ಶಿರಸಿ: ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ (Senior journalist) ಪ್ರಸಾದ್ ಹೆಗಡೆ (45) ನಿಧನ ಹೊಂದಿದ್ದಾರೆ. ಪ್ರಸಾದ್ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪ್ರಸಾದ್ ಹೆಗಡೆ ಶನಿವಾರ (ಮಾ.18) ಬೆಳಗ್ಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಶನಿವಾರ ಸಂಜೆ ಶಿರಸಿಯ ಸದ್ಗತಿ ನೆಮ್ಮದಿ ಕುಟೀರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಇದನ್ನೂ ಓದಿ: Viral Video: ವಿಶ್ವದಲ್ಲೇ ಉದ್ದದ ನಾಲಗೆ ಈತನದ್ದು; ಗಿನ್ನಿಸ್ ದಾಖಲೆಗೆ ಭಾಜನ
ರಾಜ್ ನ್ಯೂಸ್‌ನಲ್ಲಿ ಔಟ್‌ಪುಟ್ ಚೀಫ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಹಲವು ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದರು. ಮಾಧ್ಯಮ ಕ್ಷೇತ್ರದಲ್ಲಿ ಅಪಾರ ಅನುಭವವನ್ನು ಹೊಂದಿದ್ದರು.
ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮುಗಿಸಿದ್ದ ಪ್ರಸಾದ್, ರಂಗಭೂಮಿಯಲ್ಲಿ ಬಹಳ ಆಸಕ್ತಿ ಹೊಂದಿದ್ದರು. ಮೈಸೂರು ದಿಗಂತ ಪತ್ರಿಕೆಯಲ್ಲಿ ಪತ್ರಕರ್ತ ವೃತ್ತಿಯನ್ನು ಆರಂಭಿಸಿದ ಪ್ರಸಾದ್, ಬಳಿಕ ಹಲೋ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಯಲ್ಲಿ ಕೆಲಸ ಮಾಡಿದ್ದಾರೆ. ನಂತರ ಬೆಂಗಳೂರಿಗೆ ಬಂದು ದೃಶ್ಯ ಮಾಧ್ಯಮದಲ್ಲಿ ತಮ್ಮ ವೃತ್ತಿಯನ್ನು ಮುಂದುವರಿಸಿದ್ದರು. ಕಸ್ತೂರಿ ಟಿವಿಯಲ್ಲಿ ರಾಜಕೀಯ ವರದಿಗಾರರಾಗಿ, ನಿರೂಪಕರಾಗಿ, ರಾಜಕೀಯ ವಿಶ್ಲೇಷಕರಾಗಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು.
ಇದನ್ನೂ ಓದಿ: Hockey India: ಹಾರ್ದಿಕ್, ಸವಿತಾಗೆ ವರ್ಷದ ಹಾಕಿ ಆಟಗಾರ ಪ್ರಶಸ್ತಿ