Site icon Vistara News

murder | ಒಂಟಿಯಾಗಿ ವಾಸಿಸುತ್ತಿದ್ದ ನಿವೃತ್ತ ಶಿಕ್ಷಕಿಯ ಕೊಲೆ, ಚಿನ್ನಾಭರಣದೊಂದಿಗೆ ಪರಾರಿಯಾದ ದುಷ್ಕರ್ಮಿಗಳು

murder

ಬೆಂಗಳೂರು: ಒಂಟಿಯಾಗಿ ವಾಸಿಸುತ್ತಿದ್ದ ನಿವೃತ್ತ ಶಿಕ್ಷಕಿಯೊಬ್ಬರನ್ನು ದುಷ್ಕರ್ಮಿಗಳು ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ.

ನಗರದ ವಿದ್ಯಾರಣ್ಯಪುರ ಅಂಬಾ ಭವಾನಿ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ಪ್ರಸನ್ನ ಕುಮಾರಿ (೬೦) ಎಂಬವರೇ ಕೊಲೆಯಾದ ನಿವೃತ್ತ ಶಿಕ್ಷಕಿ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಬೆಳಗ್ಗೆ ಬೆಳಕಿಗೆ ಬಂದಿದೆ.

ಕೊಲೆಯಾದ ಪ್ರಸನ್ನ ಕುಮಾರಿ ಚಿಂತಾಮಣಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಇತ್ತೀಚಿಗೆ ನಿವೃತ್ತಿಯಾಗಿದ್ದರು. ಮೂಲತಃ ವಿಜಯವಾಡದವರಾದ ಇವರು ಒಂಟಿಯಾಗಿ ಜೀವನ ಸಾಗಿಸುತ್ತಿದ್ದರು.

ದುಷ್ಕರ್ಮಿಗಳು ಕೊಲೆ ಮಾಡಿ ಚಿನ್ನಾಭರಣ ಹೊತ್ತೊಯ್ದಿದ್ದು, ವಿದ್ಯಾರಣ್ಯಪುರ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಗುರುವಾರ ಸಂಜೆಯ ಸಮಯದಲ್ಲಿ ಆಗಂತುಕರು ಮನೆಗೆ ಬಂದು ಮಾಡಿರುವ ಶಂಕೆ ಇದೆ. ಇಬ್ಬರು ಬಂದಿದ್ದರೆಂಬ ಮಾಹಿತಿ ಪ್ರಾಥಮಿಕವಾಗಿ ದೊರಕಿದೆ. ಈ ನಡುವೆ, ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಬಗ್ಗೆ ಶಂಕೆಯೂ ಇದೆ. ದುಷ್ಕರ್ಮಿಗಳು ಕೈಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಯಾವುದೋ ದ್ವೇಷದ ಸೂಚನೆಯನ್ನು ನೀಡಿದೆ. ಸಿಸಿ ಟಿವಿ ಆಧರಿಸಿ ಆರೋಪಿಗಳ ಪತ್ತೆಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ | Crime News | ಪುಟ್ಟ ಮಕ್ಕಳನ್ನು ಮಲಗಿಸಿ ಪತ್ನಿಯನ್ನು ಕತ್ತು ಕೊಯ್ದು ಕೊಲೆ ಮಾಡಿದ ಪತಿ: ಕೊನೆಗೆ ತಾನೇ ಕೈ ಕೊಯ್ದುಕೊಂಡ

Exit mobile version