Site icon Vistara News

Praveen Nettaru | ಎನ್‌ಐಎಗೆ ತನಿಖೆ ವಹಿಸಿ; ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಶೋಭಾ ಕರಂದ್ಲಾಜೆ ಪತ್ರ

ಶೋಭಾ ಕರಂದ್ಲಾಜೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಅವರು, ದೈವಗಳ ನಾಡಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್‌ನನ್ನು ಕೇರಳದಿಂದ ಬಂದಿದ್ದ ಮತಾಂಧ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿದ್ದಾರೆ. ಇದರ ಹಿಂದೆ ಇಸ್ಲಾಮಿಕ್‌ ಮೂಲಭೂತವಾದಿ ಸಂಘಟನೆಗಳಾದ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳ ಕೈವಾಡವಿರುವ ಶಂಕೆಯಿದೆ. ಈ ಮತಾಂಧ ಸಂಘಟನೆಗಳು ಕೋಮು ಸೌಹಾರ್ದ ಹಾಳು ಮಾಡುತ್ತಿವೆ. ರಾಜ್ಯದಲ್ಲಿ ಪ್ರವೀಣ್‌ ನೆಟ್ಟಾರು ಹತ್ಯೆಯಂತಹ ಪ್ರಕರಣ ಇದೇ ಮೊದಲೇನಲ್ಲ. ಈ ಹಿಂದೆ ಹಲವು ಹಿಂದು ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆಗಳು ನಡೆದಿವೆ ಎಂದು ತಿಳಿಸಿದ್ದಾರೆ.

ನಿರಂತರವಾಗಿ ಇಂತಹ ದುಷ್ಕೃತ್ಯಗಳು ನಡೆಯುತ್ತಿರುವ ಹಿಂದೆ ಇರುವ ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಗಳಾದ ಪಿಎಫ್‌ಐ, ಎಸ್‌ಡಿಪಿಐ ಹಾಗೂ ಇನ್ನಿತರ ಸಂಘಟನೆಗಳನ್ನು ನಿಷೇಧ ಮಾಡಲು ಹಾಗೂ ಇಂತಹ ಕೃತ್ಯಗಳ ಹಿಂದೆ ವಿದೇಶಿ ಉಗ್ರ ಸಂಘಟನೆಗಳ ಕೈವಾಡವಿದೆಯೇ ಎಂಬುವುದನ್ನು ತಿಳಿಯಲು ಕ್ರಮ ಕೈಗೊಳ್ಳಬೇಕು. ಹಾಗೇ ಪ್ರವೀಣ್‌ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ ಮೃತ ಪ್ರವೀಣ್‌ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ | Praveen Nettaru | ಪ್ರವೀಣ್ ಕುಟುಂಬಕ್ಕೆ ಸಂಘ ಪರಿವಾರದಿಂದ 50 ಲಕ್ಷ ರೂ. ನೆರವು

Exit mobile version