Site icon Vistara News

Siddeshwara Swamiji: ಶಾಲಾ ವಿದ್ಯಾರ್ಥಿಗಳಿಂದ ಸಿದ್ದೇಶ್ವರ ಶ್ರೀಗಳ ಮರುಸೃಷ್ಟಿ; ದೃಶ್ಯ ರೂಪಕ ವೈರಲ್‌

ವಿಜಯಪುರ: ನಡೆದಾಡುವ ದೇವರೆಂದೇ ಭಕ್ತ ಜನರು ನಂಬಿದ್ದ ಮಹಾ ಸಂತ ಸಿದ್ದೇಶ್ವರ ಸ್ವಾಮೀಜಿಯವರ (Siddeshwara Swamiji) ದೃಶ್ಯ ರೂಪಕ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಗಣರಾಜ್ಯೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಸಿದ್ದೇಶ್ವರ ದೃಶ್ಯ ರೂಪಕ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇಲ್ಲಿನ ಚಡಚಣ ತಾಲೂಕಿನ ಮಣಂಕಲಗಿ ಗ್ರಾಮದ ಶಾಲಾ ವಿದ್ಯಾರ್ಥಿಗಳು, ಸಂತನೆಂದರೆ ಯಾರು ಎನ್ನುವ ಹಾಡಿನೊಂದಿಗೆ ಶ್ರೀಗಳ ದೃಶ್ಯ ರೂಪಕವನ್ನು ಮಾಡಿ ತೋರಿಸಿದ್ದಾರೆ. ತಮ್ಮ ಮಾತಿನ ಮೂಲಕವೇ ಜಗವನ್ನು ಗೆದ್ದ ಶ್ರೀಗಳು ಇಂದು ನಮ್ಮೊಂದಿಗೆ ಇಲ್ಲವಾದರೂ, ಅವರ ನಡೆ-ನುಡಿ, ಅವರ ಆದರ್ಶಗಳು ಜೀವಂತವಾಗಿವೆ.

ಇದನ್ನೂ ಓದಿ: Ola Cab Compensation: ಓಲಾ ಕ್ಯಾಬ್‌ನಲ್ಲಿ ಎಸಿ ಇಲ್ಲದ್ದಕ್ಕೆ ದೂರು, ಬೆಂಗಳೂರು ವ್ಯಕ್ತಿಗೆ 15 ಸಾವಿರ ರೂ. ಪರಿಹಾರ

ಅವರಾಡುವ ಮಾತುಗಳೆಲ್ಲ ದಿವ್ಯವಾಣಿ ಎಂತಿದ್ದವು. ೮೨ ವರ್ಷಗಳ ಸಾರ್ಥಕ ಬದುಕಿನ ಉದ್ದಕ್ಕೂ ಸ್ವಂತದ ಬಗ್ಗೆ ಸಾಸಿವೆಯಷ್ಟೂ ಯೋಚಿಸದ ಶ್ರೀಗಳು, ಜಗತ್ತಿನ ಜನರ ಒಳಿತಿನ ಬಗ್ಗೆಯೇ ಧೇನಿಸಿದರು. ತಾವು ಬಿಟ್ಟು ಹೋದ ಉದಾತ್ತ ಆದರ್ಶಗಳ ಮೂಲಕ ಶತಮಾನಗಳ ಆಚೆಗೂ ಚಿರಂತನವಾಗಿ ಉಳಿದಿದ್ದಾರೆ.

ಈಗ ಮಕ್ಕಳ ಈ ದೃಶ್ಯ ರೂಪಕ ಸಾಮಾಜಿಕ ಜಾಲತಾಣದಲ್ಲಿ ಜನರ ಮೆಚ್ಚುಗೆಯನ್ನು ಗಳಿಸುತ್ತಿದೆ. ನೆಟ್ಟಿಗರು ಮಕ್ಕಳ ನಟನೆಗೆ ಸೈ ಎಂದಿದ್ದಾರೆ.

Exit mobile version