Site icon Vistara News

Muslim Quota: ನ್ಯಾಯಾಲಯದ ಪಾವಿತ್ರ್ಯತೆ ಕಾಪಾಡಬೇಕು; ಅಮಿತ್ ಶಾಗೆ ಸಿದ್ದರಾಮಯ್ಯ ಪಾಠ

Check out the siddaramaiah political profile right here in kannada

ಬೆಂಗಳೂರು, ಕರ್ನಾಟಕ: ಮುಸ್ಲಿಮ್ ಮೀಸಲಾತಿಯ (Muslim Quota) ರದ್ದು ಪ್ರಕರಣದ ವಿಚಾರಣೆಯಲ್ಲಿ ನ್ಯಾಯಾಲಯದಲ್ಲಿದೆ. ಹೀಗಿರುವಾಗ ಚುನಾವಣಾ ಪ್ರಚಾರ ಸಭೆಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ರದ್ದು ಸಮರ್ಥಿಸಿಕೊಂಡಿದ್ದರ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು, ಗೃಹ ಸಚಿವರ ವಿರುದ್ಧ ಕಿಡಿ ಕಾರಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಮುಸ್ಲಿಂ ಮೀಸಲಾತಿ ರದ್ದತಿ ಆದೇಶದ ಬಗ್ಗೆ ನೀಡಿರುವ ಬೇಜವಾಬ್ದಾರಿ ಹೇಳಿಕೆಗಾಗಿ ಸುಪ್ರೀಂ ಕೋರ್ಟ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಪರಾಕಿ ನೀಡಿದೆ. ಪ್ರಕರಣ ವಿಚಾರಣೆಯಲ್ಲಿರುವಾಗ ನ್ಯಾಯಾಲಯದ ಪಾವಿತ್ರ್ಯತೆಯನ್ನು ಪಾಲಿಸಬೇಕಾಗುತ್ತದೆ. ಈ ರೀತಿಯ ರಾಜಕೀಯ ಹೇಳಿಕೆ ಸಲ್ಲದು ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹೇಳಿರುವುದು ಸರಿಯಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಸಾಲಿಸಿಟರ್ ಜನರಲ್ ಇಲ್ಲವೇ ವಕೀಲರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿ, ಮೂರನೇ ವ್ಯಕ್ತಿ ಇದಕ್ಕೆ ಯಾಕೆ ಪ್ರತಿಕ್ರಿಯಿಸಬೇಕು ಎಂದು ನ್ಯಾಯಮೂರ್ತಿ ನಾಗರತ್ನ ಕೇಳಿದ್ದಾರೆ.

ಇದನ್ನೂ ಓದಿ: Muslim Quota: ಗೃಹ ಸಚಿವ ಅಮಿತ್ ಶಾ ವಿರುದ್ಧ ಸುಪ್ರೀಂ ಕೋರ್ಟ್ ಗರಂ ಆಗಿದ್ದೇಕೆ?

ಕೇಂದ್ರ ಗೃಹ ಸಚಿವರು ಇನ್ನು‌ ಮುಂದೆಯಾದರೂ ಎಚ್ಚರಿಕೆಯಿಂದ ಹೇಳಿಕೆ ನೀಡುತ್ತಾರೆ ಎಂದು ಭಾವಿಸಿದ್ದೇನೆ‌. ರಾಜ್ಯ ಬಿಜೆಪಿ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ಆ ಪಾಲನ್ನು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೊಟ್ಟಿರುವುದು ಪರಸ್ಪರ ವೈರತ್ವ-ದ್ವೇಷ ಬೆಳೆಸುವ ದುರುದ್ದೇಶದಿಂದ ಹೊರತು ಇದಕ್ಕೆ ಯಾವ ಸದುದ್ದೇಶವೂ ಇಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Exit mobile version