Rama Mandir : ರಾಮ ಮಂದಿರ ಉದ್ಘಾಟನೆ ಬಹಿಷ್ಕಾರ ಸುದ್ದಿ ಸುಳ್ಳು; ಶೃಂಗೇರಿ ಮಠ ಸ್ಪಷ್ಟನೆ - Vistara News

ಕರ್ನಾಟಕ

Rama Mandir : ರಾಮ ಮಂದಿರ ಉದ್ಘಾಟನೆ ಬಹಿಷ್ಕಾರ ಸುದ್ದಿ ಸುಳ್ಳು; ಶೃಂಗೇರಿ ಮಠ ಸ್ಪಷ್ಟನೆ

Rama Mandir : ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮವನ್ನು ಪೀಠ ಬಹಿಷ್ಕರಿಸಿಲ್ಲ ಎಂದು ಶೃಂಗೇರಿ ಮಠ ಸ್ಪಷ್ಟಪಡಿಸಿದೆ. ಕೆಲವರು ಮಠದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದೆ.

VISTARANEWS.COM


on

Shringeri temple denies boycotting Rama Mandir Inauguration
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ಅಯೋಧ್ಯೆಯ ಶ್ರೀ ರಾಮ ಮಂದಿರ (Rama Mandir) ಉದ್ಘಾಟನೆ ಕಾರ್ಯಕ್ರಮವನ್ನು ಶೃಂಗೇರಿ ಶಾರದಾ ಪೀಠ (Shringeri matt) ಬಹಿಷ್ಕರಿಸಿದೆ ಎಂಬ ವರದಿಗಳನ್ನು ಶೃಂಗೇರಿ ಶ್ರೀಗಳು ತಳ್ಳಿ ಹಾಕಿದ್ದಾರೆ. ಶೃಂಗೇರಿ ಪೀಠದ ಆಡಳಿತ ಮಂಡಳಿಯು ಶ್ರೀಗಳು ಹಾಗೂ ಆಡಳಿತ ಅಧಿಕಾರಿ ಗೌರಿ ಶಂಕರ್ (Administrator Gowrishankar) ಅವರ ಹೆಸರಿನಲ್ಲಿ ಬಹಿರಂಗ ಪತ್ರವೊಂದನ್ನು ಪ್ರಕಟಿಸಿದ್ದು, ಇದರಲ್ಲಿ ಮಠದ ವತಿಯಿಂದ ಬಹಿಷ್ಕಾರ ಹಾಕಲಾಗಿದೆ ಎಂಬುದು ಅಪಪ್ರಚಾರ ಎಂದು ತಿಳಿಸಲಾಗಿದೆ. ಶೃಂಗೇರಿ ಶ್ರೀಗಳ ಭಾವಚಿತ್ರ, ಹೆಸರು ಬಳಸಿ ಅಪಪ್ರಚಾರ ಮಾಡಲಾಗುತ್ತಿದೆ. ಇದು ನಿಜವಲ್ಲ ಎಂದು ಮಠದ ವತಿಯಿಂದ ಸ್ಪಷ್ಟನೆ ನೀಡಲಾಗಿದೆ.

ಜಾಲತಾಣದಲ್ಲಿ ಏನು ಪ್ರಚಾರ ಮಾಡಲಾಗಿತ್ತು?

WWW.jainikajagaran.com ಎಂಬ ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಮಠವು ಅಯೋಧ್ಯೆಯ ಪವಿತ್ರ ಪ್ರಾಣ ಪ್ರತಿಷ್ಠಾಪನ ಮಹೋತ್ಸವವನ್ನು ವಿರೋಧಿಸುತ್ತಿದೆ ಎಂದು ಪ್ರಚಾರ ಮಾಡಲಾಗಿತ್ತು. ಶೃಂಗೇರಿ ಶ್ರೀ ಭಾರತಿ ತೀರ್ಥ ಸ್ವಾಮೀಜಿಗಳ ಹೆಸರಲ್ಲಿ ಈ ಹೇಳಿಕೆಯನ್ನು ನೀಡಲಾಗಿತ್ತು. ಅದಕ್ಕೆ ಕಿರಿಯ ಶ್ರೀಗಳು ಮತ್ತು ಮಠದ ಆಡಳಿತಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ವಿರೋಧಿಸುವಂತೆ ಶ್ರೀಗಳು ಕರೆ ನೀಡಿದ್ದಾರೆ ಎಂಬುದು ಸುಳ್ಳು ಮಾಹಿತಿ. ಪ್ರತಿಯೊಬ್ಬರು ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಶ್ರೀರಾಮ ತಾರಕ ಜಪ ಮಂತ್ರ ಪಠಿಸುವಂತೆ ಶೃಂಗೇರಿ ಶ್ರೀಗಳು ಆಗಲೇ ಕರೆ ನೀಡಿದ್ದಾರೆ. ಹೀಗಾಗಿ ಯಾವುದೇ ಅಪಪ್ರಚಾರಗಳಿಗೆ ಕಿವಿ ಕೊಡಬಾರದು ಎಂದು ಪೀಠ ಮನವಿ ಮಾಡಿದೆ.

ಬಹಿರಂಗಪತ್ರದಲ್ಲಿ ಏನಿದೆ?

ಆಸ್ತಿಕಜನರೆಲ್ಲರ ಗಮನಕ್ಕೆ ಒಂದು ಮುಖ್ಯವಾದ ವಿಷಯ. ಸುಮಾರು ಐದುನೂರು ವರ್ಷಗಳ ಸುದೀರ್ಘವಾದ ಹೋರಾಟದ ನಂತರ ಶ್ರೀರಾಮಚಂದ್ರನ ಕ್ಷೇತ್ರವಾದ ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನಿಗೆ ಭವ್ಯವಾದ ದೇವಸ್ಥಾನದ ನಿರ್ಮಾಣವು ಇದೇ ಶೋಭಕೃತ್ ಪುಷ್ಯ ಶುಕ್ಲದ್ವಾದಶಿ (22-1-2024) .ಸೋಮವಾರದಂದು ಪ್ರಾಣಪ್ರತಿಷ್ಠಾ ಮಹೋತ್ಸವವು ಅತ್ಯಂತ ವೈಭವೋಪೇತವಾಗಿ ಸಂಪನ್ನಗೊಳ್ಳಲಿದೆ. ಈ ವಿಷಯವು ಸಮಸ್ತ ಆಸ್ತಿಕಸ್ತೋಮಕ್ಕೂ ಅತ್ಯಂತಾನಂದದಾಯಕವಾಗಿದೆ.

ಆದರೆ ಇಂತಹ ಸಂದರ್ಭದಲ್ಲಿ ಕೆಲವರು ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ “www.dainikjagran.com ಎಂಬ ಹೆಸರನ್ನು ಉಪಯೋಗಿಸಿಕೊಂಡು ಶೃಂಗೇರಿ ಶಾರದಾಪೀಠದ ಪ್ರಸ್ತುತ ಅಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಛಾಯಾಚಿತ್ರದ ಜೊತೆಗೆ ಶ್ರೀಗಳು ಈ ಪವಿತ್ರಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥವು ಬರುವ ಹಾಗೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಜಗದ್ಗುರು ಶ್ರೀಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರು ಇಂತಹ ಯಾವುದೇ ಸಂದೇಶವನ್ನು ನೀಡಿರುವುದಿಲ್ಲ. ಇದು ಕೇವಲ ಧರ್ಮದ್ವೇಷಿಗಳಾದ ಕೆಲವರು ಮಾಡುತ್ತಿರುವ ಮಿಥ್ಯಾಪ್ರಚಾರವೇ ಸರಿ. ಆದ್ದರಿಂದ ಆಸ್ತಿಕಮಹಾಜನರು ಯಾವುದೇ ಕಾರಣಕ್ಕೆ ಇಂತಹ ಅಪಪ್ರಚಾರಗಳಿಗೆ ಬೆಲೆಯನ್ನು ಕೊಡಬಾರದು. ಹಾಗೆಯೇ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠದ ಅಧಿಕೃತವಾದ www.sringeri.net ಎಂಬ ವೆಬ್‌ಸೈಟಿನಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ವಿಷಯಗಳನ್ನು ಮಾತ್ರವೇ ಪ್ರಾಮಾಣಿಕವಾಗಿ ಪರಿಗಣಿಸಬೇಕೆಂದು ಈ ಮೂಲಕ ನಿವೇದಿಸುತ್ತಿದ್ದೇವೆ.

“sharadapeetham” ಯೂಟ್ಯೂಬ್ ಚ್ಯಾನೆಲ್ ಮೂಲಕ ಕಳೆದ ದೀಪಾವಳಿಯ (12-11-2023) ಸಂದರ್ಭದಲ್ಲಿ ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ಮನಸ್ಸಿನಲ್ಲಿಟ್ಟುಕೊಂಡು ಶ್ರೀರಾಮತಾರಕ ಮಹಾಮಂತ್ರವನ್ನು ಜಪಿಸುವಂತೆ ಎಲ್ಲಾ ಆಸ್ತಿಕರಿಗೂ ಶೃಂಗೇರಿ ಜಗದ್ಗುರುಗಳು ಸಂದೇಶವನ್ನು ನೀಡಿದ್ದರು. ಅದನ್ನನುಸರಿಸಿ ಆಸ್ತಿಕರು ಅತ್ಯಧಿಕ ಸಂಖ್ಯೆಯಲ್ಲಿ ಮಂತ್ರಜಪವನ್ನು ಮಾಡುತ್ತಿರುವುದು ಈ ಸಂದರ್ಭದಲ್ಲಿ ಗಮನಾರ್ಹವಾಗಿದೆ.

ಹಾಗೆಯೇ ಅತ್ಯಂತ ಪವಿತ್ರವೂ ಅಪರೂಪವು ಆದ ಈ ಪ್ರಾಣಪ್ರತಿಷ್ಠಾಮಹೋತ್ಸವದ ಸುಸಂದರ್ಭದಲ್ಲಿ ಎಲ್ಲಾ ಆಸ್ತಿಕರು ಯಥಾಯೋಗ್ಯವಾಗಿ ಭಾಗವಹಿಸಿ ಶ್ರೀರಾಮನ ಪರಿಪೂರ್ಣಕೃಪೆಗೆ ಪಾತ್ರರಾಗಿ ಕೃತಾರ್ಥರಾಗಬೇಕೆಂದು ಜಗದ್ಗುರು ಮಹಾಸ್ವಾಮಿಗಳವರು ಆಶೀರ್ವದಿಸಿದ್ದಾರೆ- ಇದು ಬಹಿರಂಗ ಪತ್ರದಲ್ಲಿರುವ ಮಾಹಿತಿ.

Shringeri Matt letter

ಇತರ ಶಂಕರ ಮಠಗಳಿಂದ ಬಹಿಷ್ಕಾರ

ಈ ನಡುವೆ, ಪುರಿ ಗೋವರ್ಧನ ಮಠ ಹಾಗೂ ಉತ್ತರಾಖಂಡದ ಜ್ಯೋತಿರ್‌ ಮಠವು ಈ ಕಾರ್ಯಕ್ರಮದಿಂದ ದೂರ ಉಳಿಯುವುದಾಗಿ ನೇರವಾಗಿ ಘೋಷಣೆ ಮಾಡಿವೆ. ಉತ್ತರಾಖಂಡ ಜ್ಯೋತಿರ್ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ದೇಶದ ಯಾವುದೇ ಪ್ರಮುಖ ಶಂಕರಾಚಾರ್ಯ ಮಠಗಳ ಮುಖ್ಯಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ : Ayodhya Ram Mandir: ರಾಮ ಮಂದಿರ ಅಪೂರ್ಣ, ಪ್ರಾಣ ಪ್ರತಿಷ್ಠೆ ಶಾಸ್ತ್ರವಿರುದ್ಧ, ನಾಲ್ಕೂ ಶಂಕರಾಚಾರ್ಯರು ಭಾಗವಹಿಸುವುದಿಲ್ಲ: ಪುರಿ ಶಂಕರಾಚಾರ್ಯ

ದೇಶದಲ್ಲಿ ಈಗ ಶಂಕರಾಚಾರ್ಯ ಪರಂಪರೆಯ ನಾಲ್ಕು ಪ್ರಮುಖ ಮಠಗಳಿವೆ. ಉತ್ತರಾಖಂಡದ ಜ್ಯೋತಿರ್ಮಠ, ಪುರಿಯ ಗೋವರ್ಧನ ಮಠ, ಶೃಂಗೇರಿಯ ಶಾರದಾ ಪೀಠ ಮತ್ತು ಗುಜರಾತ್‌ನ ದ್ವಾರಕೆಯ ದ್ವಾರಕಾ ಶಾರದಾ ಪೀಠಗಳು ಪ್ರಮುಖವಾಗಿವೆ. ಅವುಗಳ ಪೈಕಿ ಎರಡು ಪೀಠಗಳು ಈಗ ರಾಮ ಮಂದಿರ ಉದ್ಘಾಟನೆಗೆ ಹೋಗುವುದಿಲ್ಲ ಎಂದು ಪ್ರಕಟಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೊಡಗು

Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

Wild Animals Attack : ಆಹಾರ ಅರಸುತ್ತಾ ಕಾಡು ಬಿಟ್ಟು ನಾಡಿಗೆ ಆನೆಗಳ ಹಿಂಡು ಬಂದಿದ್ದು, ದಾಂಧಲೆ ನಡೆಸಿದೆ. ಇತ್ತ ಕರಡಿಯೊಂದು ಗ್ರಾಮಕ್ಕೆ ನುಗ್ಗಿ ಆತಂಕವನ್ನು ಹೆಚ್ಚಿಸಿತ್ತು. ಕೊಡಗಿನಲ್ಲಿ ಕಾಡಾನೆಯೊಂದು ಬಾವಿಗೆ ಬಿದ್ದು ಮೃತಪಟ್ಟಿತ್ತು.

VISTARANEWS.COM


on

By

wild animals Attack
Koo

ಕೊಡಗು/ಬಳ್ಳಾರಿ: ರಾಜ್ಯದ ಹಲವೆಡೆ ಕಾಡು ಪ್ರಾಣಿಗಳ ಹಾವಳಿ (Wild Animals Attack) ಹೆಚ್ಚಾಗಿದೆ. ಆಹಾರ ಅರಸಿ ಕಾಡಂಚಿನ ಗ್ರಾಮಗಳಿಗೆ ಕಾಡು ಪ್ರಾಣಿಗಳು ಲಗ್ಗೆ ಇಡುತ್ತಿವೆ. ಕೊಡಗಿನಲ್ಲಿ ಮನೆಯಂಗಳಕ್ಕೆ ಆನೆಗಳ ಹಿಂಡು ಲಗ್ಗೆ ಇಟ್ಟು, ದಾಂಧಲೆ ನಡೆಸಿದೆ.

ಕೊಡಗಿನ ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದ ಮೂಕೊಂಡ ಸುಬ್ರಮಣಿ ಎಂಬುವವರ ಮನೆಯೊಳಗೆ ಮರಿಯಾನೆಗಳು ನುಗ್ಗಲು ಯತ್ನಿಸಿದೆ. ಮನೆಯಂಗಳದಲ್ಲಿದ್ದ ಹೂಕುಂಡಗಳನ್ನು ಧ್ವಂಸ ಮಾಡಿ, ಪ್ಲ್ಯಾಸ್ಟಿಕ್ ಚೇರ್‌ಗಳನ್ನು ಹೊಡೆದು ಹಾಕಿವೆ.

ಗುಹ್ಯ ಗ್ರಾಮದಲ್ಲಿ ನಿರಂತರ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಇದನ್ನೂ ತಡೆಗಟ್ಟಲು ಅರಣ್ಯ ಇಲಾಖೆ ವಿಫಲವಾಗಿದೆ. ಅರಣ್ಯ ಇಲಾಖೆ ವಿರುದ್ಧ ಸುಬ್ರಮಣಿ ಆಕ್ರೋಶ ಹೊರಹಾಕಿದ್ದಾರೆ. ಜನರು ಭಯದ ವಾತಾವರಣದಲ್ಲೇ ಓಡಾಡುವಂತಾಗಿದೆ. ತೋಟದಲ್ಲಿ ಕಾಫಿ ಬೆಳೆಗಳ ನಾಶ ಮಾಡುತ್ತಿವೆ, ಇದರಿಂದಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಸರ್ಕಾರ ಕೂಡಲೇ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

wild animals attack

‌ಗ್ರಾಮಕ್ಕೆ ಓಡೋಡಿ ಬಂದ ಕರಡಿ

ಆಹಾರ ಅರಸಿ ಮಂಗಳವಾರ ಬೆಳಗ್ಗೆ ಕರಡಿಯೊಂದು ಗ್ರಾಮಕ್ಕೆ ಓಡೋಡಿ ಬಂದಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಸಮುದ್ರ ಗ್ರಾಮಕ್ಕೆ ಕರಡಿಯೊಂದು ನುಗ್ಗಿದ್ದು,ಜನರು ಚೆಲ್ಲಾಪಿಲ್ಲಿಯಾಗಿ ಓಡಿದ್ದರು. ಕೆಲಕಾಲ ಆತಂಕ ಸೃಷ್ಟಿಸಿದ ಕರಡಿಯು ಜನರ ಕೂಗಾಟಕ್ಕೆ ಗ್ರಾಮದಿಂದ ಕಾಡಿನ ಕಡೆಗೆ ಓಡಿ ಹೋಗಿದೆ.

ಇದನ್ನೂ ಓದಿ: Kolar news : ಬ್ಲಾಸ್ಟಿಂಗ್‌ ವೇಳೆ ಉರುಳಿ ಬಿದ್ದ ಬಂಡೆಕಲ್ಲು, ಟ್ರ್ಯಾಕ್ಟರ್‌-ಹಿಟಾಚಿ ಅಪ್ಪಚ್ಚಿ; ಮೂವರು ಕಾರ್ಮಿಕರು ನಾಪತ್ತೆ

ಬಾವಿಗೆ ಬಿದ್ದು ಕಾಡಾನೆ ಸಾವು

ಮನೆ ಮುಂದೆ ಇದ್ದ ಬಾವಿಗೆ ಬಿದ್ದು ಕಾಡಾನೆಯೊಂದು ಮೃತಪಟ್ಟಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಎಂಬಲ್ಲಿ ಘಟನೆ ನಡೆದಿದೆ.

ಗ್ರಾಮದ ಬಿದ್ದಪ್ಪ ಎಂಬುವರು ಉದ್ಯೋಗ ಖಾತ್ರಿ ಯೋಜನೆಯಡಿ ಕುಡಿಯುವ ನೀರಿಗಾಗಿ ಬಾವಿಯನ್ನು ತೆರೆದಿದ್ದರು. ಆಹಾರ ಅರಸುತ್ತಾ ಬಂದಿದ್ದ ಕಾಡಾನೆಯು ಬಾವಿ ಕಾಣದೆ ತೆರೆದಿದ್ದ ಬಾವಿಗೆ ತಡರಾತ್ರಿ ಬಿದ್ದಿದೆ. ಬಿದ್ದ ರಭಸಕ್ಕೆ ಗಂಭೀರ ಗಾಯಗೊಂಡ ಕಾಡಾನೆ ಮೇಲೆ ಬರಲು ಆಗದೆ ನರಳಾಡಿ ಪ್ರಾಣ ಬಿಟ್ಟಿದೆ.

wild animals attack

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯೊಳಗೆ ಬಿದ್ದು ಸಾವನ್ನಪ್ಪಿದ ಕಾಡಾನೆಯನ್ನು ಮೇಲಕ್ಕೆತ್ತಿದ್ದಾರೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Kempegowda Jayanti: ಜೂನ್ 27ರಂದು ಬೆಂಗಳೂರಿನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಆಗಲಿದೆ. ಜಯಂತಿ ನಡೆಯುವ ಸ್ಥಳದ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

Kempegowda Jayanti
Koo

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ (Kempegowda Jayanti) ಪೂರ್ವಭಾವಿ ಸಭೆ ಮಂಗಳವಾರ ನಡೆಯಿತು. ಜಾಗದ ಸಮಸ್ಯೆ ‌ಕಾರಣಕ್ಕೆ ಸ್ಟೇಡಿಯಂ ಅಥವಾ ಅರಮನೆ ಮೈದಾನದಲ್ಲಿ ಜಯಂತಿ ಮಾಡಲು ಸಲಹೆಗಳು ಬಂದಿದ್ದು, ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕೆಂಪೇಗೌಡರ 515ನೇ ಜಯಂತಿ ಪ್ರಯುಕ್ತ ಸಭೆ ಮಾಡಲಾಗಿದೆ. ಸಂಘ, ಸಂಸ್ಥೆಗಳ‌ ಮುಖಂಡರನ್ನು ಆಹ್ವಾನಿಸಿ ಚರ್ಚೆ ಮಾಡಿದ್ದೇವೆ. ಪಕ್ಷ, ಜಾತಿ, ಧರ್ಮ ದೂರವಿಟ್ಟು ಸಭೆ ಮಾಡಿದ್ದೇವೆ. ಜೂನ್ 27ರಂದು ಬೆಂಗಳೂರಿನಲ್ಲಿ ಜಯಂತಿ ಆಚರಣೆ ಆಗಲಿದೆ ಎಂದು ತಿಳಿಸಿದರು.

ವಿಧಾನಸೌಧದಲ್ಲಿ ಮಾಡಿದರೆ ಜಾಗ ಚಿಕ್ಕದು, ಹಾಗಾಗಿ ಬೇಡ ಎಂದಿದ್ದಾರೆ. ಅರಮನೆ ಮೈದಾನ ಅಥವಾ ಸ್ಟೇಡಿಯಂನಲ್ಲಿ ಮಾಡಿ ಎಂದು ಸಲಹೆ ಬಂದಿದೆ. ಎಲ್ಲಿ ಮಾಡಬೇಕು ಎಂಬುವುದನ್ನು ತೀರ್ಮಾನ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ | Petrol Diesel Price Hike: ಕೇಂದ್ರ ಸರ್ಕಾರ ಹಣ ಕೊಟ್ಟಿದ್ರೆ ತೆರಿಗೆ ಹೆಚ್ಚಿಸುವ ಅಗತ್ಯವೇ ಇರ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ವರ್ಷದೊಳಗೆ ಕೆಂಪೇಗೌಡ ಪ್ರಾಧಿಕಾರದ ಕಟ್ಟಡ

ಜಯಂತಿಗೆ ಆರು ಕಡೆಯಿಂದ ಜ್ಯೋತಿಗಳು ಬರುತ್ತವೆ. ಎಂದಿನಂತೆ ಕಾರ್ಯಕ್ರಮ ನಡೆಯುತ್ತವೆ. ಸಭೆಯಲ್ಲಿ ಸಾಕಷ್ಟು ಸಲಹೆಗಳು ಬಂದಿವೆ. ಮುನಿಯಪ್ಪ ಅವರ ಒತ್ತಡದ ಮೇಲೆ ಕೆಂಪೇಗೌಡ ಜನ್ಮಸ್ಥಳ ಅಭಿವೃದ್ಧಿ ಆಗಬೇಕು ಎಂಬ ಒತ್ತಡ ಇದೆ. ಅದರ ಬಗ್ಗೆ ಸ್ಥಳ ಪರಿಶೀಲನೆ ಮಾಡಿ ತೀರ್ಮಾನ ಮಾಡುತ್ತೇವೆ. ಮುಂದಿನ ವರ್ಷದೊಳಗೆ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಟ್ಟಡಕ್ಕೆ ನಿರ್ಮಾಣ ಮಾಡಬೇಕು. ಸುಮನಹಳ್ಳಿಯಲ್ಲಿ 5 ಎಕರೆ ನೀಡಿದ್ದೇವೆ. ಸಾಧ್ಯವಾದರೆ ಕೆಂಪೇಗೌಡ ಜಯಂತಿ ದಿನ ಭೂಮಿ ಪೂಜೆ ಮಾಡುತ್ತೇವೆ ಎಂದು ತಿಳಿಸಿದರು.

ಪ್ರತೀ ವಿಧಾನಸಭೆ ಕ್ಷೇತ್ರದಲ್ಲಿ ವಿಚಾರ ಸಂಕಿರಣ, ಚರ್ಚಾ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇವೆ. ವಿಧಾನಸಭಾ ಕ್ಷೇತ್ರವಾರು 1 ಲಕ್ಷ ಹಣ ನೀಡಲು ತೀರ್ಮಾನ ಮಾಡುತ್ತೇವೆ. ಇನ್ನು ಕೆಂಪೇಗೌಡರ ಪ್ರಶಸ್ತಿ ನೀಡಲು ಬಿ.ಎಲ್. ಶಂಕರ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಆಗಿದೆ ಎಂದಯ ಹೇಳಿದರು.

ಅಕ್ಕಪಕ್ಕದ ರಾಜ್ಯಗಳಲ್ಲಿ‌ ಒಂದೇ ದರ ಇರಲಿ ಎಂದು ತೆರಿಗೆ ಹೆಚ್ಚಳ!

ಬೆಲೆ ಏರಿಕೆ ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ, ಪ್ರತಿಭಟನೆ ಮಾಡುವುದು ಅವರ ಡ್ಯೂಟಿ, ಅದನ್ನು ಬೇಡ ಎನ್ನುವುದಿಲ್ಲ. ಅವರು (ಬಿಜೆಪಿ) ಎಷ್ಟು ಬಾರಿ ಏರಿಸಿದ್ದರು. ಪಕ್ಕದ ರಾಜ್ಯದಲ್ಲಿ ಎಷ್ಟಿದೆ ನೋಡಲಿ, ನಾನು ಸಹ ಅಂಕಿ ಅಂಶಗಳ ಸಮೇತ ಟ್ವೀಟ್ ಮಾಡುತ್ತೇನೆ. ಗ್ಯಾರೆಂಟಿಗಳಿಗೂ, ಬೆಲೆ ಏರಿಕೆಗೂ ಸಂಬಂಧ ಇಲ್ಲ. ಬಾರ್ಡರ್‌ನಲ್ಲಿ‌ ಪೆಟ್ರೋಲ್, ಡೀಸೆಲ್ ತುಂಬಿಸಿಕೊಂಡು ಹೋಗುತ್ತಿದ್ದಾರೆ. ಅಕ್ಕಪಕ್ಕದ ರಾಜ್ಯಗಳಲ್ಲಿ‌ ಒಂದೇ ದರ ಇರಲಿ ಅಂತ ಈ ರೀತಿ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು.

ಕೇಂದ್ರ ನಮ್ಮ‌ ಹಣ ನಮಗೆ ಕೊಡಲಿ. ಯಾವುದೇ ವಸ್ತು ಆಗಲಿ ಶೇ. 18-20 ಜಿಎಸ್‌ಟಿ ಇದೆ, ಅದಮ್ಮು ಕಡಿಮೆ ಮಾಡಲಿ. 14 ವರ್ಷದಿಂದ ಕುಡಿಯುವ ನೀರಿನ ಬೆಲೆ‌ ಏರಿಕೆ ಆಗಿಲ್ಲ, ಜಲಮಂಡಳಿಗೆ ವಿದ್ಯುತ್ ಬಿಲ್ ಕಟ್ಟೋಕೆ‌ ಆಗುತ್ತಿಲ್ಲ. ಇದರ ಜತೆಗೆ ಈಗ ವಿದ್ಯುತ್ ದರವೂ ಏರಿಕೆ ಆಗಿದೆ. 400 ರೂ. ಇದ್ದ ಸಿಲಿಂಡರ್ ಬೆಲೆ ಈಗ ಎಷ್ಟಾಗಿದೆ? ಅದರ ಬಗ್ಗೆಯೂ ನೀವು ಮಾತನಾಡಬೇಕು. ಕೃಷಿ ಯಂತ್ರೋಪಕರಣಗಳಿಗೂ ಜಿಎಸ್‌ಟಿ ಹಾಕಿದ್ದಾರೆ. ಪೆಟ್ರೋಲ್, ಡೀಸೆಲ್ ದರ ಮಹಾರಾಷ್ಟ್ರ, ಗುಜರಾತ್‌ನಲ್ಲಿ‌ 104 ರೂ. ಇದೆ, ಜನರಿಗೆ ಹೊರೆ ಆಗುತ್ತಿಲ್ಲ, ಅವರಿಗೆ ಅರ್ಥ ಆಗುತ್ತೆ ಎಂದು ತಿಳಿಸಿದರು.

ದೇವನಹಳ್ಳಿಯಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಮೋದಿಯಿಂದ ಉದ್ಘಾಟನೆ ಮಾಡಿಸಿ, ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದಾರೆ. ಅಲ್ಲಿ ಅಭಿವೃದ್ಧಿ ಕಾರ್ಯಕ್ರಮ ಮಾಡಲಿದ್ದೇವೆ. ಈ ಬಗ್ಗೆ ಕೃಷ್ಣ ಬೈರೇಗೌಡ ಜತೆ ‌ಮಾತನಾಡಲಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ | Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

ನೀಟ್ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, ಜೂನ್ 4ರಂದು ಫಲಿತಾಂಶ ಪ್ರಕಟವಾಯಿತು. ಇದರಲ್ಲಿ ನಡೆದಿರುವ ಅಕ್ರಮ ಮುಚ್ಚಿ ಹಾಕೋಕೆ ಪ್ರಯತ್ನ ಮಾಡಿದರು. ಈಗ ಕೇಂದ್ರ ಸಚಿವರೇ ಅಕ್ರಮ ನಡೆದಿದೆ ಅಂತ ಒಪ್ಪಿಕೊಂಡಿದ್ದಾರೆ. ರದ್ದು ಮಾಡಬೇಕು, ಮರು‌ ಪರೀಕ್ಷೆ ನಡೆಸಬೇಕು, ಮಕ್ಕಳಿಗೆ ನ್ಯಾಯ ಒದಗಿಸಿಕೊಡಬೇಕು. ತಮಿಳುನಾಡಿನ ಪ್ರಕಾರವೇ ನಾವೂ ಯೋಚನೆ ಮಾಡಬೇಕು. ಇದರ ಬಗ್ಗೆ ದೊಡ್ಡ ಮಟ್ಟದಲ್ಲಿ‌ ಚಿಂತನೆ ಮಾಡಬೇಕಿದೆ, ಮಾಡುತ್ತೇವೆ ಎಂದರು.

Continue Reading

ಪ್ರಮುಖ ಸುದ್ದಿ

Prajwal Revanna Case: ʼಮತ್ತೆ ಮತ್ತೆ ಅದನ್ನು ತೋರಿಸೋಕೆ ಮುಜುಗರ….ʼ ಜಡ್ಜ್‌ ಮುಂದೆ ಅಲವತ್ತುಕೊಂಡ ಪ್ರಜ್ವಲ್!‌

Prajwal Revanna Case: ಪ್ರಜ್ವಲ್‌ ರೇವಣ್ಣ ಅವರ ಮೇಲೆ ಮೂರು ಪ್ರಕರಣಗಳಿದ್ದು, ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಪೂರ್ಣಗೊಂಡಿದ್ದು, ಪುರುಷತ್ವ ಪರೀಕ್ಷೆ ಮಾಡಲಾಗಿದೆ. ಮೂರನೆ ಬಾರಿಗೆ ಎಸ್‌ಐಟಿ ಪ್ರಜ್ವಲ್‌ ಅವರನ್ನು ಕಸ್ಟಡಿಗೆ ಪಡೆದುಕೊಂಡು ಪರೀಕ್ಷೆಗೆ ಮುಂದಾಗಿದೆ.

VISTARANEWS.COM


on

prajwal revanna case test
Koo

ಬೆಂಗಳೂರು: “ನಾನು ಈಗಾಗಲೇ ಎರಡು ಕೇಸ್‌ಗಳಲ್ಲಿ ಪುರುಷತ್ವ ಪರೀಕ್ಷೆ (Medical Test) ಒಪ್ಪಿ ಮಾಡಿಸಿಕೊಂಡಿದ್ದೇನೆ. ಮತ್ತೆ ಮತ್ತೆ ಅದೇ ಪರೀಕ್ಷೆ ಮಾಡಿಸಿಕೊಳ್ಳಲು ಮುಜುಗರವಾಗುತ್ತದೆ. ನನಗೆ ಮುಜುಗರ ಹುಟ್ಟಿಸಲೆಂದೇ ಇದನ್ನು ಮಾಡುತ್ತಿರುವಂತೆ ಕಾಣುತ್ತಿದೆ” ಎಂದು ಲೈಂಗಿಕ ದೌರ್ಜನ್ಯ (Physical abuse) ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ನ್ಯಾಯಾಧೀಶರ ಮುಂದೆ ಅಲವತ್ತುಕೊಂಡ ಘಟನೆ ನಡೆದಿದೆ.

“ನಾನು ಎರಡು ಕೇಸ್‌ನಲ್ಲಿ ಮೆಡಿಕಲ್ ಟೆಸ್ಟ್ ಒಪ್ಪಿ ಮಾಡಿಸಿಕೊಂಡಿದ್ದೇನೆ. ಮತ್ತೆ ಅದೇ ಟೆಸ್ಟ್ ಮಾಡಿಸಲು ಕೇಳ್ತಾರೆ. ಪದೇ ಪದೆ ಖಾಸಗಿ ಅಂಗ ತೋರಿಸಲು ತುಂಬಾ ಮುಜುಗರ ಆಗುತ್ತಿದೆ. ಈಗಾಗಲೇ ಎರಡು ಕೇಸ್‌ಗಳಲ್ಲಿ ಸೇಮ್ ಪರೀಕ್ಷೆ ಆಗಿದೆ. ಈ ಮುಜುಗರದಿಂದ ಪಾರು ಮಾಡಿ” ಎಂದು ಪ್ರಜ್ವಲ್‌ ನ್ಯಾಯಾಧೀಶರ ಮುಂದೆ ವಿನಂತಿಸಿಕೊಂಡರು. ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ಮಾತ್ರ ಮಾಡಿಸುವಂತೆ ನ್ಯಾಯಾಧೀಶರು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜ್ವಲ್‌ ರೇವಣ್ಣ ಅವರ ಮೇಲೆ ಮೂರು ಪ್ರಕರಣಗಳಿದ್ದು, ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಪೂರ್ಣಗೊಂಡಿದ್ದು, ಪುರುಷತ್ವ ಪರೀಕ್ಷೆ ಮಾಡಲಾಗಿದೆ. ಮೂರನೆ ಬಾರಿಗೆ ಎಸ್‌ಐಟಿ ಪ್ರಜ್ವಲ್‌ ಅವರನ್ನು ಕಸ್ಟಡಿಗೆ ಪಡೆದುಕೊಂಡಿದೆ. ಮತ್ತೆ ಮೆಡಿಕಲ್‌ ಪರೀಕ್ಷೆಗೆ ಮುಂದಾಗಿದ್ದು, ಈ ಸಂದರ್ಭದಲ್ಲಿ ಪ್ರಜ್ವಲ್‌ ಆಕ್ಷೇಪಿಸಿದರು.

ಹಿಂದಿನ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್ ಶಿವಕುಮಾರ್ ಆದೇಶ ನೀಡಿದ್ದಾರೆ. ಈ ನಡುವೆ, ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಆಕ್ಷೇಪಣೆ ಸಲ್ಲಿಸಲು ಎಸ್‌ಪಿಪಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಇದೇ ಸಂದರ್ಭದಲ್ಲಿ, ಎಸ್‌ಐಟಿ (SIT) ಅಧಿಕಾರಿಗಳು ತನ್ನ ಆರೋಗ್ಯ ಸಮಸ್ಯೆಯನ್ನು ಕಡೆಗಣಿಸಿದ್ದಾರೆ ಎಂದು ಪ್ರಜ್ವಲ್‌ ದೂರಿದ್ದು ಕೂಡ ವರದಿಯಾಗಿದೆ. ಪ್ರಜ್ವಲ್ ರೇವಣ್ಣ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಎಸ್‌ಐಟಿ ಕೋರ್ಟ್‌ಗೆ ಹಾಜರು ಪಡಿಸಿದಾಗ, “ಏನಾದ್ರೂ ಆರೋಗ್ಯ ಸಮಸ್ಯೆ ಇದೆಯಾ?ʼʼ ಎಂದು ನ್ಯಾಯಾಧೀಶರು ಪ್ರಶ್ನಿಸಿದರು. “ಹೌದು ಸರ್” ಎಂದು ಪ್ರಜ್ವಲ್ ನುಡಿದರು.

“ಎಸ್ಐಟಿ ಅಧಿಕಾರಿಗಳು ಸರಿಯಾಗಿ ನೋಡ್ಕೋತಿಲ್ಲ” ಎಂದು ಪ್ರಜ್ವಲ್ ಹೇಳಿದ್ದಲ್ಲದೆ, “ಎಂಆರ್‌ಐ ಸ್ಕ್ಯಾನ್ ಮಾಡಿಸಿದ್ದೇನೆ. ಟ್ಯಾಬ್ಲೆಟ್ ತೆಗೆದುಕೊಳ್ತಿದ್ದೇನೆ” ಎಂದು ಹೇಳಿದಾಗ, ʼಆರೋಗ್ಯ ತಪಾಸಣೆ ಯಾಕೆ ಮಾಡಿಸಿಲ್ಲ?ʼ ಎಂದು ಅಧಿಕಾರಿಗಳನ್ನು ಜಡ್ಜ್ ಪ್ರಶ್ನಿಸಿದರು. “ಅವರು ಈಗ ಹೇಳ್ತಾ ಇದ್ದಾರೆ, ನಮಗೆ ಹೇಳಿಲ್ಲ” ಎಂದು ಎಸ್ಐಟಿ ಅಧಿಕಾರಿಗಳು ಉತ್ತರಿಸಿದರು.

ನಂತರ 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದರು. ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದತ್ತ ಅವರನ್ನು ಕರೆದೊಯ್ಯಲಾಗಿದೆ. ನ್ಯಾಯಾಂಗ ಬಂಧನಕ್ಕೆ ಹೋದರೂ ನಾಳೆ ಮತ್ತೆ ಬಾಡಿ ವಾರಂಟ್ ಮೇಲೆ ಅವರನ್ನು ಕಸ್ಟಡಿಗೆ ಪಡೆಯಲು ಎಸ್ಐಟಿ ಮುಂದಾಗಿದೆ. ಸಿಐಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೇಸ್‌ಗೆ ಸಂಬಂಧಿಸಿ ವಶಕ್ಕೆ ಪಡೆಯಲಿದೆ.

ಭವಾನಿ ರೇವಣ್ಣಗೆ ಸಿಗ್ತು ನಿರೀಕ್ಷಣಾ ಜಾಮೀನು

ಕೆಆರ್ ನಗರದಲ್ಲಿ ಲೈಂಗಿಕ ದೌರ್ಜನ್ಯ (Physical Abuse) ಸಂತ್ರಸ್ತೆಯನ್ನು ಕಿಡ್ನಾಪ್ (kidnap case) ಮಾಡಿದ ಪ್ರಕರಣದಲ್ಲಿ ಎಸ್‌ಐಟಿ (SIT) ವಿಚಾರಣೆ ಎದುರಿಸುತ್ತಿರುವ ಭವಾನಿ ರೇವಣ್ಣ (Bhavani Revanna) ಅವರಿಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು (Anticipatory Bail) ದೊರೆತಿದೆ. ಕಳೆದ ವಾರ ಕಿಡ್ನಾಪ್‌ ಕೇಸ್‌ನಲ್ಲಿ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠದಿಂದ ಆದೇಶ ಪ್ರಕಟವಾಗಿದ್ದು, ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಭವಾನಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲಾಗಿತ್ತು. ಇಂದು ನಿರೀಕ್ಷಣಾ ಜಾಮೀನು ಅರ್ಜಿಯ ಅಂತಿಮ ಆದೇಶವನ್ನು ಪೀಠ ಪ್ರಕಟಿಸಿದೆ.

ಇದನ್ನೂ ಓದಿ: Prajwal Revanna Case: ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

Continue Reading

ಕೋಲಾರ

Kolar news : ಬ್ಲಾಸ್ಟಿಂಗ್‌ ವೇಳೆ ಉರುಳಿ ಬಿದ್ದ ಬಂಡೆಕಲ್ಲು, ಟ್ರ್ಯಾಕ್ಟರ್‌-ಹಿಟಾಚಿ ಅಪ್ಪಚ್ಚಿ; ಮೂವರು ಕಾರ್ಮಿಕರು ನಾಪತ್ತೆ

Kolar news : ಬ್ಲಾಸ್ಟ್ ವೇಳೆ ಬೃಹತ್ ಗಾತ್ರದ ಬಂಡೆಗಳು ಉರುಳಿ ಬಿದ್ದು ಟ್ರಾಕ್ಟರ್, ಹಿಟಾಚಿ ಜಖಂಗೊಂಡಿದೆ. ಕೆಲಸ ಮಾಡುತ್ತಿದ್ದ 10ಕ್ಕೂ ಹೆಚ್ಚು ಕಾರ್ಮಿಕರ ಮೂವರು ಕಣ್ಮರೆಯಾಗಿದ್ದಾರೆ.

VISTARANEWS.COM


on

By

Kolar News
Koo

ಕೋಲಾರ: ಬಂಡೆಕಲ್ಲು ಬ್ಲಾಸ್ಟ್ ಮಾಡುವಾಗ ಬೃಹತ್ ಗಾತ್ರದ ಬಂಡೆ ಉರುಳಿ ಬಿದ್ದು ಮೂವರು ಕಾರ್ಮಿಕರು ಕಣ್ಮರೆಯಾಗಿರುವ (Kolar news ) ಶಂಕೆ ವ್ಯಕ್ತವಾಗಿದೆ. ಕೋಲಾರದ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಹಳೇಪಾಳ್ಯ ಗ್ರಾಮದ ಬಳಿ ಘಟನೆ ನಡೆದಿದೆ.

ಬ್ಲಾಸ್ಟ್ ವೇಳೆ ಬೃಹತ್ ಗಾತ್ರದ ಬಂಡೆಗಳು ಉರುಳಿ ಬಿದ್ದ ಪರಿಣಾಮ ಟ್ರಾಕ್ಟರ್, ಹಿಟಾಚಿ ಜಖಂಗೊಂಡಿದೆ. ಅವಘಡ ವೇಳೆ ಮೂವರು ಕಾರ್ಮಿಕರು ಕಣ್ಮರೆಯಾಗಿರುವ ಶಂಕೆ ವ್ಯಕ್ತವಾಗಿದೆ. ಬಂಡೆ ಕಲ್ಲಿನಡಿ ಏನಾದರೂ ಸಿಲುಕಿದ್ದರಾ ಎಂಬ ಆತಂಕ ಹೆಚ್ಚಾಗಿದೆ. ಸುಮಾರು 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

kolar news

ಮಂಜುನಾಥ್ ಎಂಬುವರಿಗೆ ಸೇರಿದ ಸ್ಥಳದಲ್ಲಿ ಗಣಿಗಾರಿಕೆ ನಡೆಯುತ್ತಿತ್ತು. ಸ್ಥಳಕ್ಕೆ ಟೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದಿಂದೀಚೆಗೆ ಇದು ಎರಡನೇ ಅವಘಡ ಆಗಿದೆ. ಘಟನೆ ನಡೆದು ಗಂಟೆಗಳೇ ಕಳೆದರೂ ಗಣಿ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ಹೀಗಾಗಿ ಗಣಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಕಣ್ಮರೆಯಾಗಿರುವ ಕಾರ್ಮಿಕರಿಗಾಗಿ ಹುಡುಕಾಟ ನಡೆದಿದೆ.

ಇದನ್ನೂ ಓದಿ: Self Harming: ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ; ರೈಲಿಗೆ ತಲೆಕೊಟ್ಟ ಫ್ಲಿಪ್‌ಕಾರ್ಟ್‌ ಉದ್ಯೋಗಿ

ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ; ಶಿರಸಿಯಲ್ಲಿ ನಿಷೇಧಿತ ಪಿಎಫ್‌ಐ ಸದಸ್ಯನ ಬಂಧನ

ಕಾರವಾರ: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಯುವಕನೊಬ್ಬನನ್ನು ಎನ್‌ಐ‌ಎ ತಂಡ ಬಂಧಿಸಿದೆ. ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದಲ್ಲಿ ಎನ್‌ಐಎ ತಂಡ ದಾಳಿ (NIA Raid) ನಡೆಸಿ ಯುವಕನನ್ನು ಬಂಧಿಸಿದೆ.

ಅಬ್ದುಲ್ ಶಕೂರ್(32) ಬಂಧಿತ ಯುವಕ. ದುಬೈನಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಕೆಲ ದಿನಗಳ ಹಿಂದಷ್ಟೇ ಬಕ್ರೀದ್ ಆಚರಣೆಗಾಗಿ ದಾಸನಕೊಪ್ಪಕ್ಕೆ ಬಂದಿದ್ದ. ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಬನವಾಸಿ ಪೊಲೀಸರ ಸಹಕಾರದಿಂದ ಯುವಕನನ್ನು ಎನ್‌ಎಐ ಬಂಧಿಸಿದೆ.

ಬಂಧಿತ ಯುವಕ ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯ ಆಗಿದ್ದು, ಈತ ದುಬೈನಲ್ಲಿ ಕೆಲಸ ಮಾಡುತ್ತಿದ್ದ. ರಾಮೇಶ್ವರಂ ಕೆಫೆ ಬ್ಲಾಸ್ಟ್, ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ, ಶಿವಮೊಗ್ಗದಲ್ಲಿ ಮಸೀದಿ ಹಾಗೂ ಇತರೆ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪ‌ ಈತನ ಮೇಲಿದೆ.

ಆನ್‌ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಪಾಸ್‌ಪೋರ್ಟ್‌ ನಕಲಿ ದಾಖಲೆ ನೀಡಿದ ಆರೋಪದಡಿ ಆರೋಪಿಯನ್ನು ಬಂಧಿಸಿದ್ದು, ಸದ್ಯ ಆರೋಪಿಗೆ ನೋಟೀಸ್ ನೀಡಿ ಗುಪ್ತ ಸ್ಥಳದಲ್ಲಿ NIA ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
International Yoga Day 2024
ಫ್ಯಾಷನ್2 mins ago

International Yoga Day 2024: ಯುವತಿಯರ ಯೋಗಾಭ್ಯಾಸಕ್ಕೆ ಸಾಥ್‌ ನೀಡುವ 3 ಶೈಲಿಯ ಫ್ಯಾಷನ್‌ವೇರ್ಸ್

wild animals Attack
ಕೊಡಗು6 mins ago

Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

Viral Video
ಕ್ರಿಕೆಟ್21 mins ago

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Kempegowda Jayanti
ಕರ್ನಾಟಕ27 mins ago

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Train Accident
ದೇಶ27 mins ago

Train Accident: ಸಿಬ್ಬಂದಿ ನಿರ್ಲಕ್ಷ್ಯ, ಸಿಗ್ನಲ್‌ ದೋಷ; ಬಂಗಾಳ ರೈಲು ಅಪಘಾತಕ್ಕೇನು ಕಾರಣ?

Mumbai News
ದೇಶ57 mins ago

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

prajwal revanna case test
ಪ್ರಮುಖ ಸುದ್ದಿ60 mins ago

Prajwal Revanna Case: ʼಮತ್ತೆ ಮತ್ತೆ ಅದನ್ನು ತೋರಿಸೋಕೆ ಮುಜುಗರ….ʼ ಜಡ್ಜ್‌ ಮುಂದೆ ಅಲವತ್ತುಕೊಂಡ ಪ್ರಜ್ವಲ್!‌

Gemini Mobile App
ತಂತ್ರಜ್ಞಾನ1 hour ago

Gemini Mobile App: ಕನ್ನಡ ಸೇರಿದಂತೆ 9 ಭಾರತೀಯ ಭಾಷೆಗಳಲ್ಲಿ ಗೂಗಲ್ ಜೆಮಿನಿ ಆ್ಯಪ್; ಏನಿದರ ಉಪಯೋಗ?

SA vs USA
ಕ್ರೀಡೆ1 hour ago

SA vs USA: ನಾಳೆ ಮೊದಲ ಸೂಪರ್​-8 ಪಂದ್ಯ; ಅಮೆರಿಕ ಸವಾಲಿಗೆ ಹರಿಣ ಪಡೆ ಸಿದ್ಧ

Kolar News
ಕೋಲಾರ1 hour ago

Kolar news : ಬ್ಲಾಸ್ಟಿಂಗ್‌ ವೇಳೆ ಉರುಳಿ ಬಿದ್ದ ಬಂಡೆಕಲ್ಲು, ಟ್ರ್ಯಾಕ್ಟರ್‌-ಹಿಟಾಚಿ ಅಪ್ಪಚ್ಚಿ; ಮೂವರು ಕಾರ್ಮಿಕರು ನಾಪತ್ತೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌