ಬೆಂಗಳೂರು: ಕರ್ನಾಟಕದ ನೂತನ ಸಿಎಂ ಆಗಿ ಆಯ್ಕೆಯಾದ ತಕ್ಷಣ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಂಚಾರಕ್ಕೆ ಜೀರೊ ಟ್ರಾಫಿಕ್ ಬೇಡ ಎಂದು ಹೇಳಿದ್ದರು. ಈ ಮೂಲಕ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಆದರೆ, ಶನಿವಾರ ಸಂಜೆ ಏಕಾಏಕಿ ಮಾತು ಮರೆತ ಸಿದ್ದರಾಮಯ್ಯ ಅವರು ಸದ್ದಿಲ್ಲದೆ ಜೀರೋ ಟ್ರಾಫಿಕ್ ಬಳಸಿಕೊಂಡು ಬೆಂಗಳೂರಿನ ಸೌತ್ ಎಂಡ್ ಸರ್ಕಲ್ನಿಂದ ಲಾಲ್ಬಾಗ್ ವೆಸ್ಟ್ಗೇಟ್ ತನಕ ಪ್ರಯಾಣ ಮಾಡಿರುವುದು ವರದಿಯಾಗಿದೆ.
ಸಿದ್ದರಾಮಯ್ಯ ಅವರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿರುವ ಮಾಹಿತಿಯನ್ನು ನಗರ ಪೊಲೀಸರು ಖಚಿತಪಡಿಸಿದ್ದಾರೆ. ಆದರೆ ತುರ್ತು ಅಗತ್ಯದ ಕಾರಣಕ್ಕೆ ಅವರಿಗೆ ಈ ಸೌಕರ್ಯ ಕಲ್ಪಿಸುವುದು ಅನಿವಾರ್ಯವಾಯಿತು. ಉಳಿದಂತೆ ಅವರ ಸೂಚನೆಯಂತೆ ಜೀರೋ ಟ್ರಾಫಿಕ್ ಸೌಲಭ್ಯ ಕಲ್ಪಿಸುವುದಿಲ್ಲ ಎಂಬುದಾಗಿ ಹೇಳಿದ್ದಾರೆ.
I have asked Bengaluru City Police Commissioner to take back the 'Zero Traffic' protocol for my vehicular movement.
— Siddaramaiah (@siddaramaiah) May 21, 2023
I have taken the decision after seeing the problems faced by the people travelling along the stretch where there are restrictions due to 'zero traffic.'
ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ಟ್ವೀಟ್ ಮಾಡುವ ಮೂಲಕ ತಮಗೆ ಜೀರೋ ಟ್ರಾಫಿಕ್ ಬೇಡ ಎಂದು ಹೇಳಿದ್ದಾರೆ. ತಾವು ಜೀರೋ ಟ್ರಾಫಿಕ್ನಲ್ಲಿ ಸಂಚರಿಸಿದರೆ ಉಳಿದ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತದೆ ಎಂಬ ಕಾರಣಕ್ಕೆ ಸೌಲಭ್ಯವನ್ನು ತಿರಸ್ಕರಿಸಿದ್ದೇನೆ ಎಂಬುದಾಗಿ ಅವರು ಟ್ವೀಟ್ ಮಾಡಿದ್ದಾರೆ. ಅದಾಗಿ ಕೆಲವೇ ದಿನಗಳಲ್ಲಿ ಅವರು ವ್ಯವಸ್ಥೆಯನ್ನು ಬಳಸಿಕೊಂಡಿದ್ದಾರೆ.