ಹಾಸನ: ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಳನ್ನು ಬೆಳ್ಳೂರಿನ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಕಳೆದ ನಾಲ್ಕು ತಿಂಗಳಿನಿಂದ ತುಸು ಅನಾರೋಗ್ಯದಿಂದ ಬಳಲುತ್ತಿರುವ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಶ್ರವಣಬೆಳಗೊಳ ಮಠದಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗಾಗಿ ಶ್ರವಣಬೆಳಗೊಳಕ್ಕೆ ಆಗಮಿಸಿದ್ದ ವೈದ್ಯರು ಸೂಚಿಸಿದ ಹಿನ್ನೆಲೆಯಲ್ಲಿ ಅವರನ್ನು ಬೆಳ್ಳೂರಿಗೆ ಕೊಂಡೊಯ್ಯಲಾಗಿದೆ.
ಅಂಬ್ಯುಲೆನ್ಸ್ ಮೂಲಕ ಆದಿಚುಂಚನಗಿರಿ ಆಸ್ಪತ್ರೆಗೆ ಸ್ವಾಮೀಜಿಯವರನ್ನು ಕರೆದೊಯ್ಯಲಾಗಿದ್ದು, ಅವರನ್ನು ಭೇಟಿಯಾಗಲು ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಬೆಂಗಳೂರಿನಿಂದ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ: ಪುಸ್ತಕಗಳು ಮನುಕುಲ ಉಳಿಸಿಕೊಳ್ಳುವ ಜ್ಞಾನನಿಧಿಗಳು: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ