Site icon Vistara News

Short Circuit: ಮೈಸೂರು ವಿವಿ ಸಂಶೋಧಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌

Short Circuit

Short Circuit

ಮೈಸೂರು: ಮೈಸೂರು ವಿಶ್ವ ವಿದ್ಯಾನಿಲಯದ ಸಂಶೋಧಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಹಾನಿಯಾಗಿಲ್ಲ. ಶಾರ್ಟ್ ಸರ್ಕ್ಯೂಟ್‌ (Short Circuit)ನಿಂದ ಡಿಪಿ (Distribution Panel) ಹೊತ್ತಿ ಉರಿದಿದ್ದು, ಕೂಡಲೇ ವಿದ್ಯಾರ್ಥಿಗಳು ಹೊರಗೋಡಿ ಬಂದಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

ಮೈಸೂರಿನ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿರುವ ಸಂಶೋಧಕರ ನಿಲಯಯಲ್ಲಿ ಈ ಘಟನೆ ನಡೆದಿದೆ. ಶಬ್ದ ಕೇಳುತ್ತಿದ್ದಂತೆ ವಿಧ್ಯಾರ್ಥಿಗಳು ಹೊರಗೆ ಓಡಿ ಬಂದಿದ್ದಾರೆ. ಪಟಾಕಿಯಂತೆ ಡಿಪಿ ಸಿಡಿದಿದೆ. ಈ ಹಿಂದೆಯೇ ವಿದ್ಯುತ್ ವ್ಯವಸ್ಥೆಯಲ್ಲಿ ಸಮಸ್ಯೆ ಕಂಡು ಬರುತ್ತಿರುವುದಾಗಿ ವಿದ್ಯಾರ್ಥಿಗಳು ಅಧಿಕಾರಿಗಳಿಗೆ ತಿಳಿಸಿದ್ದರು. ರಿಪೇರಿ ಮಾಡಿಸುವಂತೆ ಮನವಿಯನ್ನೂ ಮಾಡಿದ್ದರು. ಆದರೆ ಕ್ರಮ ಕೈಗೊಂಡಿರಲಿಲ್ಲ. ಇದೀಗ ಅಧಿಕಾರಿಗಳ ನಿರ್ಲಕ್ಷ್ಯ ಡಿಪಿ ಹೊತ್ತಿ ಉರಿದಿದೆ.

ʼʼವಿದ್ಯುತ್‌ ವ್ಯವಸ್ಥೆಯಲ್ಲಿ ಸಮಸ್ಯೆ ಇರುವ ಕುರಿತು ಈ ಹಿಂದೆಯೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದೆವು. ಆದರೆ ಕ್ರಮ ಕೈಗೊಂಡಿರಲಿಲ್ಲ. ಡಿಪಿ ಪಟಾಕಿಯಂತೆ ಸದ್ದು ಮಾಡಿ ಹೊತ್ತಿ ಉರಿದಿದೆ. ಶಬ್ದ ಕೇಳಿದ ಕೂಡಲೇ ನಾವೆಲ್ಲ ಹೊರಗೋಡಿ ಬಂದೆವುʼʼ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಯುವಕ ಆತ್ಮಹತ್ಯೆ

ಮೈಸೂರು: ರೈಲು ಹಳಿಗೆ ಹಾರಿ ಯುವಕನೋರ್ವ ಅತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಯಾದವಗಿರಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಸಂಜಯ್ (22) ಅತ್ಮಹತ್ಯೆ ಮಾಡಿಕೊಂಡಿರುವ ಯುವಕ. ಮೈಸೂರಿನ ಚಾಮರಾಜ ಮೊಹಲ್ಲಾ ನಿವಾಸಿ ಸಂಜಯ್‌ನ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ನಿಂತ ಲಾರಿಗೆ‌ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಧಾರವಾಡ: ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು‌ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ದೀಪಕ್ ಎಂದು ಗುರುತಿಸಲಾಗಿದೆ.

ಬೇಲೂರು ಕೈಗಾರಿಕಾ ಪ್ರದೇಶದಿಂದ ಕೆಲಸ‌ ಮುಗಿಸಿ ಮನೆಗೆ ಹೊರಟಿದ್ದ‌ ವೇಳೆ ಈ ಅವಘಡ ಸಂಭವಿಸಿದೆ. ಮೂವರು ಸಂಚರಿಸುತ್ತಿದ್ದ ಬೈಕ್‌ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ದೀಪಕ್‌ ಸ್ಥಳದಲ್ಲೇ ಮೃತಪಟ್ಟರು. ಇನ್ನಿಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳು ಹಾಗೂ ಸಾವನ್ನಪ್ಪಿದ ಮೃತ ದೀಪಕ್‌ ಬೆಳಗಾವಿ ಜಿಲ್ಲೆಯ ಗಂಡಿಗವಾಡ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಗರಗ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ರಾಜಕಾಲುವೆಗೆ ಬಿದ್ದ ಬೈಕ್‌ ಸವಾರನ ಮೃತದೇಹ ಪತ್ತೆ

ಶಾಸಕರ ಬರ್ತ್ ಡೇ ಫ್ಲೆಕ್ಸ್‌ ಬಿದ್ದ ಗಂಭೀರ ಗಾಯ

ಬೆಂಗಳೂರು: ಶಾಸಕರ ಬರ್ತ್ ಡೇ ಫ್ಲೆಕ್ಸ್‌ ಮೈಮೇಲೆ ಬಿದ್ದು ವೃದ್ಧರೊಬ್ಬರು ಗಂಭೀರ ಗಾಯಗೊಂಡು ಕೋಮಾದಲ್ಲಿರುವ ಘಟನೆ ನಡೆದಿದೆ. ಸಿಂಗನಾಯಕನಹಳ್ಳಿ ಮುಖ್ಯ ರಸ್ತೆಯಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್‌ ಬಿದ್ದು 77 ವರ್ಷದ ಭಕ್ತವಸ್ತಲ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ಮೊಮ್ಮಗಳನ್ನ ಕರೆತರಲು ಬೈಕ್ ಮೇಲೆ ಹೋಗುತ್ತಿದ್ದ ಭಕ್ತವಸ್ತಲ ಅವರ ಮೇಲೆ ಶನಿವಾರ ಮಧ್ಯಾಹ್ನ ಸ್ಥಳೀಯ ಶಾಸಕರ ಬರ್ತ್ ಡೇಗೆ ವಿಶ್ ಮಾಡಿ ಅಳವಡಿಸಿದ್ದ ಫ್ಲೆಕ್ಸ್‌ ಗಾಳಿಗೆ ಹಾರಿ ಬಂದು ಬಿದ್ದಿತ್ತು. ಇದರಿಂದ ನಿಯಂತ್ರಣ ಕಳೆದುಕೊಂಡು ಅವರು ರಸ್ತೆಗೆ ಬಿದ್ದು ಬಿಟ್ಟಿದ್ದರು. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

Exit mobile version