Site icon Vistara News

Siddheshwar Swamiji | ಪದ್ಮಶ್ರೀ ಪ್ರಶಸ್ತಿಯನ್ನೂ ವಿನಮ್ರತೆಯಿಂದ ನಿರಾಕರಿಸಿದ್ದ ಸಿದ್ದೇಶ್ವರ ಶ್ರೀಗಳು

Siddeshwar Swamiji Vijaypur

ವಿಜಯಪುರ: ಆಳವಾದ ಅಧ್ಯಯನ, ಚಿಂತನೆ ಮತ್ತು ಪ್ರವಚನಗಳ ಮೂಲಕ ಜನಮಾನಸದಲ್ಲಿ ನೆಲೆಸಿದ್ದ ಶ್ರೀ ಸಿದ್ದೇಶ್ವರ ಶ್ರೀಗಳು (Siddheshwar Swamiji), ಪ್ರಶಸ್ತಿ ಪುರಸ್ಕಾರಗಳಿಂದ ದೂರವೇ ಉಳಿದಿದ್ದರು.

ಕೇಂದ್ರ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಗಳ ಮೇಲೆ ನನಗೆ ಅಪಾರ ಗೌರವವಿದೆ. ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಕ್ಕೆ ಧನ್ಯವಾದಗಳು. ಆದರೆ ನಾನೊಬ್ಬ ಸರಳ ವ್ಯಕ್ತಿ. ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿ ಈ ಪ್ರಶಸ್ತಿಗಳ ಅವಶ್ಯತೆಯು ನನಗಿಲ್ಲ. ಎಲ್ಲ ಗೌರವಾಧರಗಳೊಂದಿಗೆ ಈ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ಅನ್ಯಥಾ ಭಾವಿಸದಿರಿ ಎಂದು ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರಯ ಪದ್ಮಶ್ರೀ ಪ್ರಶಸ್ತಿಯನ್ನು ನಿರಾಕರಿಸಿದ್ದರು.
ಪ್ರಶಸ್ತಿ ಪುರಸ್ಕಾರಗಳಿಗಾಗಿ ಸದಾ ಹಪಹಪಿಸುವ ಗಣ್ಯಮಾನ್ಯರ ನಡುವೆ ಸಿದ್ದೇಶ್ವರ ಶ್ರೀಗಳು ಭಿನ್ನವಾಗಿದ್ದರು. ಪ್ರಶಸ್ತಿಯನ್ನು ಗೌರವಿಸುತ್ತಲೇ ಅವರು ಅದನ್ನು ನಿರಾಕರಿಸಿದ್ದರು.

ಗೌರವ ಡಾಕ್ಟರೇಟ್ ಕೂಡ ಸ್ವೀಕರಿಸಲಿಲ್ಲ…

ಕರ್ನಾಟಕ ವಿಶ್ವವಿದ್ಯಾನಿಲಯವು ಶ್ರೀ ಸಿದ್ದೇಶ್ವರ ಶ್ರೀಗಳಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿತ್ತು. ಅದನ್ನೂ ಶ್ರೀಗಳು ಸ್ವೀಕರಿಸಿರಲಿಲ್ಲ. ಹೀಗೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮ್ರತೆಯಿಂದಲೇ ನಿರಾಕರಿಸಿದ್ದರು.

ಸ್ವಾಮೀಜಿಯವರು ಅಧ್ಯಾತ್ಮ, ಆದರ್ಶ ಮತ್ತು ನೈತಿಕತೆ ಬಗ್ಗೆ ಕೇವಲ ಬೋಧನೆ ಮಾಡುವುದಷ್ಟೇ ಅಲ್ಲ. ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ನುಡಿದಂತೆ ನಡೆಯುವ ಮತ್ತು ನಡೆದಂತೆಯೇ ನುಡಿಯುವ ವ್ಯಕ್ತಿತ್ವ ಅವರದಾಗಿತ್ತು.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ದೇಹಾಂತ್ಯ, ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಕಂಬನಿ

Exit mobile version