Sirsi News: ನ.11ರಂದು 'ನೆಮ್ಮದಿ'ಯ ರಂಗಧಾಮದಲ್ಲಿ ಧನ್ಯವಾದ ಕಾರ್ಯಕ್ರಮ: ವಿ.ಪಿ. ವೈಶಾಲಿ - Vistara News

ಉತ್ತರ ಕನ್ನಡ

Sirsi News: ನ.11ರಂದು ‘ನೆಮ್ಮದಿ’ಯ ರಂಗಧಾಮದಲ್ಲಿ ಧನ್ಯವಾದ ಕಾರ್ಯಕ್ರಮ: ವಿ.ಪಿ. ವೈಶಾಲಿ

Sirsi News: ಶಿರಸಿ ನಗರದ ನೆಮ್ಮದಿ ಆವರಣದಲ್ಲಿ ನಿರ್ಮಿಸಿರುವ ರಂಗಧಾಮವನ್ನು ನ.11ರಂದು ಶನಿವಾರ ಊರಿಗೆ ಒಪ್ಪಿಸುವ ಹಾಗೂ ಸಹಕರಿಸಿದ ಸರ್ವರನ್ನೂ ಸ್ಮರಿಸುವ ಧನ್ಯವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾನಗರ ರುದ್ರಭೂಮಿ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿ.ಪಿ. ವೈಶಾಲಿ ತಿಳಿಸಿದ್ದಾರೆ.

VISTARANEWS.COM


on

Dhanyavada programme on 11th November at Nemmadi Rangadhama says V P Vaishali
ಶಿರಸಿ ನಗರದ ನೆಮ್ಮದಿ‌ ಕುಟೀರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ವಿದ್ಯಾನಗರ ರುದ್ರಭೂಮಿ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿ.ಪಿ. ವೈಶಾಲಿ ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ: ನಗರದ ‘ನೆಮ್ಮದಿ’ ಆವರಣದಲ್ಲಿ ನಿರ್ಮಿಸಿರುವ ‘ರಂಗಧಾಮ’ವನ್ನು (Rangadhama) ನ.11ರಂದು ಊರಿಗೆ ಒಪ್ಪಿಸುವ ಹಾಗೂ ಸಹಕರಿಸಿದ ಸರ್ವರನ್ನೂ ಸ್ಮರಿಸುವ ಧನ್ಯವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾನಗರ ರುದ್ರಭೂಮಿ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿ.ಪಿ. ವೈಶಾಲಿ ತಿಳಿಸಿದರು.

ನಗರದ ನೆಮ್ಮದಿ‌ ಕುಟೀರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.11ರಂದು ಶನಿವಾರ ಸಂಜೆ 4 ಗಂಟೆಗೆ ಶಿರಸಿಯ ನೆಮ್ಮದಿಯ ರಂಗಧಾಮದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ, ದಾನಿಗಳ ಪ್ರತಿನಿಧಿಯಾಗಿ ವಿ.ಆರ್.ಎಲ್. ಸಂಸ್ಥೆಯ ಚೇರ್ಮನ್ ಆದ ಡಾ. ವಿಜಯ ಸಂಕೇಶ್ವರ ಅವರಿಗೆ ಹಾಗೂ ವಿಸ್ತಾರ ನ್ಯೂಸ್‌ನ ಸಿಇಒ ಹಾಗೂ ಪ್ರಧಾನ ಸಂಪಾದಕರಾದ ಹರಿಪ್ರಕಾಶ್‌ ಕೋಣೆಮನೆ ಅವರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಸ್ಮಶಾನವೆಂದರೆ ಭಯ, ಅಸಹ್ಯಗಳೇ ತುಂಬಿಕೊಂಡಿರುವ ತಾಣವೆಂಬ ಸಿದ್ಧ ಕಲ್ಪನೆಯನ್ನು ಹೋಗಲಾಡಿಸುವ ದಿಕ್ಕಿನಲ್ಲಿ ನಮ್ಮ ಪ್ರಯತ್ನವಾಗಿದೆ. ಅಂತ್ಯಕ್ರಿಯೆಗಷ್ಟೇ ಸೀಮಿತವಾಗದೇ ನಮ್ಮ ಎರಡುವರೆ ಎಕರೆ ಜಾಗವನ್ನು ಎರಡು ವಿಭಾಗವನ್ನಾಗಿ ಮಾಡಿ ಒಂದಕ್ಕೆ ಸದ್ಗತಿ, ಮತ್ತೊಂದಕ್ಕೆ ನೆಮ್ಮದಿ ಎಂದು ಕರೆಯಲಾಗುತ್ತದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: Viral Video: ಬಾವಿಗೆ ಇಳಿದು 11 ಹಾವು ರಕ್ಷಿಸಿದ ಸಾಹಸಿ! ಧೈರ್ಯಕ್ಕೆ ಶರಣು ಅಂದ್ರು ಜನ

ನೆಮ್ಮದಿ ಕುಟೀರವು ಮರಣಕ್ಕೆ ಮುನ್ನ ಬದುಕಿಗೆ ಹುರುಪು ತುಂಬುವ ಸ್ಥಳ. ನಾಡಿನಲ್ಲೇ ಅತಿ ಹೆಚ್ಚು ಪುಸ್ತಕಗಳು ಲೋಕಾರ್ಪಣೆಗೊಂಡ ದಾಖಲೆ ಈ ಕುಟೀರದ ಹೆಮ್ಮೆಯಾಗಿದೆ. ಸದ್ಗತಿಯಲ್ಲಿ ಆತಂಕಕ್ಕೆ ಆಸ್ಪದವಿಲ್ಲದ ರೀತಿಯಲ್ಲಿ ಗೌರವ ಪೂರ್ವಕವಾಗಿ ಅಂತ್ಯಕ್ರಿಯೆ ಜರುಗುತ್ತದೆ. ಜಾತಿ, ಮತ, ಬಡವ, ಶ್ರೀಮಂತ ಎಂಬ ಯಾವುದೇ ಭೇದ ಭಾವವಿಲ್ಲದೇ ಸಮಾನತೆ ಇಲ್ಲಿ ಅಕ್ಷರಶಃ ಜೀವಂತವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿಯೇ ಅತಿ ಹೆಚ್ಚು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದು ನಮ್ಮ ನೆಮ್ಮದಿ ಕುಟೀರದಲ್ಲಿ. ಈ ಹಿನ್ನೆಲೆಯಲ್ಲಿ ನೆಮ್ಮದಿ ಆವರಣದಲ್ಲಿ 1.60 ಕೋಟಿ ರೂ ವೆಚ್ಚದಲ್ಲಿ ರಂಗಧಾಮ ನಿರ್ಮಾಣ ಮಾಡಲಾಗಿದೆ. ರಂಗಧಾಮ ನಿರ್ಮಾಣಕ್ಕೆ ಹಲವಾರು ಕಲಾವಿದರು, ದಾನಿಗಳು, ಸಂಘಸಂಸ್ಥೆಗಳು ಕೈಜೋಡಿಸಿದ್ದಾರೆ. ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾಗಿದ್ದ ಉಮಾಶ್ರೀ ಅವರು 60 ಲಕ್ಷ ರೂ. ಅನುದಾನ ಮಂಜೂರು ಮಾಡಿದ್ದರು. ಈ ಹಣ ಪಡೆಯಲು 9 ವರ್ಷಗಳ ಕಾಲ ಶ್ರಮಿಸಬೇಕಾಯಿತು. ಡಾ. ವಿಜಯ ಸಂಕೇಶ್ವರ ಮತ್ತು ಟಿಎಸ್ಎಸ್ ಸಂಸ್ಥೆ ದೊಡ್ಡ ಮೊತ್ತದ ಸಹಾಯ ನೀಡಿದ್ದಾರೆ. ರೋಟರಿ ಸಂಸ್ಥೆ ಸೋಲಾರ್ ವ್ಯವಸ್ಥೆ ಮಾಡಿಕೊಟ್ಟಿದೆ ಎಂದವರು ಹೇಳಿದರು.

ಇದನ್ನೂ ಓದಿ: Exam Tips: ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಹೀಗೆ ತಯಾರಾಗಿ

ಈ ವೇಳೆ ವಿದ್ಯಾನಗರ ರುದ್ರಭೂಮಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕಾಶಿನಾಥ್ ಮೂಡಿ, ಸದಸ್ಯರಾದ ನಾಗರಾಜ ಗಂಗೊಳ್ಳಿ, ಪಿ.ವಿ. ಹೆಗಡೆ ಬೆಳ್ಳೇಕೇರಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಹಾಗೂ ಹೀಟ್‌ ವೇವ್‌ (Heat wave) ಪರಿಸ್ಥಿತಿಗಳು ಮೇಲುಗೈ ಸಾಧಿಸಿವೆ. ಈ ವಾರವೆಲ್ಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಒಣ ಹವೆ (Dry Weather) ಮುಂದುವರಿಯಲಿದ್ದು, ತಾಪಮಾನ ಏರಿಕೆ ಆಗಲಿದೆ. ಶಾಖದ ಹೊಡೆತಕ್ಕೆ ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೊ ಅಲರ್ಟ್‌ ನೀಡಿದೆ. ಇದರೊಟ್ಟಿಗೆ ಆರೋಗ್ಯ ಕಾಳಜಿ ವಹಿಸುವಂತೆ ಜನರಿಗೆ ಸಲಹೆ ಸೂಚನೆಗಳನ್ನು ನೀಡಲಾಗಿದೆ.

ಬಿಸಿಗಾಳಿ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಉತ್ತರ ಒಳನಾಡು ಭಾಗದಲ್ಲಿ ರಾತ್ರಿ ಹೊತ್ತು ಬೆಚ್ಚಗೆ ಇದ್ದರೆ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ಇದನ್ನೂ ಓದಿ: Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ರೆಡ್ ಮತ್ತು ಆರೆಂಜ್‌, ಯೆಲ್ಲೋ ಅಲರ್ಟ್ ಇರುವ ಪ್ರದೇಶಗಳಿವು

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಎಲ್ಲ ವಯೋಮಾನದವರಲ್ಲೂ ಅನಾರೋಗ್ಯ ಸಮಸ್ಯೆ ಕಾಡಬಹುದು. ಶಾಖದ ಹೊಡೆತವನ್ನು ತಪ್ಪಿಸಲು ಜನರು ಕಾಳಜಿ ವಹಿಸುವುದು ಅಗತ್ಯವಿದೆ.

ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡಬಾರದು.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮಧ್ಯಮ ತಾಪಮಾನ ಮತ್ತು ಶಾಖವನ್ನು ಸಾಮಾನ್ಯ ಜನರು ಸಹಿಸಿಕೊಳ್ಳಬಹುದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಆರೋಗ್ಯ ಕಾಳಜಿ ವಹಿಸುವುದು ಸೂಕ್ತ.

ಬೆಂಗಳೂರಲ್ಲಿ ತಾಪಮಾನ ಹೆಚ್ಚಳ

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಮತ್ತು 24 ಡಿ.ಸೆ ಇರಲಿದೆ. ತಾಪಮಾನ ಏರಿಕೆಯು ಜನರನ್ನು ಕಂಗಾಲು ಮಾಡಿದೆ. ಇದೇ ವಾತಾವರಣವು ಈ ಪೂರ್ತಿ ಮುಂದುವರಿಯಲಿದೆ.

ಕೋಲಾರದಲ್ಲಿ ಮಳೆಯ ಸಿಂಚನ

ಕೋಲಾರ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಗುರುವಾರ ಸತತ ಒಂದು ಗಂಟೆಯಿಂದ ಮಳೆ ಸುರಿಯುತ್ತಿದೆ. ಮೂರ್ನಾಲ್ಕು ತಿಂಗಳಿಂದ ಬೇಸಿಗೆ ಬಿಸಿಯಿಂದ ಬಸವಳಿದ ಜನರಿಗೆ ಮಳೆಯು ತಂಪೆರೆದಿದೆ. ಭರಣಿ ನಕ್ಷತ್ರದ ಮೊದಲ ಮಳೆ ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಸುರಿಯುತ್ತಿದೆ. ಬಿಸಿಲಿನ ತಾಪ, ಬಿಸಿ ಗಾಳಿಗೆ, ಪರದಾಡುತ್ತಿದ್ದ ಜನರಿಗೆ ಮಳೆಯ ಸಿಂಚನದಿಂದ ಬಿಸಿಯಿಂದ ಮುಕ್ತರಾಗಿದ್ದಾರೆ

ಇದನ್ನೂ ಓದಿ: Viral News: ದೂರದ ಇಂಗ್ಲೆಂಡ್‌ನಲ್ಲಿಯೂ ಕೇರಳ ಕಲರವ; ನೆಟ್ಟಿಗರ ಗಮನ ಸೆಳೆದ ವಿಡಿಯೊ ಇಲ್ಲಿದೆ

ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

ರಾಯಚೂರು: ಬಿಸಿಲಿನ ತಾಪ ಸಿಕ್ಕಾಪಟ್ಟೆ ಹೆಚ್ಚಾಗುತ್ತಿದೆ. ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದು ಜಸ್ಟ್‌ ಸ್ಯಾಂಪಲ್‌ ಇನ್ನೂ ತಾಪಮಾನ (Temperature Warning ) ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಮನೆಯಲ್ಲಿ, ಆಫೀಸ್‌ನಲ್ಲಿ ಎಸಿ ಹಾಕಿಕೊಂಡು ಕುಳಿತುಕೊಳ್ಳುವವರೂ ಕೂಡ ಈ ಬಿಸಿಲಿನ ಝಳಕ್ಕೆ ತತ್ತರಿಸಿದ್ದಾರೆ. ಉರಿಯುತ್ತಿರುವ ಸೂರ್ಯನ ಶಾಖಕ್ಕೆ (Heat wave) ಸ್ವಲ್ಪ ಹೊತ್ತು ಮೈಒಡ್ಡಿದ್ರೆ ಸಾಕು ಸುಟ್ಟು ಹೋಗುವಷ್ಟು ತೀವ್ರತೆ ಇದೆ. ಸದ್ಯ ಈ ಉರಿ ಬಿಸಿಲಿನಲ್ಲೇ ರಾಯಚೂರು ಮಂದಿ ಪ್ರಯೋಗವನ್ನು ಮಾಡಿದ್ದಾರೆ. ಬೆಂಕಿ ಇಲ್ಲದೆ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ತಿಂದಿದ್ದಾರೆ.

ಜನರು ಈಗಾಗಲೇ ಬಿಸಿಲಿನ ಶಾಖದಿಂದ ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಗೆ ಬರಲು ಆಗದಷ್ಟು ತಾಪಮಾನ ಹೆಚ್ಚಿದೆ. ಆದರೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಯುವಕರು ಪ್ರಯೋಗ ಮಾಡಿದ್ದಾರೆ. ಬಿಸಿಲಿನಿಂದಲೇ ಮೊಟ್ಟೆಯ ಆಮ್ಲೆಟ್ ಮಾಡಿದ್ದಾರೆ.

ಬಿಸಿಲು ಅದ್ಯಾವ ಪರಿ ಇದೆ ಎಂಬ ಕುತೂಹಲಕ್ಕಾಗಿ ಬೆಂಕಿ ಇಲ್ಲದೆ ಬಿಸಿಲಿನಲ್ಲಿ ಒಂದೂವರೆ ಗಂಟೆವರೆಗೆ ಕಬ್ಬಿಣದ ತವಾ ಇಟ್ಟಿದ್ದಾರೆ. ಅದು ಕಾದ ನಂತರ ಮೊಟ್ಟೆ ಒಡೆದು ಆಮ್ಲೆಟ್ ತಯಾರಿಸಿ ತಿಂದಿದ್ದಾರೆ. ರಾಯಚೂರು ಜಿಲ್ಲೆಯಾದ್ಯಂತ ಒಂದು ವಾರದಿಂದ ಪ್ರತಿ ದಿನ 44 ರಿಂದ 45 ಡಿಗ್ರಿ ಸೆಲ್ಸಿಯಸ್‍ ಗರಿಷ್ಠ ಉಷ್ಠಾಂಶ ದಾಖಲಾಗುತ್ತಿದೆ.

ಇದನ್ನೂ ಓದಿ: Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವಿದ್ಯುತ್‌ ಕಂಬದ ಲೈನ್‌ಗಳಲ್ಲಿ ಶಾರ್ಟ್‌ ಸರ್ಕ್ಯೂಟ್‌

ಇತ್ತ ರಾಯಚೂರಿನಲ್ಲಿ ದಿನೇದಿನೆ ಬಿಸಿಲು ಹೆಚ್ಚಳವಾಗುತ್ತಿದ್ದು, ಏರ್ ಕೂಲರ್ ಮತ್ತು ಎಸಿ ಬಳಕೆ ಅಧಿಕವಾಗಿದೆ. ರಾಯಚೂರು ನಗರದ ಗಾಂಧಿ ಚೌಕ್ ಬಳಿಯ ಖಾಸಗಿ ಆಸ್ಪತ್ರೆ ಪಕ್ಕದಲ್ಲಿ ವಿದ್ಯುತ್ ಲೋಡ್ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದೆ.

ವಿದ್ಯುತ್ ಕಂಬದಲ್ಲಿದ್ದ ಲೈನ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸಿನಿಮಾ ಸ್ಟೈಲ್‌ನಲ್ಲಿ ಸ್ಪಾರ್ಕ್ ಉಂಟಾಗಿತ್ತು. ಕೆಲ ಹೊತ್ತು ಸ್ಪಾರ್ಕ್ ನೋಡಿದ ಜನರು ಗಾಬರಿ ಆದರು. ಸದರ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Crime News : 6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ; ಹಿಟ್‌ ಆ್ಯಂಡ್‌ ರನ್‌ ಮಾಡಿ ಚಾಲಕರಿಬ್ಬರು ಎಸ್ಕೇಪ್‌

Crime News : ಪ್ರತ್ಯೇಕ ಕಡೆಗಳಲ್ಲಿ ಅಪರಾಧ ಕೃತ್ಯಗಳು ವರದಿ ಆಗಿವೆ. ಯಾದಗಿರಿಯಲ್ಲಿ ದುಷ್ಟನೊಬ್ಬ ಬಾಲಕಿಯನ್ನು ಅಪಹರಿಸಲು ಯತ್ನಿಸಿದರೆ, ಬೆಂಗಳೂರು ಹಾಗೂ ಗದಗನಲ್ಲಿ ಹಿಟ್‌ ಆ್ಯಂಡ್‌ ರನ್‌ ಕೇಸ್‌ ದಾಖಲಾಗಿದೆ.

VISTARANEWS.COM


on

By

Crime News
Koo

ಯಾದಗಿರಿ: ಹಾಡಹಗಲೆ ದುಷ್ಕರ್ಮಿಯೊಬ್ಬ ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು (kidnap case) ಯತ್ನಿಸಿದ್ದಾರೆ. ಯಾದಗಿರಿಯ ಅಜೀಜ್ ಕಾಲೋನಿಯಲ್ಲಿ ಘಟನೆ (Crime News) ನಡೆದಿದೆ. 6 ವರ್ಷದ ಸಂಜನಾ ಎಂಬಾಕೆ ಎಂದಿನಂತೆ ಸ್ನೇಹಿತೆ ಮನೆಯಿಂದ ಟ್ಯೂಶನ್‌ಗೆ ತೆರಳುತ್ತಿದ್ದಳು.

ಈ ವೇಳೆ ಮಾಸ್ಕ್ ಧರಿಸಿ ಬಂದ ದುಷ್ಕರ್ಮಿಯೊರ್ವ ಬಾಲಕಿಯ ಕಣ್ಣಿಗೆ ಸ್ಪ್ರೇ ಮಾಡಿದ್ದಾನೆ. ಬಳಿಕ ಅಪಹರಿಸಲು ಯತ್ನಿಸಿದಾಗ ಬಾಲಕಿ ಆತನಿಂದ ತಪ್ಪಿಸಿಕೊಂಡು ಮನೆಗೆ ಓಡಿ ಬಂದಿದ್ದಾಳೆ. ಸದ್ಯ ಪೋಷಕರ ದೂರಿನ ಮೇರೆಗೆ ಘಟನಾ ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಪೊಲೀಸ್‌ ಪೇದೆಗೆ ಗುದ್ದಿ ಟಿಪ್ಪರ್‌ ಚಾಲಕ ಪರಾರಿ

ಟಿಪ್ಪರ್ ಮತ್ತು ಪೊಲೀಸ್ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಪೊಲೀಸ್ ಪೇದೆ ಕಾಲು ಮುರಿದು ಹೋಗಿದೆ. ಗದಗದ ಬೆಟಗೇರಿ ರೈಲ್ವೇ ಅಂಡರ್ ಬ್ರಿಜ್ ಬಳಿ ಅಪಘಾತ ನಡೆದಿದೆ. ವೀರಯ್ಯ ಹಿರೇಮಠ (54) ಗಂಭಿರ ಗಾಯಗೊಂಡವರು. ಪೇದೆ ವೀರಯ್ಯ ಬೆಟಗೇರಿಯಿಂದ ಗದಗ ಕಡೆ ಬರುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಗುದ್ದಿದೆ. ಡಿಕ್ಕಿ ರಭಸಕ್ಕೆ ಬೈಕ್‌ ನುಜ್ಜುಗುಜ್ಜಾಗಿದೆ.

ಇತ್ತ ಅಪಘಾತ ಮಾಡಿದ ಚಾಲಕ ಟಿಪ್ಪರ್ ನಿಲ್ಲಿಸದೇ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ನಂತರ ಗದಗ ನಗರದ ಪಂಚಾಕ್ಷರಿ ನಗರದ ಬಳಿ ಟಿಪ್ಪರ್ ಲಾರಿ ನಿಲ್ಲಿಸಿ ಚಾಲಕ ಪರಾರಿ ಆಗಿದ್ದಾನೆ. ಗದಗ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಪೇದೆ ಎಡಗಾಲಿಗೆ ಗಂಭೀರ ಗಾಯವಾಗಿದ್ದು, ಪ್ರಥಮ ಚಿಕಿತ್ಸೆ ಬಳಿಕ ಧಾರವಾಡದ ಎಸ್‌ಡಿಎಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Students Self harming: 20 ವರ್ಷಗಳಲ್ಲಿ ಐಐಟಿಯ 115 ವಿದ್ಯಾರ್ಥಿಗಳು ಆತ್ಮಹತ್ಯೆ

ಬೆಂಗಳೂರಲ್ಲಿ ಮಹಿಳೆಗೆ ಆಟೋ ಡಿಕ್ಕಿ

ಬೆಂಗಳೂರಲ್ಲಿ ಆಟೋ ಚಾಲಕನಿಂದ ಹಿಟ್‌ ಆ್ಯಂಡ್‌ ರನ್‌ ಮಾಡಿ ಪರಾರಿ ಆಗಿದ್ದಾನೆ. ಏಪ್ರಿಲ್ 29ರ ರಾತ್ರಿ 9.58ಕ್ಕೆ ಬೆಂಗಳೂರಿನ ಗಿರಿನಗರದ ಆವಲಹಳ್ಳಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ಲಕ್ಷ್ಮೀ (55) ಎಂಬಾಕೆ ಕಸ ಹಾಕಲು ಬಂದಿದ್ದರು. ಈ ವೇಳೆ ಅತಿ ವೇಗದಿಂದ ಬಂದ ಆಟೋ ಚಾಲಕ, ಮಹಿಳೆಗೆ ಗುದ್ದಿ ಸ್ಥಳದಿಂದ ಎಸ್ಕೇಪ್‌ ಆಗಿದ್ದಾನೆ.

ಘಟನೆಯಲ್ಲಿ ಲಕ್ಷ್ಮಿ ತಲೆ, ಕಾಲಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಬನಶಂಕರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆಟೋ ಚಾಲಕನ ಪತ್ತೆ ಮಾಡಲು ಸಿಸಿಟಿವಿ ಮೊರೆ ಹೋಗಿದ್ದಾರೆ.

ಸಮುದ್ರದಲ್ಲಿ ಮುಳುಗುತ್ತಿದ್ದ ಮಹಿಳೆಯ ರಕ್ಷಣೆ

ನೀರಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗೆ ಸಿಕ್ಕಿ ನೀರಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ವನ್ನಳ್ಳಿಯ ಹೆಡ್‌ಬಂದರ್ ಬೀಚ್‌ನಲ್ಲಿ ಘಟನೆ ನಡೆದಿದೆ. ಶೋಭಾ (31) ರಕ್ಷಣೆಗೊಳಗಾದವರು. ಗದಗ ಜಿಲ್ಲೆಯ ರೋಣ ಮೂಲದ ಶೋಭಾ ಬೀಚ್‌ಗೆ ಬಂದಿದ್ದರು. ಈ ವೇಳೆ ಅಲೆಗೆ ಸಿಲುಕಿದ್ದರು. ಇದನ್ನೂ ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿ ಉದಯ ಹರಿಕಂತ್ರ ಹಾಗೂ ಬೀಚ್ ಸೂಪರ್‌ವೈಸರ್ ರವಿ ನಾಯ್ಕ, ಬೋಟಿಂಗ್ ಸಿಬ್ಬಂದಿ ಪ್ರಭಾಕರ್, ಗಣೇಶ್ ನೆರವಿನಿಂದ ಬದುಕುಳಿದಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Karnataka Weather Forecast : ಹಗಲು ಹೊತ್ತು ಬಿಸಿ ಗಾಳಿ ಬೀಸಿದರೆ, ಮಧ್ಯಾಹ್ನದಂದು ಉರಿ ಬಿಸಿಲು ನೆತ್ತಿ ಸುಡುಲಿದೆ. ರಾತ್ರಿಯಾದರೆ ವಾತಾವರಣವು ಬೆಚ್ಚಗೆ ಇರಲಿದೆ. ಈ ಮಧ್ಯೆ ಕೆಲವೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Dry Weather) ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಇದ್ದರೂ, ಕೆಲವೆಡೆ ಮಳೆಯ (Rain News) ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಏ.2ರಂದು ಮಲೆನಾಡಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ದಕ್ಷಿಣ ಒಳನಾಡಿನ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರಿನ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಮುಖ್ಯವಾಗಿ ಶುಭ್ರ ಆಕಾಶವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರೆಡ್ ಅಲರ್ಟ್

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಮೇ 5ರವರೆಗೆ ಈ ಜಿಲ್ಲೆಗಳಲ್ಲಿ ತಾಪಮಾನ ವಿಪರೀತವಾಗಿ ಇರಲಿದೆ. ಉರಿ ಸೆಕೆಯ ವಾತಾವರಣ ಇರಲಿದೆ.

ಆರೆಂಜ್ ಅಲರ್ಟ್

ಇನ್ನೂ ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ 5 ದಿನಗಳ ಕಾಲ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 5 ರವರೆಗೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ‌Prajwal Revanna Case: ಪ್ರಜ್ವಲ್ ಕಾಂಗ್ರೆಸ್‌ ಬೆಂಬಲಿತ ಸಂಸದ; ನಿಮಗಾಗದಿದ್ದರೆ ನಮಗೆ ಅಧಿಕಾರ ಕೊಡಿ, 24 ಗಂಟೆಯಲ್ಲಿ ಹಿಡಿಯುತ್ತೇವೆ: ಅಶೋಕ್

Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದಲ್ಲ, ಇನ್ನೂ ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಈ ಘೋರ ಬಿಸಿಲಿನಲ್ಲಿ ಸ್ಮೃತಿ ತಪ್ಪಿದವರ ಸುದ್ದಿಗಳು ಅಲ್ಲಲ್ಲಿ ಕೇಳುತ್ತಿವೆ. ಬಿಸಿಲಾಘಾತಕ್ಕೆ ಜೀವ ತೆತ್ತವರ ವಿಷಯಗಳೂ ಕೇಳಿಬರುತ್ತಿವೆ. ಛತ್ರಿ ಹಿಡಿದೇ ಹೋಗುತ್ತೇವೆ ಹೊರಗೆ, ಚೆನ್ನಾಗಿ ನೀರು ಕುಡಿಯುತ್ತೇವೆ ನಾವು. ನಮಗೇನು ಬಿಸಿಲಿನ ಭಯವಿಲ್ಲ ಎನ್ನುವವರಿದ್ದಾರೆ. ವಿಷಯ ಹಾಗಲ್ಲ, ಬಿಸಿಲ ದಿನಗಳಲ್ಲಿ ಆರೋಗ್ಯದ ಕಾಳಜಿಯನ್ನು ಎಷ್ಟು ಮಾಡಿದರೂ ಸಾಲದು. ಒಮ್ಮೆ ಶಾಖದ ಆಘಾತಕ್ಕೆ ಅಥವಾ ನಿರ್ಜಲೀಕರಣಕ್ಕೆ ತುತ್ತಾದರೆ, ಚೇತರಿಸಿಕೊಳ್ಳಲು ನಾಲ್ಕಾರು ದಿನಗಳಾದರೂ ಬೇಕಾಗುತ್ತದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದಿದ್ದರೆ, ಜೀವಕ್ಕೆ ಅಪಾಯ ತಪ್ಪಿದ್ದಲ್ಲ. ಹಾಗಾದರೆ ಇವುಗಳಿಂದ (Summer Tips) ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲವೇ?

Dry weather Summer Heat

ಏಕೆ ಹೀಗಾಗುತ್ತದೆ?

ಮೊದಲಿಗೆ, ಬಿಸಿಲಿಗೆ ಎಚ್ಚರ ತಪ್ಪುವುದೇಕೆ ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಹೊರಗಿನ ವಾತಾವರಣದ ಉಷ್ಣತೆಯನ್ನು ಆಧರಿಸಿ, ನಮ್ಮ ದೇಹ ತನ್ನ ಉಷ್ಣತೆಯನ್ನು ಮಾರ್ಪಾಡು ಮಾಡಿಕೊಳ್ಳುತ್ತದೆ. ಹೊರಗಿನ ತಾಪಮಾನ ತೀವ್ರವಾಗಿ ಏರಿಕೆಯಾದಾಗ, ದೇಹದೊಳಗಿನ ಉಷ್ಣತೆಯನ್ನು ತಗ್ಗಿಸುವುದಕ್ಕೆ ಶರೀರ ಬೆವರಲು ಪ್ರಾರಂಭಿಸುತ್ತದೆ. ಇದರಿಂದಲೇ ದೇಹ ತಣ್ಣಗಾಗಬೇಕು, ಆಂತರಿಕ ಉಷ್ಣತೆ ನಿಯಂತ್ರಣದಲ್ಲಿ ಇರಬೇಕು. ಆದರೆ ಈ ಎಲ್ಲ ತಂತ್ರಗಳು ಕೈಕೊಟ್ಟಾಗ, ಸಾಕಾಗದೆ ಇದ್ದಾಗ ಅಥವಾ ಅತಿಯಾಗಿ ಬೆವರಿ ದೇಹದಲ್ಲಿ ನೀರಿನಂಶ ಕಡಿಮೆ ಆದಾಗ, ಎಚ್ಚರ ತಪ್ಪುತ್ತದೆ. ಇದರಿಂದ ಮೆದುಳಿಗೆ ಅಗತ್ಯವಾದಷ್ಟು ರಕ್ತಸಂಚಾರ ಆಗದಿದ್ದರೆ, ಪಾರ್ಶ್ವವಾಯು ಸಂಭವಿಸಿ ಜೀವಹಾನಿಯೂ ಆಗಬಹುದು.

ಮಾನವ ಶರೀರ ತನ್ನಷ್ಟಕ್ಕೆ ತಡೆದುಕೊಳ್ಳಲು ಸಾಧ್ಯವಾಗುವ ಗರಿಷ್ಟ ಉಷ್ಣತೆಯೆಂದರೆ ೪೨.೩ ಡಿಗ್ರಿ ಸೆ. ಇದಿಷ್ಟು ತಡೆಯುವುದೂ ಸುಲಭವಿಲ್ಲ. ಇನ್ನು ಇದಕ್ಕಿಂತಲೂ ಹೆಚ್ಚಿನ ತಾಪಮಾನವನ್ನು ಸಹಿಸಿಕೊಳ್ಳಲು ಏನೆಲ್ಲ ಉಪಚಾರ ಸಾಧ್ಯವೋ ಅದನ್ನು ನಮಗೆ ನಾವೇ ಮಾಡಿಕೊಳ್ಳಬೇಕು. ಸಿಕ್ಕಾಪಟ್ಟೆ ನೀರು ಕುಡಿಯುವುದು, ಎಲೆಕ್ಟ್ರೋಲೈಟ್‌ ಮರುಪೂರಣ ಮಾಡುವುದು, ಚೆನ್ನಾಗಿ ಗಾಳಿಯಾಡುವ ವಾತಾವರಣದಲ್ಲಿರುವುದು- ಇಂಥವೆಲ್ಲ ನಾವು ಅಗತ್ಯವಾಗಿ ಮಾಡಬೇಕಾದ ಕೆಲಸಗಳು.

ಉಷ್ಣತೆಗೆ ಮಾತ್ರವಲ್ಲ

ತೀವ್ರ ತಾಪಮಾನಗಳಿಗೆ ಎಚ್ಚರ ತಪ್ಪುವುದು ಬಿಸಿ ಹೆಚ್ಚಾದಾಗ ಮಾತ್ರವಲ್ಲ, ತೀವ್ರ ಚಳಿಯಲ್ಲೂ ಆಗುತ್ತದೆ. ಈ ಎರಡೂ ಅತಿರೇಕದ ತಾಪಮಾನಗಳಲ್ಲಿ ದೇಹದ ಉಷ್ಣತಾ-ನಿಯಂತ್ರಕ ವ್ಯವಸ್ಥೆ ಕೈಕೊಡಬಹುದು. ಬಿಸಿ ಹೆಚ್ಚಾದಾಗ ಮೆದುಳಿಗೆ ರಕ್ತಸಂಚಾರ ಸರಾಗ ಆಗದಿರುವ ಸಂಭವ ಇರುವದಂತೆಯೇ, ಚಳಿ ಹೆಚ್ಚಾದಾಗಲೂ ಆಗುತ್ತದೆ. ಹೊರಗಿನ ಚಳಿ ತೀವ್ರವಾಗಿ ಹೆಚ್ಚಾದರೆ, ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳುವುದಕ್ಕೆ ರಕ್ತ ನಾಳಗಳು ಸಂಕೋಚಗೊಳ್ಳುತ್ತವೆ. ಹೀಗೆ ಸಂಕೋಚಗೊಳ್ಳುವುದು ಅತಿಯಾದರೆ ಆಗಲೂ ಮೆದುಳಿಗೆ ಬೇಕಾದಷ್ಟು ರಕ್ತಸಂಚಾರ ಆಗದೆ ಜ್ಞಾನ ತಪ್ಪಬಹುದು.

Summer Fashion

ತಪ್ಪಿಸಿಕೊಳ್ಳಲಾಗದೆ?

ಖಂಡಿತ ಸಾಧ್ಯವಿದೆ. ಮೊದಲಿಗೆ, 40 ಡಿ.ಸೆ. ಉಷ್ಣತೆಯನ್ನು ತಲುಪಿದಾಗ ಮನೆಯಿಂದ ಹೊರಗೆ ಹೋಗಬೇಡಿ. ಹೋಗುವುದು ಅನಿವಾರ್ಯವಾದರೆ, ಸಡಿಲವಾದ ಬಿಳಿ ಅಥವಾ ತಿಳಿ ಬಣ್ಣದ ಹತ್ತಿಯ ಬಟ್ಟೆಗಳನ್ನೇ ಧರಿಸಿ. ತಲೆಗೆ ಟೋಪಿ, ಛತ್ರಿಗಳಂಥವು ಇದ್ದರೆ ಒಳ್ಳೆಯದು. ನಿಲ್ಲಿಸಿದ ಕಾರಿನೊಳಗೆ ಯಾರನ್ನೂ ಬಿಡಬೇಡಿ. ಈ ಸೆಕೆಯಲ್ಲಿ ದಿನಕ್ಕೆ ಐದು ಲೀಟರ್‌ ನೀರು ಅಥವಾ ಪೇಯಗಳನ್ನು ಕುಡಿಯುವ ಗುರಿ ಇರಿಸಿಕೊಳ್ಳಿ. ಆಲ್ಕೋಹಾಲ್‌ ಮತ್ತು ಕೆಫೇನ್‌ ಸೇವನೆಯ ಮೇಲೆ ಕಡಿವಾಣ ಅಗತ್ಯ. ಇಲ್ಲದಿದ್ದರೆ ದೇಹ ಬೇಗನೇ ನಿರ್ಜಲೀಕರಣಕ್ಕೆ ತುತ್ತಾಗುತ್ತದೆ. ಜೊತೆಗೆ, ಸೆಕೆಯಲ್ಲಿ ದೇಹವನ್ನು ತಂಪಾಗಿಸುವ ಶಾರೀರಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ತಲೆನೋವು, ಅತಿಯಾಗಿ ಬೆವರುವುದು, ಬಾಯಿ ಒಣಗುವುದು, ತೀರದ ದಾಹ, ಮೈಯೆಲ್ಲ ಬಿಸಿಯಾದ ಅನುಭವಗಳು ಆದರೆ ಜಾಗ್ರತೆ ಮಾಡಿ. ತಕ್ಷಣವೇ ದೇಹವನ್ನು ತಂಪಾಗಿಸುವ ಬಗ್ಗೆ ಕ್ರಮ ಕೈಗೊಳ್ಳಿ. ತಂಪಾದ ಬಟ್ಟೆಯಿಂದ ಇಡೀ ದೇಹವನ್ನು ಒರೆಸಬಹುದು. ಒಆರೆಸ್‌, ಎಳನೀರು ಮುಂತಾದ ಎಲೆಕ್ಟ್ರೋಲೈಟಿಕ್‌ ಪೇಯಗಳು ಬೇಕಾಗುತ್ತವೆ. ಕೂಲರ್‌, ಎಸಿಯಂಥ ಉಪಕರಣಗಳ ಮೂಲಕ ಮನೆಯ ವಾತಾವರಣವನ್ನು ತಂಪಾಗಿಸಲು ಪ್ರಯತ್ನಿಸಿ. ಈ ಹೊತ್ತಿನಲ್ಲಿ ಮನೆಯಿಂದ ಹೊರಗಿದ್ದರೆ, ತಂಪಾದ ನೆರಳಿನಂಥ ಜಾಗಕ್ಕೆ ಹೋಗಿ. ಬಿಸಿಲಿನ ಆಘಾತ ತಾಗಿದಾಗ ತ್ವರಿತವಾಗಿ ಕ್ರಮ ಕೈಗೊಳ್ಳದಿದ್ದರೆ ಜೀವಕ್ಕೇ ಎರವಾಗುತ್ತದೆ, ನೆನಪಿರಲಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Lok Sabha Election 2024: ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿಗೆ ಅಧಿಕ ಬಹುಮತ ನಿಶ್ಚಿತ: ಹರಿಪ್ರಕಾಶ್‌ ಕೋಣೆಮನೆ

Lok Sabha Election 2024: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಹಾಗೂ ಮಂಡಲ ಪ್ರಮುಖರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಯಲ್ಲಾಪುರ ಪಟ್ಟಣದಾದ್ಯಂತ ಬುಧವಾರ ಮನೆ ಮನೆ ಪ್ರಚಾರ ನಡೆಸಿದರು.

VISTARANEWS.COM


on

BJP State Spokesperson Hariprakash konemane and leaders Election Campaign for BJP Candidate Vishweshwar Hegde Kageri in Yallapura
Koo

ಯಲ್ಲಾಪುರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಹಾಗೂ ಮಂಡಲ ಪ್ರಮುಖರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಯಲ್ಲಾಪುರ ಪಟ್ಟಣದಾದ್ಯಂತ ಬುಧವಾರ ಮನೆ ಮನೆ ಪ್ರಚಾರ (Lok Sabha Election 2024) ನಡೆಸಿದರು.

ಮಹಾಸಂಪರ್ಕ ಅಭಿಯಾನದ ಅಂಗವಾಗಿ ಪಟ್ಟಣದ ಅಂಗಡಿಗಳು, ಸಂತೆ ಮಾರುಕಟ್ಟೆ, ರಿಕ್ಷಾ ನಿಲ್ದಾಣ ಹಾಗೂ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪರ ಪ್ರಚಾರ ನಡೆಸಲಾಯಿತು.

ಇದನ್ನೂ ಓದಿ: Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಈ ವೇಳೆ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿ, ಎಲ್ಲರ ಬಾಯಲ್ಲಿ ‘ಮೋದಿ ಮತ್ತೊಮ್ಮೆ’ ಘೋಷಣೆ ಮೊಳಗುತ್ತಿದೆ. ಎಲ್ಲ ಕಡೆಗಳಲ್ಲಿ ಜನರಿಂದ ಉತ್ತಮ ಸ್ಪಂದನೆ ದೊರಕುತ್ತಿದ್ದು ಬಿಜೆಪಿ ಈ ಲೋಕಸಭಾ ಚುನಾವಣೆಯಲ್ಲಿ ಹಿಂದಿನ ಚುನಾವಣೆಗಳಿಗಿಂತ ಹೆಚ್ಚು ಬಹುಮತ ಪಡೆದು ಗೆಲ್ಲುವುದು ನಿಶ್ಚಿತ. ಅದರಲ್ಲಿಯೂ ಯಲ್ಲಾಪುರ-ಮುಂಡಗೋಡ ಕ್ಷೇತ್ರದಿಂದ ಅತ್ಯಧಿಕ ಬಹುಮತ ದೊರೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಪ್ರಮುಖರಾದ ಉಮೇಶ ಭಾಗ್ವತ್, ಜಿ.ಎನ್. ಗಾಂವ್ಕರ್, ಗಣಪತಿ ಮಾನಿಗದ್ದೆ, ರಾಘವೇಂದ್ರ ಭಟ್ಟ ಹಾಸಣಗಿ, ರಾಮು ನಾಯ್ಕ, ಸೋಮೇಶ್ವರ ನಾಯ್ಕ, ರಾಜೇಶ್ ಭಟ್ಟ, ಶ್ರೀನಿವಾಸ ಭಟ್ಟ ಹಾಗೂ ಕಾರ್ಯಕರ್ತರು, ಇತರರು ಪಾಲ್ಗೊಂಡಿದ್ದರು.

Continue Reading
Advertisement
Virat kohli
ಕ್ರೀಡೆ1 min ago

Virat kohli : ಕೊಹ್ಲಿಯ ಸ್ಟ್ರೈಕ್​ರೇಟ್​ ಕುರಿತ ಪ್ರಶ್ನೆಗೆ ರೋಹಿತ್​, ಅಗರ್ಕರ್​ ಪ್ರತಿಕ್ರಿಯೆ ಹೀಗಿತ್ತು…

Religious Freedom
ದೇಶ5 mins ago

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಕಳವಳ; ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ

Lok Sabha Election 2024 Raju Kage calls those chanting Jai Shri Ram are beggars
Lok Sabha Election 20247 mins ago

Lok Sabha Election 2024: ಜೈ ಶ್ರೀರಾಮ್ ಘೋಷಣೆ ಕೂಗುವವರು ಭಿಕಾರಿಗಳು ಎಂದ ರಾಜು ಕಾಗೆ; ಚುನಾವಣಾ ಆಯೋಗದಿಂದ ನೋಟಿಸ್‌!

Prajwal Revanna Case Revanna denied anticipatory bail today Court allows SIT to file objections
ಕ್ರೈಂ44 mins ago

Prajwal Revanna Case: ರೇವಣ್ಣಗೆ ಇಂದು ಸಿಗಲಿಲ್ಲ ನಿರೀಕ್ಷಣಾ ಜಾಮೀನು; ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚಿಸಿದ ಕೋರ್ಟ್!

Covaxin
ದೇಶ1 hour ago

Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 hour ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

KL Rahul
ಕ್ರೀಡೆ1 hour ago

KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

T20 World Cup
ಕ್ರೀಡೆ2 hours ago

T20 World Cup : ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

Shine Shetty Summer Fashion
ಫ್ಯಾಷನ್2 hours ago

Summer Fashion: ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

IPL 2024
ಕ್ರೀಡೆ2 hours ago

IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 hour ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ15 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌