Site icon Vistara News

Prajwal Revanna Case: ಅನ್ನ-ಸಾಂಬಾರ್‌ ತಿಂದು ಜಡ್ಜ್‌ ಎದುರು ಕೈಕಟ್ಟಿ ನಿಂತ ಪ್ರಜ್ವಲ್‌ ರೇವಣ್ಣ; ಎಂಥ ಸ್ಥಿತಿ!

Prajwal Revanna Case

SIT Officials Produces Prajwal Revanna Before The Court In Bengaluru

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದಲ್ಲಿ ಸುಮಾರು 35 ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ (Prajwal Revanna Case) ಭಾರತಕ್ಕೆ ಬಂದಿದ್ದು, ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇನ್ನು, ಶುಕ್ರವಾರ (ಮೇ 31) ಮಧ್ಯಾಹ್ನ ಪ್ರಜ್ವಲ್‌ ರೇವಣ್ಣ ಅವರನ್ನು ಬೆಂಗಳೂರಿನ (Bengaluru) 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬರೀ ಅನ್ನ-ಸಾಂಬಾರ್‌ ಸೇವಿಸಿ ನ್ಯಾಯಾಧೀಶರ ಎದುರು ಕೈಕಟ್ಟಿ ನಿಂತರು.

ಎಸ್‌ಐಟಿ ಪರ ಹಿರಿಯ ವಕೀಲ, ಎಸ್‌ಪಿಪಿ ಅಶೋಕ್‌ ನಾಯ್ಕ್‌ ವಾದ ಮಂಡಿಸಿದರು. ಬಟ್ಟೆ ಬಿಚ್ಚಿಸುವುದಕ್ಕೂ, ಬಲವಂತ ಮಾಡುವುದಕ್ಕೂ ವ್ಯತ್ಯಾಸ ಇರುತ್ತದೆ. ವಿಡಿಯೊ ರೆಕಾರ್ಡ್‌ ಮಾಡುವಾಗ ಮುಖ ಮರೆಮಾಚಲಾಗಿದೆ. ಆದರೆ, ಇದು ಅವರೇ ಅಂತ ಕೆಲ ಸಾಕ್ಷ್ಯಗಳಿವೆ. ವಿದೇಶದಲ್ಲಿ ಅರೆಸ್ಟ್‌ ಆಗುತ್ತೇನೆ ಅಂತ ಈಗ ದೇಶಕ್ಕೆ ಬಂದಿದ್ದಾರೆ. ಸಂತ್ರಸ್ತೆಯರ ಮೇಲೆ ಬಲ ಪ್ರಯೋಗವಾಗಿದೆ. ಹೆದರಿಸಿ ಕಿರುಕುಳ ನೀಡಿದ್ದಾರೆ. ಹಾಗಾಗಿ, ಪ್ರಜ್ವಲ್‌ ರೇವಣ್ಣ ಅವರನ್ನು 15 ದಿನ ಎಸ್‌ಐಟಿ ಕಸ್ಟಡಿಗೆ ನೀಡಬೇಕು ಎಂಬುದಾಗಿ ತಿಳಿಸಿದರು.

ಒಂದೇ ದಿನ ಕಸ್ಟಡಿ ಸಾಕು ಎಂದ ಎಂಪಿ ಪರ ವಕೀಲ

ಅಶೋಕ್‌ ನಾಯ್ಕ್‌ ವಾದಕ್ಕೆ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್‌ ಪ್ರತಿವಾದ ಮಂಡಿಸಿದರು. ಪೊಲೀಸರು ತಮಗೆ ಇಷ್ಟ ಬಂದ ಹಾಗೆ ಪ್ರಕರಣಗಳನ್ನು ದಾಖಲಿಸಿ ಎಫ್‌ಐಆರ್‌ ದಾಖಲಿಸಿದ್ದಾರೆ. ಪ್ರಜ್ವಲ್‌ ವಿರುದ್ಧ ದಾಖಲಾಗಿರುವ ಕೇಸ್‌ ಅಡಿಯಲ್ಲಿ ಅವರಿಗೆ ಜಾಮೀನು ನೀಡಬಹುದು.‌ ಜಾಮೀನು ಸಿಗುವ ಪ್ರಕರಣದಲ್ಲಿ ಜಾಮೀನುರಹಿತ ಕೇಸ್‌ ದಾಖಲಿಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಅತ್ಯಾಚಾರ ಎಂಬ ಕೇಸ್‌ ದಾಖಲಿಸಿದ್ದಾರೆ. ಎಸ್‌ಐಟಿ ಅಧಿಕಾರಿಗಳು ವಿನಾಕಾರಣ 15 ದಿನ ಕಸ್ಟಡಿಗೆ ಕೇಳುತ್ತಿದ್ದಾರೆ. ಒಂದು ದಿನ ಕಸ್ಟಡಿಗೆ ನೀಡಿದರೆ ಸಾಕು. ಏಪ್ರಿಲ್‌ 28ರಿಂದ ಮೇ 2ರವರೆಗೆ ಅತ್ಯಾಚಾರ ಆರೋಪ ಇರಲಿಲ್ಲ. ಸಂತ್ರಸ್ತೆಯ ಬೆಂಗಳೂರಿನಲ್ಲಿ ದೂರು ರೆಡಿ ಮಾಡಿಕೊಂಡು ಹೊಳೆನರಸೀಪುರದಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ಎಸ್‌ಐಟಿ ತನಿಖೆಗೆ ಪ್ರಜ್ವಲ್‌ ರೇವಣ್ಣ ಸಹಕಾರ ನೀಡಲಿದ್ದಾರೆ.

ಇದಕ್ಕೆ ಅಶೋಕ್‌ ನಾಯ್ಕ್‌ ಆಕ್ಷೇಪ ವ್ಯಕ್ತಪಡಿಸಿದರು. “ಅತ್ಯಾಚಾರ ಆರೋಪಿಯು ಸಾಮಾನ್ಯ ವ್ಯಕ್ತಿಯಲ್ಲ, ಅವರೊಬ್ಬ ಸಂಸದ. ಆರೋಪಿಯು ಜೀವನಪೂರ್ತಿ ಜೈಲು ವಾಸ ಅನುಭವಿಸಬೇಕಾದ ಕೇಸ್‌ ಇದು” ಎಂದರು. ಆಗ ಅರುಣ್‌, “ಆರೋಪಿಯು ಪೊಲೀಸರಿಗೆ ಬಂದು ಶರಣಾಗಿದ್ದಾರೆ. ಹಾಗಾಗಿ, 15 ದಿನ ಕಸ್ಟಡಿಗೆ ವಹಿಸುವ ಅವಶ್ಯಕತೆ ಇಲ್ಲ” ಎಂದು ಹೇಳಿದರು.

ಇದನ್ನೂ ಓದಿ: Prajwal Revanna : ಪ್ರಜ್ವಲ್​ ರೇವಣ್ಣ ಅರೆಸ್ಟ್​ ಆಗುವಾಗ ಧರಿಸಿದ್ದ ಬಟ್ಟೆಯ ಬ್ರಾಂಡ್ ಗಮನಿಸಿ! ಅದರ ಬೆಲೆ ಎಷ್ಟಿರಬಹುದು?

Exit mobile version