Siddaramaiah in Kolar | ಸಿದ್ದು ಸ್ವಾಗತಕ್ಕೆ ಭರ್ಜರಿ ಸಿದ್ಧತೆ, ಮುನಿಯಪ್ಪ ಟೀಮ್‌ ಸ್ವಾಗತಕ್ಕೆ ಮಾತ್ರ ಸೀಮಿತ? - Vistara News

ಕರ್ನಾಟಕ

Siddaramaiah in Kolar | ಸಿದ್ದು ಸ್ವಾಗತಕ್ಕೆ ಭರ್ಜರಿ ಸಿದ್ಧತೆ, ಮುನಿಯಪ್ಪ ಟೀಮ್‌ ಸ್ವಾಗತಕ್ಕೆ ಮಾತ್ರ ಸೀಮಿತ?

ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಹೊರಟಿದ್ದಾರೆ. ಆದರೆ, ಅವರ ಜತೆಗೆ ನಿಜಕ್ಕೂ ಮುನಿಯಪ್ಪ ಇರ್ತಾರಾ ಎನ್ನುವುದೇ ಈಗ ಇರುವ ಪ್ರಶ್ನೆ.

VISTARANEWS.COM


on

apple hara
ಸಿದ್ದರಾಮಯ್ಯ ಸ್ವಾಗತಕ್ಕೆ ಸಿದ್ಧಪಡಿಸಿರುವ ಸೇಬಿನ ಹಾರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಕಾಂಗ್ರೆಸ್‌ನ ಮಹಾನಾಯಕ ಸಿದ್ದರಾಮಯ್ಯ ಅವರು ತಾವು ಸ್ಪರ್ಧಿಸುವ ಕ್ಷೇತ್ರವನ್ನು ಫೈನಲ್‌ ಮಾಡುವ ದೃಷ್ಟಿಯಿಂದ ಭಾನುವಾರ ಕೋಲಾರಕ್ಕೆ ಆಗಮಿಸುತ್ತಿದ್ದಾರೆ. ಅವರ ಸ್ವಾಗತಕ್ಕೆ ನಾಯಕರು ಮತ್ತು ಕಾರ್ಯಕರ್ತರು ಭರ್ಜರಿಯಾಗಿ ಸಿದ್ಧತೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ೭೫ರ ಕೋಲಾರ ಗಡಿ ರಾಮಸಂದ್ರ ಗೇಟ್ ಬಳಿ ಬೆಳಗ್ಗೆ ಹತ್ತು ಗಂಟೆಗೆ ಸಿದ್ಧರಾಮಯ್ಯ ಅವರಿಗೆ ಅದ್ದೂರಿ ಸ್ವಾಗತಕ್ಕೆ ಎಲ್ಲರೂ ಸಜ್ಜುಗೊಂಡಿದೆ. ಇಲ್ಲಿ ಅಭಿಮಾನಿಗಳೇ ಮುಂದೆ ನಿಂತು ಸ್ವಾಗತಿಸಲು ಅಣಿಯಾಗಿದ್ದಾರೆ. ಕೋಲಾರಮ್ಮನ ಪೂಜೆಯೊಂದಿಗೆ ಸಿದ್ದು ಪ್ರವಾಸ ಆರಂಭವಾಗಲಿದ್ದು, ಕೋಲಾರ ನಗರದ ಮೆಥೋಡಿಸ್ಟ್ ಚರ್ಚ್ ಬಳಿ ಬೃಹತ್ ಗಾತ್ರದ ಸೇಬಿನ ಹಾರ ಹಾಕಲಾಗುತ್ತದೆ. ೩೦೦ ಕೆಜಿ ಸೇಬಿನ ಹಾರವನ್ನು ಅಣಿ ಮಾಡಲಾಗಿದೆ.

ಯಾರೆಲ್ಲ ಇರುತ್ತಾರೆ ಜತೆಯಲ್ಲಿ?
ಮಾಜಿ‌ಸ್ಪೀಕರ್ ಕೆ ಆರ್ ರಮೇಶ್ ಕುಮಾರ್, ಶಾಸಕರಾದ ಕೆ.ಶ್ರೀನಿವಾಸಗೌಡ, ನಂಜೇಗೌಡ, ಎಸ್ಎನ್ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಸೇರಿದಂತೆ ಜಿಲ್ಲೆಯ ಮಾಜಿ ಶಾಸಕರು ಈಗಾಗಲೇ ಮದುವೆ ಮನೆ ಸಿದ್ಧತೆಯ ಹಾಗೆ ಓಡಾಡುತ್ತಿದ್ದಾರೆ. ಆದರೆ, ಅತ್ಯಂತ ಪ್ರಮುಖವಾಗಿರುವ ಮಾಜಿ ಸಂಸದ ಕೆ.ಎಚ್‌. ಮುನಿಯಪ್ಪ ಅವರ ಟೀಮ್‌ ಮಾತ್ರ ಹೆಚ್ಚು ಹೊರಗೆ ಕಾಣಿಸಿಕೊಳ್ಳುತ್ತಿಲ್ಲ.

ಸಿದ್ದರಾಮಯ್ಯ ಪ್ರವಾಸದ ವೇಳೆ ಕೆ.ಎಚ್. ಮುನಿಯಪ್ಪ, ಶಾಸಕಿ ರೂಪಕಲಾ, ಸೇರಿದಂತೆ ಕೆ.ಹೆಚ್. ಬಣದ ಮುಖಂಡರು ಗೈರಾಗುವ ಸಾಧ್ಯತೆ ಹೆಚ್ಚು ಕಾಣಿಸುತ್ತಿದೆ. ಕೆ.ಎಚ್ ಮುನಿಯಪ್ಪ‌ ಬಣದ ಕೆಲವು ಮುಖಂಡರು ಸಿದ್ದರಾಮಯ್ಯ ಅವರಿಗೆ ಮಾಲಾರ್ಪಣೆ ಮಾಡಿ‌ ಹಿಂತಿರುಗುವ ಸಾಧ್ಯತೆ ದಟ್ಟವಾಗಿದೆ. ಅವರು ಇಷ್ಟಕ್ಕೇ ಸೀಮಿತವಾದರೆ ಸಿದ್ದರಾಮಯ್ಯ ಮುಂದೇನು ಮಾಡಲಿದ್ದಾರೆ ಎಂಬ ಪ್ರಶ್ನೆ ಮುಖ್ಯವಾಗಿದೆ.

ಕೆ.ಎಚ್‌. ಮುನಿಯಪ್ಪ ಅವರು ಕಾಂಗ್ರೆಸ್‌ ಪಕ್ಷದಿಂದಲೇ ಹೊರಹೋಗುವ ಪ್ರಯತ್ನದಲ್ಲಿದ್ದಾರೆ. ಈಗಾಗಲೇ ಬಿಜೆಪಿ ಜತೆಗೆ ಮಾತುಕತೆ ನಡೆಸಿಯೂ ಇದ್ದಾರೆ. ಇಂಥ ಸ್ಥಿತಿಯಲ್ಲೂ ಜತೆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರಿಗೆ ಮಾತು ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಎಷ್ಟರ ಮಟ್ಟಿಗೆ ಇದು ಸತ್ಯವಾಗಲಿದೆ ಎನ್ನುವುದು ಮುಂದೆ ತಿಳಿಯಲಿದೆ.

ಜೆಡಿಎಸ್‌ ಫ್ಲೆಕ್ಸ್‌ ಮೇಲೆ ಸಿದ್ದರಾಮಯ್ಯ ಬ್ಯಾನರ್‌!
ಕೋಲಾರ ಗಡಿ ಭಾಗವಾದ ರಾಮಸಂದ್ರ ಎಂಬಲ್ಲಿ ಸಿದ್ದರಾಮಯ್ಯ ಅವರ ಅದ್ಧೂರಿ ಸ್ವಾಗತಕ್ಕೆ ಕಾರ್ಯಕರ್ತರು ಫ್ಲೆಕ್ಸ್‌, ಬ್ಯಾನರ್ ಅಳವಡಿಕೆ ಮಾಡಿದ್ದಾರೆ. ಆದರೆ, ಅವರು ಫ್ಲೆಕ್ಸ್‌ ಹಾಕಿದ್ದು ಈ ಹಿಂದೆ ಜೆಡಿಎಸ್‌ ಪಂಚರತ್ನ ಕಾರ್ಯಕ್ರಮಕ್ಕೆಂದು ಹಾಕಿದ ಫ್ಲೆಕ್ಸ್‌ಗಳ ಮೇಲೆ!

ಮಳೆ ಕಾರಣಕ್ಕೆ ಪಂಚರತ್ನ ಕಾರ್ಯಕ್ರಮ ಮುಂದೂಡಿಕೆ ಆಗಿದೆ. ಆದರೆ, ಆದ್ದರಿಂದ ಜೆಡಿಎಸ್ ಬ್ಯಾನರ್ ಗಳನ್ನು ತೆರವು ಮಾಡಲಾಗಿಲ್ಲ. ಹೀಗಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಸ್ವಾಗತ ಕೋರಿ ಹಾಕಿರುವ ಬ್ಯಾನರ್‌ಗಳ ಮೇಲೆಯೇ ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಿದ ಬ್ಯಾನರ್‌ ಹಾಕಲಾಗಿದೆ.

ಇದನ್ನೂ ಓದಿ | Siddaramaiah in Kolar | ಸಿದ್ದರಾಮಯ್ಯ ಅವರ ಕೋಲಾರ ಟೆಸ್ಟ್‌ಗೆ ಗ್ರೌಂಡ್‌ ರೆಡಿ, ಇಂದು ಎಲ್ಲೆಲ್ಲಿ ರೌಂಡ್ಸ್‌?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

Karnataka Rain: ಮಳೆಯು ನಾನಾ ಅವಾಂತರವನ್ನೇ ಸೃಷ್ಟಿಸಿರುವುದು ಮಾತ್ರವಲ್ಲದೇ ಸಾವು-ನೋವಿಗೂ ಕಾರಣವಾಗಿದೆ. ಚಲಿಸುತ್ತಿದ್ದ ಬೈಕ್‌ ಮೇಲೆ ಮರ ಬಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದಲ್ಲಿ ಕಾರೊಂದು ನೀರಿನಲ್ಲಿ ಸಿಲುಕಿ ಚಾಲಕ ಪರದಾಡುವಂತಾಯಿತು.

VISTARANEWS.COM


on

By

karnataka Rain
Koo

ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಗಾಳಿ ಜತೆಗೆ ವ್ಯಾಪಕ (Karnataka Rain) ಮಳೆಯಾಗುತ್ತಿದೆ. ಶಿವಮೊಗ್ಗದಲ್ಲಿ ಭಾರಿ ಮಳೆಗೆ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೀನ್ಮನೆಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ರಾಮಪ್ಪ (26) ಮೃತ ದುರ್ದೈವಿ.

ಚಿಕ್ಕಮಗಳೂರಲ್ಲಿ ಮೊಬೈಲ್ ಚಾರ್ಜ್ ಮಾಡಲು ಜನರೇಟರ್ ಮೊರೆ!

ಗಾಳಿ ಮಳೆ ಅಬ್ಬರಕ್ಕೆ ಚಿಕ್ಕಮಗಳೂರಿನ ಬಹುತೇಕ ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಒಂದು ವಾರದಿಂದ ವಿದ್ಯುತ್ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಕಳಸ,ಮೂಡಿಗೆರೆ, ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು ತಾಲೂಕು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿದೆ. ಮೊಬೈಲ್ ಚಾರ್ಜ್ ಮಾಡಲು ಹಾಗೂ ಮನೆ ಬಳಕೆಗೆ ಜನರೇಟರ್ ಮೊರೆ ಹೋಗಿದ್ದಾರೆ. ಡೀಸೆಲ್ ಜನರೇಟರ್ ಬಳಸಿ ಮೊಬೈಲ್ ಚಾರ್ಜಿಂಗ್ ಮಾಡಿಕೊಳ್ಳುತ್ತಿದ್ದಾರೆ.

ಕೋಡಿ ಬಿದ್ದು ಅಚ್ಚರಿ ಮೂಡಿಸಿದ ಅಯ್ಯನಕೆರೆ

ನಿನ್ನೆ ಶುಕ್ರವಾರ ಮದಗದ ಕೆರೆ ಕೋಡಿ ಬಿದ್ದ ಬೆನ್ನಲ್ಲೆ ಇಂದು ಶನಿವಾರ ಅಯ್ಯನಕೆರೆ ಕೋಡಿ ಬಿದ್ದಿದೆ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದ ಕೆರೆಗಳು ಕೋಡಿ ಬಿದ್ದು ಜಲಪಾತದಂತೆ ಧುಮ್ಮಿಕ್ಕಿ ಹರಿಯುತ್ತಿದೆ. ಇನ್ನೂ ಶನಿವಾರವೇ ಅಯ್ಯನಕೆರೆ ಕೋಡಿ ಬೀಳುವುದು ಪ್ರತೀತಿ. ಮತ್ತೆ ಶನಿವಾರವೇ ಕೋಡಿಬಿದ್ದು ಅಚ್ಚರಿ ಮೂಡಿಸಿದೆ. ಹತ್ತಾರು ಹಳ್ಳಿ, ಸಾವಿರಾರು ಎಕರೆ ಜಮೀನು, ಜನ-ಜಾನುವರಗಳಿಗೆ ಆಶ್ರಯವಾಗಿದೆ.

ಇನ್ನೂ ಕಡೂರು ತಾಲೂಕಿನ ಐತಿಹಾಸಿಕ ಮದಗದ ಕೆರೆ ಕೋಡಿ ಬಿದ್ದು ಭಾರೀ ಪ್ರಮಾಣದ ನೀರು ಹರಿದುಹೋಗಿದೆ. ಕೋಡಿ ಬಿದ್ದ ಕೆರೆ ನೀರಿನಿಂದ ಹೊಲಗದ್ದೆ-ತೋಟಗಳು ಜಲಾವೃತಗೊಂಡಿದೆ. ಇತ್ತ ಸೇತುವೆಗಳು ಜಲಾವೃತಗೊಂಡು ಹಳ್ಳಿಗಳ‌ ಸಂಪರ್ಕ ಕಡಿತಗೊಂಡಿದೆ. ನೀರಿನ ವೇಗಕ್ಕೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

ಇತ್ತ ಭದ್ರಾ ನದಿ ಅಬ್ಬರಕ್ಕೆ ರಾಜ್ಯ ಹೆದ್ದಾರಿ ಜಲಾವೃತಗೊಂಡಿದೆ. ಬಾಳೆಹೊನ್ನೂರು-ಕೊಟ್ಟಿಗೆಹಾರ- ಕಳಸ ಸಂಪರ್ಕಿಸುವ ಹೆದ್ದಾರಿ ರಸ್ತೆಯಲ್ಲಿ ನೀರು ಏರಿಕೆ ಆಗುತ್ತಿದೆ. ಬಾಳೆಹೊನ್ನೂರು ಕಳಸ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ:Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

ತೆಪ್ಪದಲ್ಲಿ ತೆರಳಿದ ಲೈನ್‌ಮ್ಯಾನ್‌

ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ವಿದ್ಯುತ್ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ಲೈನ್ ಸರಿಪಡಿಸಲು ಮೆಸ್ಕಾಂ ಸಿಬ್ಬಂದಿ ಪ್ರಾಣ ಪಣಕಿಟ್ಟು ಕೆಲಸ ಮಾಡುತ್ತಿದ್ದಾರೆ. ಉಕ್ಕಿ ಹರಿಯುವ ನೀರಿನಲ್ಲಿ ತೆಪ್ಪದಲ್ಲಿ ತೆರಳಿ ವಿದ್ಯುತ್ ಲೈನ್ ಸರಿಪಡಿಸಿದ್ದಾರೆ. ಬಾಳೆಹೊನ್ನೂರು-ಗಡಿಗೇಶ್ವರದ ಬಳಿ ವಿದ್ಯುತ್ ತಂತಿಗಳು ಹೊಳೆಯಲ್ಲಿ ಮುಳುಗಿ ಹೋಗಿದೆ. ಜೆ.ಇ ಗಣೇಶ್, ಕಾಂತರಾಜು, ಶಿವಕುಮಾರ್ ಸರಿಪಡಿಸುತ್ತಿದ್ದಾರೆ. ಮಲೆನಾಡಲ್ಲಿ ವಿದ್ಯುತ್ ಸಂಪರ್ಕ ಸರಿಪಡಿಸುವುದೇ ದೊಡ್ಡ ಸಾಹಸವಾಗಿದೆ. ಜಿಲ್ಲೆಯಾದ್ಯಂತ 2,400ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.

ಮರ ಬಿದ್ದು ಮನೆ ಜಖಂ

ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿಗೆ ಸುಂಟಿಕೊಪ್ಪದ ಪನ್ಯ ಬಳಿ ಸಿಲ್ವರ್‌ ಮರ ಧರೆಗುರುಳಿತ್ತು. ಇದರಿಂದಾಗಿ ಸುಂಟಿಕೊಪ್ಪ ಮಾದಾಪುರ ಸೋಮವಾರಪೇಟೆ ರಸ್ತೆ ಬಂದ್ ಆಗಿತ್ತು. ಮಡಿಕೇರಿ ಹೊರವಲಯದ ಕರ್ಣಗೇರಿಯಲ್ಲಿ ಮರ ಬಿದ್ದು ಮನೆ ಸಂಪೂರ್ಣ ಹಾನಿಯಾಗಿತ್ತು. ಗ್ರಾಮದ ಹೇಮಾವತಿ ಎಂಬುವರಿಗೆ ಸೇರಿದ ವಾಸದ ಮನೆ ಜಖಂಗೊಂಡಿತ್ತು.

ನೀರಿನಲ್ಲಿ ಸಿಲುಕಿದ ಕಾರು

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ತಡರಾತ್ರಿ ನೀರಿನಲ್ಲಿ ಕಾರುವೊಂದು ಸಿಲುಕಿತ್ತು. ನೀರಿನಲ್ಲಿ ಸಿಲುಕಿ ಕಾರು ಚಾಲಕ ಪರದಾಡಿದರು. ಬೇಲೂರು ತಾಲೂಕಿನ ಬಿರಡಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಕೂಡಲೇ ಸ್ಥಳೀಯರು ಸ್ಥಳಕ್ಕೆ ಬಂದು ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಮತ್ತೊಂದು ವಾಹನ ತಂದು ನೀರಿನಲ್ಲಿ ಸಿಲುಕಿದ್ದ ಕಾರನ್ನು ಹೊರಗೆ ಎಳೆದು ತಂದರು. ಬಿರಡಹಳ್ಳಿ ಬಳಿಯ ಸೇತುವೆ ಮುಳುಗಡೆಯಾಗಿ ಸುಮಾರು ಹದಿನೈದು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಸಕಲೇಶಪುರದ ತಾಲೂಕಿನ ಹಾನುಬಾಳು ಹೋಬಳಿಯಲ್ಲಿ ರಸ್ತೆ ಜಲಾವೃತಗೊಂಡು ಹಾನುಬಾಳು-ವೆಂಕಟಹಳ್ಳಿ-ರಾಗಿಗುಂಡಿ-ಅಗ್ನಿ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಇತ್ತ ಸಕಲೇಶಪುರ ಹೊಳೆಮಲ್ಲೇಶ್ವರ ದೇಗುಲ ಜಲಾವೃತಗೊಂಡಿತ್ತು. ಗರ್ಭಗುಡಿಯೊಳಗೆ ಅಪಾರ ಪ್ರಮಾಣದ ನೀರು ನುಗ್ಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

DK Shivakumar: 2028ರ ಒಳಗೆ ನಾವು ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಸವಾಲೆಸೆದರು.

VISTARANEWS.COM


on

dk shivakumar hd kumarswamy
Koo

ಬೆಂಗಳೂರು: ನಮ್ಮನ್ನು ಸರ್ವನಾಶ ಮಾಡುವುದೇ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರ ನಿತ್ಯದ ಆಲೋಚನೆಯಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ವಿವಿಧ ಯೋಜನೆಗಳ ಬಗ್ಗೆ ಬೆಂಗಳೂರಿನ ಸರ್ವ ಪಕ್ಷ ಶಾಸಕರುಗಳು ಹಾಗೂ ಜನಪ್ರತಿನಿಧಿಗಳ ಸಭೆ ವಿಧಾನಸೌಧದ (Vidhana Soudha) ಸಮ್ಮೇಳನ ಸಭಾಂಗಣದಲ್ಲಿ ನಡೆದ ಬಳಿಕ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು.

ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಅವರು ಪ್ರತಿಕ್ರಿಯಿಸಿ, “ಕುಮಾರಸ್ವಾಮಿ ನಮ್ಮನ್ನು ಸರ್ವನಾಶ ಮಾಡಲು ಪ್ರತಿನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ನಾವು ರಾಮನಗರದ ಹೆಸರನ್ನು ಬದಲಿಸುತ್ತಿಲ್ಲ. ಇದು ನಮ್ಮ ಜಿಲ್ಲೆ. ಇವರು ಬಂದು ಅಕ್ರಮವಾಗಿ ಜಿಲ್ಲೆಯ ಗುರುತನ್ನು ಬದಲಿಸಿದ್ದಾರೆ. ರಾಜಕೀಯವಾಗಿ ಇದಕ್ಕೆ ಅವಕಾಶವಿದೆ ಮಾಡಿದ್ದಾರೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕಿನ ಜನ ನಮ್ಮವರು, ಬೆಂಗಳೂರಿನವರು” ಎಂದು ವಾಗ್ದಾಳಿ ನಡೆಸಿದರು.

ನಾನು ಬೆಂಗಳೂರು ಜಿಲ್ಲಾ ಪಂಚಾಯ್ತಿ ಸದಸ್ಯನಾಗಿದ್ದೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಹಾಸನದಿಂದ ಬಂದಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಇಲ್ಲಿಗೆ ಬಂದಾಗ ಇದು ಬೆಂಗಳೂರಾಗಿಯೇ ಇತ್ತು. ಅವರು ಪ್ರಧಾನಮಂತ್ರಿ, ಮುಖ್ಯಮಂತ್ರಿಯಾದಾಗಲೂ ಇದು ಬೆಂಗಳೂರಾಗಿಯೇ ಇತ್ತು. ಇದು ನಮ್ಮ ಜಿಲ್ಲೆ. ನಾವು ಭಾರತೀಯರು ಎಂದು ಹೇಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೋ, ಅದೇ ರೀತಿ ನಾವು ಬೆಂಗಳೂರಿನವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದಾಗ ಜಿಲ್ಲೆಯನ್ನು ಒಡೆದು ಬೇರೆ ಹೆಸರು ಕೊಟ್ಟರು ಎಂದು ತಿಳಿಸಿದರು.

ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿದ್ದು ಬೆಂಗಳೂರಿನಲ್ಲಿ, ರಾಮಕೃಷ್ಣ ಹೆಗಡೆ ಅವರು ಬಂದು ನಿಂತಿದ್ದು ಬೆಂಗಳೂರಿನಲ್ಲಿ. ಈ ಬೆಂಗಳೂರು ನಾಲ್ಕೈದು ಮುಖ್ಯಮಂತ್ರಿಗಳನ್ನು ಮಾಡಿದೆ. ನಮ್ಮ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡುವಾಗ ಬೆಂಗಳೂರು ಹೆಸರು ಉಳಿಸಿಕೊಳ್ಳುವಂತೆ ನಾವು ಸಲಹೆ ನೀಡಿದ್ದೆವು. ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ನಮ್ಮ ಪೂರ್ವಜರು ಕೊಟ್ಟಿರುವ ಈ ಹೆಸರನ್ನು ನಾವು ಯಾಕೆ ಕಳೆದುಕೊಳ್ಳಬೇಕು ಎಂದು ಪ್ರಶ್ನಿಸಿದರು.

ಈ ಜಿಲ್ಲೆಯ ಆಡಳಿತ ಕೇಂದ್ರ ರಾಮನಗರದಲ್ಲೇ ಇರುತ್ತದೆ. ಈ ಜಿಲ್ಲೆಯ ಜನಕ್ಕೆ ಹೊಸ ದಿಕ್ಕನ್ನು ನೀಡಬೇಕು, ಹೊಸ ಆಲೋಚನೆ, ಅಭಿವೃದ್ಧಿ ನೀಡಬೇಕು, ಮುಂದಿನ ಪೀಳಿಗೆ ದೃಷ್ಟಿಯಿಂದ ನಾವು ಆಲೋಚನೆ ಮಾಡಿ ಈ ತೀರ್ಮಾನ ಮಾಡಿದ್ದೇವೆ. ನಮ್ಮ ಈ ತೀರ್ಮಾನಕ್ಕೆ ಪಕ್ಷಾತೀತವಾಗಿ ಜನರು ಸಂತೋಷವಾಗಿದ್ದಾರೆ ಎಂದು ತಿಳಿಸಿದರು.

ಕುಮಾರಸ್ವಾಮಿ ಹಣೆಯಲ್ಲಿ ಬರೆದಿಲ್ಲ

2028ರ ಒಳಗೆ ನಾವು ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಸವಾಲೆಸೆದರು.

ಬೃಂದಾವನ ಮೇಲ್ದರ್ಜೆಗೆ ಏರಿಕೆ

ಕೆಆರ್‌ಎಸ್ ಬೃಂದಾವನ ಉದ್ಯಾನವನಕ್ಕೆ ಹೊಸ ರೂಪ ನೀಡಲು ಮುಂದಾಗಿರುವ ಯೋಜನೆಯಿಂದ ಸರ್ಕಾರದ ಹಣ ವ್ಯರ್ಥವಾಗಲಿದೆ ಎಂಬ ವಿಪಕ್ಷ ಟೀಕೆಯ ಬಗ್ಗೆ ಅವರು ಪ್ರತಿಕ್ರಿಯಿಸಿದರು. ಅವರ ಆರೋಪ ಬೋಗಸ್ ಆಗಿದೆ. ಇದು ಸಿದ್ದರಾಮಯ್ಯ ಅವರ ಈ ಹಿಂದಿನ ಸರ್ಕಾರದಲ್ಲಿ ಪ್ರಸ್ತಾವನೆಯಾದ ಯೋಜನೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದಾಗ, ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಈಗ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆ ಮಟ್ಟಕ್ಕೆ ಹೆಚ್ಚಿಸಲು ಮುಂದಾಗಿದ್ದೇವೆ. ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೊಳ್ಳಲಾಗಿದೆ. ಇದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ. ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತಿದ್ದು, ಪ್ರವಾಸೋದ್ಯಮ ಉದ್ದೇಶದಿಂದ ಈ ಯೋಜನೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು

ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ, ಎಲ್ಲಾ ಪಕ್ಷದ ಶಾಸಕರು ಈ ವಿಚಾರವಾಗಿ ವಿಸ್ತೃತ ಚರ್ಚೆಯಾಗಬೇಕು ಎಂದು ತಿಳಿಸಿದರು. ಇದಕ್ಕೆ ನಾನು ಮುಕ್ತವಾಗಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯವನ್ನು ಕೇಳಬೇಕು. ಇದರಲ್ಲಿ ಯಾವುದೇ ತಪ್ಪು ಆಗಬಾರದು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಗಮನದಲ್ಲಿಟ್ಟುಕೊಂಡು ಇದನ್ನು ಮಾಡಬೇಕು. ಬೆಂಗಳೂರಿಗೆ ಪರಿಣಾಮಕಾರಿ ಆಡಳಿತ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ಇಂದು ಎಲ್ಲಾ ಪಕ್ಷಗಳ ಶಾಸಕರ ಸಭೆ ಕರೆಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸದನ ಸಮಿತಿಯನ್ನು ಸಧ್ಯದಲ್ಲೇ ರಚಿಸಲಾಗುವುದು. ವಿರೋಧ ಪಕ್ಷಗಳ ಸಲಹೆ, ಅಭಿಪ್ರಾಯಗಳನ್ನು ನಾವು ಸ್ವೀಕರಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

Continue Reading

ಪ್ರಮುಖ ಸುದ್ದಿ

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Karnataka High Court: ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಅಥವಾ ಆನ್‌ಲೈನ್ ಪಾವತಿಯ (online payment) ಸೌಲಭ್ಯವನ್ನು ಗ್ರಾಹಕರಿಗೆ ಏಕೆ ಒದಗಿಸಿಲ್ಲ ಎಂಬ ಬಗ್ಗೆ ಆಗಸ್ಟ್ 9ರೊಳಗೆ ಅಫಿಡವಿಟ್ ಸಲ್ಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಎನ್.ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ಜಾರಿ ಮಾಡಿದೆ.

VISTARANEWS.COM


on

karnataka high court
Koo

ಬೆಂಗಳೂರು: ʼಇಡೀ ಜಗತ್ತು ಯುಪಿಐ (UPI) ಮೂಲಕ ಪಾವತಿಗಳನ್ನು ಸ್ವೀಕರಿಸುತ್ತಿದೆ. ದಿನಸಿ ಅಂಗಡಿಯವರಲ್ಲೂ ಅದು ಇದೆ. ಆದರೆ ನಿಮ್ಮಲ್ಲಿ ಇಲ್ಲ ಎಂಬುದು ವಿಚಿತ್ರವಾದ ಸಂಗತಿʼ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ- BESCOM) ಅನ್ನು ಕರ್ನಾಟಕ ಹೈಕೋರ್ಟ್ (Karnataka High Court) ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.

ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಅಥವಾ ಆನ್‌ಲೈನ್ ಪಾವತಿಯ (online payment) ಸೌಲಭ್ಯವನ್ನು ಗ್ರಾಹಕರಿಗೆ ಏಕೆ ಒದಗಿಸಿಲ್ಲ ಎಂಬ ಬಗ್ಗೆ ಆಗಸ್ಟ್ 9ರೊಳಗೆ ಅಫಿಡವಿಟ್ ಸಲ್ಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಎನ್.ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ಜಾರಿ ಮಾಡಿದೆ.

2003ರ ವಿದ್ಯುತ್ ಕಾಯ್ದೆಯ ಸೆಕ್ಷನ್ 47(5)ರ ಪ್ರಕಾರ ಪೂರ್ವಪಾವತಿ ಮೀಟರ್ ಒದಗಿಸುವಂತೆ ಮತ್ತು ಯುಪಿಐ ಮೋಡ್‌ನಲ್ಲಿ ಪಾವತಿಯನ್ನು ಸ್ವೀಕರಿಸಲು ಬೆಸ್ಕಾಂಗೆ ನಿರ್ದೇಶನ ನೀಡಬೇಕೆಂದು ಕೋರಿ ಹಿರಿಯ ನಾಗರಿಕರಾದ ಸೀತಾಲಕ್ಷ್ಮಿ ಎಂಬವರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ಈ ನಿರ್ದೇಶನ ನೀಡಲಾಗಿದೆ.

ಇಡೀ ಜಗತ್ತು ಯುಪಿಐ ಮೂಲಕ ಪಾವತಿಗಳನ್ನು ಸ್ವೀಕರಿಸುತ್ತಿರುವ ಈ ಯುಗದಲ್ಲಿ ಬೆಸ್ಕಾಂ ಯುಪಿಐ ಮೂಲಕ ಹಣವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದು ವಿಚಿತ್ರವಾಗಿದೆ. ಯಾರಾದರೂ ನಿಮಗೆ ಹಣವನ್ನು ಪಾವತಿಸಲು ಬಯಸಿದರೆ, ಅದು ಈಗ ಸ್ವೀಕರಿಸಲ್ಪಟ್ಟ ವಿಧಾನವಾಗಿದ್ದರೂ, ನೀವು ಅದನ್ನು ಅಳವಡಿಸಿಕೊಳ್ಳಬೇಕಿದ್ದರೆ ಯಾರಾದರೂ ನ್ಯಾಯಾಲಯಕ್ಕೆ ಬಂದು ರಿಟ್ ಅರ್ಜಿ ಸಲ್ಲಿಸಬೇಕಾಗುತ್ತದೆ. ಯಾರೋ ನಿಮಗೆ ಹಣವನ್ನು ನೀಡಲು ಬಯಸುತ್ತಾರೆ. ಎಲ್ಲರೂ ಡಿಜಿಟಲ್‌ (Digital) ಆಗಿರಿ ಎಂದು ಸರಕಾರ ಘೋಷಿಸುತ್ತದೆ. ಆದರೆ ನೀವು ಕರೆನ್ಸಿ ನೋಟುಗಳನ್ನು ಸಂಗ್ರಹಿಸುವ ಕಾಲಕ್ಕೆ ಹಿಂತಿರುಗಲು ಬಯಸುತ್ತಿದ್ದೀರಿ ಎಂದು ಹೈಕೋರ್ಟ್‌ ಪೀಠ ಬೆಸ್ಕಾಂನ ಕಿವಿ ಹಿಂಡಿತು.

ಪ್ರತಿಯೊಬ್ಬ ದಿನಸಿ ವ್ಯಾಪಾರಿಯೂ ಈಗ ಅವನ ಮುಂದೆ ಯುಪಿಐ ಸ್ಕ್ಯಾನರ್ ಅನ್ನು ಹೊಂದಿದ್ದಾನೆ. ಆದರೆ ನೀವು ಇನ್ನೂ ಅರ್ಜಿದಾರರಿಗೆ ಕ್ಯುಆರ್ ಕೋಡ್ (‌QR Code) ನೀಡಲು ಮೀನಮೇಷ ಎಣಿಸುತ್ತಿದ್ದೀರಿ. ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ನ್ಯಾಯಾಲಯವೇ ಅತ್ಯಂತ ನಿಧಾನವಾಗಿತ್ತು; ನೀವು ನಮಗಿಂತಲೂ ಹಿಂದುಳಿದಿದ್ದೀರಿ ಎಂದು ಕೂಡ ಪೀಠ ಹೇಳಿದೆ.

ವಿಚಾರಣೆಯ ವೇಳೆ ಬೆಸ್ಕಾಂ ಪರ ವಕೀಲರು, ಬೆಸ್ಕಾಂ ಕೌಂಟರ್‌ಗಳಲ್ಲಿ ಯುಪಿಐ ಪಾವತಿ ಮಾಡಲು ಅವಕಾಶವಿಲ್ಲ. ನಗದು ಪಾವತಿಯನ್ನು ಮಾತ್ರ ಸ್ವೀಕರಿಸಲಾಗುತ್ತದೆ ಎಂದು ತಿಳಿಸಿದರು. ಆದರೆ ಗ್ರಾಹಕರು ಬೆಸ್ಕಾಂ ಅಪ್ಲಿಕೇಶನ್ ಮೂಲಕ ಆನ್‌ಲೈನ್/ಯುಪಿಐ ಪಾವತಿಗಳನ್ನು ಮಾಡಬಹುದು. ಹಿರಿಯ ನಾಗರಿಕರು ಮತ್ತು ವಯಸ್ಸಾದವರು ಕೌಂಟರ್‌ಗೆ ಬರುವ ಅಗತ್ಯವಿಲ್ಲದೆ ಮನೆಯಲ್ಲಿ ಕುಳಿತು ಅಪ್ಲಿಕೇಶನ್‌ನಲ್ಲಿ ಇದನ್ನು ಮಾಡಬಹುದು ಎಂದು ಹೇಳಿದರು.

ಅಕ್ಟೋಬರ್ 25, 2023ರಂದು, ಅರ್ಜಿದಾರರು ಮನೆಬಾಡಿಗೆ ಉದ್ದೇಶಗಳಿಂದ ಉಂಟಾಗುವ ಭಾರೀ ಶುಲ್ಕವನ್ನು ಕಟ್ಟಲು ಬೆಸ್ಕಾಂ ಹೊಸಕೋಟೆ ಶಾಖೆಯ ಕ್ಯಾಶ್ ಕೌಂಟರ್‌ಗೆ ಭೇಟಿ ನೀಡಿದ್ದರು. ಯುಪಿಐ ಮೂಲಕ ಪಾವತಿ ಲಭ್ಯವಿಲ್ಲದ ಕಾರಣ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಅರ್ಜಿದಾರರಿಗೆ ಡಿಡಿ ಮೂಲಕ ಪಾವತಿಸಲು ಸೂಚಿಸಿದ್ದರು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಶ್ರೀಧರ್ ಪ್ರಭು ಅವರು, ವಯಸ್ಸಾದ ಮಹಿಳೆ ದೈನಂದಿನ ಕೆಲಸಗಳನ್ನು ನಿರ್ವಹಿಸುವಲ್ಲಿ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಪಡೆಯಲು ಸರದಿಯಲ್ಲಿ ನಿಂತು ಕಷ್ಟಪಟ್ಟಿದ್ದಾರೆ. ನಂತರ ಪಾವತಿ ಮಾಡಿದ್ದಾರೆ. ಹೀಗಾಗಿ ಅವರು ತಮ್ಮ ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ಐಡೆಂಟಿಟಿ (ಯುಪಿಐಡಿ) ಅನ್ನು ಒದಗಿಸುವ ಮೂಲಕ ಪ್ರಕ್ರಿಯೆಯನ್ನು ಸುಲಭಗೊಳಿಸುವಂತೆ ಮನವಿ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ವಿದ್ಯುತ್ ಬಿಲ್‌ನಲ್ಲಿರುವ ಹೆಚ್ಚುವರಿ ಭದ್ರತಾ ಠೇವಣಿ ಕುರಿತು ಗೊಂದಲ; ಗ್ರಾಹಕರ ಪ್ರಶ್ನೆಗಳಿಗೆ ಇಲ್ಲಿದೆ ಬೆಸ್ಕಾಂ ಉತ್ತರ

Continue Reading

ಕರ್ನಾಟಕ

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

Ghuspaithia Hindi movie: ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

VISTARANEWS.COM


on

Ghuspaithia Hindi movie release on August 9
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ನಿರ್ಮಿಸಿರುವ ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ.

ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ, ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

ಆಗಸ್ಟ್ 9ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿರುವ ಈ ಚಿತ್ರದ ತಾರಾಬಳಗದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರಿದ್ದಾರೆ.

Continue Reading
Advertisement
Ricky Ponting
ಕ್ರೀಡೆ1 min ago

Ricky Ponting : ಡೆಲ್ಲಿ ಕ್ಯಾಪಿಟಲ್ಸ್​ ಕೋಚಿಂಗ್ ಹುದ್ದೆಯಿಂದ ಪಾಂಟಿಂಗ್ ನಿರ್ಗಮಿಸಿದ್ದು ಯಾಕೆ? ಕಾರಣ ಕೊಟ್ಟ ಮಾಲೀಕ ಪಾರ್ಥ್​ ಜಿಂದಾಲ್​

karnataka Rain
ಮಳೆ2 mins ago

Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

PARIS 2024 OLYMPICS
ಕ್ರೀಡೆ20 mins ago

PARIS 2024 OLYMPICS: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಸೋಲು

Road Accident
ದೇಶ26 mins ago

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Ashwini Puneeth Rajkumar launched Appu Cup season 2
ಕ್ರಿಕೆಟ್31 mins ago

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Money Guide
ಮನಿ-ಗೈಡ್50 mins ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Womens Asia Cup Final
ಕ್ರೀಡೆ1 hour ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ1 hour ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ2 hours ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ2 hours ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ22 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ23 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ24 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌