ಶಿರಸಿ: ಪಕ್ಷದಲ್ಲಿ ಅಭದ್ರತೆ ಇದ್ದವರು ಬೇರೆ ಪಕ್ಷದಲಿದ್ದವರನ್ನು ಕರೆಯುತ್ತಾರೆ. ಭದ್ರತೆ ಇದ್ದವರು ಕರೆಯೋದಿಲ್ಲ ಎನ್ನುವ ಮೂಲಕ ಬಿಜೆಪಿ ಶಾಸಕರನ್ನು ಡಿ.ಕೆ. ಶಿವಕುಮಾರ್ ಅವರು ತಮ್ಮ ಪಕ್ಷದತ್ತ ಸೆಳೆಯುವ ತಂತ್ರಕ್ಕೆ ಇಂಧನ ಸಚಿವ ಸುನೀಲ್ ಕುಮಾರ್ ಟಾಂಗ್ ನೀಡಿದರು.
ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣೆ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವರು ಸ್ಪೀಕರ್ ಕಾಗೇರಿ ಅವರ ಕಚೇರಿಗೆ ಭೇಟಿ ನೀಡಿದ ವೇಳೆ ಮಾಧ್ಯಮದೊಂದಿಗೆ ಮಾತನಾಡಿ, “ಕಾಂಗ್ರೆಸ್‌ನಲ್ಲಿ ಭಾರಿ ದೊಡ್ಡ ಪ್ರಮಾಣದಲ್ಲಿ ಅಭದ್ರತೆ ಕಾಣುತ್ತಿದೆ. ಅದಕ್ಕೆ ಬೇರೆಯವರನ್ನು ಪಕ್ಷಕ್ಕೆ ಕರೆಯುತ್ತಿದ್ದಾರೆ. ಕಾಂಗ್ರೆಸ್ ನಾಯಕರು, ಶಾಸಕರು ಬೇರೆ ಬೇರೆ ಕಡೆ ಅಲೆದಾಡುತ್ತಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಅಭದ್ರತೆ, ಅಸ್ತಿತ್ವಕ್ಕಾಗಿ ಹೋರಾಟ ಎಲ್ಲವೂ ಅವರ ಪಾರ್ಟಿಯಲ್ಲೇ ನಡೆಯುತ್ತಿದೆ” ಎಂದು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು.
ಇದನ್ನೂ ಓದಿ: Siddaramaiah: ಕೋಲಾರದಿಂದಲೂ ಸಿದ್ದರಾಮಯ್ಯ ಸ್ಪರ್ಧೆ: ರಾಹುಲ್ ಗಾಂಧಿಯಿಂದಲೇ ಘೋಷಣೆಗೆ ಮುಹೂರ್ತ?
“ನಾವು ಖುಷಿಯಿಂದ ರಾಜ್ಯಾದ್ಯಂತ ಸಂಕಲ್ಪ ಯಾತ್ರೆ ಮುಗಿಸಿದ್ದೇವೆ. ಮುಂದಿನ ದಿನಗಳಲ್ಲಿ ಸಂಪೂರ್ಣ ಬಹುಮತದದೊಂದಿಗೆ ಸರ್ಕಾರ ರಚನೆಗೆ ಚಿಂತನೆ ನಡೆಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಜವಾಬ್ದಾರಿಯುತ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುವ ನಿಟ್ಟಿನಲ್ಲಿ ಸಭೆ ನಡೆಸಲಾಗಿದೆ. ಗ್ರಾಮೀಣ ಮಟ್ಟದಲ್ಲಿ ಕೆಲಸ ಮಾಡುತ್ತಿರುವ ಪದಾಧಿಕಾರಿಗಳ ಅಭಿಪ್ರಾಯವನ್ನು ಸಂಗ್ರಹ ಮಾಡಲಾಗಿದೆ. ಟಿಕೆಟ್ ನೀಡುವ ವೇಳೆಗೆ ಕಾರ್ಯಕರ್ತರ ಅಭಿಪ್ರಾಯ ಕೂಡ ಮಾನದಂಡವಾಗಲಿದೆ” ಎಂದರು.
ಇದನ್ನೂ ಓದಿ: Viral Video: ಹುಡುಗನ ಕೈಯಲ್ಲಿದ್ದ ತಿಂಡಿ ತಿನ್ನಲು ಬಾಯಿ ಹಾಕಿದ ನಾಯಿ; ನಾಲಿಗೆಗೆ ಸಿಕ್ಕ ಟಿವಿ ಪರದೆ ನೆಕ್ಕಿ, ವಾಪಸ್ ಬಂತು!