ಕರ್ನಾಟಕ
Karnataka Election 2023: ಕಾಂಗ್ರೆಸ್ ತೊರೆದ ಎಂ.ಎಂ. ಹಿರೇಮಠಗೆ ಶಾಕ್; ಎಸ್‌ಸಿ ಜಾತಿ ಪ್ರಮಾಣಪತ್ರ ರದ್ದು
MM Hiremath: ಹಾವೇರಿ ಎಸ್‌ಸಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪುತ್ತಿದ್ದಂತೆ ಸಿಡಿದೆದ್ದಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ ಅವರು ಪಕ್ಷ ತೊರೆದಿದ್ದರು. ಇದರ ಬೆನ್ನಲ್ಲೇ ಅವರ ಎಸ್‌ಸಿ ಜಾತಿ ಪ್ರಮಾಣಪತ್ರವನ್ನು ರದ್ದು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹಾವೇರಿ: ಪ್ರಸಕ್ತ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಹಾವೇರಿ ಎಸ್‌ಸಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಎಂ. ಹಿರೇಮಠ (MM Hiremath) ಅವರು ಪಕ್ಷದ ಟಿಕೆಟ್ ಕೈ ತಪ್ಪಿದ್ದರಿಂದ ತಮ್ಮ ಜಿಲ್ಲಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿರುವ ಹೊತ್ತಿನಲ್ಲೇ ಜಿಲ್ಲಾಡಳಿತ ಶಾಕ್ ನೀಡಿದೆ. ಅವರ ಎಸ್‌ಸಿ ಜಾತಿ ಪ್ರಮಾಣಪತ್ರವನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.
ಜಾತಿ ಪ್ರಮಾಣ ಪತ್ರ ರದ್ದು ಮಾಡಿ ಹಾವೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬುಧವಾರ (ಮಾ. 29) ಬೆಂಬಲಿಗರ ಸಭೆ ನಡೆಸಿದ್ದ ಹಿರೇಮಠ, ಪಕ್ಷೇತರವಾಗಿ ಸ್ಪರ್ಧೆ ನಡೆಸುವ ಬಗ್ಗೆ ಒಲವು ತೋರಿದ್ದರು. ಆದರೆ, ಈಗ ಇವರು 2022ರಲ್ಲಿ ಹಾವೇರಿ ತಹಸೀಲ್ದಾರ್ ಮೂಲಕ ಬೇಡ ಜಂಗಮ ಎಸ್‌ಸಿ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದರು. ಈಗ ಇದನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಇದನ್ನೂ ಓದಿ: Karnataka Election: ಚುನಾವಣೆ ಘೋಷಣೆ ಬೆನ್ನಿಗೇ ಗರ್ಜಿಸಿದ ಕಾಂಗ್ರೆಸ್: ʼಮತ್ತೆ ಗರ್ಜಿಸಲಿದೆ ಕರ್ನಾಟಕʼ ಅಭಿಯಾನ ಆರಂಭ
ಕಡೆಗಣಿಸಿದ್ದಕ್ಕೆ ಪಕ್ಷ ತೊರೆದಿದ್ದ ಹಿರೇಮಠ
ನಾಲ್ಕು ವರ್ಷದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು, ಹಾವೇರಿ ಎಸ್‌ಸಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಮಾಜಿ ಸಚಿವ ರುದ್ರಪ್ಪ ಲಮಾಣಿಗೆ ಟಿಕೆಟ್ ಘೋಷಣೆ ಮಾಡಿದ್ದರಿಂದ ಅಸಮಾಧಾನಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷ ತೊರೆದಿದ್ದರು. ಅಲ್ಲದೆ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ಮಾಡಿಕೊಂಡಿದ್ದು, ಬೆಂಬಲಿಗರ ಸಭೆಯನ್ನೂ ನಡೆಸಿದ್ದರು.
ನಾಲ್ಕು ವರ್ಷದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದರಿಂದ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನೆಲ್ಲ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಯಲ್ಲಿ ಯಾವ ರೀತಿಯ ಹೆಜ್ಜೆ ಇಡಬಹುದು ಎಂಬ ಲೆಕ್ಕಾಚಾರದಲ್ಲಿದ್ದರು. ಅಲ್ಲದೆ, ರಾಣೆಬೆನ್ನೂರು, ಬ್ಯಾಡಗಿಯಲ್ಲಿಯೂ ಅನೇಕ ಕಾಂಗ್ರೆಸ್ ಮುಖಂಡರು ಪಕ್ಷ ತೊರೆದು ಇವರ ಜತೆ ಬರಲು ಸಿದ್ಧರಿದ್ದಾರೆ ಎಂದು ಹೇಳಲಾಗಿದೆ.
ಮತ್ತೊಂದು ಲೆಕ್ಕಾಚಾರ
50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಅನುಭವಿ, ಹಿರಿಯ ರಾಜಕಾರಣಿ, ಮಾಜಿ ಸಚಿವ ಮನೋಹರ ತಹಶೀಲ್ದಾರ ಹಾನಗಲ್ ಟಿಕೆಟ್ ತಪ್ಪುತ್ತಿದ್ದಂತೆ ಅಸಮಾಧಾನಗೊಂಡು ಕಾಂಗ್ರೆಸ್ ತೊರೆಯಲು ಸಜ್ಜಾಗಿರುವುದರಿಂದ ಪಕ್ಷದ ಮತ ಅಲ್ಲಿಯೂ ಸಹ ಒಡೆಯಲಿದೆ. ಅಲ್ಲದೆ, ಪಕ್ಷದ ನಿಷ್ಠಾವಂತರಿಗೆ ಟಿಕೆಟ್ ಕೊಟ್ಟಿಲ್ಲ ಎಂಬ ರೀತಿಯಲ್ಲಿ ಪ್ರಚಾರ ಮಾಡುವ ತಂತ್ರವನ್ನೂ ಹಿರೇಮಠ ಹೊಂದಿದ್ದಾರೆನ್ನಲಾಗಿದೆ.
ಜೆಡಿಎಸ್‌ನತ್ತ ಮುಖ ಮಾಡಿದರೇ ಮನೋಹರ್ ತಹಸೀಲ್ದಾರ್?
ಇತ್ತ ಕಾಂಗ್ರೆಸ್ ಟಿಕೆಟ್ ಕೈ ತಪ್ಪುತ್ತಿದ್ದಂತೆ ವ್ಯಗ್ರರಾಗಿರುವ ಮನೋಹರ್ ತಹಸೀಲ್ದಾರ್, ಬಿಜೆಪಿ ಇಲ್ಲವೇ ಜೆಡಿಎಸ್ ಸೇರ್ಪಡೆಗೊಳ್ಳಲು ಚಿಂತನೆ ನಡೆಸಿದ್ದಾರೆ. ಅಲ್ಲದೆ, ತಮಗೆ ಅನ್ಯಾಯ ಮಾಡಿದ ಪಕ್ಷದ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇನೆ ಎಂದು ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಜೆಡಿಎಸ್‌ನಿಂದ ಕಣಕ್ಕಿಳಿಯಲು ತಯಾರಿ ಮಾಡಿಕೊಳ್ಳುತ್ತಿದ್ದು, ಈ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಮಾತುಕತೆ ಫಲಪ್ರದವಾದರೆ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ಕಾಂಗ್ರೆಸ್‌ಗೆ ತಿರುಗೇಟು ನೀಡಲು ಮುಂದಾಗಿದ್ದಾರೆನ್ನಲಾಗಿದೆ.
ನನಗೆ ಮೋಸ ಮಾಡಿದರು
ಇದು ನನಗೆ ಕೊನೇ ಚುನಾವಣೆಯಾಗಿತ್ತು. ಹೀಗಾಗಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದೆ. ನನಗೊಂದು ಅವಕಾಶ ಮಾಡಿಕೊಡಿ, 50 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತಿನಿಂದ ಕೆಲಸ ಮಾಡುತ್ತ ಬಂದಿದ್ದೇನೆ. 2018 , 2021ರಲ್ಲಿ ಟಿಕೆಟ್ ಕೊಡಲಿಲ್ಲ. ಎಂಎಲ್‌ಸಿ ಮಾಡುವ ಭರವಸೆ ನೀಡಿದ್ದರು. ಉಪ ಚುನಾವಣೆಯಲ್ಲಿ ಸಹಕಾರ ನೀಡುವಂತೆ ಕೋರಿದ್ದರು. ಸ್ಥಳೀಯ ಸಂಸ್ಥೆಗಳಿಂದ ಎಂಎಲ್‌ಸಿ ಮಾಡುವುದಾಗಿ ಹೇಳಿ ಬಳಿಕ ಸಲೀಂ ಅಹ್ಮದ್‌ಗೆ ಟಿಕೆಟ್ ಕೊಟ್ಟರು. ನನಗೆ ಮೋಸ ಮಾಡಿದರು ಎಂದು ಬೇಸರ ವ್ಯಕ್ತಪಡಿಸಿದ್ದರು.
ಮಾ. 30ರಂದು ತೀರ್ಮಾನ
ದೆಹಲಿಗೆ ಹೋಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದೆ. ನನ್ನ ಮಗನಿಗೆ ಟಿಕೆಟ್ ಕೇಳಿರಲಿಲ್ಲ. ನನಗೆ ಟಿಕೆಟ್ ನೀಡಲು ಆಗದಿದ್ದರೆ, ನನ್ನ ತಾಲೂಕಿನವರಿಗೆ ಯಾರಿಗಾದರೂ ಕೊಡಿ ಎಂದು ಹೇಳಿದ್ದೆ. ನನಗೂ ಟಿಕೆಟ್ ಕೊಡಲಿಲ್ಲ, ನನ್ನ ತಾಲೂಕಿನವರಿಗೂ ಕೊಡಲಿಲ್ಲ. ಈ ಸಾರಿ ಹೊರಗಿನವರಿಗೆ ಟಿಕೆಟ್ ಕೊಟ್ಟೆ ನಾವು ಚುನಾವಣೆಗೆ ಸಹಕರಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೆವು. ಈ ಹಿನ್ನೆಲೆಯಲ್ಲಿ ಮಾ. 30ರಂದು ನನ್ನ ಬೆಂಬಲಿಗರ ಸಭೆ ಕರೆದಿದ್ದು, ಅಲ್ಲಿ ನಿರ್ಧಾರ ಮಾಡುತ್ತೇನೆ. ನಮ್ಮ ದಾರಿ ನಮಗೆ, ಅವರ ದಾರಿ ಅವರಿಗೆ. ಎಲ್ಲರ ಜತೆ ಸಂಪರ್ಕ ಮಾಡುವ ಅನಿವಾರ್ಯತೆ ಇದೆ. ಮುಂದೇನು ಮಾಡಬೇಕು ಎನ್ನುವ ಚಿಂತನೆ ಮಾಡುತ್ತಿದ್ದೇನೆ. ಬೆಂಗಳೂರಿಗೆ ಹೋಗಿ ಬೇರೆ ಬೇರೆ ನಾಯಕರನ್ನು ಭೇಟಿ ಮಾಡುತ್ತೇನೆ. ಅವರ ಕ್ಯಾಂಡಿಡೇಟ್ ಹೇಗೆ ಗೆಲ್ಲುತ್ತಾರೆ ಎಂಬುದನ್ನು ನಾವೂ ನೋಡ್ತೀವಿ ಎಂದು ಬಹಿರಂಗ ಎಚ್ಚರಿಕೆಯನ್ನು ನೀಡಿದ್ದರು.
ಕರ್ನಾಟಕ
ಇಂದು ಮಧ್ಯಾಹ್ನದಿಂದಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ’ಶಕ್ತಿ’ ಟಿಕೆಟ್ ಹಂಚಲಿರುವ ಸಿಎಂ ಸಿದ್ದರಾಮಯ್ಯ
ನಾಲ್ಕೂ ನಿಗಮಗಳಲ್ಲಿ ಒಟ್ಟಿಗೇ ಶಕ್ತಿ ಯೋಜನೆ ಉದ್ಘಾಟಿಸುವ ಅವರು ಮಧ್ಯಾಹ್ನ 12.30ಕ್ಕೆ ಉಚಿತವಾಗಿ ಟಿಕೆಟ್ ಹಂಚಲಿದ್ದಾರೆ. ಮಧ್ಯಾಹ್ನ 1ಗಂಟೆಯಿಂದ ರಾಜ್ಯಾದ್ಯಂತ ಶಕ್ತಿ ಉಚಿತ ಬಸ್ ಪ್ರಯಾಣ ಅಧಿಕೃತವಾಗುತ್ತದೆ.
ಬೆಂಗಳೂರು: ಕಾಂಗ್ರೆಸ್ನ ಐದು ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿಯಾದ ಶಕ್ತಿ ಯೋಜನೆ ಇಂದಿನಿಂದ ರಾಜ್ಯದಲ್ಲಿ ಜಾರಿಯಾಗುತ್ತಿದೆ. ಅಂದರೆ ಮಹಿಳೆಯರು ಇಂದಿನಿಂದ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಇಂದು ಬೆಳಗ್ಗೆ 11ಗಂಟೆ ಹೊತ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ’ಶಕ್ತಿ’ಗೆ ಚಾಲನೆ ನೀಡಲಿದ್ದು ತನ್ನಿಮಿತ್ತ ಮೆಜೆಸ್ಟಿಕ್ ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಿದ್ಧತೆ ನಡೆದಿದೆ. ಇಡೀ ಬಸ್ ನಿಲ್ದಾಣವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿದೆ. ಹೊಸದೊಂದು ಯೋಜನೆಗೆ ಅದ್ಧೂರಿಯಾಗಿ ಚಾಲನೆ ನೀಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇಂದು ಟಿಕೆಟ್ ಹಂಚಲಿದ್ದಾರೆ ಸಿಎಂ!
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ವಿಧಾನಸೌಧದಿಂದ ಮೆಜೆಸ್ಟಿಕ್ವರೆಗೆ ಬಸ್ನಲ್ಲಿ ಪ್ರಯಾಣ ಮಾಡಿ, ಅಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಸಾಂಕೇತಿಕವಾಗಿ ಟಿಕೆಟ್ ಕೂಡ ಹಂಚಲಿದ್ದಾರೆ. ನಾಲ್ಕೂ ನಿಗಮಗಳಲ್ಲಿ ಒಟ್ಟಿಗೇ ಶಕ್ತಿ ಯೋಜನೆ ಉದ್ಘಾಟಿಸುವ ಅವರು ಮಧ್ಯಾಹ್ನ 12.30ಕ್ಕೆ ಉಚಿತವಾಗಿ ಟಿಕೆಟ್ ಹಂಚಲಿದ್ದಾರೆ. ಮಧ್ಯಾಹ್ನ 1ಗಂಟೆಯಿಂದ ರಾಜ್ಯಾದ್ಯಂತ ಶಕ್ತಿ ಅಧಿಕೃತವಾಗುತ್ತದೆ. ಮಹಿಳೆಯರು ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ಸದ್ಯ ಪ್ರಯಾಣಕ್ಕೆ ಏನು ದಾಖಲೆ ಬೇಕು?
ಮಹಿಳೆಯರು ಈ ಉಚಿತ ಪ್ರಯಾಣಕ್ಕಾಗಿ ಆಧಾರ್ ಕಾರ್ಡ್, ವೋಟರ್ ಐಡಿ, ಚಾಲನಾ ಪರವಾನಗಿ, ವಾಸಸ್ಥಳ ನಮೂದಾಗಿರುವ ಗುರುತಿನ ಚೀಟಿ, ವಿಶೇಷಚೇತನ, ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ನೀಡಿರುವ ಗುರುತಿನ ಪತ್ರ ಇಲ್ಲವೇ ಇವುಗಳಲ್ಲಿ ಯಾವುದಾದರೂ ಒಂದು ಗುರುತಿನ ಪತ್ರವನ್ನು ಭೌತಿಕವಾಗಿ ಅಥವಾ ಡಿಜಿಲಾಕರ್‌ನಲ್ಲಿ ಇಟ್ಟುಕೊಂಡು ಹೋಗಬೇಕು. ನೀವು ತೋರಿಸುವ ಗುರುತಿನ ಚೀಟಿಗಳಲ್ಲಿ ನಿಮ್ಮ ಫೋಟೋ ಮತ್ತು ವಾಸಸ್ಥಳವು ಕಡ್ಡಾಯವಾಗಿ ನಮೂದಾಗಿರಬೇಕು. ಸ್ಮಾರ್ಟ್ ಕಾರ್ಡ್ ದೊರೆಯುವವರೆಗೆ ಮಾತ್ರ ಈ ನಿಯಮ ಜಾರಿಯಲ್ಲಿರಲಿದೆ.
ಕರ್ನಾಟಕ
ಜೂ.16 ರಿಂದ 22ರವರೆಗೆ ಗೋವಾದಲ್ಲಿ ‘ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವʼ
ಗೋವಾದ ಫೋಂಡಾ ನಗರದ ಶ್ರೀ ರಾಮನಾಥ ದೇವಸ್ಥಾನ ಆವರಣದಲ್ಲಿ ಜೂನ್ 16 ರಿಂದ 22ರವರೆಗೆ 11ನೇ ಅಖಿಲ ಭಾರತೀಯ ಹಿಂದು ರಾಷ್ಟ್ರ ಅಧಿವೇಶನ ನಡೆಯಲಿದೆ.
ಬೆಂಗಳೂರು: ಹಿಂದು ರಾಷ್ಟ್ರ ಸ್ಥಾಪನೆಯ ಉದ್ದೇಶದೊಂದಿಗೆ ಪ್ರತಿ ವರ್ಷದಂತೆ ಜೂನ್ 16 ರಿಂದ 22ರವರೆಗೆ ಗೋವಾದ ಫೋಂಡಾ ನಗರದ ಶ್ರೀ ರಾಮನಾಥ ದೇವಸ್ಥಾನ ಆವರಣದಲ್ಲಿ ʼ11ನೇ ಅಖಿಲ ಭಾರತೀಯ ಹಿಂದು ರಾಷ್ಟ್ರ ಅಧಿವೇಶನʼ (ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವ) ಆಯೋಜಿಸಲಾಗಿದೆ ಎಂದು ಹಿಂದು ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳ ಬಗ್ಗೆ ವಿಶೇಷ ತಜ್ಞರ ಚರ್ಚಾಕೂಟ, ಗೌರವಾನ್ವಿತರ ಸಂದರ್ಶನ ಇರಲಿದೆ. ‘ಲವ್ ಜಿಹಾದ್, ‘ಹಲಾಲ್ ಸರ್ಟಿಫಿಕೇಷನ್, ‘ಲ್ಯಾಂಡ್ ಜಿಹಾದ್, ‘ಕಾಶಿ-ಮಥುರಾ ಮುಕ್ತಿ, ‘ಮತಾಂತರ, ‘ಗೋಹತ್ಯೆ, ‘ಕೋಟೆ ದೇವಸ್ಥಾನಗಳ ಮೇಲಿನ ಇಸ್ಲಾಂ ಅತಿಕ್ರಮಣ, ‘ದೇವಸ್ಥಾನ ಸಂಸ್ಕೃತಿಯ ರಕ್ಷಣೆ, ‘ಕಾಶ್ಮೀರಿ ಹಿಂದುಗಳ ಪುನರ್ವಸತಿ, ‘ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದುಗಳ ಮೇಲಿನ ದೌರ್ಜನ್ಯ ಸೇರಿ ವಿವಿಧ ವಿಷಯಗಳ ಜತೆಗೆ ಹಿಂದು ರಾಷ್ಟ್ರದ ಅಡಿಪಾಯಕ್ಕಾಗಿ ಅವಶ್ಯಕ ವಿಷಯಗಳ ಮೇಲೆ ಚರ್ಚೆ, ವಿಚಾರ ವಿನಿಮಯ ಆಗಲಿದೆ ಎಂದು ಹೇಳಿದರು.
ಇದನ್ನೂ ಓದಿ | ರಾಜಮಾರ್ಗ ಅಂಕಣ: ಆತ್ಮಾಹುತಿ ದಾಳಿಗೆ ಎದೆಕೊಟ್ಟು ಆಕೆ ಬಂಡೆಯಂತೆ ನಿಂತಿದ್ದರು!
ಈ ಅಧಿವೇಶನಕ್ಕೆ ಅಮೆರಿಕ, ಬಾಂಗ್ಲಾದೇಶ, ನೇಪಾಳ, ಇಂಗ್ಲೆಂಡ್, ಸಿಂಗಪುರ ಈ ದೇಶಗಳ ಜತೆಗೆ ಭಾರತದಲ್ಲಿನ 28 ರಾಜ್ಯಗಳಲ್ಲಿನ 350ಕ್ಕೂ ಹೆಚ್ಚಿನ ಹಿಂದು ಸಂಘಟನೆಗಳ 1500ಕ್ಕಿಂತಲೂ ಹೆಚ್ಚಿನ ಪ್ರತಿನಿಧಿಗಳಿಗೆ ಆಮಂತ್ರಿಸಲಾಗಿದೆ. ಇದರಲ್ಲಿ ಕರ್ನಾಟಕದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಹಿಂದು ನಾಯಕರಾದ ಅರುಣ್ ಪುತ್ತಿಲ, ಡಾ. ಎಸ್. ಆರ್ ಲೀಲಾ, ಅಡ್ಡಂಡ ಕಾರ್ಯಪ್ಪ ಸೇರಿ ಸುಮಾರು 250ಕ್ಕೂ ಅಧಿಕ ಹಿಂದುತ್ವವಾದಿ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಅದೇ ರೀತಿ ಅಮರಾವತಿಯ ರುಕ್ಮಿಣಿ ವಲ್ಲಭ ಪೀಠದ ಶ್ರೀ ಜಗದ್ಗುರು ರಾಮಾನಂದಚಾರ್ಯ, ಶ್ರೀ ಸ್ವಾಮಿ ರಾಮರಾಜೇಶ್ವರಾಚಾರ್ಯಜಿ, ವಿಶ್ವ ಹಿಂದು ಪರಿಷತ್ತಿನ ದೇವಗಿರಿ ಪ್ರಾಂತದ ಧರ್ಮಚಾರ್ಯ ಹ.ಭ.ಪ. ಜನಾರ್ಧನ ಮಹಾರಾಜ್ಮೇಟೆ, ಕಾಶಿಯ ಜ್ಞಾನವಾಪಿ ಮಸೀದಿಯ ವಿರುದ್ಧ ಹೋರಾಟ ನಡೆಸುತ್ತಿರುವ ವಕೀಲ ಹರಿಶಂಕರ್ ಜೈನ್, ನ್ಯಾಯವಾದಿ ವಿಷ್ಣು ಶಂಕರ ಜೈನ್, ತೆಲಂಗಾಣದ ಹಿಂದುತ್ವ ನಿಷ್ಠ ಶಾಸಕ ಟಿ. ರಾಜಾಸಿಂಗ್, ದೆಹಲಿಯ ಭಾಜಪದ ನಾಯಕ ಕಪಿಲ್ ಮಿಶ್ರಾ ಮತ್ತಿತರು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.
ಹಿಂದು ಧರ್ಮವು ವಿಶ್ವ ಬಂಧುತ್ವ ಮತ್ತು ‘ವಸುದೈವ ಕುಟುಂಬಕಂ ಸಂಕಲ್ಪವನ್ನು ಪ್ರಸ್ತುತಪಡಿಸುತ್ತದೆ. ಆದ್ದರಿಂದ ಭಾರತವನ್ನು ಮತ್ತೆ ತುಂಡಾಗುವುದನ್ನು ತಡೆಯಲು ಭಾರತವನ್ನು ಆದರ್ಶ ರಾಮರಾಜ್ಯ ಅರ್ಥಾತ್ ಹಿಂದು ರಾಷ್ಟ್ರ ಮಾಡದೆ ಪರ್ಯಾಯವಿಲ್ಲ ಎಂದು ಮೋಹನ್ ಗೌಡ ಹೇಳಿದರು.
ಈ ಅಧಿವೇಶನದ ನೇರಪ್ರಸಾರ ಹಿಂದೂ ಜನಜಾಗೃತಿ ಸಮಿತಿಯ ಜಾಲತಾಣ HinduJagruti.org ಮೂಲಕ, ಹಾಗೂ ಸಮಿತಿಯ @Hindujagruti ಈ ಯೂಟ್ಯೂಬ್ ಚಾನೆಲ್ ಮತ್ತು @HinduJagrutiOrg ಈ ಟ್ವಿಟರ್ ಹ್ಯಾಂಡಲ್ ಮೂಲಕ ಆಗಲಿದೆ. ಜಗತ್ತಿನಾದ್ಯಂತ ಇರುವ ಹಿಂದುತ್ವ ನಿಷ್ಠರು ಈ ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವದ ಲಾಭ ಪಡೆಯಬೇಕೆಂದು ಹಿಂದು ಜನಜಾಗೃತಿ ಸಮಿತಿಯು ಕರೆ ನೀಡಿದೆ.
ಇದನ್ನೂ ಓದಿ | ವಿಸ್ತಾರ ಅಂಕಣ: ಪಠ್ಯ ಪುಸ್ತಕ ಪರಿಷ್ಕರಣೆ ಎಂದರೆ ಮಕ್ಕಳ ಆಟ ಎಂದುಕೊಂಡಿದೆಯೇ ಸರ್ಕಾರ?
ಸುದ್ದಿಗೋಷ್ಠಿಯಲ್ಲಿ ಹಿಂದು ವಿದಿಜ್ಞ ಪರಿಷತ್ ರಾಷ್ಟ್ರೀಯ ಉಪಾಧ್ಯಕ್ಷ ನ್ಯಾಯವಾದಿ ಅಮೃತೇಶ್ ಎನ್.ಪಿ, ಹಿಂದು ಜೈ ಭೀಮ್ ಸಂಘಟನೆಯ ಅಧ್ಯಕ್ಷ ಚಂದ್ರಶೇಖರ್ (ಕೋಟೆ ಶೇಕಿ), ಅಯ್ಯಪ್ಪ ಸೇವಾ ಸಮಾಜಂ ಕರ್ನಾಟಕ ಅಧ್ಯಕ್ಷ ಎನ್. ಜಯರಾಮ, ನೆಲಮಂಗಲದ ಶ್ರೀ ರಾಮಾನುಜ ಪೀಠಂ ಉಪಾಧ್ಯಕ್ಷರು & ಉದ್ಯಮಿ ಜಯರಾಮ.ಎಸ್ ಉಪಸ್ಥಿತರಿದ್ದರು.
ಕರ್ನಾಟಕ
ಹುಬ್ಬಳ್ಳಿ ಏರ್‌ಪೋರ್ಟ್ ವಿಸ್ತರಣೆಗೆ 273 ಕೋಟಿ ರೂ.; ಕೇಂದ್ರಕ್ಕೆ ಪ್ರಲ್ಹಾದ್ ಜೋಶಿ ಧನ್ಯವಾದ
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರ 273 ಕೋಟಿ ರೂ. ಬಿಡುಗಡೆ ಮಾಡಿದೆ. ಹೀಗಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಧನ್ಯವಾದ ಸಲ್ಲಿಸಿದ್ದಾರೆ.
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆ ಪ್ರಸ್ತಾವನೆಗೆ ಶೀಘ್ರವಾಗಿ ಸ್ಪಂದಿಸಿ 273 ಕೋಟಿ ರೂ. ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಧನ್ಯವಾದ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನೂತನ ಯೋಜನೆಯಂತೆ ವಿಮಾನ ನಿಲ್ದಾಣದ ಟರ್ಮಿನಲ್ 20,000 ಚ.ಮೀ ವಿಸ್ತರಣೆಗೊಳ್ಳಲಿದ್ದು (ನೆಲಮಹಡಿ ಹಾಗೂ ಮೊದಲ ಮಹಡಿ ಸೇರಿ) ಹಾಗೂ ಏಕಕಾಲಕ್ಕೆ 1400ಕ್ಕೂ ಅಧಿಕ ಪ್ರಯಾಣಿಕರನ್ನು (ಆಗಮಿಸುವ ಮತ್ತು ನಿರ್ಗಮಿಸುವ) ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ. ವಿಸ್ತರಣೆ ಕಾಮಗಾರಿ 2014ರ ಜನವರಿಯಲ್ಲಿ ಆರಂಭವಾಗಲಿದ್ದು, ಎರಡು ವರ್ಷಗಳಲ್ಲಿ ಪ್ರಯಾಣಿಕರ ಉಪಯೋಗಕ್ಕೆ ಮುಕ್ತವಾಗಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | H.D. Kumaraswamy: ಇದು 40+5 ಪರ್ಸೆಂಟ್ ಕಮಿಷನ್ ಸರ್ಕಾರ: ಕಾಂಗ್ರೆಸ್ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್!
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಸಂಬಂಧಿಸಿದಂತೆ ನಮ್ಮ ಪ್ರಸ್ತಾವನೆಗೆ ಶೀಘ್ರವಾಗಿ ಸ್ಪಂದಿಸಿ ರೂ.273 ಕೋಟಿ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ @NarendraModi ಜೀ ಹಾಗೂ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ @JM_Scindia ಅವರಿಗೆ ಸಮಸ್ತ ಉತ್ತರ ಕರ್ನಾಟಕದ ಜನತೆಯ ಪರವಾಗಿ ಧನ್ಯವಾದಗಳು.
— Pralhad Joshi (@JoshiPralhad) June 10, 2023
ಕರ್ನಾಟಕ
Bellary News: ಪತ್ನಿ, ಮಕ್ಕಳು ಸೇರಿ ಐವರನ್ನು ಕೊಂದವನಿಗೆ ಮರಣ ದಂಡನೆ
Bellary News: 2017ರಲ್ಲಿ ನಡೆದಿದ್ದ ಐವರ ಕೊಲೆ ಪ್ರಕರಣದಲ್ಲಿ ಅಪರಾಧಿಗೆ ಬಳ್ಳಾರಿ ಸೆಷನ್ಸ್ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಹೈಕೋರ್ಟ್‌ನ ಧಾರವಾಡ ಪೀಠ ಎತ್ತಿ ಹಿಡಿದಿದೆ.
ಬಳ್ಳಾರಿ: ಪತ್ನಿ ಹಾಗೂ ಮಕ್ಕಳು ಸೇರಿ ಐವರನ್ನು ಕೊಲೆ ಮಾಡಿದ್ದ ಅಪರಾಧಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದ್ದ ಬಳ್ಳಾರಿ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್‌ನ ಧಾರವಾಡ ಪೀಠ ಎತ್ತಿ ಹಿಡಿದಿದೆ. ಪತ್ನಿಯ ಶೀಲ ಶಂಕಿಸಿ ಪತ್ನಿ,, ಪತ್ನಿಯ ತಂಗಿ, ಹೆತ್ತ ಮೂವರು ಮಕ್ಕಳು ಸೇರಿ ಒಟ್ಟು ಐವರನ್ನು ಕೊಲೆ ಮಾಡಿದ ಹಿನ್ನೆಲೆಯಲ್ಲಿ ಅಪರಾಧಿಗೆ ಮರಣ ದಂಡನೆ ಶಿಕ್ಷೆ (Bellary News) ನೀಡಲಾಗಿದೆ.
ಜಿಲ್ಲೆಯ ಕಂಪ್ಲಿಯ ಚಪ್ಪರದಳ್ಳಿ ವಡ್ಡರ ತಿಪ್ಪೇಸ್ವಾಮಿ ಮನೆ ಬಳಿ 2017ರ ಫೆಬ್ರವರಿ 25 ರಂದು ಬೈಲೂರು ತಿಪ್ಪಯ್ಯ, ಐವರನ್ನು ಕೊಚ್ಚಿ ಕೊಲೆ ಮಾಡಿದ್ದ. ಪತ್ನಿ ಫಕೀರಮ್ಮ (36), ಪತ್ನಿಯ ತಂಗಿ ಗಂಗಮ್ಮ (30), ಮಕ್ಕಳಾದ ಬಸಮ್ಮ (9), ರಾಜಪ್ಪ(8), ಪವಿತ್ರ(6) ಹತ್ಯೆಯಾಗಿದ್ದರು.
ಇದನ್ನೂ ಓದಿ | Murder Case: ರೂಮಿನಲ್ಲಿ ಬೆಚ್ಚಗೆ ಮಲಗಿದ್ದವಳ ಕತ್ತು ಕೊಯ್ದ ಪ್ರಿಯಕರ!
ತಿಪ್ಪಯ್ಯನಿಗೆ 2019ರ ಡಿಸೆಂಬರ್ 3ರಂದು ಬಳ್ಳಾರಿ ಸೆಷನ್ಸ್ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿತ್ತು. ಹೀಗಾಗಿ ಧಾರವಾಡ ಹೈಕೋರ್ಟ್‍ನಲ್ಲಿ ಈತ ಮೇಲ್ಮನವಿ ಸಲ್ಲಿಸಿದ್ದ. ವಿಚಾರಣೆ ನಡೆದು ಬಳ್ಳಾರಿ ಸೆಷೆನ್ಸ್ ನ್ಯಾಯಾಲಯದ ತೀರ್ಪನ್ನೇ ಹೈಕೋರ್ಟ್‌ನ ಧಾರವಾಡ ಪೀಠ ಹಿಡಿದು ಮರಣ ದಂಡನೆ ಶಿಕ್ಷೆ ಖಚಿತಪಡಿಸಿದೆ.
-
ಪ್ರಮುಖ ಸುದ್ದಿ2 hours ago
Horoscope Today: ಈ ರಾಶಿಯವರ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಎಚ್ಚರ ಇರಲಿ!
-
ಆರೋಗ್ಯ30 mins ago
Health Tips: ಮೊಸರಿನ ಜೊತೆಗೆ ಈ ಆಹಾರಗಳನ್ನು ತಿಂದರೆ ಅಪಾಯ ಕಟ್ಟಿಟ್ಟಬುತ್ತಿ!
-
ಕ್ರಿಕೆಟ್22 hours ago
Viral News: ಲಬುಶೇನ್ರನ್ನು ನಿದ್ರೆಯಿಂದ ಬಡಿದೆಬ್ಬಿಸಿದ ಸಿರಾಜ್; ಸಖತ್ ಮಜವಾಗಿದೆ ವಿಡಿಯೊ
-
ಕ್ರಿಕೆಟ್21 hours ago
Viral News: ಶುಭಮನ್ ಗಿಲ್ಗೆ ಪ್ರಪೋಸ್ ಮಾಡಿದ ಯುವತಿ; ಸಾರಾ ತೆಂಡೂಲ್ಕರ್ ರಿಯ್ಯಾಕ್ಷನ್ ಹೇಗಿತ್ತು?
-
ದೇಶ18 hours ago
Tipu Sultan: ಬುಲ್ಡೋಜರ್ ಮೂಲಕ ಟಿಪ್ಪು ಸುಲ್ತಾನ್ ಸ್ಮಾರಕ ನೆಲಸಮ, ವ್ಯಾಪಕ ಬಂದೋಬಸ್ತ್
-
ಕ್ರಿಕೆಟ್19 hours ago
WTC Final 2023: ರದ್ದಾಗುವ ಭೀತಿಯಲ್ಲಿದೆ ವಿಶ್ವ ಟೆಸ್ಟ್ ಫೈನಲ್ ಪಂದ್ಯ!
-
ಕರ್ನಾಟಕ17 hours ago
BY Vijayendra: ಧರಣಿ ಕುಳಿತ ಶಾಸಕ ಬಿ.ವೈ. ವಿಜಯೇಂದ್ರ! ತಾರಕಕ್ಕೇರಿದ ಮರ ಸಾಗಾಟ ಗಲಾಟೆ
-
South Cinema19 hours ago
Adipurush Movie: ಮುಟ್ಟಾದವರು ಆದಿಪುರುಷ್ ಸಿನ್ಮಾ ನೋಡೋದು ಬೇಡ! ರಾಹುಕಾಲದಲ್ಲಿ ಶೋ ಬೇಡ್ವೇ ಬೇಡ