ಬೆಂಗಳೂರು: ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ನೀಡಲು 132 ಕೋಟಿ ರೂ. ಬಿಡುಗಡೆ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದರೂ ವಿವಾದವನ್ನು ಕೈಬಿಡಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿದ್ಧವಿಲ್ಲ. ಈ ಶಿಕ್ಷಣ ವಿರೋಧಿಯನ್ನು ಮೊದಲು ಸಂಪುಟದಿಂದ ಕಿತ್ತು ಹಾಕಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಶಾಲೆಗೆ ಮಕ್ಕಳು ಪಾಠ ಕಲಿಯಲು ಬರುತ್ತಾರೆಯೋ ಶೂ, ಸಾಕ್ಸ್‌ಗಾಗಿ ಬರುತ್ತಾರೆಯೋ ಎಂಬ ಶಿಕ್ಷಣ ಸಚಿವ ನಾಗೇಶ್ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ,
ಬಡಮಕ್ಕಳಿಗೆ ಅನುಕೂಲ ಆಗಲಿ ಎಂದು ಶೂ, ಸಾಕ್ಸ್ ನೀಡುತ್ತಿದ್ದೆವು. ಸಮಾನಮನೋಭಾವ ಇರಲಿ ಎಂದು ಇದನ್ನು ನೀಡಲಾಗುತ್ತಿತ್ತು. ಇವರು ಯೋಜನೆಯನ್ನು ನಿಲ್ಲಿಸಲು ಹೊರಟರು. ನಾವು ಒತ್ತಾಯ ಮಾಡಿದ ಮೇಲೆ ಈಗ ಮತ್ತೆ ಕೊಡುತ್ತೇವೆ ಎನ್ನುತ್ತಿದ್ದಾರೆ. ಆದರೆ ಇನ್ನೂ ಕೊಟ್ಟಿಲ್ಲ. ಕೂಡಲೆ ಮಕ್ಕಳಿಗೆ ಶೂ, ಸಾಕ್ಸ್ ನೀಡಬೇಕು ಎಂದರು.
ಟ್ವಿಟರ್‌ನಲ್ಲಿ ವಾಗ್ದಾಳಿ ಮುಂದುವರಿಸಿದ ಸಿದ್ದರಾಮಯ್ಯ, ಮುಖ್ಯಮಂತ್ರಿಯವರ ನಿದ್ದೆ ಬಿಡಿಸಬೇಕಾದರೆ ನಾವು ಎಚ್ಚರಿಸಬೇಕಾಯಿತು. ಬಡ ಶಾಲಾ ಮಕ್ಕಳಿಂದ ಶೂ-ಸಾಕ್ಸ್‌ಗಳನ್ನೂ ಕಿತ್ತುಕೊಳ್ಳಲು ಹೊರಟಿದ್ದ ಮನುಷ್ಯತ್ವವೇ ಇಲ್ಲದ ಅವಿವೇಕಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಡುತ್ತಿರುವ ಎಡವಟ್ಟುಗಳು ಒಂದೋ, ಎರಡೋ? ಮೊದಲು ಈ ಶಿಕ್ಷಣ ವಿರೋಧಿಯನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ | ವಿರೋಧಕ್ಕೆ ಎಚ್ಚೆತ್ತ ಸರ್ಕಾರ: ಶೂ, ಸಾಕ್ಸ್‌ಗೆ ₹132 ಕೋಟಿ ಅನುಮೋದನೆ ನೀಡಿದ ಸಿಎಂ