Site icon Vistara News

Sindhuri Vs Roopa : ಸಿಂಧೂರಿಗೆ ಬಿಗ್‌ ರಿಲೀಫ್‌, ಮಾನಹಾನಿಕರ ಹೇಳಿಕೆ ನೀಡದಂತೆ ರೂಪಾಗೆ ಕೋರ್ಟ್‌ ಆದೇಶ

Roopa Moudgil and Rohini Sindhuri

#image_title

ಬೆಂಗಳೂರು: ಐಪಿಎಸ್‌ ಅಧಿಕಾರಿ ಡಿ. ರೂಪಾ ಅವರ ವಿರುದ್ಧದ ಕಾನೂನು ಹೋರಾಟದಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ (Sindhuri Vs Roopa) ಅವರಿಗೆ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಡಿ.ರೂಪಾ ಅವರಿಗೆ ನಗರದ ಸಿವಿಲ್‌ ಕೋರ್ಟ್‌ ಗುರುವಾರ ನಿರ್ಬಂಧ ವಿಧಿಸಿದೆ.

ತಮ್ಮ ವಿರುದ್ಧ ಹೇಳಿಕೆ ನೀಡದಂತೆ ಡಿ. ರೂಪಾ ಮತ್ತು ಇತರ 65 ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ರೋಹಿಣಿ ಸಿಂಧೂರಿ ಅವರು ಬುಧವಾರ (ಫೆ. 22) ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಗುರುವಾರ ಅರ್ಜಿಯ ವಿಚಾರಣೆ ಮುಂದುವರಿಸಿದ ಕೋರ್ಟ್, ರೂಪಾ ಹಾಗೂ ಮಾಧ್ಯಮಗಳು ಸೇರಿದಂತೆ 66 ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿದೆ.

ರೋಹಿಣಿ ಸಿಂಧೂರಿ ಅವರು ತಮ್ಮ ಅರ್ಜಿಯಲ್ಲಿ ಡಿ. ರೂಪಾ ಅವರು ಸೇರಿದಂತೆ ತಮ್ಮ ವೈಯಕ್ತಿಕ ವಿಚಾರಗಳನ್ನು ಹಂಚಿಕೊಂಡಿದ್ದ ಮಾಧ್ಯಮಗಳು ಸೇರಿ 66 ಜನರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದರು. ಡಿ. ರೂಪಾ ಅವರು ಬಿಡುಗಡೆ ಮಾಡಿದ ಫೋಟೊಗಳನ್ನು ಬಳಕೆ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆಯೂ ಮನವಿ ಮಾಡಿದ್ದರು.

ಆಕ್ಷೇಪ ಸಲ್ಲಿಸಲು ಅವಕಾಶ

ರೋಹಿಣಿ ಅವರು ಸಲ್ಲಿಸಿದ ಮನವಿ ಆಧಾರದಲ್ಲಿ ಡಿ. ರೂಪಾ ಹಾಗೂ ಇತರರಿಗೆ ನಿರ್ಬಂಧ ವಿಧಿಸಿದ ಕೋರ್ಟ್‌, ಜತೆಗೇ ನೋಟಿಸ್ ಜಾರಿ ಮಾಡಿದೆ. ಅವರೆಲ್ಲರಿಗೆ ಆಕ್ಷೇಪ ಸಲ್ಲಿಸಲೂ ಅವಕಾಶ ನೀಡಿದೆ. ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿದೆ.

ರೂಪಾ ಮೌದ್ಗಿಲ್ ಅವರು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ವೈಯಕ್ತಿಕ ತೇಜೋವಧೆ ಮಾಡಿದ್ದಾರೆ. ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಮೊಬೈಲ್ ನಂಬರ್ ಸಾರ್ವಜನಿಕಗೊಳಿಸಿರುವುದು ಖಾಸಗಿತನ ಭಂಗ ಮಾಡಿದಂತಾಗಿದೆ ಎಂದು ಸಿಂಧೂರಿ ಪರ ವಕೀಲರು ವಾದಿಸಿದ್ದರು.

ಇದನ್ನೂ ಓದಿ : Sindhuri vs Roopa: ಕ್ಷಮೆ ಕೇಳದಿದ್ದರೆ 1 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ; ರೂಪಾಗೆ ರೋಹಿಣಿ ಲೀಗಲ್ ನೋಟಿಸ್‌

Exit mobile version