Site icon Vistara News

Siddaramaiah: ಕೋಲಾರದಿಂದಲೂ ಸಿದ್ದರಾಮಯ್ಯ ಸ್ಪರ್ಧೆ: ರಾಹುಲ್‌ ಗಾಂಧಿಯಿಂದಲೇ ಘೋಷಣೆಗೆ ಮುಹೂರ್ತ?

Siddaramaiah in a press conference in Bengaluru.

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದ ಜತೆಗೆ ಕೋಲಾರದಿಂದಲೂ ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ರಾಹುಲ್‌ ಗಾಂಧಿಯವರಿಂದಲೇ ಈ ಘೋಷಣೆಯಾಗುವ ಸಾಧ್ಯತೆಯಿದೆ.

ಈ ಬಗ್ಗೆ ಈಗಾಗಲೇ ಸುರ್ಜೇವಾಲಾ ಜತೆ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ ಟೀಮ್ ಈಗಾಗಲೆ ಕೋಲಾರದಲ್ಲಿ ಕಾರ್ಯ ನಡೆಸುತ್ತಿದೆ. ಬಗೆಹರಿಯದ ಮುನಿಯಪ್ಪ ಮತ್ತು ರಮೇಶ್ ಕುಮಾರ್ ಬಣ ಜಗಳದ ಕಾರಣಕ್ಕೆ ಕೋಲಾರದಿಂದ ಸ್ಪರ್ಧೆ ಬೇಡ ಎಂದು ಸಿದ್ದರಾಮಯ್ಯ ನಿರ್ಧರಿಸಿದ್ದರು.

ಆದರೆ ನಂತರದಲ್ಲಿ ದೇವನಹಳ್ಳಿಯಿಂದ ಮುನಿಯಪ್ಪ ಅವರಿಗೆ ಟಿಕೆಟ್‌ ಘೋಷಣೆಯಾಗಿದೆ. ಟಿಕೆಟ್ ಘೋಷಣೆ ನಂತರ ದೇವನಹಳ್ಳಿಯಲ್ಲೇ ಮುನಿಯಪ್ಪ ಠಿಕಾಣಿ ಹೂಡಿದ್ದು, ಅವರ ಸಂಪೂರ್ಣ ತಂಡ ಸಹ ಅಲ್ಲಿಗೇ ತೆರಳಿದೆ. ಈ ಕಾರಣಕ್ಕೆ ಕೋಲಾರದಿಂದಲೂ ಸ್ಪರ್ಧೆಗೆ ಸಿದ್ದರಾಮಯ್ಯ ಒಲವು ತೋರಿದ್ದಾರೆ.

ಆದರೆ ಸಿದ್ದರಾಮಯ್ಯಗೆ ಎರಡು ಕ್ಷೇತ್ರ ಕೊಡುವ ಬಗ್ಗೆ ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಅಪಸ್ವರ ಎತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೀಸೋದರಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಾಂಗ್ರೆಸ್‌ಗೆ ಅನುಕೂಲ ಎನ್ನುವ ವಾದವನ್ನು ಅನೇಕರು ಮುಂದೆ ಇಟ್ಟಿದ್ದಾರೆ.

ಏಪ್ರಿಲ್ ಮೊದಲ ವಾರದಲ್ಲಿ ರಾಹುಲ್ ಗಾಂಧಿ ಕೋಲಾರಕ್ಕೆ ಆಗಮಿಸಲಿದ್ದಾರೆ. 2019ರಲ್ಲಿ ಕೋಲಾರದಲ್ಲಿ ಮೋದಿ ಕುರಿತು ಮಾಡಿದ ಭಾಷಣಕ್ಕೆ ಇತ್ತೀಚೆಗೆ ಲೋಕಸಭೆ ಸ್ಥಾನದಿಂದ ಅನರ್ಹರಾಗಿರುವ ರಾಹುಲ್‌ ಗಾಂಧಿ, ಕೋಲಾರದಲ್ಲೇ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲೇ ಸಿದ್ದರಾಮಯ್ಯ ಅವರ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Congress ticket : ವರುಣಾ ಜತೆ ಕೋಲಾರದಲ್ಲೂ ಸ್ಪರ್ಧೆ ಮಾಡ್ತೀನಿ; ಖಚಿತಪಡಿಸಿದ ಸಿದ್ದರಾಮಯ್ಯ

Exit mobile version