೊತ್ತಿಲ್ಲವೆಂದು ಅನ್ನಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ತಾಯಿಯಾದವಳು ಅಡುಗೆ ಮಾಡಿ, ಕೈ ತುತ್ತು ಕೊಡುವ ಪ್ರೀತಿ ಅವರಿಗೆ ಗೊತ್ತಿಲ್ಲ. ಹಾಗಾದರೆ ಮಹಿಳೆಯರು ಅಡುಗೆ ಮಾಡೋಕೆ ಮಾತ್ರ ಸೀಮಿತವೇ? ಮಹಿಳೆ ಅಡುಗೆಯನ್ನೂ ಮಾಡುತ್ತಾಳೆ, ಆಕಾಶದಲ್ಲೂ ಹಾರಾಡುತ್ತಾಳೆ. ಇಂಥ ಹೇಳಿಕೆ ನೀಡುವ ಮೂಲಕ ಶಾಮನೂರು ಶಿವಶಂಕರಪ್ಪ ಅವರು ಮಹಿಳೆಯರಿಗೆ ಅಗೌರವ ತೋರಿದ್ದಾರೆ ಎಂದು ಗಾಯತ್ರಿ ಸಿದ್ದೇಶ್ವರ್‌ ಆಕ್ರೋಶವನ್ನು ಹೊರಹಾಕಿದರು.

ನಿಮ್ಮ ಸೊಸೆಯನ್ನೂ ಕಣಕ್ಕಿಳಿಸಿಲ್ಲವೇ? ಶಾಮನೂರುಗೆ ಮಾಳವಿಕಾ ಪ್ರಶ್ನೆ

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಇದೊಂದು ಕೆಟ್ಟ ಹೇಳಿಕೆ ಎಂದಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಹಿರಿಯ ರಾಜಕಾರಣಿಯಾಗಿದ್ದಾರೆ. ಅವರಿಗೆ ಬುದ್ಧಿ ಹೇಳುವ ವಯಸ್ಸು ನನ್ನದಲ್ಲ. ಆದರೆ, ಅವರ ಮಾತಿಗೆ ವಿರೋಧ ವ್ಯಕ್ತಪಡಿಸುತ್ತೇನೆ. ನಮ್ಮ‌ ಪಕ್ಷದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರ ಬಗ್ಗೆ ಕೆಟ್ಟ ಹೇಳಿಕೆ ನೀಡಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ತಮ್ಮ ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಕಣಕ್ಕಿಳಿಸಿದ್ದಾರೆ. ಅಂಥದರಲ್ಲಿ ಈ ರೀತಿ ಹೇಳಿಕೆ ಸರಿಯಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Lok Sabha Election 2024: ಅಮಿತ್‌ ಶಾ ರೌಡಿ ಎಂದಿದ್ದ ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನಮ್ಮ ದೇಶದಲ್ಲಿ ಎಲ್ಲ ಕೆಲಸ ಮಾಡುವ ಮಹಿಳೆಯರಿದ್ದಾರೆ. ಅವರು ಮನೆಯಲ್ಲಿರಲು ಲಾಯಕ್ಕು ಅಂತ ಹೇಳಿರುವುದು ಸರಿಯಲ್ಲ. ಅವರ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಆಗಿದ್ದರು. ಅವರ ಪಕ್ಷದಿಂದ ಮಹಿಳೆಯೊಬ್ಬರು ಪ್ರಧಾನಿ ಕೂಡ ಆಗಿದ್ದರು. ಅಂಥದ್ದರಲ್ಲಿ ಈ ರೀತಿ ಹೇಳಿಕೆ ಸರಿಯಲ್ಲ. ಗಾಯತ್ರಿ ಸಿದ್ದೇಶ್ವರ್ ಅವರು ಹೇಳಿದ ಒಂದು ಮಾತನ್ನು ಇಲ್ಲಿ ಉಲ್ಲೇಖಿಸುತ್ತೇನೆ. ಇಲ್ಲಿಯವರೆಗೂ ಮನೆ ಜವಾಬ್ದಾರಿ ನೋಡಿಕೊಳ್ಳುತ್ತಿದೆ. ಇನ್ನು ಮುಂದೆ ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾಋೆ. ಕ್ಷೇತ್ರದ ಜನತೆ ಅವರನ್ನು ಗೆಲ್ಲಿಸಿ ಕಳಿಸುವ ನಿರ್ಧಾರ ಮಾಡಿದ್ದಾರೆ ಎಂದು ಮಾಳವಿಕಾ ಅವಿನಾಶ್‌ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ‌ ಅವರು ಮಹಿಳಾ ಪರ ಅನೇಕ ಕೆಲಸಗಳನ್ನು ಮಾಡಿದ್ದಾರೆ. ಯೋಜನೆಗಳನ್ನು ತಂದಿದ್ದಾರೆ. ಮಹಿಳೆಯರಿಗಾಗಿ ನಾರಿ ಶಕ್ತಿ ವಂದನ್ ಕಾರ್ಯಕ್ರಮವನ್ನು ಯೋಜಿಸಿದ್ದಾರೆ. ರಾಜಕೀಯ ಮೀಸಲಾತಿಯನ್ನು ಕೂಡ ತಂದಿದ್ದಾರೆ. ಮಹಿಳೆಯರ ಬಗ್ಗೆ ಮಾತನಾಡುವ ಕೆಟ್ಟ ಚಾಳಿ ಕಾಂಗ್ರೆಸ್‌ಗಿದೆ. ಸೋಲುವ ಹತಾಶೆಯಿಂದ ಈ ರೀತಿ ಹೇಳಿಕೆ ನೀಡಿದ್ದಾರೆ. ಕೂಡಲೇ ಶಾಮನೂರು ಶಿವಶಂಕರಪ್ಪ ಅವರು ಕ್ಷಮಾಪಣೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

Continue Reading

ಕರ್ನಾಟಕ

Lok Sabha Election 2024: ಅನುಮಾನ ಬೇಡ, ಮೋದಿ ಮತ್ತೊಮ್ಮೆ ಪ್ರಧಾನಿಯಾಗ್ತಾರೆ: ಸಾಹಿತಿ ಎಸ್.ಎಲ್. ಭೈರಪ್ಪ

Lok Sabha Election 2024: ಲೋಕಸಭಾ ಚುನಾವಣೆ ಹಿನ್ನೆಲೆ ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಎಸ್.ಎಲ್. ಭೈರಪ್ಪ ಅವರು, ಗುಜರಾತಿನವರು ಚುರುಕಾಗಿ, ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ. ಮೋದಿ ಅವರು ಕೂಡ ವ್ಯಾಪಾರಿಯಾಗಿ ಪ್ರಾಮಾಣಿಕರಾಗಿದ್ದಾರೆ. ಅವರು ಕೇವಲ ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ವ್ಯಾಪಾರ ಮಾಡುತ್ತಾರೆ. ಹೀಗಾಗಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗುತ್ತಾರೆ ನೋಡಿ. ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Lok Sabha Election 2024
Koo

ಮೈಸೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನಲೆಯಲ್ಲಿ ವಿವಿಧ ಧರ್ಮಗುರುಗಳು, ಹಿರಿಯ ಸಾಹಿತಿಗಳು, ಬುದ್ಧಿ ಜೀವಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಳ್ಳುತ್ತಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರು, ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ (SL Bhyrappa) ನಿವಾಸಕ್ಕೆ ಶುಕ್ರವಾರ ನೀಡಿ ಮಾತುಕತೆ ನಡೆಸಿದರು. ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ನಿವಾಸದಲ್ಲಿ ಭೈರಪ್ಪನವರಿಗೆ ಹಾರ ಹಾಕಿ, ಶಾಲು ಹೊದಿಸಿ ಯದುವೀರ್ ಸನ್ಮಾನಿಸಿದರು. ಅವರಿಗೆ ಸ್ಥಳೀಯ ಶಾಸಕ ಶ್ರೀವತ್ಸ ಸೇರಿದಂತೆ ಹಲವು ಬಿಜೆಪಿ ಮುಖಂಡರು ಸಾಥ್ ನೀಡಿದರು.

ಈ ವೇಳೆ ಸಾಹಿತಿ ಎಸ್.ಎಲ್. ಭೈರಪ್ಪ ಮಾತನಾಡಿ, ಮತ್ತೊಮ್ಮೆ ಮೋದಿಯೇ ಪ್ರಧಾನಿ ಆಗುತ್ತಾರೆ‌. ಇದರಲ್ಲಿ ಅನುಮಾನವೇ ಬೇಡ. ದೇಶದಲ್ಲಿ ಉತ್ತಮ ವಾತಾವರಣ ಇದೆ. ಕರ್ನಾಟಕದಲ್ಲಿ ಸ್ವಲ್ಪ ವೋಟು ಒಡೆದು ಹೋಗುತ್ತೆ. ಆದರೆ ಬಿಜೆಪಿ ಏನು ತೀರಾ ಸೋತು ಹೋಗಲ್ಲ. ಅರ್ಧಕ್ಕಿಂತ ಜಾಸ್ತಿ ಸೀಟು ಗೆಲ್ಲುತ್ತೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎಫೆಕ್ಟಿವ್ ಆಗಿ ಇರಲಿಲ್ಲ. ಅಧಿಕಾರವನ್ನು ಕಂಟ್ರೋಲ್ ಮಾಡಲು ಆಗಿರಲಿಲ್ಲ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಟ್ರಾಂಗ್ ಇದೆ. ಆದರೆ ಅವರು ಹೋಗುತ್ತಿರುವ ದಾರಿ ಸರಿಯಿಲ್ಲ. ಗ್ಯಾರಂಟಿ ಕೊಟ್ಟು ಜನಪ್ರಿಯ ಆಗಿರಬಹುದು. ಆದರೆ ಇವರ ಬಳಿ ಹಣ ಇಲ್ಲ. ಈಗಾಗಿ ಕೇಂದ್ರದ ವಿರುದ್ಧ ಬೈಯ್ಯುತ್ತಾರೆ ಎಂದು ಹೇಳಿದರು.

ರಾಜ್ಯದವರ ಭಾಷೆ ಅನ್ ಡಿಗ್ನಿಫೈಡ್ ಲಾಂಗ್ವೇಜ್. ಕಾಂಗ್ರೆಸ್‌ನವರಿಗೆ ಗೌರವ ಕೊಟ್ಟು ಮಾತನಾಡುವ ಕಲ್ಚರ್ ಇಲ್ಲ. ಆದರೆ ಬಿಜೆಪಿ ಅವರಿಗೆ ಅದು ಇದೆ. ಅಕಸ್ಮಾತ್ ಬಿಜೆಪಿಯವರು ಒರಟಾಗಿ ಮಾತನಾಡುತ್ತಿದ್ದಾರೆ ಎಂದರೆ ಅವರು ಕಾಂಗ್ರೆಸ್‌ನ ಫಾಲೋ ಮಾಡುತ್ತಿದ್ದಾರೆ ಎಂದರ್ಥ. ಅವರು ಏನೇ ಮಾತನಾಡಿದರೂ ನಾವು ನಮ್ಮ ಘನತೆ ಕಡಿಮೆ ಮಾಡಿಕೊಳ್ಳಬಾರದು ಎಂದು ತಿಳಿಸಿದರು.

ಇದನ್ನೂ ಓದಿ | Parliament Flashback: ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಗೆದ್ದು, ಬಿಜೆಪಿಯಿಂದ ಸ್ಪರ್ಧಿಸಿದಾಗ ಸೋತು ಹೋಗಿದ್ದ ಒಡೆಯರ್‌!

ನಮ್ಮ ಪ್ರತಾಪ್ ಸಿಂಹ ಡೈನಾಮಿಕ್ ಮ್ಯಾನ್

ನಮ್ಮ ಪ್ರತಾಪ್ ಸಿಂಹ ಡೈನಾಮಿಕ್ ಮ್ಯಾನ್. ಅವರು ತುಂಬಾ ಕೆಲಸ ಮಾಡಿದ್ದಾರೆ. ಕೊಡಗಿನಲ್ಲಿ ಟಿಪ್ಪು ಜಯಂತಿಗೆ ಬ್ರೇಕ್ ಹಾಕಿದ್ದಾರೆ. ಅವರಲ್ಲಿ ಫೈಟಿಂಗ್ ಸ್ಪಿರಿಟ್ ಇದೆ. ಇವತ್ತೂ ಕೂಡ ಫೈಟಿಂಗ್ ಸ್ಪಿರಿಟ್‌ನಲ್ಲಿ ಇದ್ದಾರೆ. ಟಿಕೆಟ್ ಮಿಸ್ ಆದ್ರೆ ಏನಾಗುತ್ತೆ. ಸಂಸದನಾದರೆ ಅಲ್ಲೇ ಕೇಂದ್ರೀಕೃತವಾಗಿರುತ್ತಾರೆ. ಅದನ್ನು ಬಿಟ್ಟು ಮಾಡಲು ಬಹಳ ಕೆಲಸ ಇದೆ. ಅದೇ ಸ್ಫೂರ್ತಿಯಲ್ಲಿ ಪ್ರತಾಪ್ ಸಿಂಹ ಇದ್ದಾರೆ. ಯದುವೀರ್‌ಗೆ ಟಿಕೆಟ್ ಕೊಟ್ಟಿರೋದಕ್ಕೆ ಒಂದಕ್ಕೊಂದು ವಿರೋಧ ಇಲ್ಲ.
ಯದುವೀರ್‌ಗೆ ಟಿಕೆಟ್ ಕೊಟ್ಟಿದ್ದು ಒಳ್ಳೆಯದೇ ಆಯ್ತು. ಯದುವೀರ್ ಹಿನ್ನೆಲೆ ನೋಡಿದಾಗ, ಇವರಿಗೆ ಸ್ಥಾನಮಾನ ಕೊಟ್ಟರೆ ಉತ್ತಮವಾಗಿ ನಿಭಾಯಿಸುತ್ತಾರೆ ಎನಿಸುತ್ತದೆ ಎಂದು ಎಸ್‌ಎಲ್.ಭೈರಪ್ಪ ಹೇಳಿದರು.

ಲೆಫ್ಟಿಸ್ಟ್‌ ಸಾಹಿತಿಗಳದ್ದು ಡಬಲ್ ಗೇಮ್‌

ಎಡಪಂಥೀಯ ಸಾಹಿತಿಗಳಲ್ಲಿ ಡಬಲ್ ಗೇಮ್ ತುಂಬಾ ಇರುತ್ತದೆ ಎಂದ ಅವರು, ಬಂಗಾಳ ಮಾಜಿ ಮುಖ್ಯಮಂತ್ರಿ ಜ್ಯೋತಿ ಬಸುರನ್ನು ಉದಾಹರಣೆ ಕೊಟ್ಟು, ಅವರ ಮಕ್ಕಳು ಕ್ಯಾಪಿಟಲಿಸ್ಟ್ ಆಗಿ ಏನಾದರೂ ಮಾಡಬಹುದು. ಇವರು ಮಾತ್ರ ಎಡಪಂಥೀಯ ಧೋರಣೆ ಹೊಂದಿದ್ದರು. ಬಂಗಾಳದಲ್ಲಿ ಇರುವಷ್ಟು ಬಡತನ ದೇಶದಲ್ಲಿ ಎಲ್ಲೂ ಇಲ್ಲ. ಲೆಫ್ಟಿಸಂ ಅನ್ನೋದು ಬರಿ ಮೋಸ ಮಾಡೋದೆ ಕೆಲಸ. ನನ್ನನ್ನ ಇವರೆಲ್ಲ ಕ್ಯಾಪಿಟಲಿಸ್ಟ್ ಅಂತಾರೆ. ಅದಿಲ್ಲದಿದ್ದರೆ ದೇಶ ಬೆಳವಣಿಗೆ ಆಗೋದೇ ಇಲ್ಲ. ಲೆಫ್ಟಿಸ್ಟ್‌ಗಳೆಲ್ಲ ಅಪ್ರಾಮಾಣಿಕರು ಎಂದು ಹರಿಹಾಯ್ದರು.

ಗುಜರಾತಿನವರು ಆ್ಯಕ್ಟೀವ್ ಹಾಗೂ ಹಾನೆಸ್ಟ್ ಆಗಿ ಕೆಲಸ ಮಾಡುತ್ತಾರೆ. ನಮ್ಮಲ್ಲಿ ಅಂಗಡಿ ವ್ಯಾಪಾರಿಗಳು ಅಂದ್ರೆ ಪೂರ್ಣ ಪ್ರಾಮಾಣಿಕರು ಅಂತ ಹೇಳೊಕೆ ಆಗಲ್ಲ. ಆದರೆ ಗುಜರಾತ್‌ನಲ್ಲಿ 6 ವರ್ಷದ ಮಗು ಕೈಯಲ್ಲಿ ಹಣ ಕೊಟ್ಟು ಕಳುಹಿಸಿದರೂ ವ್ಯಾಪಾರಸ್ಥರು ಪ್ರಾಮಾಣಿಕವಾಗಿ ಚಿಲ್ಲರೆ ಕೊಟ್ಟು ಕಳುಹಿಸುತ್ತಾರೆ. ಗುಜರಾತಿಗಳು ಸುಳ್ಳು ಹೇಳೊಕೆ ಹೋಗೋದಿಲ್ಲ. ಅದಿಲ್ಲ ಅಂದ್ರೆ ಯಾವ ದೇಶ ಉದ್ಧಾರ ಆಗೋಕೆ ಸಾಧ್ಯ ಹೇಳಿ. ಮೋದಿ ಅವರಿಗೂ ಅದೇ ಇದೆ.
ಅವರು ವ್ಯಾಪಾರಿಯಾಗಿ ಪ್ರಾಮಾಣಿಕರಾಗಿದ್ದಾರೆ. ವ್ಯಾಪಾರ ಕೇವಲ ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಮಾಡುತ್ತಾರೆ. ಅವರು ವ್ಯಾಪಾರ ಬಿಟ್ಟು ಬರುವಾಗ, ಅಲ್ಲಿದ್ದ ಬಡ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತಮ್ಮ ಬಳಿ ಇದ್ದ 23 ಲಕ್ಷ ಕೊಟ್ಟು ಬಂದರು.
ಅದೊಂದು ಮಾದರಿ ಆಯ್ತು. ಕೇಂದ್ರ ಸರ್ಕಾರದಲ್ಲಿ ಅದನ್ನ ಅಳವಡಿಸಿಕೊಂಡರು. ಇದನ್ನೆಲ್ಲ ಕ್ಯಾಪ್ಟಲಿಸ್ಟ್ ಅನ್ನೋಕಾಗುತ್ತಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ | Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

ಕಾರು ವ್ಯಾಪಾರದಿಂದ ಹಣ ಬಂತು ಅಂದುಕೊಳ್ಳುವುದು ಆರ್ಥಿಕತೆ ಅಲ್ಲ. ಅದರಿಂದ ಎಷ್ಟು ಕುಟುಂಬಕ್ಕೆ ನೆರವಾಯಿತು ಎನ್ನುವುದು ನಿಜವಾದ ಆರ್ಥಿಕತೆ. ಮತ್ತೊಮ್ಮೆ ಮೋದಿ ಪ್ರಧಾನಿ ಆಗುತ್ತಾರೆ ನೋಡಿ. ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಪುನರುಚ್ಚರಿಸಿದರು.

Continue Reading
Advertisement
Car collided with electric pole The photographer died on the spot
ಕ್ರೈಂ1 min ago

Road Accident: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ; ಫೋಟೋಗ್ರಾಫರ್‌ ಸ್ಥಳದಲ್ಲೇ ಸಾವು

Ash Gourd Juice Benefits
ಆರೋಗ್ಯ2 mins ago

Ash Gourd Juice Benefits: ಬೂದುಕುಂಬಳಕಾಯಿ ಜ್ಯೂಸ್‌ ಕುಡಿಯುವುದರಿಂದ ಆಗುವ 10 ಪ್ರಯೋಜನಗಳಿವು

Lok Sabha Election 2024
ಕರ್ನಾಟಕ3 mins ago

Lok Sabha Election 2024: ಜೆಡಿಎಸ್ ಪಟ್ಟಿ ಬಿಡುಗಡೆ; ಮಂಡ್ಯದಿಂದ ಎಚ್‌ಡಿಕೆ, ಕೋಲಾರ, ಹಾಸನಕ್ಕೆ ಯಾರು?

Lok Sabha Election 2024 Women are only for cook says Shamanur Shivashankarappa and Gayatri says women knows how to fly in the sky
Lok Sabha Election 20244 mins ago

Lok Sabha Election 2024: ಮಹಿಳೆಯರು ಅಡುಗೆ ಮಾಡಲು ಲಾಯಕ್ಕು ಎಂದ ಶಾಮನೂರು; ಆಕಾಶದಲ್ಲಿ ಹಾರಾಡೋಕೂ ಗೊತ್ತೆಂದ ಗಾಯತ್ರಿ

Juce Jacking
ಪ್ರಮುಖ ಸುದ್ದಿ18 mins ago

Juice Jacking: ಸಾರ್ವಜನಿಕ ಸ್ಥಳಗಳ ಮೊಬೈಲ್​ ಚಾರ್ಜರ್​ ಬಳಸುವಾಗ ಎಚ್ಚರಿಕೆ; ಸೈಬರ್ ಕಳ್ಳರಿದ್ದಾರೆ!

Lok Sabha Election 2024
ಕರ್ನಾಟಕ41 mins ago

Lok Sabha Election 2024: ಅನುಮಾನ ಬೇಡ, ಮೋದಿ ಮತ್ತೊಮ್ಮೆ ಪ್ರಧಾನಿಯಾಗ್ತಾರೆ: ಸಾಹಿತಿ ಎಸ್.ಎಲ್. ಭೈರಪ್ಪ

Summer Nail Colours Trend
ಫ್ಯಾಷನ್1 hour ago

Summer Nail Colours Trend: ಸಮ್ಮರ್‌ ಸೀಸನ್‌ನಲ್ಲಿ ಬದಲಾಯ್ತು ನೇಲ್‌ ಕಲರ್ಸ್‌ ಟ್ರೆಂಡ್‌

Lok Sabha Election 2024 and BJP files complaint with Election Commission against Yathindra for calling Amit Shah a rowdy and also CM Siddaramaiah in this Photo
Lok Sabha Election 20241 hour ago

Lok Sabha Election 2024: ಅಮಿತ್‌ ಶಾ ರೌಡಿ ಎಂದಿದ್ದ ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Board Exam
ಬೆಂಗಳೂರು1 hour ago

Board Exams: ಬೋರ್ಡ್‌ ಎಕ್ಸಾಂ ವ್ಯಾಲ್ಯುವೇಶನ್‌; 3 ದಿನದ ಗಡುವು ಆದೇಶ ವಾಪಸ್‌

income Tax - how to save tax
ಪ್ರಮುಖ ಸುದ್ದಿ1 hour ago

Income Tax : ತೆರಿಗೆ ಉಳಿತಾಯ ಮಾಡಲು ಇನ್ನೆರಡೇ ದಿನ ಅವಕಾಶ, ಏನೇನು ಮಾಡಬಹುದು ಇನ್ನು?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌