ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ(KPTCL exam scam) ಗೋಕಾಕ್ ಶಹರ ಠಾಣೆ ಪೊಲೀಸರು ಮತ್ತೆ ಆರು ಆರೋಪಿಗಳನ್ನು ಬಂಧಿಸಿದ್ದು, ಇದರೊಂದಿಗೆ ಅಕ್ರಮದಲ್ಲಿ ಒಟ್ಟು ಬಂಧಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಗೋಕಾಕ್ ತಾಲೂಕಿನ ಬಗರನಾಳದ ಈರಣ್ಣ ಮಲ್ಲಪ್ಪ ಬಂಕಾಪುರ (26), ಶಿವಾನಂದ ರಾಮಪ್ಪ ಕುಮೋಜಿ (22), ರಾಮದುರ್ಗ ತಾಲೂಕಿನ ಬಟಕುರ್ಕಿಯ ಆದಿಲ್‌ಶಾ ಸಿಖಂದರ್ ತಾಸೇವಾಲೆ (23), ಮೂಲಗಿ ತಾಲೂಕಿನ ಖಾನಟ್ಟಿಯ ಮಹಾಂತೇಶ ಹಣಮಂತ ಹೊಸಉಪ್ಪಾರ (22), ಮೂಡಲಗಿ ತಾಲೂಕಿನ ನಾಗನೂರು ಗ್ರಾಮದ ಮಹಾಲಿಂಗ ಭೀಮಪ್ಪ ಕುರಿ (30), ಸವದತ್ತಿ ತಾಲೂಕಿನ ಮೆಳ್ಳಿಕೇರಿಯ ಸುಂದರ ಶಿವಾನಂದ ಬಾಳಿಕಾಯಿ (23) ಬಂಧಿತರು.
ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್‌ವಾಚ್, ಮೈಕ್ರೊ ಚಿಪ್ ಸೇರಿ ವಿವಿಧ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗಿದ್ದರಿಂದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅಕ್ರಮಕ್ಕೆ ಬಳಸಿದ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ | Tanker overturn | ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮಗುಚಿದ ಗ್ಯಾಸ್ ಟ್ಯಾಂಕರ್