Site icon Vistara News

Silk Board Flyover: ಸಿಲ್ಕ್‌ ಬೋರ್ಡ್‌ ಫ್ಲೈ ಓವರ್ 4 ತಿಂಗಳು ಬಂದ್‌; ಕಾರಣವೇನು?

Silk Board flyover

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ (ಬಿಎಂಆರ್‌ಸಿಎಲ್‌) ಮೆಟ್ರೋ ಮಾರ್ಗ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಅ.21ರಿಂದ ನಾಲ್ಕು ತಿಂಗಳವರೆಗೆ ನಗರದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ ಫ್ಲೈ ಓವರ್ (Silk Board Flyover) ಮಡಿವಾಳ ಬದಿ ಭಾಗಶಃ ಮುಚ್ಚಲಾಗಿದೆ.

ಈ ಬಗ್ಗೆ ಬಿಎಂಆರ್‌ಸಿಎಲ್ ಮಾಹಿತಿ ನೀಡಿದ್ದು, ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಮೇಲ್ಸೇತುವೆ ಅಪ್ ಮತ್ತು ಡೌನ್ ರ‍್ಯಾಂಪ್ ಕ್ಯಾರೇಜ್ ವೇ (ಮಡಿವಾಳ ಬದಿ) ಲೂಪ್‌ಗಳು ಮತ್ತು ರ‍್ಯಾಂಪ್ ಫ್ಲೈ ಓವರ್ ಸ್ಟೇಜಿಂಗ್ ಕಾಮಗಾರಿ ಕೈಗೊಳ್ಳಲು ತಾತ್ಕಾಲಿಕವಾಗಿ ಅ. 21ರಿಂದ 4 ತಿಂಗಳುಗಳವರೆಗೆ (ಎರಡೂ ಗ್ಯಾರೇಜ್ ಮಾರ್ಗಗಳಲ್ಲಿ 2.50 ಮೀಟರ್) ಭಾಗಶಃ ಬ್ಯಾರಿಕೇಡ್ ಮಾಡಲಾಗುವುದು. ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸುತ್ತೇವೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದೆ.

ಉಚಿತ ಪ್ರಯಾಣಕ್ಕೆ ಭರ್ಜರಿ ರೆಸ್ಪಾನ್ಸ್‌; 5675 ಹೊಸ ಬಸ್‌ ಖರೀದಿಗೆ ಸಿಎಂ ಸೂಚನೆ

ಬೆಂಗಳೂರು: ಶಕ್ತಿ ಯೋಜನೆಗೆ (Shakti Scheme) ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್‌ ಖರೀದಿಯ (5675 New bus purchase) ಗುರಿ ಹೊಂದಲಾಗಿದ್ದು, ಈ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸೂಚಿಸಿದ್ದಾರೆ. ಅವರು ಶನಿವಾರ ಸಾರಿಗೆ ಇಲಾಖೆಯ (Transport department) ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಸಾರಿಗೆ ಇಲಾಖೆಯ ರಾಜಸ್ವ ಗುರಿ ಸಂಗ್ರಹ ಹಾಗೂ ಸಾರಿಗೆ ನಿಗಮಗಳ ಹಣಕಾಸು ನಿರ್ವಹಣೆ ಕುರಿತಂತೆ ಚರ್ಚೆ ನಡೆಸಲು ಕರೆದಿದ್ದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಹಲವು ಸೂಚನೆಗಳನ್ನು ನೀಡಿದರು.

ಇದನ್ನೂ ಓದಿ | Transport Department: ಸಾರಿಗೆ ನಿಗಮಗಳಲ್ಲಿ 6800 ಸಿಬ್ಬಂದಿ ನೇಮಕಾತಿಗೆ ಗ್ರೀನ್ ಸಿಗ್ನಲ್

ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದರು. ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 15 ರಷ್ಟು ಹೆಚ್ಚಾಗಿದೆ. ಇದರೊಂದಿಗೆ ಹೆಚ್ಚುವರಿ ಶೆಡ್ಯೂಲ್ ಗಳನ್ನು ಸೇರಿಸಲು ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಅನುಕೂಲವಾಗುವಂತೆ ಬಸ್‌ಗಳನ್ನು ಸೇರ್ಪಡೆಗೊಳಿಸುವಂತೆ ತಿಳಿಸಿದರು.

Exit mobile version