ಮೈಸೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದ ಸಂಬೋಧಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಯನ್ನು ಸಚಿವ ಡಾ. ಅಶ್ವತ್ಥ ನಾರಾಯಣ ಸಮರ್ಥಿಸಿದ್ದಾರೆ.
ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅಶ್ವತ್ಥ ನಾರಾಯಣ ಅವರು ಈ ಹೇಳಿಕೆ ನೀಡಿದ್ದಾರೆ.
ʻʻಸಿದ್ದರಾಮಯ್ಯ ಸಿದ್ರಾಮುಲ್ಲಾಖಾನ್ ಎಂಬುದು ಇಡೀ ಜಗತ್ತಿಗೆ ಗೊತ್ತು. ಸಿದ್ದರಾಮಯ್ಯ ಅವರ ಹೆಸರನ್ನು ಸಿದ್ರಾಮುಲ್ಲಾ ಖಾನ್ ಎಂದು ಬದಲಾಯಿಸಿಕೊಳ್ಳುವುದು ಒಳಿತುʼʼ ಎಂದು ಹೇಳಿದರು. ಇದೇ ವಿಚಾರ ಮುಂದಿಟ್ಟುಕೊಂಡು ಚಿಕ್ಕಮಗಳೂರಿನಲ್ಲಿ ಸಿ ಟಿ ರವಿ ನಿವಾಸಕ್ಕೆ ಮುತ್ತಿಗೆ ಹಾಕಿರುವ ಕಾಂಗ್ರೆಸ್ ವಿರುದ್ಧವೂ ಸಚಿವ ಅಶ್ವತ್ಥ ನಾರಾಯಣ ಹರಿಹಾಯ್ದರು.
ರೌಡಿ ಶೀಟರ್ ಸೇರ್ಪಡೆ ವಿಚಾರಕ್ಕೆ ಮೌನ
ಬಿಜೆಪಿಗೆ ರೌಡಿಶೀಟರ್ ಗಳನ್ನು ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ಸಚಿವ ಅಶ್ವತ್ಥ ನಾರಾಯಣ ನಿರಾಕರಿಸಿದರು.
ʻʻಬರೀ ಅದೇ ವಿಚಾರ ಏಕೆ ಕೇಳುತ್ತೀರಿ ಬೇರೆ ವಿಚಾರಗಳು ಇದ್ದರೆ ಕೇಳಿ. ಕಾಂಗ್ರೆಸ್ ನವರು ನಾವೇ ಅಧಿಕಾರಕ್ಕೆ ಬರುತ್ತೇವೆಂದು ಕನಸು ಕಾಣುತ್ತಿದ್ದಾರೆ. ಅವರು ಪರಸ್ಪರ ಕಿತ್ತಾಡುತ್ತಿದ್ದಾರೆ. ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರೋದಿಲ್ಲ. ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆʼʼ ಎಂದರು.
ಇದನ್ನೂ ಓದಿ | ಹಿಂದಿನ RSS ಈಗಿಲ್ಲ: ಸಿದ್ದರಾಮಯ್ಯ ಬಗ್ಗೆ C.T. ರವಿ ಮಾತಾಡಿದರೆ ಪ್ರತಿಭಟನೆ ಎಂದ ಕಾಂಗ್ರೆಸ್ MLC ರಾಜೇಂದ್ರ