ಶಿವಮೊಗ್ಗ: ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಹೊರ ರಾಜ್ಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಮ್ಸ್ (SIMS) ಸಹ ಪ್ರಾಧ್ಯಾಪಕನನ್ನು ಅಮಾನತು ಮಾಡಲಾಗಿದೆ.
ವಿದ್ಯಾರ್ಥಿನಿಯೇ ತನ್ನ ದೂರನ್ನು ವಾಪಸ್ ತೆಗೆದುಕೊಂಡಿದ್ದರಿಂದ ಈ ಪ್ರಕರಣವನ್ನು ಇತ್ಯರ್ಥ ಮಾಡಲಾಗಿದೆ ಎಂದು ಸಿಮ್ಸ್ ನಿರ್ದೇಶಕರ ಮೂಲಕವೇ ಪ್ರಕಟಣೆಯನ್ನು ಹೊರಡಿಸಲಾಗಿತ್ತು. ನಿರ್ದೇಶಕರ ತರಾತುರಿ ಪ್ರಕಟಣೆಯ ಬೆನ್ನಲ್ಲೇ, ಅವರ ಮೇಲೆ ಯಾರೋ ಒತ್ತಡ ಹೇರಿರಬಹುದು ಎಂಬ ಅನುಮಾನ ಮೂಡಿತ್ತು. ಇದೀಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಖುದ್ದು ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಹ ಪ್ರಾಧ್ಯಾಪಕ ಅಶ್ವಿನ್ ಹೆಬ್ಬಾರ್ ಅವರನ್ನು ತಪ್ಪಿತಸ್ಥ ಎಂದು ಉಲ್ಲೇಖಿಸಲಾಗಿದೆ.
ಇದನ್ನೂ ಓದಿ | ಮನೆ ಪಾಠಕ್ಕೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಪ್ರಾಧ್ಯಾಪಕ, ವಿದ್ಯಾರ್ಥಿನಿ ಗರ್ಭಿಣಿ
ಪೀಪಲ್ಸ್ ಲಾಯರ್ಸ್ ಗಿಲ್ಡ್ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಷ್ಟೆ ಅಲ್ಲದೆ ಉನ್ನತ ತನಿಖೆಗೆ ಆಗ್ರಹಿಸಿತ್ತು. ಈ ಮಧ್ಯೆ ರಾಜಕೀಯ ಶಿಫಾರಸು ಮಾಡುವ ಕೆಲಸಗಳು ಸಹ ನಡೆದಿದ್ದವು. ಅಂತಿಮವಾಗಿ ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಾಧ್ಯಾಪಕನನ್ನು ಅಮಾನತು ಮಾಡಲಾಗಿದೆ. ಇಲಾಖೆಯ ಆಂತರಿಕ ತನಿಖೆಗೆ ಆದೇಶಿಸಲಾಗಿದ್ದು, ಮುಂದಿನ ಕ್ರಮ ತನಿಖೆಯ ನಂತರ ಹೊರಕ್ಕೆ ಬೀಳಲಿದೆ.
ಇದನ್ನೂ ಓದಿ | 11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕೇರಳದ ಮದರಸಾ ಶಿಕ್ಷಕ, 67 ವರ್ಷ ಜೈಲು ಶಿಕ್ಷೆ