Site icon Vistara News

Kanakapura Road Accident: ಕನಕಪುರದಲ್ಲಿ ಕಾರು-ಬಸ್‌ ನಡುವೆ ಭೀಕರ ಅಪಘಾತ; ಆರು ಮಂದಿ ದುರ್ಮರಣ, ಹಲವರಿಗೆ ಗಾಯ

Car accident in kanakapura

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿಯ ಸಾತನೂರು ಮುಖ್ಯರಸ್ತೆಯಲ್ಲಿ ಕಾರು ಮತ್ತು ಕೆಎಸ್ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿಯಾಗಿ (Kanakapura Road Accident) ಸ್ಥಳದಲ್ಲೇ ಆರು ಮಂದಿ ದುರ್ಮರಣ ಹೊಂದಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

ಮಹದೇಶ್ವರ ಬೆಟ್ಟದಿಂದ ವಾಪಸ್ ಆಗುವ ವೇಳೆ ಘಟನೆ ನಡೆದಿದೆ. ಕಾರಿನಲ್ಲಿದ್ದ 6 ಪ್ರಯಾಣಿಕರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಕಾರಿಗೆ ಡಿಕ್ಕಿಯಾಗಿದೆ. ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Murder Case : ಹೆತ್ತಮ್ಮನನ್ನೇ ಕೊಂದ ಧೂರ್ತ ಮಗ ; ಕುಡಿದ ಮತ್ತಿನಲ್ಲಿ ಕೊಲೆ ಮಾಡಿ ಗದ್ದೆಗೆ ಹೋಗಿ ಮಲಗಿದ್ದ!

ಆಟೋಗೆ ಲಾರಿ ಡಿಕ್ಕಿ; ಮಹಾರಾಷ್ಟ್ರ ಮೂಲದ ನಾಲ್ವರ ಸಾವು; ಇಬ್ಬರ ಸ್ಥಿತಿ ಗಂಭೀರ

ಬೀದರ್: ಆಟೋಗೆ ಲಾರಿ ಡಿಕ್ಕಿಯಾಗಿ ಮಹಾರಾಷ್ಟ್ರ ಮೂಲದ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Road Accident) ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ.

ಮಹಾರಾಷ್ಟ್ರದ ಮುರುಮ್ ಗ್ರಾಮದ ನಾಲ್ವರು ಮೃತಪಟ್ಟಿದ್ದು, ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಮಹಾರಾಷ್ಟ್ರದ ಉಮರ್ಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಶ್ರಾವಣ ಸೋಮವಾರದ ಹಿನ್ನೆಲೆಯಲ್ಲಿ ಬಸವಕಲ್ಯಾಣ ತಾಲೂಕಿನ ಚಂಡಕಾಪೂರ ಬಳಿಯ ಐತಿಹಾಸಿಕ ಶ್ರೀ ಕ್ಷೇತ್ರ ಅಮೃತಕುಂಡಕ್ಕೆ ದರ್ಶನಕ್ಕೆಂದು ಆಗಮಿಸಿದ್ದರು. ದರ್ಶನ ಮುಗಿಸಿಕೊಂಡು ಗ್ರಾಮಕ್ಕೆ ವಾಪಸ್‌ ತೆರಳುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸವಕಲ್ಯಾಣದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಷಿಂಗ್ ಮೆಷಿನ್‌ಗೆ ಬಟ್ಟೆ ಹಾಕುವಾಗ ಕರೆಂಟ್‌ ಶಾಕ್‌; ಯುವಕ ಸಾವು!

ರಾಯಚೂರು: ವಾಷಿಂಗ್‌ ಮೆಷಿನ್‌ಗೆ (Washing Machine) ಬಟ್ಟೆ ಹಾಕುವಾಗ ವಿದ್ಯುತ್‌ ಸ್ಪರ್ಶವಾಗಿ (Electric Shock) ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ದುರ್ಗಕ್ಯಾಂಪ್‌ನಲ್ಲಿ ಈ ದುರ್ಘಟನೆ ನಡೆದಿದೆ. ನಾಗೇಂದ್ರ (32) ಮೃತ ದುರ್ದೈವಿ.

ಪತ್ರೋಳಿ ಮಾರಾಟ ಅಂಗಡಿ ಹೊಂದಿರುವ ನಾಗೇಂದ್ರ ತಾಲೂಕಿನಾದ್ಯಂತ ಪತ್ರೋಳಿ ನಾಗೇಂದ್ರ ಎಂದು ಫೇಮಸ್ ಆಗಿದ್ದರು. ಮನೆಯಲ್ಲಿ ವಾಷಿಂಗ್‌ ಮೆಷಿನ್‌ಗೆ ಬಟ್ಟೆ ಹಾ

Exit mobile version