HD Kumaraswamy: ರಾಷ್ಟ್ರಪತಿಗಳನ್ನು ʼಅವಳುʼ ಎಂದ ಸಿದ್ದರಾಮಯ್ಯ; ಆಚಾರಗೆಟ್ಟ ಸಿಎಂ ಎಂದು ಎಚ್‌ಡಿಕೆ ಕಿಡಿ - Vistara News

ಕರ್ನಾಟಕ

HD Kumaraswamy: ರಾಷ್ಟ್ರಪತಿಗಳನ್ನು ʼಅವಳುʼ ಎಂದ ಸಿದ್ದರಾಮಯ್ಯ; ಆಚಾರಗೆಟ್ಟ ಸಿಎಂ ಎಂದು ಎಚ್‌ಡಿಕೆ ಕಿಡಿ

HD Kumaraswamy: ಈ ಡೋಂಗೀ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಕಳಚಿಬಿದ್ದಿದೆ. ಒಂದು ಕ್ಷಣವೂ ಮುಖ್ಯಮಂತ್ರಿ ಪದವಿಯಲ್ಲಿ ಇರಲು ಅವರು ಅರ್ಹರಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

VISTARANEWS.COM


on

Siddaramaiah and HD Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧನೆ ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ, ರಾಷ್ಟ್ರಪತಿಗಳಿಗೆ ಅಪಚಾರ ಎಸಗಿರುವ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಇಲ್ಲವೇ ಅವರನ್ನು ಆ ಸ್ಥಾನದಿಂದ ವಜಾ ಮಾಡಬೇಕು ಎಂದು ರಾಜ್ಯಪಾಲರನ್ನು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ | Karnataka Drought: ರೈತರಿಗೆ ಬರ ಪರಿಹಾರ ಕೊಡದ ಟೋಪಿ ಸಿದ್ದರಾಮಯ್ಯ; ನಾಳೆ ಕೋಲಾರದಲ್ಲಿ ಪ್ರತಿಭಟನೆ ಎಂದ ಅಶೋಕ್‌

ಆಚಾರಗೆಟ್ಟ ಮುಖ್ಯಮಂತ್ರಿ

ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಿಗೆಯ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದಿರುವ ಕುಮಾರಸ್ವಾಮಿ ಅವರು, ಸಿಎಂ ಬಳಸಿರುವ ಪದವನ್ನು ಬರೆಯಲಾರೆ ಎಂದು ಎಂದಿದ್ದಾರಲ್ಲದೆ, ಸಿದ್ದರಾಮಯ್ಯ ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಕಟುವಾಗಿ ಟೀಕಿಸಿದ್ದಾರೆ.

ಈ ಡೋಂಗೀ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಕಳಚಿಬಿದ್ದಿದೆ. ಒಂದು ಕ್ಷಣವೂ ಮುಖ್ಯಮಂತ್ರಿ ಪದವಿಯಲ್ಲಿ ಇರಲು ಅವರು ಅರ್ಹರಲ್ಲ. ಕೂಡಲೇ ತಾವೆಸಗಿರುವ ಅಪಚಾರಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ಮಾನ್ಯ ರಾಜ್ಯಪಾಲರೇ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕಿತ್ತೆಸೆಯಬೇಕು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಶೋಷಿತರ ಜಾಗೃತಿ ಸಮಾವೇಶದಲ್ಲೇ ಅಪಮಾನ

ಆಚಾರವಿಲ್ಲದ ನಾಲಿಗೆ, ನಿನ್ನ ನೀಚಬುದ್ಧಿಯ ಬಿಡು ನಾಲಿಗೆ ಎಂದು ದಾಸರು ಹೇಳಿದ್ದಾರೆ. ಸಿದ್ದರಾಮಯ್ಯಗೆ ಆಚಾರ ಹತ್ತಿರಕ್ಕೂ ಸುಳಿಯದ ವಿಚಾರ. ಶೋಷಿತ ಬುಡಕಟ್ಟು ಸಮುದಾಯದಿಂದ ಬಂದ ದೇಶದ ಮೊತ್ತ ಮೊದಲ ರಾಷ್ಟ್ರಪತಿಗಳು, ಅದರಲ್ಲಿಯೂ ಮಹಿಳೆ.. ಶೋಷಿತರ ಜಾಗೃತಿ ಸಮಾವೇಶದಲ್ಲೇ ಅವರಿಗೆ ಮುಖ್ಯಮಂತ್ರಿ ಅಪಮಾನ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಕೀಲರಂತೆ, ಸ್ವಯಂಘೋಷಿತ ಸಂವಿಧಾನ ತಜ್ಞರಂತೆ.. ನಾಚಿಕೆಯಾಗಬೇಕು ಇವರಿಗೆ. ಸಾರ್ವಜನಿಕ ವೇದಿಕೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿಯೊಬ್ಬರು ಸಂಬೋಧಿಸುವ ರೀತಿಯೇ ಇದು. ಸಿದ್ದರಾಮಯ್ಯನವರ ನಡವಳಿಕೆ ಕರ್ನಾಟಕಕ್ಕೆ ಅಂಟಿದ ಅಳಿಸಲಾಗದ ಕಳಂಕ. ಅವರ ಈ ಕೀಳುಮಾತು ದೇಶಕ್ಕೆ, ಸಂವಿಧಾನಕ್ಕೆ ಆಗಿರುವ ಘೋರ ಅಪಚಾರ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಶನಿವಾರದಂದು ಚಾಮರಾಜನಗರದಲ್ಲಿ ಇದೇ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರ ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | Hanuman Flag: ಕೆರಗೋಡಿನಲ್ಲಿ ಉದ್ವಿಗ್ನ ಸ್ಥಿತಿ; ಆರ್‌.ಅಶೋಕ್‌ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು ಜಾಗಟೆ ಹೊಡೆಯುವ ಸಿದ್ದರಾಮಯ್ಯನವರು ಮಾನ, ಮರ್ಯಾದೆ, ಮಹಿಳೆಯರ ಮೇಲೆ ಗೌರವ ಏನಾದರೂ ಇಟ್ಟುಕೊಂಡಿದ್ದರೆ, ಈ ಕ್ಷಣದಲ್ಲಿಯೇ ಸಿಎಂ ಕುರ್ಚಿಯನ್ನು ಖಾಲಿ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಗುಡುಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದರು?

ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕನ್ನು ಟೀಕಿಸುತ್ತಾ, ರಾಷ್ಟ್ರಪತಿ ದ್ರೌಪದಿ ಮುರ್ಮು… ಶೋಷಿತ ಸಮುದಾಯಕ್ಕೆ ಸೇರಿದವಳು… ಅವರು ಸಂವಿಧಾನದ ರಕ್ಷಕರು(custodian of constitution), ಅವಳನ್ನು ನೂತನ ಸಂಸತ್‌ ಭವನ ಉದ್ಘಾಟನೆ ಹಾಗೂ ರಾಮಮಂದಿರ ಉದ್ಘಾಟನೆಗೆ ಕರೆಯಲಿಲ್ಲ. ಇವರ ಯೋಗ್ಯತೆಗೆ ನನ್ನ ವಿರುದ್ಧ ಮಾತನಾಡುತ್ತಾರೆ ಎಂದು ಕಿಡಿಕಾರಿದ್ದರು. ಹೀಗಾಗಿ ರಾಷ್ಟ್ರಪತಿಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿ ಅಪಮಾನ ಮಾಡಿದ್ದಾರೆ ಎಂದು ವಿಪಕ್ಷಗಳ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Hasan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

VISTARANEWS.COM


on

Hasan pen drive case
Koo

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hasan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ. ಈ ಕುರಿತು ಸಿಎಂ ಶನಿವಾರ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಚಲನ ಮೂಡಿಸಿದ್ದ ಪೆನ್​ ಡ್ರೈವ್ ಪ್ರಕರಣ

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೆಲವು ದಿನಗಳ ಹಿಂದೆ ಬಹಿರಂಗೊಂಡಿತ್ತು. ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು ಈ ಕುರಿತು ಸಾಕಷ್ಟು ಊಹಾಪೋಹಗಳು ಎದ್ದಿವೆ. ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ವಿಡಿಯೊ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ: Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೇ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು. ಇದೀಗ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.

ಈ ಪೆನ್‌ಡ್ರೈನಲ್ಲಿ ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಪ್ರಜ್ವಲ್​ ಅವರು ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಲೈಂಗಿಕ ಕ್ರಿಯೆಯ ವಿಡಿಯೊಗಳನ್ನು ಮಾಡಿಟ್ಟುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆ ವಿಡಿಯೋಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Continue Reading

ಬೆಂಗಳೂರು

TCS World 10K : ನಾಳೆ ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತಿಯ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್​

TCS World 10K: ಕರ್ನಾಟಕದ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಮತ್ತು ಕೆಎಎ ಅಧ್ಯಕ್ಷ ಮತ್ತು ಬ್ಯಾಸ್ಕೆಟ್ ಬಾಲ್ ಫೆಡರೇಶನ್ ಅಧ್ಯಕ್ಷ ಕೆ.ಗೋವಿಂದರಾಜ್ ಸೇರಿದಂತೆ ಗಣ್ಯರು ರೇಸ್ ಗೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಮಾಣೆಕ್ ಶಾ ಪರೇಡ್​ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಷಾ ಪರೇಡ್ ಮೈದಾನದ ಪ್ರವೇಶದ್ವಾರದ ಮುಂಭಾಗದ ರಸ್ತೆಯಲ್ಲಿ ಎಲ್ಲಾ ವಿಭಾಗಗಳ ಓಟಕ್ಕೆ ಹಸಿರು ನಿಶಾನೆ ತೋರಲಾಗುತ್ತದೆ. ಪದಕ ಪ್ರದಾನ ಸಮಾರಂಭವು ಮೈದಾನದ ಒಳಗೆ ನಡೆಯಲಿದೆ.

VISTARANEWS.COM


on

TCS World 10K
Koo

ಬೆಂಗಳೂರು: ಏಪ್ರಿಲ್ 28ರಂದು (ಭಾನುವಾರ) ಟಿಸಿಎಸ್ ವರ್ಲ್ಡ್ 10ಕೆ (TCS World 10K) ಬೆಂಗಳೂರು ಟೂರ್ನಿಯಲ್ಲಿ ಭಾರತದ ಸ್ಟಾರ್ ಅಥ್ಲೀಟ್​​ಗಳು ಓಟದ ಕಣಕ್ಕೆ ಇಳಿಯಲಿದ್ದಾರೆ. ಬೆಂಗಳೂರಿನ ಬೀದಿಗಳಲ್ಲಿ ಆಯೋಜಿಸಲಾದ ಈ ಓಟವು ಒಟ್ಟು 1.75 ಕೋಟಿ ರೂಪಾಯಿ (2,10000 ಯುಎಸ್ ಡಾಲರ್) ಬಹುಮಾನವನ್ನು ಹೊಂದಿದೆ. 67 ಅಥ್ಲೀಟ್​ಗಳನ್ನು ಒಳಗೊಂಡಿರುವ ಭಾರತೀಯ ಎಲೈಟ್ ಶ್ರೇಣಿಯಲ್ಲಿ ಪುರುಷರ ಮತ್ತು ಮಹಿಳಾ ವಿಜೇತರಿಗೆ ತಲಾ 2,75,000 ರೂ.ಗಳ ನಗದು ನಗದು ಬಹುಮಾನ ಮತ್ತು ಕೋರ್ಸ್ ದಾಖಲೆಯನ್ನು ಮುರಿದರೆ ಇನ್ನೂ 1,00,000 ರೂ.ಗಳ ಬೋನಸ್ ದೊರೆಯಲಿದೆ.

ಕರ್ನಾಟಕದ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಮತ್ತು ಕೆಎಎ ಅಧ್ಯಕ್ಷ ಮತ್ತು ಬ್ಯಾಸ್ಕೆಟ್ ಬಾಲ್ ಫೆಡರೇಶನ್ ಅಧ್ಯಕ್ಷ ಕೆ.ಗೋವಿಂದರಾಜ್ ಸೇರಿದಂತೆ ಗಣ್ಯರು ರೇಸ್ ಗೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಮಾಣೆಕ್ ಶಾ ಪರೇಡ್​ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ.

ರೇಸ್​ ಸಮಯ ಈ ರೀತಿ ಇದೆ

  • ಓಪನ್ 10K ಮತ್ತು ಪೊಲೀಸ್ ಕಪ್ – ಬೆಳಿಗ್ಗೆ 5:10
  • ವಿಶ್ವ 10K ಮಹಿಳೆಯರು – ಬೆಳಿಗ್ಗೆ 6:40
  • ವಿಶ್ವ 10K ಪುರುಷರು – ಬೆಳಿಗ್ಗೆ 7:30
  • ಮಜ್ಜಾ ರನ್ – ಬೆಳಿಗ್ಗೆ 8:15
  • ಚಾಂಪಿಯನ್ಸ್ ವಿತ್ ಡಿಸೆಬಿಲಿಟಿಸ್ ಮತ್ತು ಸಿಲ್ವರ್ ರನ್ – ಬೆಳಿಗ್ಗೆ 8:40

ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಷಾ ಪರೇಡ್ ಮೈದಾನದ ಪ್ರವೇಶದ್ವಾರದ ಮುಂಭಾಗದ ರಸ್ತೆಯಲ್ಲಿ ಎಲ್ಲಾ ವಿಭಾಗಗಳ ಓಟಕ್ಕೆ ಹಸಿರು ನಿಶಾನೆ ತೋರಲಾಗುತ್ತದೆ. ಪದಕ ಪ್ರದಾನ ಸಮಾರಂಭವು ಮೈದಾನದ ಒಳಗೆ ನಡೆಯಲಿದೆ.

ಹಾಲಿ ಚಾಂಪಿಯನ್ ತಮ್ಶಿ ಸಿಂಗ್ ಮತ್ತು ನ್ಯಾಷನಲ್ ಕೋರ್ಸ್ ರೆಕಾರ್ಡ್ ಹೋಲ್ಡರ್ ಸಂಜೀವಿನಿ ಜಾಧವ್ ಅವರು ಭಾರತದ ಮಹಿಳಾ ಓಟಗಾರರನ್ನು ಮುನ್ನಡೆಸಲಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಗೋಲ್ಡ್ ಲೇಬಲ್ ರೋಡ್ ರೇಸ್​​ ಮುಂಚಿತವಾಗಿ ಮಾತನಾಡಿದ ಸಂಜೀವಿನಿ ಜಾಧವ್, “ನನ್ನ ತರಬೇತಿ ಉತ್ತಮವಾಗಿ ನಡೆಯುತ್ತಿದೆ. ನಾನು ಭಾನುವಾರ ಸ್ಪರ್ಧೆಯನ್ನು ಎದುರು ನೋಡುತ್ತಿದ್ದೇನೆ. ನನ್ನ ಅತ್ಯುತ್ತಮ ಪ್ರದರ್ಶನ ನೀಡುವುದು ನನ್ನ ಗುರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

ಭಾರತೀಯ ಎಲೈಟ್​ ಮಹಿಳಾ ಓಟಗಾರರಲ್ಲಿ ಸಂಘಮಿತ್ರ ಮಹತಾ, ಪೂನಂ ದಿನಕರ್ ಸೋನುನೆ, ಏಕ್ತಾ ರಾವತ್, ಉಜಾಲಾ, ಪ್ರೀನು ಯಾದವ್, ಫೂಲನ್ ಪಾಲ್, ಭಾರತಿ ನೈನ್, ಚಾವಿ ಯಾದವ್ ಮತ್ತು ಸೀಮಾ ಕೂಡ ಮುಂಚೂಣಿಯಲ್ಲಿದ್ದಾರೆ.

ಪುರುಷರ ಸಾಲಿನಲ್ಲಿ ಯಾರ್ಯಾರು?

ಭಾರತೀಯ ಪುರುಷರ ಸಾಲಿನಲ್ಲಿ ಕಳೆದ ವರ್ಷದ ರನ್ನರ್ ಅಪ್ ಹರ್ಮನ್​ಜೋತ್​ ಸಿಂಗ್ 30:00 ನಿಮಿಷಗಳ ತಮ್ಮ ವೈಯಕ್ತಿಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರು ಈ ಬಾರಿ ಭರವಸೆ ಮೂಡಿಸಿದ್ದಾರೆ.

30 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ

ಟಿಸಿಎಸ್ ವರ್ಲ್ಡ್ 10 ಕೆಯಲ್ಲಿ ಈ ಬಾರಿ ಬೆಂಗಳೂರಿನ ಗ್ರೌಂಡ್ ಮತ್ತು ವರ್ಚುವಲ್ ವಿಭಾಗಗಳಲ್ಲಿ 30,000 ಕ್ಕೂ ಹೆಚ್ಚು ಭಾಗವಹಿಸಲಿದ್ದಾರೆ. ಉತ್ತಮ್ ಚಂದ್, ನಿತೇಂದ್ರ ಸಿಂಗ್ ರಾವತ್, ಧರ್ಮೇಂದ್ರ, ವಿವೇಕ್ ಸಿಂಗ್ ಮೋರೆ, ಸಂದೀಪ್ ಸಿಂಗ್, ದಿನೇಶ್, ದೀಪಕ್ ಭಟ್, ಮೋಹನ್ ಸೈನಿ, ಅಮೃತ್ ಸಿಂಗ್ ಬೋಹ್ರಾ ಮತ್ತು ಸಂದೀಪ್ ದೇವ್ರಾರಿ ರೇಸ್ನಲ್ಲಿ ಸ್ಪರ್ಧಿಸುತ್ತಿರುವ ಇತರ ಭಾರತೀಯ ಪುರುಷ ಕ್ರೀಡಾಪಟುಗಳು.

Continue Reading

ಉತ್ತರ ಕನ್ನಡ

Lok Sabha Election 2024: ಲೋಕಸಭಾ ಚುನಾವಣೆ ಸಿಬ್ಬಂದಿಗೆ ತಯಾರಾಗಿದೆ ವಿಶೇಷ ಕಿಟ್

Lok Sabha Election 2024: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 7ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಎಲ್ಲಾ ದೈನಂದಿನ ಉಪಯೋಗಕ್ಕೆ ಅಗತ್ಯವಿರುವ ವಸ್ತುಗಳನ್ನು ಒಳಗೊಂಡ ವಿಶೇಷ ಕಿಟ್ ಸಿದ್ದಗೊಂಡಿದ್ದು, ಕೈಗಾ ಸಂಸ್ಥೆಯು ತನ್ನ ಸಿ.ಎಸ್.ಆರ್ ಫಂಡ್ ಯೋಜನೆಯಡಿ ಸಿದ್ದಪಡಿಸಿರುವ ಈ ಕಿಟ್ ಅನ್ನು ಕೈಗಾ ಅಧಿಕಾರಿಗಳು ಶನಿವಾರ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.

VISTARANEWS.COM


on

Lok Sabha Election 2024 special kit for the polling staff
Koo

ಕಾರವಾರ: ಜಿಲ್ಲೆಯಲ್ಲಿ ಮೇ 7ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ (Lok Sabha Election 2024) ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಎಲ್ಲಾ ಸಿಬ್ಬಂದಿಗೆ ದೈನಂದಿನ ಉಪಯೋಗಕ್ಕೆ ಅಗತ್ಯವಿರುವ ವಸ್ತುಗಳನ್ನು ಒಳಗೊಂಡ ವಿಶೇಷ ಕಿಟ್ (Special Kit) ಸಿದ್ದಗೊಂಡಿದ್ದು, ಕೈಗಾ ಸಂಸ್ಥೆಯು ತನ್ನ ಸಿ.ಎಸ್.ಆರ್ ಫಂಡ್ ಯೋಜನೆಯಡಿ ಸಿದ್ದಪಡಿಸಿರುವ ಈ ಕಿಟ್ ಅನ್ನು ಕೈಗಾ ಅಧಿಕಾರಿಗಳು ಶನಿವಾರ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.

ಈ ಕಿಟ್‌ನಲ್ಲಿ ಪ್ರತಿಯೊಬ್ಬರೂ ದೈನಂದಿನ ಉಪಯೋಗಕ್ಕೆ ಬಳಸುವ ಟೂತ್ ಬ್ರಶ್, ಟೂತ್‌ಪೇಸ್ಟ್, ಸೋಪು, ಬಾಚಣಿಗೆ, ಸ್ಯಾನಿಟೈಸರ್ ಅಲ್ಲದೇ ಮತಗಟ್ಟೆಯಲ್ಲಿ ಸೊಳ್ಳೆಗಳಿದ್ದಲ್ಲಿ ಸಿಬ್ಬಂದಿಗಳು ಅದರಿಂದ ರಕ್ಷಿಸಿಕೊಳ್ಳಲು ಸೊಳ್ಳೆ ನಿವಾರಕ ಕ್ರೀಮ್ ಸಹ ಲಭ್ಯವಿದೆ.

ಇದನ್ನೂ ಓದಿ: Koppala News: ಅಕ್ರಮ ಜಾನುವಾರು ಸಾಗಾಟ: 9 ಜನ ಆರೋಪಿಗಳ ಬಂಧನ

ಕೈಗಾ ಸಂಸ್ಥೆಯು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿ ಯೋಜನೆಯಡಿ ಒಟ್ಟು 7500 ಕಿಟ್ ಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದು, ಈ ಕಿಟ್ ಗಳನ್ನು ಮೇ 6 ರಂದು ನಡೆಯುವ ಮತಯಂತ್ರಗಳ ಮಸ್ಟರಿಂಗ್ ಸಮಯದಲ್ಲಿ ಮತಗಟ್ಟೆ ಸಾಮಗ್ರಿಗಳ ಜತೆಗೆ ಎಲ್ಲಾ ಮತಗಟ್ಟೆ ಸಿಬ್ಬಂದಿಗೆ ವಿತರಿಸಲಾಗುವುದು.

ಕೈಗಾ ಸಂಸ್ಥೆಯು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿ ಯೋಜನೆಯಡಿ ಜಿಲ್ಲಾಡಳಿತದ ಕಾರ್ಯಕ್ರಮಗಳಿಗೆ ನಿರಂತರವಾಗಿ ನೆರವು ನೀಡುತ್ತಿದ್ದು, ಪ್ರಸಕ್ತ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಹ ಜಿಲ್ಲೆಯ ಎಲ್ಲಾ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳ ಆರೋಗ್ಯದ ದೃಷ್ಟಿಯಿಂದ, ದೈನಂದಿನ ಉಪಯೋಗಕ್ಕೆ ಅಗತ್ಯವಿರುವ ಕಿಟ್‌ಗಳನ್ನು ನೀಡಿದೆ. ಈ ಕಿಟ್‌ನಲ್ಲಿನ ವಸ್ತುಗಳ ಬಳಕೆಯಿಂದ ಸಿಬ್ಬಂದಿ ಮತದಾನದ ದಿನ ಇನ್ನಷ್ಟು ಹೆಚ್ಚು ಲವಲವಿಕೆಯಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಲಿದ್ದು, ಇದಕ್ಕಾಗಿ ಜಿಲ್ಲಾಡಳಿತದ ಪರವಾಗಿ ಕೈಗಾ ಸಂಸ್ಥೆಗೆ ಕೃತಜ್ಞತೆ ಸಲ್ಲಿಸುವುದಾಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಹೇಳಿದರು.

ಇದನ್ನೂ ಓದಿ: MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

ಈ ವೇಳೆ ಕೈಗಾ ಸಂಸ್ಥೆಯ ಸಿ.ಎಸ್.ಆರ್ ಫಂಡ್ ಯೋಜನೆಯ ಸದಸ್ಯ ಕಾರ್ಯದರ್ಶಿ ಆಶೀಶ್ ಲಾಲ್ ಹಾಗೂ ಸದಸ್ಯ ದಿನೇಶ್ ಗಾಂವಕರ್ ಕಿಟ್ ಗಳನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಿದರು.

Continue Reading

ಕರ್ನಾಟಕ

Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

Zameer Ahmed Khan‌: ಗೋಕಾಕ್ ನಗರದಲ್ಲಿ‌ ನಡೆದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಜಮೀರ್‌ ಅಹ್ಮದ್‌ ಅವರು ಭಾಷಣ ಮಾಡುತ್ತಿದ್ದಾಗ, ಡಯಾಸ್‌ ಮೇಲೆ ಗುದ್ದಿ ಗಾಜನ್ನು ಪುಡಿಪುಡಿ ಮಾಡಿದ್ದಾರೆ.

VISTARANEWS.COM


on

Zameer Ahmed Khan‌
Koo

ಬೆಳಗಾವಿ: ರೋಷಾವೇಶವಾಗಿ ಭಾಷಣ ಮಾಡುವ ವೇಳೆ ಸಚಿವ ಜಮೀರ್ ಅಹ್ಮದ್‌ ಅವರು ಕೈಯಿಂದ ಗುದ್ದಿ ಡಯಾಸ್‌ ಗಾಜನ್ನು ಪುಡಿ ಪುಡಿ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಗೋಕಾಕ್ ನಗರದಲ್ಲಿ‌ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಕೈ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಜಮೀರ್‌ ಅಹ್ಮದ್‌ (Zameer Ahmed Khan‌) ಅವರು ಭಾಷಣ ಮಾಡುತ್ತಿದ್ದರು. ಈ ವೇಳೆ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕುತ್ತಾ ಡಯಾಸ್‌ ಮೇಲೆ ಗುದ್ದಿದ್ದರಿಂದ ಗಾಜು ಪುಡಿಪುಡಿಯಾಗಿದ್ದು, ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಗೋಕಾಕ್‌ ಕೆಜಿಎನ್ ಹಾಲ್‌ ಶನಿವಾರ ನಡೆದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಘಟನೆ ನಡೆದಿದೆ. ಭಾಷಣದ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಜಮೀರ್‌ ಅಹ್ಮದ್‌ ಅವರು, ಮುಸ್ಲಿಮರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು. ಎದೆಗೆ ಗುಂಡು ತಿಂದು ಸ್ವಾತಂತ್ರ್ಯವನ್ನು ತಂದು ಕೊಟ್ಟಿದ್ದಾರೆ. ಆದರೆ, ಬಿಜೆಪಿಯವರು ಕೋಮು ದ್ವೇಷ ಬಿತ್ತಲು ಮುಂದಾಗುತ್ತಾರೆ ಎಂದು ಆರೋಪಿಸಿದರು.

ಸಾರೇ ಜಹಾಂಸೇ ಅಚ್ಚಾ, ನಾವೆಲ್ಲ ಒಂದು, ದೇಶ ಹಮಾರಾ ಹೈ ಹಮಾರಾ ಹೈ ಎನ್ನುತ್ತಾ ಜಮೀರ್ ಅವರು ಕೈಯಿಂದ ಡಯಾಸ್ ಗಾಜಿಗೆ ಗುದ್ದಿದ್ದಾರೆ. ಜಮೀರ್ ಗುದ್ದುತ್ತಿದ್ದಂತೆಯೇ ಡಯಾಸ್‌ಗೆ ಅಳವಡಿಸಿದ ಗಾಜು ಒಡೆದು ಚೂರು ಚೂರಾಗಿದೆ. ಈ ವೇಳೆ ಅಲ್ಲೆ ನೆರೆದಿದ್ದ ಕಾರ್ಯಕರ್ತರು ಕೂಗ ತೊಡಗಿದರು. ಗಾಜು ಒಡೆದರೂ ಸಚಿವರು ಮಾತ್ರ ತಮ್ಮ ಭಾಷಣ ಮುಂದುವರೆಸಿದ್ದು ಕಂಡುಬಂತು.

ಇವ್ರು ನಮ್ಮ ಪ್ರಧಾನಿ ಮೋದಿ ಅಲ್ಲ; ಪಾನಿಪುರಿ ಮಾರೋ ಈ ಮೋದಿ ಫುಲ್‌ ಫೇಮಸ್‌

ಗುಜರಾತ್‌: ದೇಶಾದ್ಯಂತ ಲೋಕಸಭೆ ಚುನಾವಣೆ ರಂಗೇರಿದೆ. ಅಬ್ಬರದ ಪ್ರಚಾರ, ಪ್ರತಿಪಕ್ಷಗಳಿಗೆ ಟಾಂಗ್‌ ಕೊಡುತ್ತಾ ಒಂದೆಡೆ ಪ್ರಧಾನಿ ಮೋದಿ ಬ್ಯುಸಿ ಆಗಿದ್ದರೆ, ಮತ್ತೊಂದೆಡೆ ಗುಜರಾತ್‌ನಲ್ಲೊಬ್ಬ ಮೋದಿ ಪಾನಿಪುರಿ(Viral video) ಮಾರುತ್ತಾ ಎಲ್ಲರನ್ನು ತನ್ನತ್ತ ಸೆಳೆಯುತ್ತಿದ್ದಾನೆ. ಒಂದು ಕ್ಷಣ ನೋಡೋರಿಗೆ ಪ್ರಧಾನಿ ಮೋದಿಯೇ ಪಾನಿಪುರಿ ಮಾರುತ್ತಿದ್ದಾರೋ ಅಂತ ಅನಿಸೋದು ಪಕ್ಕಾ! ಗುಜರಾತ್‌ನ ಆನಂದ್‌ನಲ್ಲಿ ಪಾನಿಪುರಿ ಅಂಗಡಿ(Pani puri seller) ನಡೆಸುತ್ತಿರುವ ಅನಿಲ್‌ ಭಾಯಿ ಠಕ್ಕರ್‌ ಪ್ರಧಾನಿ ನರೇಂದ್ರ ಮೋದಿ(Narendra Modi) ಯಂತೆ ಉಡುಪು ತೊಟ್ಟು, ಕನ್ನಡಕ ಧರಿಸಿ, ಹೇರ್‌ಸ್ಟೈಲ್‌ ಮಾಡಿಕೊಂಡು ಸ್ಥಳೀಯ ಮಟ್ಟದಲ್ಲಿ ಮೋದಿ ಎಂದೇ ಫುಲ್‌ ಫೇಮಸ್‌ ಆಗಿದ್ದಾರೆ.

ಬಿಳಿ ಗಡ್ಡ, ಕೇಶ ವಿನ್ಯಾಸ ಆತನ ಹಾವಭಾವ ಪ್ರಧಾನಿ ಮೋದಿಗೆ ಹೋಲುತ್ತಿರುವ ಠಕ್ಕರ್‌, ಮೂಲತಃ ಜುನಾಗಢ್‌ ನಿವಾಸಿ. ಅವರು ತಮ್ಮ 18ನೇ ವಯಸ್ಸಿನಿಂದಲೂ ತುಳಸಿ ಪಾನಿ ಪುರಿ ಎಂಬ ಅಂಗಡಿಯನ್ನು ನಡೆಸುತ್ತಿದ್ದಾರೆ. ಈ ಅಂಗಡಿಯನ್ನು ಅವರ ತಾತ ಶುರು ಮಾಡಿದ್ದರು ಎಂಬುದು ವಿಶೇಷ. ಇನ್ನು ಮೋದಿಯಂತೆ ಕಾಣುತ್ತಿರುವ ಠಕ್ಕರ್‌ ಅವರ ವಿಶೇಷ ಲುಕ್‌ಗೆ ಮನಸೋತಿರುವ ಗ್ರಾಹಕರು ಅವರ ಬಳಿ ಬಂದು ಪಾನಿಪುರಿ ತಿಂದು ಸೆಲ್ಫಿ ಕ್ಲಿಕ್ಕಿಸಿಕೊಂಡು ಹೋಗುತ್ತಿದ್ದಾರೆ.

ಸುಮಾರು 71 ವರ್ಷದ ಠಕ್ಕರ್‌ ಪ್ರಧಾನಿ ನರೇಂದ್ರ ಮೋದಿಯ ಅಪ್ಪಟ ಅಭಿಮಾನಿ. ಅವರ ಸ್ವಚ್ಛ ಭಾರತ ಅಭಿಯಾನದಿಂದ ಬಹಳಷ್ಟು ಸ್ಫೂರ್ತಿಗೊಂಡಿರುವ ಠಕ್ಕರ್‌ ತಮ್ಮ ಅಂಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುತ್ತಾರೆ. ತಮ್ಮ ವಿಶೇಷ ಲುಕ್‌ ಬಗ್ಗೆ ಪ್ರತಿಕ್ರಿಯಿಸಿರುವ ಠಕ್ಕರ್‌, ನನ್ನ ಪ್ರಧಾನಿ ಮೋದಿಯ ಲುಕ್‌ ಬಗ್ಗೆ ಜನ ಅತ್ಯಂತ ಪ್ರೀತಿ ತೋರುತ್ತಿದ್ದಾರೆ. ಸ್ಥಳೀಯರು ಮತ್ತು ಪ್ರವಾಸಿಗರು ನನ್ನ ಬಳಿ ಬಂದು ಸೆಲ್ಫಿ ತೆಗೆದುಕೊಂಡು ಹೋಗುವುದು ಬಹಳ ಸಂತೋಷ ಕೊಡುತ್ತಿದೆ. ಅವರ ಪ್ರೀತಿ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Mamata Banerjee: ಹೆಲಿಕಾಪ್ಟರ್‌ ಏರುವಾಗ ಬಿದ್ದ ಮಮತಾ ಬ್ಯಾನರ್ಜಿ, ಗಾಯ

ಇನ್ನು ಠಕ್ಕರ್‌ ಮಾತ್ರವಲ್ಲ ಮುಂಬೈನಲ್ಲೂ ಮತ್ತೋರ್ವ ವ್ಯಕ್ತಿಯೂ ಪ್ರಧಾನಿ ಮೋದಿಯಂತೆ ತನ್ನ ಸ್ಟೈಲ್‌ ಅನ್ನು ಬದಲಿಸಿಕೊಂಡು ಫುಲ್‌ ಫೇಮಸ್‌ ಆಗಿದ್ದಾನೆ. ಮುಂಬೈನ ವಿಕಾಸ್‌ ಮಹಂತೆ ಎಂಬಾತ ಗರ್ಬಾ ಡಾನ್ಸ್‌ ಮಾಡುತ್ತಿರುವ ವಿಡಿಯೋ ಫೇಮಸ್‌ ಆಗಿತ್ತು. ಇದು ಪ್ರಧಾನಿ ಮೋದಿಯ ಡೀಪ್‌ ಫೇಕ್‌ ವಿಡಿಯೋ ಎನ್ನಲಾಗಿತ್ತು. ಆದಾದ ಬಳಿಕ ಸ್ವತಃ ವಿಕಾಸ್‌ ಮಹಾಂತೆ ವಿಡಿಯೋದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ತಾವೊಬ್ಬ ಪ್ರಧಾನಿ ಮೋದಿಯ ಅಭಿಯಾನಿ. ಆ ವಿಡಿಯೋ ಸ್ವತಃ ತನ್ನದೇ ಎಂದು ಹೇಳಿದ್ದರು. ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಆಗಾಗ ಜೂನಿಯರ್‌ ಮೋದಿಗಳು ಗಮನ ಸೆಳೆಯುತ್ತಿರುತ್ತಾರೆ. ಆದರೆ ಇದೀಗ ಪಾನಿಪುರಿ ಮಾರುತ್ತಿರುವ ಮೋದಿಯನ್ನು ಕಂಡು ಜನಕ್ಕೆ ಖುಷಿಯೋ ಖುಷಿ.





Continue Reading
Advertisement
Hasan pen drive case
ಕರ್ನಾಟಕ17 mins ago

Hasan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Air Force Chopper
ದೇಶ46 mins ago

Air Force Chopper: ಉತ್ತರಾಖಂಡದಲ್ಲಿ ಕಾಡಿನ ಬೆಂಕಿ ನಂದಿಸಲು ವಾಯು ಪಡೆಯ ಹೆಲಿಕಾಪ್ಟರ್‌ ಬಳಕೆ

TCS World 10K
ಬೆಂಗಳೂರು50 mins ago

TCS World 10K : ನಾಳೆ ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತಿಯ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್​

Lok Sabha Election 2024 special kit for the polling staff
ಉತ್ತರ ಕನ್ನಡ54 mins ago

Lok Sabha Election 2024: ಲೋಕಸಭಾ ಚುನಾವಣೆ ಸಿಬ್ಬಂದಿಗೆ ತಯಾರಾಗಿದೆ ವಿಶೇಷ ಕಿಟ್

virat kohli
ಪ್ರಮುಖ ಸುದ್ದಿ1 hour ago

Virat Kohli : ಅಭ್ಯಾಸದ ಮಧ್ಯೆ ಮೊಬೈಲ್​ನಲ್ಲೇ ಡೆಲ್ಲಿ ವರ್ಸಸ್​​ ಮುಂಬೈ ಮ್ಯಾಚ್ ನೋಡಿದ ಕೊಹ್ಲಿ

MDH, Everest Spices
ವಿದೇಶ2 hours ago

MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

Zameer Ahmed Khan‌
ಕರ್ನಾಟಕ2 hours ago

Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

Medical Negligence
ಕ್ರೈಂ2 hours ago

Medical Negligence: ಆಸ್ಪತ್ರೆ ನಿರ್ಲಕ್ಷ್ಯದಿಂದ ಬಾಲಕ ಸಾವು: 10 ಲಕ್ಷ ರೂ. ಪರಿಹಾರ ಘೋಷಿಸಿದ ಕೋರ್ಟ್​​

IPL 2024
ಕ್ರೀಡೆ2 hours ago

IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

Viral News
ವೈರಲ್ ನ್ಯೂಸ್2 hours ago

Viral News: ಅಪ್ರಾಪ್ತ ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಬಿತ್ತು ಗೂಸಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20246 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ11 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ17 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌