ಕಳಬೇಡ, ಕೊಲಬೇಡ... ಲಂಡನ್‌ನಲ್ಲಿರುವ ಬಸವಣ್ಣನ ಪ್ರತಿಮೆಗೆ ಗಾಯಕ ವಿಜಯ್‌ ಪ್ರಕಾಶ್‌ ಗಾನ ನಮನ - Vistara News

ಕರ್ನಾಟಕ

ಕಳಬೇಡ, ಕೊಲಬೇಡ… ಲಂಡನ್‌ನಲ್ಲಿರುವ ಬಸವಣ್ಣನ ಪ್ರತಿಮೆಗೆ ಗಾಯಕ ವಿಜಯ್‌ ಪ್ರಕಾಶ್‌ ಗಾನ ನಮನ

ಲಂಡನ್‌ನಲ್ಲಿ ಹೊರನಾಡು ಕನ್ನಡಿಗರು ಆಯೋಜಿಸಿದ ಕಾರ್ಯಕ್ರಮದಲ್ಲಿ ಗಾಯಕ ವಿಜಯ್‌ ಪ್ರಕಾಶ್‌ ಅವರು ಬಸವಣ್ಣನ ವಚನ ಹಾಡುವ ಮೂಲಕ ಬಸವೇಶ್ವರರ ಪ್ರತಿಮೆಗೆ ನಮನ ಸಲ್ಲಿಸಿದರು.

VISTARANEWS.COM


on

Vijay Prakash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ಗಾಯಕ ವಿಜಯ್‌ ಪ್ರಕಾಶ್‌ ಅವರು ಹಾಡಲು ನಿಂತರೆ ಕರ್ನಾಟಕ ಮಾತ್ರವಲ್ಲ ಇಡೀ ದೇಶವೇ ಕಿವಿಯಾಗುತ್ತದೆ. ಅಷ್ಟರಮಟ್ಟಿಗೆ ಅವರ ಕಂಠ ಸಿರಿಯು ದೇಶಾದ್ಯಂತ ಪಸರಿಸಿದೆ. ಇಷ್ಟು ಖ್ಯಾತಿ ಗಳಿಸಿರುವ ಗಾಯಕ ವಿಜಯ್‌ ಪ್ರಕಾಶ್‌ ಅವರು ಲಂಡನ್‌ನಲ್ಲಿರುವ ಬಸವಣ್ಣನ ಪ್ರತಿಮೆಗೆ ಗಾನ ನಮನ ಸಲ್ಲಿಸಿದ್ದಾರೆ. ಕಲಬೇಡ, ಕೊಲಬೇಡ, ಹುಸಿಯ ನುಡಿಯಬೇಡ… ಎಂಬ ಬಸವಣ್ಣನವರ ವಚನವನ್ನು ರಾಗಬದ್ಧವಾಗಿ ಹಾಡಿದ್ದಾರೆ.

ಬಸವ ಸಮಿತಿ ಯುಕೆ ಹಾಗೂ ದಿ ಲ್ಯಾಂಬೆತ್‌ ಬಸವೇಶ್ವರ ಫೌಂಡೇಷನ್‌ನಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಅನಿವಾಸಿ ಭಾರತೀಯರು ಹಾಗೂ ಕನ್ನಡಿಗರ ಸಮ್ಮುಖದಲ್ಲಿ ಬಸವಣ್ಣನವರ ವಚನ ಹಾಡುವ ಮೂಲಕ ಅವರಿಗೆ ನಮನ ಸಲ್ಲಿಸಿದರು. ಥೇಮ್ಸ್‌ ನದಿ ತೀರದಲ್ಲಿ ೨೦೧೫ರಲ್ಲಿ ಬಸವಣ್ಣನವರ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

ಗಾಯನ ನಮನ ಸಲ್ಲಿಸಿದ ಬಳಿಕ ಮಾತನಾಡಿದ ವಿಜಯ್‌ ಪ್ರಕಾಶ್‌, “ಬ್ರಿಟಿಷ್‌ ಸಂಸತ್ತಿನ ಎದುರು ಬಸವೇಶ್ವರರ ಮೂರ್ತಿ ಪ್ರತಿಷ್ಠಾಪಿಸಿರುವುದು ಸಂತಸ ತಂದಿದೆ. ಅಂತಹ ಮಹಾನ್‌ ವ್ಯಕ್ತಿಯ ಪ್ರತಿಮೆಯನ್ನು ಲಂಡನ್‌ನಲ್ಲಿ ನೋಡುವುದೇ ಖುಷಿ ಎನಿಸುತ್ತದೆ. ಕನ್ನಡದ ಸಂಸ್ಕೃತಿ, ಆಚಾರ-ವಿಚಾರಗಳನ್ನು ವಿದೇಶದಲ್ಲಿಯೂ ಪಸರಿಸುತ್ತಿರುವ ಲ್ಯಾಂಬೆತ್‌ ಬಸವೇಶ್ವರ ಫೌಂಡೇಷನ್‌ಗೆ ಧನ್ಯವಾದ” ಎಂದರು.

ಕಾರ್ಯಕ್ರಮದಲ್ಲಿ ಕನ್ನಡಿಗರಾದ ಅಭಿಜಿತ್‌ ಸಾಲಿಮಠ, ಮಿರ್ಜಿ ರಂಗನಾಥ್‌, ಕಂಠಿ ಪಟೇಲ್‌, ರಾಜೀವ್‌ ಮೇತ್ರಿ, ಗಣಪತಿ ಭಟ್, ಡಾ.ಮಧುಸೂದನ್‌ ಸೇರಿ ಹಲವರು ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರೇ ೨೦೧೫ರಲ್ಲಿ ಬಸವೇಶ್ವರರ ಮೂರ್ತಿ ಅನಾವರಣಗೊಳಿಸಿದ್ದರು.

ಇದನ್ನೂ ಓದಿ | ಬಸವಣ್ಣನ ನಾಡಿನಲ್ಲಿ ಜಾತಿ ರಾಜಕಾರಣ ಸಲ್ಲ; ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೊಪ್ಪಳ

Koppala News: ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದ ಹುಂಡಿಯ ಹಣ ಸೋರಿಕೆ ವಿಡಿಯೊ ವೈರಲ್

Koppala News: ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯ ಹಣ ಈ ಬಾರಿ ಕುಸಿತ ಕಂಡ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಹಣ ಸೋರಿಕೆಯ ವಿಡಿಯೋವೊಂದು ವೈರಲ್‌ ಆಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

VISTARANEWS.COM


on

Anjanadri Hill Shree Anjaneya Swamy Temple Hundi money leak video viral
Koo

ಗಂಗಾವತಿ: ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದ (Anjanadri Hill) ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯ ಹಣ ಈ ಬಾರಿ ಕುಸಿತ ಕಂಡ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಹಣ ಸೋರಿಕೆಯ ವಿಡಿಯೋವೊಂದು ವೈರಲ್‌ ಆಗಿದೆ. ಇದು ಹಲವು ಅನುಮಾನಗಳಿಗೆ (Koppala News) ಎಡೆಮಾಡಿಕೊಟ್ಟಿದೆ.

ಅಂಜನಾದ್ರಿ ದೇಗುಲದ ಮಾಸಿಕ ಕಾಣಿಕೆ ಹುಂಡಿ ಹಣವು ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿದ್ದು, ಈ ಕುರಿತು ಚರ್ಚೆಗೆ ಕಾರಣವಾಗಿತ್ತು. ಇದೀಗ ಹಣ ಸೋರಿಕೆಯ ಬಗ್ಗೆ ವೀಡಿಯೊ ಒಂದು ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಅರ್ಚಕರಂತೆ ಕಾಣುತಿದ್ದು, ಮೊದಲಿಗೆ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸುತ್ತಾರೆ. ಬಳಿಕ ಕಾಣಿಕೆಯ ತಟ್ಟೆಯಲ್ಲಿ ಭಕ್ತರು ಹಾಕಿದ್ದ ದೊಡ್ಡ ಪ್ರಮಾಣದ ನೋಟುಗಳನ್ನು ಕಂತೆಕಂತೆಯಾಗಿ ಚೀಲಕ್ಕೆ ತುಂಬಿಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ.

ಇದನ್ನೂ ಓದಿ: Bengaluru News: ಸಿಎಸ್‌ಆರ್‌ ಮಹತ್ವದ ಸಾಧನೆಗಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ಗೆ ಪ್ರಶಂಸೆ

ಮಾಸಿಕ ಸರಾಸರಿ 20ರಿಂದ 22 ಲಕ್ಷ ರೂಪಾಯಿ ಆದಾಯ ಹೊಂದಿರುವ ಅಂಜನಾದ್ರಿ ದೇಗುಲದ ಕಾಣಿಕೆ ಹುಂಡಿ ಹಣವು ಇದೇ ಮೊದಲ ಬಾರಿಗೆ 36 ದಿನಕ್ಕೆ ಹುಂಡಿಯಲ್ಲಿ ಕೇವಲ 9.89 ಲಕ್ಷ ರೂಪಾಯಿ ಮೊತ್ತದ ಹಣ ಮಾತ್ರ ಸಂಗ್ರಹವಾಗಿತ್ತು. ಇದು ಹಲವು ಅನುಮಾನಕ್ಕೆ ಕಾರಣವಾಗಿತ್ತು.

ದೇಗುಲದ ಅಭಿವೃದ್ಧಿಗೆ ಎಂದು ಭಕ್ತರು ಸಲ್ಲಿಸಿರುವ ಹಣ ತೆಗೆದುಕೊಂಡು ಹೋಗಲು ಅಧಿಕಾರಿಗಳು ಹೇಗೆ ಅವಕಾಶ ನೀಡಿದ್ದಾರೆ ಎಂಬ ಚರ್ಚೆ ಈಗ ಸಾರ್ವಜನಿಕರು ಮತ್ತು ಭಕ್ತರ ವಲಯದಲ್ಲಿ ವ್ಯಕ್ತವಾಗಿದೆ. ಇದಕ್ಕೆ ದೇಗುಲದ ಆಡಳಿತ ಮಂಡಳಿ ಸ್ಪಷ್ಟನೆ ನೀಡಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಮುಖಂಡ ನೀಲಕಂಠ ನಾಗಶೆಟ್ಟಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Karnataka Weather : ಮುಂದಿನ 3 ದಿನ ಏರುತ್ತೆ ಟೆಂಪ್ರೇಚರು

ಎಸಿ ಪ್ರತಿಕ್ರಿಯೆ ಏನು?:

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗತ್ತಿ, ಆದಾಯದಲ್ಲಿ ಭಾರಿ ಪ್ರಮಾಣ ಇಳಿಕೆಯಾಗಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಏನು ಕಾರಣ ಎಂದು ಪತ್ತೆಹಚ್ಚುವ ಕೆಲಸ ಮಾಡಲಾಗುತ್ತಿದೆ. ಅಲ್ಲದೇ ಖಾಸಗಿ ವ್ಯಕ್ತಿಯೊಬ್ಬರು ಕೇವಲ ಪೂಜೆ ಎಂದು ನ್ಯಾಯಾಲಯದಿಂದ ಅವಕಾಶ ಪಡೆದು, ಇದೀಗ ದೇಗುಲಕ್ಕೆ ಬರುವ ಭಕ್ತರಿಗೆ ದಾರಿ ತಪ್ಪಿಸಿ ದೇಣಿಗೆ ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Kalaburagi News: ಕಲಬುರಗಿ ಉಚ್ಚಾಯಿ ರಥೋತ್ಸವದಲ್ಲಿ ದುರಂತ; ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ದುರ್ಮರಣ

Kalaburagi News: ಕಲಬುರಗಿಯಲ್ಲಿ ಶುಕ್ರವಾರ ನಡೆದ ಶ್ರೀ ಶರಣ ಬಸವೇಶ್ವರ ರಥೋತ್ಸವದಲ್ಲಿ ದುರ್ಘಟನೆ ಸಂಭವಿಸಿದೆ. ರಥದ ಚಕ್ರಕ್ಕೆ ಹೋಂಗಾರ್ಡ್ ಸಿಬ್ಬಂದಿ ದುರ್ಮರಣ ಹೊಂದಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ.

VISTARANEWS.COM


on

Kalaburagi News
Koo

ಕಲಬುರಗಿ: ನಗರದಲ್ಲಿ (Kalaburagi News) ಶ್ರೀ ಶರಣ ಬಸವೇಶ್ವರ ಜಾತ್ರಾ ಮಹೋತ್ಸವದ (Sri Sharana Basaveshwara Jatre) ಭಾಗವಾಗಿ ಶುಕ್ರವಾರ ನಡೆದ ಉಚ್ಚಾಯಿ ರಥೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಿಬ್ಬಂದಿ ದುರ್ಮರಣ ಹೊಂದಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ.

ಬೀದರ್ ಜಿಲ್ಲೆ ಇಟಗಾ ಗ್ರಾಮದ ರಾಮು ಸಿದ್ದಪ್ಪ (28) ಮೃತ ದುದೈವಿ. ಅಶೋಕರೆಡ್ಡಿ ಗಾಯಾಳು. ತೇರು ಎಳೆಯುವ ವೇಳೆ ಉಂಟಾದ ಗದ್ದಲ, ಭಕ್ತರನ್ನು ನಿಯಂತ್ರಿಸುವ ವೇಳೆ ಸಿಬ್ಬಂದಿ ಚಕ್ರಕ್ಕೆ ಸಿಲುಕಿ ಸಾವಿಗೀಡಾಗಿದ್ದಾರೆ. ಗಾಯಾಳು ಸಿಬ್ಬಂದಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಉಂಟಾದ ಗದ್ದಲದ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರ್‌.ಜೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Dead Body Found : ವಾಟರ್‌ ಟ್ಯಾಂಕ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

ತಲೆ ಮೇಲೆ ಹರಿದ ಲಾರಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು, ಮತ್ತೊಬ್ಬ ಗಂಭೀರ

ಆನೇಕಲ್: ವೇಗವಾಗಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟರೆ, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಮಿರ್ಜಾ ರಸ್ತೆಯಲ್ಲಿ ಘಟನೆ (Road Accident) ನಡೆದಿದೆ.

ರಾಕೇಶ್ (28) ಮೃತ ದುರ್ದೈವಿ. ಮತ್ತೋರ್ವ ಅರಣ್ಯ ಇಲಾಖೆ ಸಿಬ್ಬಂದಿ ವಿನಯ್ ಎಂಬಾತನಿಗೆ ಗಂಭೀರ ಗಾಯವಾಗಿದೆ. ಇವರಿಬ್ಬರು ಆನೇಕಲ್ ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಂಡು ಬರುವುದಾಗಿ ಹೇಳಿ ಬೈಕ್‌ನಲ್ಲಿ ತೆರಳಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ರಾಕೇಶ್ ತಲೆಯ ಮೇಲೆಯೇ ಲಾರಿಯ ಚಕ್ರ ಹರಿದಿದೆ. ಪರಿಣಾಮ ನಜ್ಜುಗುಜ್ಜಾದ ರಾಕೇಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಇದನ್ನೂ ಓದಿ | Accident Case : ಮರ ಕಡಿಯುವಾಗ ಕರೆಂಟ್‌ ಶಾಕ್‌ಗೆ ಬಲಿ; ಹುಣಸೆ ಹಣ್ಣು ಕೊಯ್ಯುವಾಗ ಬಿದ್ದು ಸಾವು

ಅಪಘಾತದಲ್ಲಿ ವಿನಯ್‌ಗೂ ಗಂಭೀರ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ವಿದ್ಯುತ್ ಶಾಕ್‌ನಿಂದ ದಿನಗೂಲಿ ಕಾರ್ಮಿಕ ಸಾವು

ತುಮಕೂರು: ವಿದ್ಯುತ್‌ ಶಾಕ್‌ ಹೊಡೆದ ಪರಿಣಾಮ ದಿನಗೂಲಿ ಕಾರ್ಮಿಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ತುಮಕೂರಿನ ಕ್ಯಾದಗೊಂಡನಹಳ್ಳಿಯಲ್ಲಿ ಅವಘಡ ನಡೆದಿದೆ. ನರೇಂದ್ರ ಕುಮಾರ್ (25) ಮೃತ ದುರ್ದೈವಿ. ನರೇಂದ್ರ ಕುಮಾರ್‌ ತುಮಕೂರಿನ ಮಧುಗಿರಿ ತಾಲೂಕಿನ ದೊಡ್ಡಯಲ್ಕೂರು ಗ್ರಾಮದ ನಿವಾಸಿಯಾಗಿದ್ದಾರೆ.

ವಿದ್ಯುತ್ ತಂತಿಗೆ ಅಡ್ಡಿಯಾಗಿದ್ದ ಮರವನ್ನು ಕಡಿಯುವಾಗ ವಿದ್ಯುತ್ ಸ್ಪರ್ಶ ಆಗಿದೆ. ಕ್ಷಣಾರ್ಧದಲ್ಲೇ ಮೃತಪಟ್ಟಿದ್ದಾರೆ. ಇತ್ತ ಮೃತ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದರು. ಮಧುಗಿರಿ ಸರ್ಕಾರಿ ಆಸ್ಪತ್ರೆ ಎದುರು ಮೃತ ಸಂಬಂಧಿಕರು ಪ್ರತಿಭಟನೆ ನಡೆಸಿದರು. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ದಾವಣಗೆರೆ

Davanagere News: ನೀತಿ ಸಂಹಿತೆ ಉಲ್ಲಂಘನೆ; 84 ಸಾವಿರ ರೂ. ನಗದು ಜಪ್ತಿ

Davanagere News: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧಿಕೃತವಾಗಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಾಗಿಸಲಾಗುತ್ತಿದ್ದ 84 ಸಾವಿರ ನಗದು ಹಣವನ್ನು ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿ ಚೆಕ್‌ಪೋಸ್ಟ್‌ ಬಳಿ ಜಪ್ತಿ ಮಾಡಲಾಗಿದೆ.

VISTARANEWS.COM


on

Violation of Code of Conduct 84 thousand rupees cash seized at honnali
Koo

ಹೊನ್ನಾಳಿ: ಲೋಕಸಭೆ ಸಾರ್ವತ್ರಿಕ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧಿಕೃತವಾಗಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಾಗಿಸಲಾಗುತ್ತಿದ್ದ 84 ಸಾವಿರ ರೂ. ನಗದು ಹಣವನ್ನು ತಾಲೂಕಿನ ಗೊಲ್ಲರಹಳ್ಳಿ ಚೆಕ್‌ಪೋಸ್ಟ್‌ ಬಳಿ ಜಪ್ತಿ ಮಾಡಲಾಗಿದೆ ಎಂದು ಉಪ ವಿಭಾಗಾಧಿಕಾರಿ ಅಭಿಷೇಕ್ (Davanagere News) ತಿಳಿಸಿದ್ದಾರೆ.

ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿ ಚೆಕ್‌ಪೋಸ್ಟ್‌ ಬಳಿ ಚುನಾವಣಾ ಅಧಿಕಾರಿ ತಂಡ ತಪಾಸಣೆ ನಡೆಸುವ ವೇಳೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಾಗಿಸಲಾಗುತ್ತಿದ್ದ 84 ಸಾವಿರ ನಗದು ಹಣವನ್ನು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: Karnataka Weather : ಮುಂದಿನ 3 ದಿನ ಏರುತ್ತೆ ಟೆಂಪ್ರೇಚರು

ಹಣಕ್ಕೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ನೀಡಿದ್ದಲ್ಲಿ ಸಂಬಂಧಪಟ್ಟವರಿಗೆ ಹಣ ಮರುಪಾವತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Ash Gourd Juice Benefits: ಬೂದುಕುಂಬಳಕಾಯಿ ಜ್ಯೂಸ್‌ ಕುಡಿಯುವುದರಿಂದ ಆಗುವ 10 ಪ್ರಯೋಜನಗಳಿವು

ಈ ಸಂದರ್ಭದಲ್ಲಿ ತಹಸೀಲ್ದಾರ್ ಪುರಂದರ ಹಾಗೂ ಪೊಲೀಸ್ ಸಿಬ್ಬಂದಿ, ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Lok Sabha Election 2024

Lok Sabha Election 2024: ಸುಮಲತಾ ಭೇಟಿ ಮಾಡಿದ ವಿಜಯೇಂದ್ರ; ನಾಳೆಯೇ ಫೈನಲ್‌ ಅಂದ್ರು ರೆಬೆಲ್‌ ಲೇಡಿ!

Lok Sabha Election 2024: ಶುಕ್ರವಾರ ನಡೆದ ಬಿಜೆಪಿ – ಜೆಡಿಎಸ್‌ ಸಮನ್ವಯ ಸಮಿತಿ ಸಭೆಯ ಬಳಿಕ ಸುಮಲತಾ ಅಂಬರೀಶ್‌ ಅವರನ್ನು ಬಿ.ವೈ. ವಿಜಯೇಂದ್ರ ಭೇಟಿ ಮಾಡಿದ್ದಾರೆ. ಅಲ್ಲದೆ, ಎನ್‌ಡಿಎ ಅಭ್ಯರ್ಥಿಯಾಗಿರುವ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ, ತೀರ್ಮಾನ ಏನೇ ಇದ್ದರು ತಮ್ಮ ಬೆಂಬಲಿರ ಮುಂದೆಯೇ ಎಂದು ಹೇಳಿರುವ ಸುಮಲತಾ, ಇದಕ್ಕಾಗಿ ನಾಳೆ ಕಾರ್ಯಕರ್ತರು, ಹಿತೈಷಿಗಳ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಎಲ್ಲರ ಅಭಿಪ್ರಾಯವನ್ನು ಪಡೆದು ತಮ್ಮ ಅಂತಿಮ ನಿರ್ಣಯವನ್ನು ಪ್ರಕಟಿಸಲಿದ್ದಾರೆ.

VISTARANEWS.COM


on

Lok Sabha Election 2024 and BY Vijayendra meets Sumalatha Ambareesh for discussion on support to NDA candidate in Mandya Lok Sabha Constituency
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆ ಸಾಕಷ್ಟು ಬಿರುಸುಗೊಂಡಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ (Mandya Lok Sabha constituency) ಬಿಜೆಪಿಯಿಂದ ಸ್ಪರ್ಧೆ ಬಯಸಿದ್ದ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಈಗಾಗಲೇ ನಿರಾಸೆಯಾಗಿದೆ. ಹೀಗಾಗಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ಸುಮಲತಾ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಆದರೆ, ತಮ್ಮ ಮುಂದಿನ ನಿರ್ಧಾರದ ಬಗ್ಗೆ ಗುಟ್ಟು ಬಿಟ್ಟುಕೊಡದ ಸುಮಲತಾ, ನಾಳೆ (ಶನಿವಾರ – ಮಾ. 30) ತಮ್ಮ ಅಂತಿಮ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ.

ಶುಕ್ರವಾರ ನಡೆದ ಬಿಜೆಪಿ – ಜೆಡಿಎಸ್‌ ಸಮನ್ವಯ ಸಮಿತಿ ಸಭೆಯ ಬಳಿಕ ಸುಮಲತಾ ಅಂಬರೀಶ್‌ ಅವರನ್ನು ಬಿ.ವೈ. ವಿಜಯೇಂದ್ರ ಭೇಟಿ ಮಾಡಿದ್ದಾರೆ. ಅಲ್ಲದೆ, ಎನ್‌ಡಿಎ ಅಭ್ಯರ್ಥಿಯಾಗಿರುವ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಮಾ. 30ಕ್ಕೆ ಬೆಂಗಳೂರು ನಿವಾಸದಲ್ಲಿ ಸಭೆ

ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚೆ ನಡೆಸಲು ನಾಳೆ (ಮಾ. 30) ಮಧ್ಯಾಹ್ನ 3 ಗಂಟೆಗೆ ಜೆಪಿ ನಗರ ನಿವಾಸದಲ್ಲಿ ಬೆಂಬಲಿಗರು, ಆಪ್ತರು ಹಾಗೂ ಹಿತೈಷಿಗಳ ಸಭೆ ಕರೆದಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದು, ಈ ಬಾರಿ ಬಿಜೆಪಿಯಿಂದ ಟಿಕೆಟ್‌ ಬಯಸಿದ್ದೆ. ಆದರೆ, ಅಲ್ಲಿ ಮೈತ್ರಿ ಧರ್ಮ ಪಾಲನೆ ಸಂಬಂಧ ಜೆಡಿಎಸ್‌ಗೆ ಕ್ಷೇತ್ರವನ್ನು ಬಿಟ್ಟು ಕೊಡಲಾಗಿದೆ. ಹೀಗಾಗಿ ನಾನು ಮುಂದೆ ಯಾವ ನಿರ್ಧಾರವನ್ನು ತೆಗೆದುಕೊಳ್ಳಬೇಕು? ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಬೇಕೋ? ಇಲ್ಲವೇ ಪಕ್ಷೇತರವಾಗಿ ಸ್ಪರ್ಧೆ ಮಾಡಬೇಕೋ? ಎಂಬ ಪ್ರಶ್ನೆಯನ್ನು ಈ ಸಭೆಯ ಮುಂದಿಡಲಿದ್ದಾರೆ. ಇಲ್ಲಿ ಬರುವ ಅಭಿಪ್ರಾಯಗಳ ಆಧಾರದ ಮೇಲೆ ಸುಮಲತಾ ಅವರು ಶನಿವಾರ ಸಂಜೆಯೇ ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.

Lok Sabha Election 2024 Vijayendra meets Sumalatha final decision will be announced tomorrow

ಅಭಿಮಾನಿಗಳ ಸಂಘದಿಂದ ಹೊರಬಿದ್ದ ಪ್ರಕಟಣೆ!

ಸುಮಲತಾ ಅಂಬರೀಶ್‌ ಅವರ ಸ್ಪರ್ಧೆ ಸಂಬಂಧ ಈಗ ಎದ್ದಿರುವ ಗೊಂದಲಗಳ ಪರಿಹಾರಕ್ಕೆ ಶನಿವಾರ ಸಭೆಯನ್ನು ಕರೆದಿರುವ ಬಗ್ಗೆ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘವು ಪ್ರಕಟಣೆಯೊಂದನ್ನು ಹೊರಡಿಸಿದೆ. ಇದರ ಅನುಸಾರ, “2019ರಲ್ಲಿ ಜಿಲ್ಲೆಯ ಸ್ವಾಭಿಮಾನಿ ಸಂಸದರಾಗಿ ಆಯ್ಕೆಯಾಗಿ ತಮ್ಮ ಕ್ರಿಯಾಶೀಲತೆ ಮೂಲಕ ಜಿಲ್ಲೆಯ ಜನರ ವಿಶ್ವಾಸಾರ್ಹತೆ ಗಳಿಸಿರುವ ಸಂಸದರಾದ ಸುಮಲತಾ ಅಂಬರೀಶ್ ಅವರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮುಂದಿನ ನಡೆ ಬಗ್ಗೆ ಹಲವಾರು ಬೆಂಬಲಿಗರು, ಕಾರ್ಯಕರ್ತರಲ್ಲಿ ಆತಂಕ ಹಾಗೂ ಗೊಂದಲಗಳಿವೆ. ಈ ಬಗ್ಗೆ ಪರಸ್ಪರ ಚರ್ಚಿಸುವ ಸಲುವಾಗಿ ಹಾಗೂ ತಮ್ಮ ತಮ್ಮ ವೈಯಕ್ತಿಕ ಅಭಿಪ್ರಾಯ, ಅನಿಸಿಕೆಗಳನ್ನು ಹಂಚಿಕೊಳ್ಳಲು ಸುಮಲತಾ ಅಂಬರೀಶ್ ಅವರು ಬೆಂಗಳೂರಿನ ನಿವಾಸಕ್ಕೆ ಅವರ ಬೆಂಬಲಿಗರು, ಹಿತೈಷಿಗಳು, ಅಂಬರೀಶ್ ಕುಟುಂಬದ ಅಭಿಮಾನಿಗಳು ಆಪ್ತರು ಸೇರಿದಂತೆ ಜಿಲ್ಲೆಯ ಸ್ವಾಭಿಮಾನಿ ಮುಖಂಡರು ಕಾರ್ಯಕರ್ತರು ಶನಿವಾರ (30-03-2024) ಅವರ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಲಾಗಿದೆ. ಆಸಕ್ತಿ ಉಳ್ಳವರು ಮಧ್ಯಾಹ್ನ 2.30ಕ್ಕೆ ಸರಿಯಾಗಿ ಅವರ ನಿವಾಸಕ್ಕೆ ಭೇಟಿ ನೀಡಿ” ಎಂದು ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಬೇಲೂರು ಸೋಮಶೇಖರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಸುಮಲತಾರಿಂದ ಸಕಾರಾತ್ಮಕ ಸ್ಪಂದನೆ: ಬಿ.ವೈ. ವಿಜಯೇಂದ್ರ

ಸುಮಲತಾ ಅಂಬರೀಶ್‌ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಸುಮಲತಾ ಅವರು ಸಾಕಷ್ಟು ವಿಚಾರವನ್ನು ಚರ್ಚೆ ಮಾಡಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಬೆಂಬಲಿಗರೊಂದಿಗೆ ಮಾತನಾಡಿ ನಿರ್ಧಾರವನ್ನು ತಿಳಿಸುವುದಾಗಿ ಹೇಳಿದ್ದಾರೆ. ಸಂಸದರಾಗಿ ತೀರ್ಮಾನ ತೆಗೆದುಕೊಳ್ಳುವಾಗ ಅಭಿಮಾನಿಗಳ ಅಭಿಪ್ರಾಯ ಪಡೆಯಬೇಕಾಗುತ್ತದೆ. ಎಲ್ಲವೂ ಕೂಡ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗಿದೆ. ದೆಹಲಿ ಮಟ್ಟದಲ್ಲಿ ಎಲ್ಲವೂ ಚರ್ಚೆಯಾಗಿದೆ. ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಬೇಕು ಎಂಬ ಸದಾಭಿಪ್ರಾಯ ಅವರಲ್ಲಿದೆ. ಎಲ್ಲದರ ಬಗ್ಗೆಯೂ ರಾಷ್ಟ್ರೀಯ ನಾಯಕರು ಚರ್ಚೆ ಮಾಡುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಮಹಿಳೆಯರು ಅಡುಗೆ ಮಾಡಲು ಲಾಯಕ್ಕು ಎಂದ ಶಾಮನೂರು; ಆಕಾಶದಲ್ಲಿ ಹಾರಾಡೋಕೂ ಗೊತ್ತೆಂದ ಗಾಯತ್ರಿ

ನನ್ನ ತೀರ್ಮಾನವನ್ನು ನಾಳೆ ಹೇಳ್ತೇನೆ: ಸುಮಲತಾ ಅಂಬರೀಶ್

‌ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್‌, ಇಂದು ಬಿ.ವೈ. ವಿಜಯೇಂದ್ರ, ಪ್ರೀತಂಗೌಡ ಅವರು ನನ್ನನ್ನು ಭೇಟಿ ಮಾಡಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದರು. ಅವರ ಭಾವನೆಯನ್ನು ಹೇಳಿದ್ದಾರೆ. ಪಕ್ಷಕ್ಕೆ ನೀವು ಸೇರ್ಪಡೆಯಾಗಬೇಕು ಅಂತ ಕೇಳಿಕೊಂಡಿದ್ದಾರೆ. ನಾಳೆ ಬೆಂಬಲಿಗರು ನಮ್ಮ ಮನೆಗೆ ಬರುತ್ತಿದ್ದಾರೆ. ಅವರ ಭಾವನೆಯನ್ನು ಕೇಳಬೇಕಾದ ಕರ್ತವ್ಯವಿದೆ. ನಾನು ಕಾರ್ಯಕರ್ತರ ಭಾವನೆಯನ್ನು ಕೇಳಿ ಮಂಡ್ಯದಲ್ಲಿ ನಿಲುವನ್ನು ತಿಳಿಸುತ್ತೇನೆ. ಬಿಜೆಪಿಗೆ ಸಪೋರ್ಟ್ ಅನ್ನೊದು ಒಂದು ಕಡೆಯಾದರೆ, ಬೆಂಬಲಿಗರು ಏನು ಹೇಳುತ್ತಾರೆ ಎಂಬುದನ್ನು ಸಹ ನಾನು ಕೇಳಬೇಕು. ಮಂಡ್ಯಕ್ಕೆ ಹೋಗಿ ಅವರ ಮುಂದೆಯೇ ನಿಲುವನ್ನು ಸ್ಪಷ್ಟಪಡಿಸುತ್ತೇನೆ ಎಂದು ತಿಳಿಸಿದರು.

ಸುಲಭವಾಗಿ ಗೆಲ್ಲುವ ಕ್ಷೇತ್ರಗಳ ಆಫರ್ ನನಗೆ ಇತ್ತು. ಬೇರೆ ಪಕ್ಷದಿಂದಲೂ ಆಫರ್ ಇತ್ತು. ಆದರೆ, ನಾನು ಮಂಡ್ಯವನ್ನು ಬಿಟ್ಟರೆ ಮತ್ತೆಲ್ಲೂ ಹೋಗುತ್ತಿಲ್ಲ. ನನ್ನ ಅಸ್ತಿತ್ವ ಅಂದರೆ ಮಂಡ್ಯ ಮಾತ್ರ. ಅದನ್ನು ಕಳೆದುಕೊಳ್ಳಲು ಇಷ್ಟಪಡಲ್ಲ. ಮಂಡ್ಯ ಲೋಕಸಭಾ ಕ್ಷೇತ್ರವು ಜೆಡಿಎಸ್‌ಗೆ ಹೋಗಿದೆ ಎಂಬುದರ ಬಗ್ಗೆ ನಾನು ಮಾತನಾಡಲ್ಲ. ನಾವು ಉಳಿಸಿಕೊಂಡಿದ್ದರೆ ಒಳ್ಳೆಯದಿತ್ತು. ಭೇಟಿಗೆ ನನ್ನ ಆಕ್ಷೇಪ ಇಲ್ಲ. ಇದು ಅಂಬರೀಶ್ ಮನೆ. ಯಾರೇ ಬಂದರೂ ಸ್ವಾಗತ. ಮೈಶುಗರ್ ವಿಚಾರದಲ್ಲಿ ಕಾರ್ಯ ಆರಂಭ ಮಾಡಿದಾಗ ನಾರಾಯಣಗೌಡ ಸಚಿವರಾಗಿರಲಿಲ್ಲ. ಅವರ ಬೆಂಬಲ ಇಲ್ಲ ಅಂತಲ್ಲ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಹಕಾರ ಕೊಟ್ಟರು.‌ ಬಸವರಾಜ ಬೊಮ್ಮಾಯಿ ಕೂಡ ಬೆಂಬಲಿಸಿದರು. ಬೇರೆ ಆಫರ್ ಏನೂ ಕೊಟ್ಟಿಲ್ಲ. ಆ ರೀತಿ ಕೇಳಿ ಪಡೆಯುವ ಅಭ್ಯಾಸ ಇಲ್ಲ ಎಂದು ಸುಮಲತಾ ಅಂಬರೀಶ್‌ ಹೇಳಿದರು.

Continue Reading
Advertisement
Anjanadri Hill Shree Anjaneya Swamy Temple Hundi money leak video viral
ಕೊಪ್ಪಳ7 mins ago

Koppala News: ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದ ಹುಂಡಿಯ ಹಣ ಸೋರಿಕೆ ವಿಡಿಯೊ ವೈರಲ್

Kalaburagi News
ಕರ್ನಾಟಕ9 mins ago

Kalaburagi News: ಕಲಬುರಗಿ ಉಚ್ಚಾಯಿ ರಥೋತ್ಸವದಲ್ಲಿ ದುರಂತ; ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ದುರ್ಮರಣ

Violation of Code of Conduct 84 thousand rupees cash seized at honnali
ದಾವಣಗೆರೆ11 mins ago

Davanagere News: ನೀತಿ ಸಂಹಿತೆ ಉಲ್ಲಂಘನೆ; 84 ಸಾವಿರ ರೂ. ನಗದು ಜಪ್ತಿ

Lok Sabha Election 2024 and BY Vijayendra meets Sumalatha Ambareesh for discussion on support to NDA candidate in Mandya Lok Sabha Constituency
Lok Sabha Election 202412 mins ago

Lok Sabha Election 2024: ಸುಮಲತಾ ಭೇಟಿ ಮಾಡಿದ ವಿಜಯೇಂದ್ರ; ನಾಳೆಯೇ ಫೈನಲ್‌ ಅಂದ್ರು ರೆಬೆಲ್‌ ಲೇಡಿ!

Bomb threat
ಕರ್ನಾಟಕ51 mins ago

Bomb Threat: ಆನೇಕಲ್‌ನ ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ!

Mukthar Ansari
ಪ್ರಮುಖ ಸುದ್ದಿ1 hour ago

Mukhtar Ansari : ನಿಜಕ್ಕೂ ಗ್ಯಾಂಗ್ ಸ್ಟರ್ ಅನ್ಸಾರಿ ಸತ್ತಿದ್ದು ಹೇಗೆ? ಬಂತು ಪೋಸ್ಟ್ ಮಾರ್ಟಮ್ ರಿಪೋರ್ಟ್!

Parliament Flashback
ಕರ್ನಾಟಕ1 hour ago

Parliament Flashback: ದೇಶದಲ್ಲಿ ಇಂದಿರಾ ಗಾಂಧಿ ವಿರೋಧಿ ಅಲೆ ಇದ್ದಾಗಲೂ ಕರ್ನಾಟಕದಲ್ಲಿ ಕಾಂಗ್ರೆಸ್‌ ಜಯಭೇರಿ!

Satyendar Jain
ಪ್ರಮುಖ ಸುದ್ದಿ2 hours ago

Satyendar Jain : ಆಪ್​ಗೆ ಇನ್ನಷ್ಟು ಸಂಕಷ್ಟ; ಸತ್ಯೇಂದರ್​ ಜೈನ್ ವಿರುದ್ಧ ಸಿಬಿಐ ತನಿಖೆಗೆ ಆದೇಶ

Karnataka Weather
ಮಳೆ2 hours ago

Karnataka Weather : ಮುಂದಿನ 3 ದಿನ ಏರುತ್ತೆ ಟೆಂಪ್ರೇಚರು

Mussavir Hussain
ಪ್ರಮುಖ ಸುದ್ದಿ2 hours ago

Blast in Bangalore : ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತರ ಸುಳಿವು ಕೊಟ್ಟರೆ 10 ಲಕ್ಷ ರೂ. ಇನಾಮು; ಇಲ್ಲಿದೆ ಉಗ್ರರ ಪೋಟೊ ಸಮೇತ ವಿವರ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ16 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌