ಅರಣ್ಯ, ಪರಿಸರ ಇಲಾಖೆ ಅಧಿಕಾರಿಗಳಿಗೆ ನೂತನ ಕೋರ್ಸ್, ಮಹತ್ವದ ಒಡಂಬಡಿಕೆಗೆ ಸಹಿ B Somashekhar 2 ವರ್ಷಗಳು ago ಅರಣ್ಯ ಹಾಗೂ ಪರಿಸರ ಇಲಾಖೆ ಅಧಿಕಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ಕಾನೂನಿನ ಸಮರ್ಥ ಜಾರಿಗಾಗಿ ಡೆಹ್ರಾಡೂನ್‌ನ ಇಂದಿರಾ ಗಾಂಧಿ ರಾಷ್ಟ್ರೀಯ ಅರಣ್ಯ ಅಕಾಡೆಮಿ (IGNFA) ಹಾಗೂ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ (NLSIU) ಮಧ್ಯೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದರಂತೆ, ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿಗಳು ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೋಮಾ ಇನ್ ಎನ್‌ವಿರಾನ್‌ಮೆಂಟಲ್ ಲಾ (PGDEL) ಕೋರ್ಸ್ ಮಾಡಲು ನೆರವಾಗಲಿದೆ. ಇದರಲ್ಲಿ ಕಾನೂನು ಜಾರಿ ಕುರಿತು ಪ್ರೊಬೇಷನರಿ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತದೆ. ಇದನ್ನೂ ಓದಿ: ವಿಸ್ತಾರ ನ್ಯೂಸ್‌ನ ನಮ್ಮೂರ ಶಾಲೆ-ನಮ್ಮೆಲ್ಲರ ಶಾಲೆ ಅಭಿಯಾನ: ಶಿಕ್ಷಣ ಇಲಾಖೆ ಜತೆ ಮಹತ್ವದ ಒಡಂಬಡಿಕೆ