Site icon Vistara News

Silver Jubilee | ಉಡುಪಿ ರಜತ ಮಹೋತ್ಸವ; ಸಂಭ್ರಮಕ್ಕೆ ಸಾಕ್ಷಿಯಾದ ರಾಜ್ಯಪಾಲ ಗೆಹ್ಲೋಟ್‌

Silver Jubilee

ಉಡುಪಿ: ಉಡುಪಿ ಜಿಲ್ಲೆಯಾಗಿ 25 ವರ್ಷ (Silver Jubilee) ಸಂದ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ರಜತ ಮಹೋತ್ಸವ ಕಾರ್ಯಕ್ರಮ ನಡೆದಿದ್ದು, ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಮಹೋತ್ಸವ ಉದ್ಘಾಟಿಸಿದರು.

ಇಲ್ಲಿನ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನೇಶನ್‌ ಫಸ್ಟ್‌ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎರಡು ದಿನದ ರಜತ ಮಹೋತ್ಸವದಲ್ಲಿ ಬುಧವಾರ ಬೆಳಗ್ಗೆ ಅಗ್ನಿಪಥ್ ದೌಡ್ 75 ಕಿ.ಮೀ. ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಚಾಲನೆ ನೀಡಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಇಂಧನ ಖಾತೆ ಸಚಿವ ಸುನೀಲ್ ಕುಮಾರ್, ಉಸ್ತುವಾರಿ ಸಚಿವ ಎಸ್‌. ಅಂಗಾರ ಭಾಗಿಯಾಗಿದರು. ಉಡುಪಿ ಶಾಸಕ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಮೆಂಡನ್ ,ಡಿಸಿ ಕೂರ್ಮ ರಾವ್ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಯಕ್ಷಗಾನದ ನೃತ್ಯದ ಮೂಲಕ ಅತಿಥಿಗಳನ್ನು ಆಹ್ವಾನಿಸಲಾಯಿತು.

ಜತೆಗೆ ಉಡುಪಿಯ ಒಟ್ಟು 34 ಕಾಲೇಜುಗಳ 800 ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆಯ ಮೂಲೆ ಮೂಲೆಯಿಂದ ಕಾರ್ಯಕ್ರಮ ವೀಕ್ಷಣೆಗೆ ಜನರು ಆಗಮಿಸಿದ್ದರು.

ವಿಶೇಷ ಎಂದರೆ ಉಡುಪಿಯ ಬೆಳ್ಳಿ ಹಬ್ಬಕ್ಕೆ ಯಕ್ಷಗಾನದ ನೃತ್ಯದ ಮೂಲಕ ಅತಿಥಿಗಳನ್ನು ಆಹ್ವಾನಿಸಲಾಯಿತು. ಎರಡು ದಿನಗಳಿಂದ ನಡೆದ ಕಾರ್ಯಕ್ರಮವು ಗುರುವಾರ ಅದ್ಧೂರಿಯಾಗಿ ಸಮಾಪ್ತಿಗೊಂಡಿದೆ.

ಇದನ್ನೂ ಓದಿ | Krishna Janmashtami | ವಿಟ್ಲಪಿಂಡಿಯೊಂದಿಗೆ ಉಡುಪಿ ಕೃಷ್ಣಜನ್ಮಾಷ್ಟಮಿ ಸಂಭ್ರಮ ಸಂಪನ್ನ

Exit mobile version