ಕೊಡಗು: ಇಲ್ಲಿನ ಮಡಿಕೇರಿ ತಾಲ್ಲೂಕಿನ ಚೆಟ್ಟಳ್ಳಿ ಸಮೀಪದ ಚೇರಳದಲ್ಲಿ ಪತಿಯಿಂದಲ್ಲೇ ಪತ್ನಿಯ ಹತ್ಯೆಯಾಗಿರುವ ಘಟನೆ ನಡೆದಿದೆ. ಷಶ್ಮಾ (43) ಎಂಬುವವರು ಪತಿಯ ಗುಂಡೇಟಿಗೆ (Shoot out) ಬಲಿಯಾಗಿದ್ದಾರೆ.
ಮನೆಯಲ್ಲಿ ಪತ್ನಿ ಷಶ್ಮಾಳ ಹಾಗೂ ಪತಿ ಗೋಪಾಲ್ ನಡುವೆ ಯಾವುದೋ ವಿಷಯಕ್ಕೆ ಜಗಳವಾಗಿದೆ ಎನ್ನಲಾಗಿದೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಗೋಪಾಲ್ ಮನೆಯಲ್ಲಿದ್ದ ಗನ್ ತೆಗೆದುಕೊಂಡು ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗುತ್ತಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಗೋಪಾಲ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ | ಪತಿಯಿಂದಲೇ ಹತ್ಯೆಯಾದ ಗ್ರಾಪಂ ಸದಸ್ಯೆ; ಕೌಟುಂಬಿಕ ಕಲಹವೇ ಕಾರಣವಾಯ್ತಾ?