ಬೆಂಗಳೂರು: ಸಿದ್ದು ನಿಜಕನಸುಗಳು ಪುಸ್ತಕ ಲೋಕಾರ್ಪಣೆಗೆ ಕಾಂಗ್ರೆಸ್ ಪಕ್ಷದಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಪುಸ್ತಕ ಬಿಡುಗಡೆ ಕಾರ್ಯಕ್ರಮ ಸಾಮರಸ್ಯ ಕದಡುವ ಕೆಲಸವಾಗಿದೆ. ಹೀಗಾಗಿ ಕಾರ್ಯಕ್ರಮವನ್ನು ರದ್ದು ಮಾಡಬೇಕು ಎಂದು ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್, ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಹೆಸರು ಬಳಸಿ ತೇಜೋವಧೆ ಮಾಡಲಾಗುತ್ತಿದೆ. ಪುಸ್ತಕದ ಮುಖಪುಟದಲ್ಲಿ ಅವರ ಭಾವಚಿತ್ರವನ್ನು ವಿರೂಪಗೊಳಿಸಲಾಗಿದೆ. ಕಲ್ಪಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಬರಹಗಳು ಈ ಪುಸ್ತಕದಲ್ಲಿವೆ. ಇದರಿಂದ ಸಾಮರಸ್ಯ ಕದಡುವ ಸಾಧ್ಯತೆಯಿದ್ದು, ಬಿಡುಗಡೆ ಕಾರ್ಯಕ್ರಮ ರದ್ದು ಮಾಡಬೇಕು. ಈ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಆಯೋಜಕರಿಗೆ ಸೂಚನೆ ನೀಡಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ | Siddaramaiah VS BJP | ಅಂದಿನ ಟಿಪ್ಪು ಇಂದಿನ ಸಿದ್ದುವೇ? ಸಿದ್ದು ನಿಜ ಕನಸುಗಳು ಪುಸ್ತಕ ಸಿದ್ಧಪಡಿಸಿದ ಬಿಜೆಪಿ: ಜ. 9ಕ್ಕೆ ರಿಲೀಸ್