Site icon Vistara News

Multi-Specialty Hospital | ಉತ್ತರ ಕನ್ನಡದ ಜನತೆಯ ಹೋರಾಟಕ್ಕೆ ಸಿದ್ದರಾಮಯ್ಯ ಬೆಂಬಲ

Multi-Specialty Hospital

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ (Multi specialty) ಅಗತ್ಯವಿದ್ದು, ತ್ವರಿತವಾಗಿ ನಿರ್ಮಾಣ ಮಾಡಬೇಕೆಂದು ಆ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ ಸೂಚಿಸಿದ್ದಾರೆ.

“ಸುಸಜ್ಜಿತ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆಗ್ರಹಿಸಿ ಉತ್ತರ ಕನ್ನಡದ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಅಹವಾಲನ್ನು ಮುಕ್ತ ಮನಸ್ಸಿನಿಂದ ಆಲಿಸಿ, ಸಮಸ್ಯೆ ಬಗೆಹರಿಸುವತ್ತ ಕಾರ್ಯಪ್ರವೃತ್ತವಾಗಬೇಕು ಎಂದು ಒತ್ತಾಯಿಸುತ್ತೇನೆʼʼ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಮಾನ್ಯ ಮುಖ್ಯಮಂತ್ರಿಯವರೇ, ನಮ್ಮ ಜಿಲ್ಲೆಗೊಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (Multi-Specialty Hospital) ಕೊಡಿ, ನಮ್ಮ ತ್ಯಾಗಕ್ಕೊಂದು ಅರ್ಥ ಕಲ್ಪಿಸಿ. ದೇಶಕ್ಕಾಗಿ ಎಲ್ಲವನ್ನೂ ಕೊಟ್ಟ ನಮಗೆ ʼಆರೋಗ್ಯʼದ ಶ್ರೀರಕ್ಷೆ ನಿಮ್ಮಿಂದ ಸಿಗಲಿ. WeNeedEmergencyHospitalInUttarakannada (#ಉತ್ತರಕನ್ನಡ ಜಿಲ್ಲೆಗೆ ಬೇಕು ತುರ್ತುನಿಗಾ ಆಸ್ಪತೆ) ಎಂದು ಜಿಲ್ಲೆಯ ಜನತೆ ಸೋಷಿಯಲ್‌ ಮೀಡಿಯಾದಲ್ಲಿ ಅಭಿಯಾನ ನಡೆಸುತ್ತಿದ್ದರು.

ಈಗಾಗಲೇ ಜಿಲ್ಲೆಗೆ ಸುಸಜ್ಜಿತವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ (Multi specialty) ಅಗತ್ಯತೆಯ ಕುರಿತು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆರೋಗ್ಯ ಸಚಿವ ಸುಧಾಕರ್‌ ಅವರಿಗೆ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವ ಸುಧಾಕರ್, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಇಂದೊಂದು ವಿಶೇಷ ಅತ್ಯಗತ್ಯ ಪ್ರಕರಣವಾಗಿ ಪರಿಗಣಿಸಿ ಶೀಘ್ರದಲ್ಲಿಯೇ ಆಸ್ಪತ್ರೆ ನಿರ್ಮಿಸಲು ಅಗತ್ಯ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಈ ಹೋರಾಟದ ಕುರಿತು ʻವಿಸ್ತಾರ ನ್ಯೂಸ್‌ʼ ಶನಿವಾರ Multi-Specialty Hospital | ರಾಜ್ಯಕ್ಕೆ ಬೆಳಕು ಕೊಟ್ಟ ಉತ್ತರ ಕನ್ನಡಕ್ಕೆ ಇಲ್ಲ ಆರೋಗ್ಯದ ಬೆಳಕು ಶೀರ್ಷಿಕೆಯಲ್ಲಿ ವಿಶೇಷ ವರದಿಯನ್ನು ಪ್ರಕಟಿಸಿತ್ತು.

ಇದನ್ನೂ ಓದಿ| Multi specialty | ಆಸ್ಪತ್ರೆ ನಿರ್ಮಾಣಕ್ಕೆ ಸ್ಪೀಕರ್ ಕಾಗೇರಿ ಮನವಿಗೆ ಸ್ಪಂದಿಸಿದ ಸಚಿವ ಸುಧಾಕರ್‌

Exit mobile version