ಹಾಸನ: ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು (Drugs Menace) ಪರಿಣಾಮಕಾರಿಯಾಗಿ ತಡೆಯುವಂತೆ ಮುಖ್ಯಮಂತ್ರಿಗಳು (CM Siddaramaiah) ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇದಕ್ಕಾಗಿ ವಿಶೇಷ ತಂಡಗಳನ್ನು ರಚಿಸುವಂತೆ ಆದೇಶಿಸಿದ್ದಾರೆ.
ಯುವ ಸಮೂಹ ಮಾದಕ ದ್ರವ್ಯದ ದಾಸರಾಗದಂತೆ ಜಾಗೃತಿ (Drugs awareness) ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇದರ ಜತೆಗೆ ಡ್ರಗ್ ಮಾಫಿಯಾದ (Drug Mafia) ಮೂಲವನ್ನು ಪತ್ತೆ ಹಚ್ಚಬೇಕು. ಚಾಳಿ ಬಿದ್ದ ಪೆಡ್ಲರ್‌ಗಳನ್ನು (Drug peddlers) ಗಡಿಪಾರು ಮಾಡುವುದೂ ಸೇರಿದಂತೆ ಕಠಿಣ ಕ್ರಮಗಳ ಮೂಲಕ ಡ್ರಗ್ ಹಾವಳಿಯನ್ನು ತಡೆಯಬೇಕು ಎಂದು ಸೂಚಿಸಿದ್ದಾರೆ. ಸೋಮವಾರ ದೇಶಾದ್ಯಂತ ಮಾದಕ ವ್ಯಸನ ನಿಗ್ರಹ ದಿನಾಚರಣೆ ನಡೆದಿದೆ. ಇದರ ಜತೆಗೆ ರಾಜ್ಯದಲ್ಲೂ ಡ್ರಗ್ಸ್ ಮಾಫಿಯಾದ ಚುರುಕಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮಹತ್ವವನ್ನು ಪಡೆದುಕೊಂಡಿದೆ.
ವಿಶೇಷ ತಂಡ ರಚಿಸಲು ಸಿದ್ದರಾಮಯ್ಯ ಸೂಚನೆ
ಡ್ರಗ್ ಮಾಫಿಯಾದ ಮೇಲೆ ನಿರಂತರ ನಿಗಾ ಇಡುವುದು, ಮಾರಾಟ ಜಾಲದ ಚಲನ ವಲನಗಳ ಮೇಲೆ ತೀವ್ರ ನಿಗಾ ಇಡಬೇಕು. ಇದಕ್ಕಾಗಿ ಪ್ರತ್ಯೇಕವಾದ ವಿಶೇಷ ತಂಡ ರಚಿಸಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
ಶಿಕ್ಷೆಯ ಪ್ರಮಾಣ ಹೆಚ್ಚಾಗಬೇಕು
ಪೊಲೀಸರು ಡ್ರಗ್ ಮಾಫಿಯಾದವರ ಮೇಲೆ ಕೇವಲ ಕೇಸು ದಾಖಲಿಸಿದರಷ್ಟೆ ಸಾಲದು. ನ್ಯಾಯಾಲಯಗಳಲ್ಲಿ ಅವರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳುವುದೂ ಕೂಡ ಪೊಲೀಸರ ಹೊಣೆಗಾರಿಕೆ. ಕೇಸು ದಾಖಲಾದ ಪ್ರಮಾಣ ಮತ್ತು ಶಿಕ್ಷೆಯ ಪ್ರಮಾಣ ಎರಡನ್ನೂ ಹಿರಿಯ ಅಧಿಕಾರಿಗಳು ಪರಿಶೀಲಿಸಬೇಕು. ಪ್ರತಿ ಠಾಣೆಗಳಿಗೆ ಭೇಟಿ ನೀಡಿದ ವೇಳೆಯಲ್ಲಿ ಶಿಕ್ಷೆಯ ಪ್ರಮಾಣವನ್ನೂ ಪರಿಶೀಲಿಸಿ ಠಾಣಾಧಿಕಾರಿಗಳಿಂದ ವರದಿ ಕೇಳಬೇಕು ಎನ್ನುವ ಸೂಚನೆ ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ.
ವಿಶ್ವ ತಂಬಾಕು ವಿರೋಧಿ ದಿನ
ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ಸೋಮವಾರ ವಿಧಾನ ಸೌಧದ ಮುಂಭಾಗದಲ್ಲಿ ಜಾಥಾವೊಂದನ್ನು ಆಯೋಜಿಸಲಾಗಿತ್ತು. ಇದನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದ್ದರು.
ಇಲ್ಲಿ ಕುಳಿತಿರುವ ವಿದ್ಯಾರ್ಥಿಗಳು ಏನ್ ಬೇಕಾದ್ರೂ ಆಗಬಹುದು. ಮುಂದೊಂದು ದಿನ ಡಿ.ಕೆ. ಶಿವಕುಮಾರ್ ಕೂಡ ಆಗಬಹುದು. ನಾನು ಟೇಪ್ ಕಟ್ ಮಾಡಿ ಹೋಗೋದಕೆ ಬಂದಿಲ್ಲ. ನಾನು ನಿಮ್ಮ ಜತೆ ಹೆಜ್ಜೆ ಹಾಕೋದಕ್ಕೆ ಬಂದಿದ್ದೇನೆ, ಯಾರೂ ತಪ್ಪಿಸಿಕೊಳ್ಳೋದಕ್ಕೆ ಸಾಧ್ಯವಿಲ್ಲ. ಡ್ರಗ್ಸ್ ನಿಂದ ದೂರ ಉಳಿಯಿರಿ. ಡ್ರಗ್ಸ್ ನಿಂದ ಇತ್ತೀಚೆಗೆ ಚಲನಚಿತ್ರ ನಟ ನಟಿಯರು, ದೊಡ್ಡವರ ಮಕ್ಕಳ ಕಥೆ ಏನಾಯ್ತು ಅನ್ನೋದು ನಿಮಗೆಲ್ಲ ಗೊತ್ತಿದೆ. ನೀವು ಮುಂದಿನ ಪೀಳಿಗೆಯ ಭವಿಷ್ಯ ರೂಪಿಸುವವರು. ಹೀಗಾಗಿ ಡ್ರಗ್ಸ್‌ನಂತಹ ಮಾದಕ ವಸ್ತುಗಳಿಂದ ದೂರ ಇರಿ ಎಂದು ಹೇಳಿದ್ದರು.
ಇದನ್ನೂ ಓದಿ: Joe Biden: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮಗ ತೆರಿಗೆ ಕಳ್ಳ, ಮಾದಕ ವ್ಯಸನಿ, ಅಕ್ರಮ ಗನ್ ಮಾಲೀಕ!